Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಲೋಕಸಭಾ ಚುನಾವಣೆ ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ ಅವರು 14 ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ…
ಅಯೋಧ್ಯೆಯಲ್ಲಿ ರಾಮಮಂದಿರ ಸಮರ್ಪಣಾ ಸಮಾರಂಭಕ್ಕೂ ಮುನ್ನ ಬಿಜೆಪಿ ದೇಶದಾದ್ಯಂತ ದರ್ಗಾ ಮತ್ತು ಮಸೀದಿಗಳಲ್ಲಿ ದೀಪ ಬೆಳಗಲಿದೆ. ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ದೇಶಾದ್ಯಂತ 1,200 ದರ್ಗಾಗಳು ಮತ್ತು ಮಸೀದಿಗಳಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸುವುದಾಗಿ ಘೋಷಿಸಿದೆ. ದೀಪೋತ್ಸವ ಎಂಬ ಹೆಸರಿನ ಕಾರ್ಯಕ್ರಮವನ್ನು ಜನವರಿ 12 ರಿಂದ 22 ರವರೆಗೆ ಆಯೋಜಿಸಲಾಗಿದೆ. ‘ದೆಹಲಿಯೊಂದರಲ್ಲೇ 36 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಸಣ್ಣ ಮತ್ತು ದೊಡ್ಡ ಮಸೀದಿಗಳು, ದರ್ಗಾಗಳು ಮತ್ತು ಇತರ ಮುಸ್ಲಿಂ ಪೂಜಾ ಸ್ಥಳಗಳು ಸೇರಿದಂತೆ 1200 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ದೀಪ ಬೆಳಗಲಾಗುವುದು. ಇದು ದೆಹಲಿ ಜಮಾ ಮಸೀದಿ ಮತ್ತು ನಿಜಾಮುದ್ದೀನ್ ದರ್ಗಾವನ್ನು ಒಳಗೊಂಡಿರುತ್ತದೆ’ – ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಂಚಾಲಕ ಯಾಸರ್ ಜೀಲಾನಿ ಹೇಳಿದರು. ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಲೋಕಾರ್ಪಣೆ ಸಮಾರಂಭಕ್ಕೆ ಸಂಬಂಧಿಸಿದಂತೆ ದೇಶದ ಎಲ್ಲಾ ಮನೆಗಳಲ್ಲಿ ದೀಪಗಳನ್ನು ಬೆಳಗಿಸುವಂತೆ ಕರೆ ನೀಡಿದ್ದರು. ಜನವರಿ 14 ರಿಂದ 22 ರವರೆಗೆ…
ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಸ್ ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ, ಬಸ್ ಗೆ ಬೆಂಕಿ ತಗುಲಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೆ ಪ್ರಯಾಣಿಕರು ಬಸ್ ನಿಂದ ಇಳಿದಿದ್ದು ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು, ಸಿಂದಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಮಧ್ಯಾಹ್ನದ ಸಭೆಯಲ್ಲಿ ಮಾತನಾಡಿದರು. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ವಾಮಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ, ಸಣ್ಣನೀರಾವರಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಬೆಂಗಳೂರು ನಗರ 5000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು, ರಾಜ್ಯದ ಆರ್ಥಿಕತೆಯನ್ನು ಹಾಳು…
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಗೌರವಯುತವಾಗಿ ತಿರಸ್ಕರಿಸಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ ಇದೊಂದು ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ಕಾರ್ಯಕ್ರಮವಾಗಿದ್ದು, ಹೀಗಾಗಿ ಇವರು ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮ ಎಂಬುದು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್ ಎಸ್ ಎ ಸ್ ಮತ್ತು ಬಿಜೆಪಿಯವರು ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರಿಂದ ಆಗುತ್ತಿರುವ ಈ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಬಹಳ ಸ್ಪಷ್ಟವಾಗಿದೆ. 2019ರ…
ರಾಜ್ಯದಲ್ಲಿ ಮೂರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತೆರೆ ಎಳೆದಿದ್ದಾರೆ. ಈ ಕುರಿತು ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ ಸೃಷ್ಠಿ ವಿಷಯ ಸಿನಿಮೀಯ ರೀತಿಯಲ್ಲಿ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆಗೆ ನಾವು ತಯಾರಿ ನಡೆಸುತ್ತಿದ್ದೇವೆ. ಮೂರು ಡಿಸಿಎಂ ಹುದ್ದೆ ಸೃಷ್ಠಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗಿದೆ. ರಾಜ್ಯ ,ಜಿಲ್ಲಾ, ತಾಲೂಕು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನ ಹಿನ್ನೆಲೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮಹಾರಾಷ್ಟ್ರ ಸರ್ಕಾರ ರಾಮ ಮಂದಿರಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿದೆ. ರಾಮಕ್ಷೇತ್ರ ಟ್ರಸ್ಟ್‌ಗೆ ಚೆಕ್ ಹಸ್ತಾಂತರಿಸಲಾಗಿದೆ ಎಂದು ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಜನರಿಗಾಗಿ ಅಯೋಧ್ಯೆಗೆ ಬಂದಿದ್ದೇವೆ ಎಂದರು. ದೇವಾಲಯದ ಮುಂದಿನ ನಿರ್ಮಾಣ ಕಾರ್ಯಕ್ಕೆ ರಾಜ್ಯದ ಜನತೆಯ ಕೊಡುಗೆಯಾಗಿ ಹಣವನ್ನು ನೀಡಿದರು. ಉದಯ್ ಸಾಮಂತ್ 11 ಕೋಟಿ ಚೆಕ್ ಅನ್ನು ದೇವಸ್ಥಾನದ ಟ್ರಸ್ಟ್ ಗೆ ಹಸ್ತಾಂತರಿಸಿದರು. ಇದು ಪೂರ್ಣಗೊಂಡ ಬಳಿಕವೇ ಮಾಧ್ಯಮಗಳಿಗೆ ದೇಣಿಗೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಚೆಕ್ ಹಸ್ತಾಂತರ ಸಮಾರಂಭದಲ್ಲಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು. ರಾಮಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ರಾಮ ಮಂದಿರಕ್ಕಾಗಿ ದೇಣಿಗೆ ನೀಡಿದ ಏಕನಾಥ್ ಶಿಂಧೆ ಅವರಿಗೆ ಧನ್ಯವಾದ ಅರ್ಪಿಸಿದರು. ರಾಮಮಂದಿರ ನಿರ್ಮಾಣಕ್ಕಾಗಿ ಇಷ್ಟು ದೊಡ್ಡ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಚಂಪತ್ ರೈ ಹೇಳಿದ್ದಾರೆ. ಚೆಕ್ ಅನ್ನು…
ತುಮಕೂರು: ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಗ್ರೇಡ್ ಒನ್ ಸಹಾಯಕ ನಿರ್ದೇಶಕ ಶಿವಣ್ಣ ಹಾಗೂ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ವಿದ್ಯಾರ್ಥಿ ನಿಲಯದಲ್ಲಿದ್ದ ಈ ಬಾಲಕಿಯು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ನಾಲ್ಕೈದು ದಿನಗಳಿಂದ ಶಾಲೆಗೆ ಗೈರು ಹಾಜರು ಆಗಿದ್ದಳು. ಹೊಟ್ಟೆ ನೋವು ಕಾಣಿಸಿಕೊಂಡ ಆಕೆಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಕ್ರಮ ಕೈಗೊಂಡಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಬಾಲಕಿಯ ದೇಹದಲ್ಲಿ ಯಾವುದೇ ಅನುಮಾನ ಮೂಡುವಂತಿರಲಿಲ್ಲ. ಆಕೆ ಬೇರೆಯವರ ಜೊತೆ ಸಂಪರ್ಕದಲ್ಲಿರುವುದು ಕೂಡ ಗಮನಕ್ಕೆ ಬಂದಿರಲಿಲ್ಲ ಎಂದು ವಾರ್ಡನ್ ನಿವೇದಿತ ಅವರು ಅಧಿಕಾರಿಗಳ ಬಳಿ ಹೇಳಿಕೆ…
ವಿಜಯಪುರ: ಸರ್ಕಾರಿ ಬಸ್ ನಡಿಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ನಡೆದಿದೆ. ವಿಶ್ವನಾಥ ಶಂಕರಯ್ಯ (38) ಚಲಿಸುತ್ತಿದ್ದ ಬಸ್ ನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಏಕಾಏಕಿ ಬಸ್ ನಡಿಗೆ ಬಿದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಶ್ವನಾಥ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದವರು. ಆದ್ರೆ ಬಸ್ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಸ್ಥರ ಮೊಬೈಲ್ ಸಂಖ್ಯೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನಸೌಧದ ಮುಂಭಾಗದಲ್ಲೇ ದಂಪತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ಜೆಜೆ ನಗರದ ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದವರು. ಶಾಯಿಸ್ತಾ ಬ್ಯಾಂಕ್ ನಿಂದ ಸಾಲ ಪಡೆದಿದ್ದರು. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ. ಶಾಯಿಸ್ತಾ ಬಿತ್ತಿ ಪತ್ರಗಳನ್ನು ಹಿಡಿದುಕೊಂಡು ನಮ್ಮ ರಕ್ಷಣೆಗೆ ಯಾರೂ ಕೂಡ ಬಂದಿಲ್ಲ. ಬ್ಯಾಂಕ್ ನಿಂದ ಕಿರುಕುಳವಾಗಿದೆ. ನಮಗೆ ನ್ಯಾಯ ಬೇಕು. ನ್ಯಾಯ ಸಿಗುವವರೆಗೂ ಹೋಗುವುದಿಲ್ಲ. ಇಡೀ ಕುಟುಂಬ ಬೀದಿಗೆ ಬಂದಿದೆ. ನಮಗೆ ಸಾಕಷ್ಟು ಕಿರುಕುಳ ನೀಡಲಾಗಿದೆ ಎಂದು ಕೂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಹಿಳಾ ಪೊಲೀಸರು ಶಾಯಿಸ್ತಾ ಅವರನ್ನು ತಡೆದು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ.