Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಅಯೋಧ್ಯೆಯಲ್ಲಿ ಮಿನಿ ಇ-ಲಾಬಿಯೊಂದಿಗೆ ತನ್ನ 915 ನೇ ಶಾಖೆಯನ್ನು ತೆರೆದಿದೆ. ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಮಾತನಾಡಿದ ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್ ಎಚ್, “ಜಾಗತಿಕ ಭೂಪಟದಲ್ಲಿ ವಿರಾಜಮಾನವಾಗಿರುವ ಪವಿತ್ರ ನಗರವಾದ ಅಯೋಧ್ಯೆಗೆ ಕಾಲಿಡಲು ನಾವು ಸಂತೋಷ ಪಡುತ್ತೇವೆ. ಇದೀಗ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ, ಅಯೋಧ್ಯೆಯು ಸಾಂಸ್ಕೃತಿಕ ಸಂರಕ್ಷಣೆಯ ಪರಿಪೂರ್ಣ ತಾಣವಾಗಿ ಹೊರಹೊಮ್ಮಿದೆ ಹಾಗೂ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತದೆ. 100 ವರ್ಷಗಳ ವಿಶ್ವಾಸಾರ್ಹ ಹಾಗೂ ಗ್ರಾಹಕಸ್ನೇಹಿ ಪರಂಪರೆಯನ್ನು ಹೊಂದಿರುವ ಕರ್ಣಾಟಕ ಬ್ಯಾಂಕ್, ಅಯೋಧ್ಯೆಯ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದೆ” ಎಂದು ನುಡಿದರು. ನೂತನ ಶಾಖೆಯ ಮಿನಿ ಇ-ಲಾಬಿಯನ್ನು ಉದ್ಘಾಟಿಸಿ ಮಾತನಾಡಿದ ಬ್ಯಾಂಕ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್, “ಭಗವಾನ್ ಶ್ರೀರಾಮನ ಪವಿತ್ರ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ನಮ್ಮ ಬ್ಯಾಂಕಿನ ಹೊಸ ಶಾಖೆಯನ್ನು ಉದ್ಘಾಟಿಸಲು ನಾವು…
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮನೆಯೊಂದರಲ್ಲಿ ಐವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿ ಆಸ್ಪತ್ರೆಗೆ ದಾಖಲಾಗಿದೆ. ರಾತ್ರಿ ವೇಳೆ ತಣ್ಣಗಾಗಲು ಒಲೆಯಲ್ಲಿ ಕಲ್ಲಿದ್ದಲು ಸುಟ್ಟದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆಮ್ಲಜನಕದ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹ ಮೂಲದ ರಹೀಜುದ್ದೀನ್ ಎಂಬುವವರ ಮೂವರು ಮಕ್ಕಳು ಹಾಗೂ ಸಂಬಂಧಿಕರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ರಹೀಜುದ್ದೀನ್ ಅವರ ಪತ್ನಿ ಹಾಗೂ ಸಹೋದರನ ಸ್ಥಿತಿ ಚಿಂತಾಜನಕವಾಗಿದೆ.
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮನೆಯೊಂದರಲ್ಲಿ ಐವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿ ಆಸ್ಪತ್ರೆಗೆ ದಾಖಲಾಗಿದೆ. ರಾತ್ರಿ ವೇಳೆ ತಣ್ಣಗಾಗಲು ಒಲೆಯಲ್ಲಿ ಕಲ್ಲಿದ್ದಲು ಸುಟ್ಟದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆಮ್ಲಜನಕದ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹ ಮೂಲದ ರಹೀಜುದ್ದೀನ್ ಎಂಬುವವರ ಮೂವರು ಮಕ್ಕಳು ಹಾಗೂ ಸಂಬಂಧಿಕರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ರಹೀಜುದ್ದೀನ್ ಅವರ ಪತ್ನಿ ಹಾಗೂ ಸಹೋದರನ ಸ್ಥಿತಿ ಚಿಂತಾಜನಕವಾಗಿದೆ.
ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದಲ್ಲಿ ಮೊದಲ ಚಿನ್ನದ ಬಾಗಿಲುಗಳನ್ನು ಸ್ಥಾಪಿಸಲಾಯಿತು. ಮಂಗಳವಾರ ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದಲ್ಲಿ ಮೊದಲ ಚಿನ್ನದ ಬಾಗಿಲನ್ನು ಸ್ಥಾಪಿಸಲಾಯಿತು. ಈ ಬಾಗಿಲುಗಳನ್ನು ಹೈದರಾಬಾದ್ ನ ಅನುರಾಧ ಟಿಂಬರ್ ಇಂಟರ್ ನ್ಯಾಶನಲ್ ಕಂಪನಿ ತಯಾರಿಸಿದೆ. ಮುಂದಿನ 1000 ವರ್ಷಗಳವರೆಗೆ ಹಾಳಾಗದ ರೀತಿಯಲ್ಲಿ ಬಾಗಿಲುಗಳನ್ನು ನಿರ್ಮಿಸಲಾಗಿದೆ ಎಂದು ಸಂಸ್ಥೆಯ ಮಾಲೀಕ ಶರದ್ ಬಾಬು ತಿಳಿಸಿದ್ದಾರೆ. ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು 14 ಚಿನ್ನದ ಲೇಪಿತ ಬಾಗಿಲುಗಳನ್ನು ರಾಮ ಜನ್ಮಭೂಮಿಗೆ ತರಲಾಗಿದೆ. ಬಾಗಿಲುಗಳನ್ನು ನಾಗರ ಶೈಲಿಯಲ್ಲಿ ಮಾಡಲಾಗಿದೆ. ಈ ಬಾಗಿಲುಗಳನ್ನು ಜನವರಿ 15 ರಿಂದ ಅಳವಡಿಸಲಾಗುವುದು. ದೇವಸ್ಥಾನದ ಬಾಗಿಲುಗಳಿಗೆ ಮರವನ್ನು ಮಹಾರಾಷ್ಟ್ರದಿಂದ ತರಲಾಗಿತ್ತು. ಇದಕ್ಕಾಗಿ ವಿಶೇಷ ರೀತಿಯ ತೇಗವನ್ನು ಸಂಗ್ರಹಿಸಲಾಗಿದೆ. ಈ ಕೆಲಸವು ಅತ್ಯಂತ ಕಡಿಮೆ ಸಮಯದಲ್ಲಿ ಪೂರ್ಣಗೊಂಡಿತು. ದೊಡ್ಡ ದೇವಸ್ಥಾನಗಳ ಬಾಗಿಲು ಹಾಕಿದ ಅನುಭವವೂ ಇದೆ ಎಂದರು. ಕುಶಲಕರ್ಮಿಗಳು ಮರದ ಮೇಲೆ ಅತ್ಯಂತ ನಿಖರವಾದ ರೀತಿಯಲ್ಲಿ ಚಿತ್ರಗಳನ್ನು ಕೆತ್ತಿದ್ದಾರೆ.
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮ ಪಂಚಾಯತ್ ಅಡಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ಅಸಮಾಧಾನಗೊಂಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ಯಾಮ್ ಗಂಗಾಧರ್ ಮುತಗೆಕರ ರಾಜೀನಾಮೆಯನ್ನು ಸಲ್ಲಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪಂಚಾಯಿತಿಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಉಪಾಧ್ಯಕ್ಷರು ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಜನರಿಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ದೇಶಪಾಂಡೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನ ಇದಕ್ಕೆ ಕಾರಣ ಎಂದು ಅಸಮಾದಾನಗೊಂಡ ಉಪಾಧ್ಯಕ್ಷರು ರಾಜೀನಾಮೆ ನೀಡಲು ಮುಂದಾಗಿದ್ದರು. ಕೆಲ ಹೊತ್ತು ಪಂಚಾಯತಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಸಮಸ್ಯೆಗೆ ಸ್ಪಂದಿಸಲು ಸದಸ್ಯರುಗಳಾದ ಬಾಲಚಂದ್ರ, ಶ್ರೀಕಾಂತ ಪಾಟೀಲ ಹಾಗೂ ರವಿ ಕೋಟಬಾಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಿರಣ ಕಲ್ಲಪ್ಪ ಪಾಟೀಲ್ ಉಪಾಧ್ಯಕ್ಷರಾದ ಶ್ಯಾಮ್ ಮುತ್ತೆಗೆಕರ ಅವರನ್ನು ಸಮಾಧಾನಪಡಿಸಿ ಮುತಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿವಾಡದಲ್ಲೂ ಕೆಲಸ ಕಾರ್ಯ ಮಾಡಲು ನಾವು ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ. ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು…
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹೊತ್ತಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶಕ್ಕೆ ಪತ್ರ ಬರೆದಿದ್ದು ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮ ಭಕ್ತರಿಗೆ ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಕರ್ನಾಟಕದ ಮುಜರಾಯಿ ಇಲಾಖೆ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಮನವಿ ಮಾಡಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮ ಭಕ್ತರು ಅಯೋಧ್ಯೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅವರಿಗೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಿದೆ. 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಿದೆ ಅನುಮತಿ ನೀಡಿ ಎಂದು ಮನವಿ ಮಾಡಿದೆ. ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಈಗಾಗಲೇ…
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿದೆ. ಅಲ್ಲದೇ ಆದಾಯ ತೆರಿಗೆಯ ಬಗ್ಗೆ ಸರ್ಕಾರಕ್ಕೆ ಸುಳ್ಳು ಲೆಕ್ಕಪತ್ರ ಕೊಟ್ಟಿದ್ದಾರೆ. ಸಕ್ಕರೆ ಕಾರ್ಖಾನೆ ಚಾಲ್ತಿಯಲ್ಲಿ ಇದ್ದರೂ ಚಾಲ್ತಿಯಲ್ಲಿ ಇಲ್ಲ ಎಂದು ಸುಳ್ಳು ದಾಖಲೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ಮಹಾಂತೇಶ್ ಕಡಾಡಿ ಗಂಭೀರ ಆರೋಪ ಮಾಡಿದ್ದಾರೆ. ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ವ್ಯವಹಾರದಲ್ಲಿ ಅಕ್ರಮ ನಡೆದಿದೆ. ಕಾರ್ಖಾನೆಗೆ 700 ಎಕರೆ ಜಮೀನು ಖರೀದಿಯಲ್ಲೂ ಅವ್ಯವಹಾರವಾಗಿದೆ. 3,500 ಟನ್ ಕ್ರಷಿಂಗ್ ಸಾಮಥ್ರ್ಯದ ಕಾರ್ಖಾನೆಗೆ 300ಕೋಟಿ ರೂ. ಹಣ ವೆಚ್ಚವಾಗುತ್ತದೆ. ಇದಕ್ಕೆ ಜಾರಕಿಹೊಳಿಯವರು 500ರಿಂದ 600 ಕೋಟಿ ರೂ. ಸಾಲ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮಾಡುವುದಾಗಿ 60ಕೋಟಿ ಸಾಲ ಪಡೆದಿದ್ದಾರೆ. ಡಿಸ್ಟಿಲರಿ ನಿರ್ಮಾಣ ಮಾಡಿಲ್ಲ. ಬಳಿಕ 2019ರಲ್ಲಿ ದಿವಾಳಿ ಆಗಿದೆಯೆಂದು ಎನ್‌ಸಿಇಆರ್‌ಟಿಗೆ ಮನವಿ ಮಾಡಿದ್ದಾರೆ. ಆಗ ಎನ್‌ಸಿಇಆರ್‌ಟಿ ಇದು ಲಾಭದಾಯಕವಲ್ಲ ಎಂದು ಹೇಳಿದೆ. 2021-22ರಲ್ಲಿ 5ಸಾವಿರ ಮೆಟ್ರಿಕ್ ಟನ್ ಕಬ್ಬಿನಿಂದ ಸಕ್ಕರೆ ಉತ್ಪಾದನೆ ಮಾಡಿದ್ದಾರೆ. ಕಾರ್ಖಾನೆಗೆ ಬರುವ…
ಬೆಳಗಾವಿ: ವ್ಯಕ್ತಿಯೋರ್ವನಿಂದ ಹಲ್ಲೆಗೊಳಗಾಗಿರುವ ಅಂಗನವಾಡಿ ಸಹಾಯಕಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರ್ಥಿಕ ನೆರವು ನೀಡಿದ್ದಾರೆ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಅಂಗನವಾಡಿ ಸಹಾಯಕಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿದ್ದ. ತೀವ್ರ ಗಾಯಗೊಂಡಿರುವ ಅಂಗನವಾಡಿ ಸಹಾಯಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕೈಯಿಂದ 30 ಸಾವಿರ ರೂ.ಗಳ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಶಿವಕುಮಾರ್ ಮೇಷ್ಟ್ರುಮನೆ ತುಮಕೂರು/ಸ್ಪೆಷಲ್ ರಿಪೋರ್ಟ್: ತನ್ನ ಮಗುವಿನ ಸುರಕ್ಷತೆಯನ್ನು ನಿರ್ಲಕ್ಷ್ಯಿಸಿ, ಬೇಜವಾಬ್ದಾರಿಯಿಂದ ನಡೆದುಕೊಂಡು ಪ್ರತಿಷ್ಠಿತ ಶಾಲೆಯ ಆಡಳಿತ ಮಂಡಳಿಗೆ ಮಗುವಿನ ತಾಯಿ, ವೃತ್ತಿಯಲ್ಲಿ ವಕೀಲರಾಗಿರುವ ಹೆಚ್.ಎನ್. ಮಂಜುಳ ಅವರು ಕಾನೂನಿನ ರುಚಿ ತೋರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಇದು ಅಂತಿಂಥ ನಿರ್ಲಕ್ಷ್ಯ ಅಲ್ಲ, ಪ್ರತಿದಿನವೂ ಒಂದೊಂದು ವಿಚಾರದಲ್ಲಿ ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವಂತಹ ಸಂದರ್ಭವನ್ನು ಶಾಲಾ ಆಡಳಿತ ಮಂಡಳಿ ಸೃಷ್ಟಿಸುತ್ತಿದ್ದು, ಇದರಿಂದಾಗಿ ರೋಸಿಹೋದ ಮಗುವಿನ ತಾಯಿ ಶಾಲಾ ಆಡಳಿತ ಮಂಡಳಿಗೆ ತಾಯಿ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಹೆಚ್.ಎನ್. ಮಂಜುಳ ಅವರು ತಮ್ಮ ಮಗ ತುಷಾರ್ ಸಿಂಹನನ್ನು “ಚೈತನ್ಯ ಟೆಕ್ನೋ ಸ್ಕೂಲ್” ಗೆ 1ನೇ ತರಗತಿಗೆ ದಾಖಲಿಸುತ್ತಾರೆ. ಶಾಲೆಯು ತನ್ನ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತದೆ ಎಂದು ಅವರು ಬಲವಾಗಿ ನಂಬಿದ್ದರು. ಹೀಗಾಗಿ 10 ಸಾವಿರ ರೂಪಾಯಿಗಳನ್ನು ಪಾವತಿಸಿ ಶಾಲೆಗೆ ದಾಖಲು ಮಾಡಿದ್ದರು. ಶಾಲೆಯ ಆವರಣದ ಹೊರಗಿದ್ದ ಮಗು! ಶಾಲೆ ಆರಂಭವಾದಾಗ ಮಗುವನ್ನು ಶಾಲಾ…
2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಆದೇಶವನ್ನ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ನಾಳೆಗೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾರಾಯಣಗೌಡ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ವಾಣಿಜ್ಯ ಮಳಿಗೆ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಾರಾಯಣಗೌಡರಿಗೆ ಎರಡು ದಿನಗಳ ಹಿಂದೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಹೊರಬಂದ ಬಳಿಕ 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಮತ್ತೆ ಪೊಲೀಸರು ನಾರಾಯಣಗೌಡರನ್ನ ವಶಕ್ಕೆ ಪಡೆದಿದ್ದರು.