Subscribe to Updates
Get the latest creative news from FooBar about art, design and business.
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
- ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
- ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
Author: admin
ಉತ್ತರ ಪ್ರದೇಶ: ಕೊಲೆಯಲ್ಲಿ ಅಂತ್ಯವಾದ ಕೌಟುಂಬಿಕ ಕಲಹ. ಮಹಿಳೆಯೊಬ್ಬರು ಸುತ್ತಿಗೆಯಿಂದ ತನ್ನ ಪತಿಯ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. 20 ವರ್ಷ ವಯಸ್ಸಿನ ಪಾರ್ವತಿ ಎಂಬ ಮಹಿಳೆಯನ್ನು ನಿನ್ನೆ ಬಂಧಿಸಲಾಗಿದೆ. ಪಾರ್ವತಿಯ ಪತಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆರೋಪಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ, ಯಾವುದೋ ಕಾರಣಕ್ಕಾಗಿ ದಂಪತಿ ನಡುವೆ ಜಗಳ ಉಂಟಾಗಿತ್ತು. ಬಳಿಕ ಪತ್ನಿ ಪತಿಯ ತಲೆ ಮೇಲೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕಾಲೇಜಿನಿಂದ ಬಂದ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಜಾನ್ಸಿ (17) ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ, ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ. ನಾನು ಈ ಲೋಕವನ್ನು ಬಿಟ್ಟು ತೆರಳುತ್ತಿದ್ದೇನೆ. ಎಲ್ಲರೂ ಖುಷಿಯಾಗಿರಿ ಎಂದು ಬರೆದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಳ್ಳಾರಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಚೆನ್ನುಪಾಟೀಲ(26), ಯುವರಾಜ(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮಂಜು, ವೀರಣ್ಣ, ಚಿದಂಬರಂ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದ ಐಯಪ್ಪಸ್ವಾಮಿ ಮಾಲಾಧಾರಿಗಳ ವಾಹನ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ NH 50 ರಸ್ತೆಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಖಾನಾಹೊಸಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ. ತಾವರೆಕೆರೆ ವ್ಯಾಪ್ತಿಯ ಚನ್ನೇನಹಳ್ಳಿ, ಯರ್ರಪ್ಪ ಕೈಗಾರಿಕಾ ಪ್ರದೇಶ, ದೊಡ್ಡಾಲದ ಮರ, ಹೊನಗನಹಟ್ಟಿ, ಗಾಣಕಲ್ ಕೈಗಾರಿಕಾ ಪ್ರದೇಶ, ಯಲಚಗುಪ್ಪೆ, ಗಂಗಪ್ಪನಹಳ್ಳಿ, ಯಲ್ಲಪ್ಪನ ಪಾಳ್ಯ, ಕೆಂಪಗೊಂಡನಹಳ್ಳಿ, ನಾಗನಹಳ್ಳಿ, ಪೆದ್ದನಪಾಳ್ಯ, ದೇವಮಾಚೋಹಳ್ಳಿ. ಹಾಗೂ ಮಾಚೋಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ, ಕಲ್ಪಾ ಕೈಗಾರಿಕಾ ಪ್ರದೇಶ, ಚಿಕ್ಕಗೊಲ್ಲರಹಟ್ಟಿ, ಫಾರೆಸ್ಟ್ ಗೇಟ್ ಕೈಗಾರಿಕಾ ಪ್ರದೇಶ, ಕೆ.ಜಿ. ಲಕ್ಕೇನಹಳ್ಳಿ. ಇನ್ನು ಮಂಚನಬೆಲೆ ಕಾಲೋನಿ, ಸೀಗೇಹಳ್ಳಿ ಗೇಟ್, ಕಡಬಗೆರೆ ಕ್ರಾಸ್, ಶ್ರೀನಿಧಿ ಲೇಔಟ್, ವಿನಾಯಕ ಬಡಾವಣೆ, ರಾಘವೇಂದ್ರ ಲೇಔಟ್, ಸೂರ್ತಿ ಬಡಾವಣೆ, ಕೆ.ಕೆ.ಲೇಔಟ್, ಅರ್ಕಾವತಿ ಲೇಔಟ್, ಮಹಿಮಣ್ಣನಪಾಳ್ಯ,…
ಹರ್ಯಾಣ: 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ . ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಪತ್ರದ ಪ್ರತಿಯನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತು ಇತರರಿಗೆ ಕಳುಹಿಸಲಾಗಿದೆ. ಆದರೆ, ಈ ಬಗ್ಗೆ ಸರಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪ್ರೊಫೆಸರ್ ತಮ್ಮ ಚೇಂಬರ್ ಗೆ ಕರೆಸಿಕೊಂಡು, ಬಳಿಕ ಬಾತ್ ರೂಮ್ ಗೆ ಕರೆದೊಯ್ದು, ಖಾಸಗಿ ಅಂಗಗಳನ್ನು ಮುಟ್ಟಿ ಅಶ್ಲೀಲ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಇಂದು ಸಾಯಂಕಾಲದವರಿಗೆ ಇದೇ ಸ್ಥಿತಿ ಇರುತ್ತದೆ. ಜನವರಿಯಿಂದ ಮಾರ್ಚ್ ನಡುವೆ ಮುನ್ಸೂಚನೆಯ ಪ್ರಕಾರ, ಕರ್ನಾಟಕವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಕರಾವಳಿ ಕರ್ನಾಟಕದಲ್ಲಿ ಸರಾಸರಿ 0.3 ಮಿಮೀ 23.3 ಮಿಮೀ ಮಳೆಯಾಗಿದೆ. ಮಂಗಳೂರಿನಂತಹ ಸ್ಥಳಗಳಲ್ಲಿ 4 ಸೆಂ.ಮೀ ಮತ್ತು ಪಣಂಬೂರು ಮತ್ತು ಮಾನೆಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ತಾಳುಗುಪ್ಪದಲ್ಲಿ 2 ಸೆಂ.ಮೀ ಮಳೆಯಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಈ ವರ್ಷ ಇಲ್ಲಿಯವರೆಗೆ 7.3 ಮಿಮೀ ಮಳೆಯಾಗಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಿಂದ, ವಿಶೇಷವಾಗಿ ಲಕ್ಷದ್ವೀಪದ ಮೇಲೆ ಅರಬ್ಬಿ ಸಮುದ್ರದ ಮೇಲೆ 1.5 ಕಿಮೀ ಗಾಳಿಯ ವೇಗದಿಂದ ಕರಾವಳಿ ಕರ್ನಾಟಕವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು. ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಹಂಚಿಮಾರನಹಳ್ಳಿ ಗ್ರಾಮಸ್ಥರು ಶಾಶ್ವತ ಕುಡಿಯುವ ನೀರಿಗಾಗಿ ಕೊರಟಗೆರೆ ಇ ಓ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಪ್ರಕಟಿಸಿತ್ತು. ಈ ವರದಿ ಪ್ರಕಟಗೊಂಡು 12 ಗಂಟೆಗಳೊಳಗೆ ಬೋರ್ ವೆಲ್ ಕೊರೆಸಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ತಾಲ್ಲೂಕು ಪಂಚಾಯಿತಿ ಇ ಓ ಅಪೂರ್ವ ಸಿ. ಅವರು, ನಮ್ಮ ತುಮಕೂರು ವಾಹಿನಿಯ ವರದಿಗೆ ಸ್ಪಂದಿಸಿ ಹಂಚಿಮಾರನಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದಾರೆ. ಶಾಶ್ವತ ಕುಡಿಯುವ ನೀರಿಗಾಗಿ ಸುಮಾರು 8 ವರ್ಷದಿಂದ ಹಂಚಿಮಾರನಹಳ್ಳಿ ಗ್ರಾಮಸ್ಥರು ಅಲೆದಾಡುತ್ತಿದ್ದರು. ಇದೀಗ ನಮ್ಮತುಮಕೂರು ವರದಿಯ ಬೆನ್ನಲ್ಲೇ ಗ್ರಾಮಸ್ಥರ ಸಮಸ್ಯೆ ಬಗೆಹರಿದಿದೆ. ಭಾನುವಾರ ನಮ್ಮ ತುಮಕೂರು ವಾಹಿನಿಯು ಹಂಚಿಮಾರನಹಳ್ಳಿ ಗ್ರಾಮಸ್ಥರು ಶಾಶ್ವತ ಕುಡಿಯುವ ನೀರಿಗಾಗಿ ಕೊರಟಗೆರೆ ಇ ಓ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ವರದಿ ಪ್ರಸಾರ ಮಾಡಿತ್ತು.. ಸುದ್ದಿ ಪ್ರಸಾರವಾದ ಬಳಿಕ ಕೇವಲ 12 ಗಂಟೆ ಒಳಗೆಯೇ ಪರಿಹಾರ ಸಿಕ್ಕಂತಾಗಿದೆ. ಇದು ನಮ್ಮ ತುಮಕೂರು ವಾಹಿನಿಯ ಬಿಗ್ ಇಂಫ್ಯಾಕ್ಟ್…
ಬಾಂಗ್ಲಾದೇಶದಲ್ಲಿ ಚುನಾವಣಾ ವಿಜಯೋತ್ಸವದ ವೇಳೆ ನಾಯಕ ಶಕೀಬ್ ಅಲ್ ಹಸನ್ ಅಭಿಮಾನಿಯೊಬ್ಬರಿಗೆ ಹೊಡೆದಿದ್ದಾರೆ. ಅವಾಮಿ ಲೀಗ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಾಕಿಬ್ ಮತಗಟ್ಟೆಯಲ್ಲಿ ಅಭಿಮಾನಿಯೊಬ್ಬನಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗೂರ-1 ಕ್ಷೇತ್ರದಿಂದ ಒಂದೂವರೆ ಲಕ್ಷ ಮತಗಳ ಬಹುಮತದಿಂದ ಗೆದ್ದಿರುವ ಶಾಕಿಬ್, ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ಆಗ ತಾರೆಯ ಸುತ್ತ ನೆರೆದಿದ್ದ ಅಭಿಮಾನಿಯೊಬ್ಬ ಶಕೀಬ್ ನನ್ನು ಹಿಂದಿಕ್ಕಲು ಯತ್ನಿಸಿದ. ಈ ವೇಳೆ ಶಕೀಬ್ ಅಭಿಮಾನಿಗೆ ಹೊಡೆದಿದ್ದಾನೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಎರಡನೇ ಮಹಡಿಯಿಂದ ಜಿಗಿದ 13 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಭಾನುವಾರ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ಈ ಘಟನೆ ನಡೆದಿದೆ. ಬಾಲಕಿ ತಾನು ವಾಸವಿದ್ದ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ವ್ಯಾಪಿಸಿದ್ದನ್ನು ಕಂಡು ಹೆದರಿ ಎರಡನೇ ಮಹಡಿಯಿಂದ ಜಿಗಿದಿದ್ದಾಳೆ. ಏಂಜೆಲ್ ಜೈನ್ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಬಿದ್ದ ರಭಸಕ್ಕೆ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯ ಪ್ರಾಣ ಉಳಿಸಲಾಗಲಿಲ್ಲ. ಘಟನೆಯಲ್ಲಿ ಬಾಲಕಿಯ ಸಹೋದರ ಮತ್ತು ತಾಯಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.