Subscribe to Updates
Get the latest creative news from FooBar about art, design and business.
- ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ
- LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ
- ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ
- ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ನೋಂದಾಯಿಸಲು ಡಿ.10 ಕೊನೆಯ ದಿನ
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
Author: admin
ದೆಹಲಿಯ ಕೌಟುಂಬಿಕ ನ್ಯಾಯಾಲಯ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಅನುಮೋದಿಸಿದೆ. ಭಾರತದ ಸ್ಟಾರ್ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದಿದ್ದಾರೆ. ಭಾರತದ ಸ್ಟಾರ್ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದಿದ್ದಾರೆ. 2012ರಲ್ಲಿ ಇಬ್ಬರೂ ಮದುವೆಯಾಗಿದ್ದರು. ಇಬ್ಬರಿಗೂ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾ ಶಿಖರ್ ಗಿಂತ 10 ವರ್ಷ ದೊಡ್ಡವಳು. ಆಯೇಷಾ ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು ಆಕೆ ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಹೊಂದಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್(ಕೌಟುಂಬಿಕ ನ್ಯಾಯಾಲಯ) ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಅನುಮೋದಿಸಿದೆ. ಇದು ಆಯೇಷಾಳ ಎರಡನೇ ವಿವಾಹವಾಗಿದ್ದು, ತನ್ನ ಏಕೈಕ ಪುತ್ರನಿಂದ ವರ್ಷಗಟ್ಟಲೆ ಬೇರ್ಪಟ್ಟು ಬದುಕುವಂತೆ ಒತ್ತಾಯಿಸಿ ಶಿಖರ್ಗೆ ಪತ್ನಿ ಮಾನಸಿಕ ನೋವು ಉಂಟು ಮಾಡಿದ್ದಾಳೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ, ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅ.9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ. ಅ.15 ರಂದು 6 ಗಂಟೆಯಿಂದ 6:25ರ ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05 ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ನಡೆಯಲಿದೆ. ಬಳಿಕ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ…
ಬಾಗಲಕೋಟೆ: ನಗರದ ವಿದ್ಯಾಗಿರಿಯ 19ನೇ ಕ್ರಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಅತೀ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ನಗರದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯ 19ನೇ ಕ್ರಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸುಮಾರು ಐದು ತಿಂಗಳಿನಿಂದ ಮಂದಗತಿಯಲ್ಲಿ ನಡೆಯುತ್ತಿದೆ. ಅಂದಾಜು 1 ಕಿಲೋ ಮೀಟರ್ ಅಂತರದ ಈ ರಸ್ತೆ ನಿರ್ಮಾಣ ಕಾಮಗಾರಿ ಸುಮಾರು ಐದು ತಿಂಗಳಾದರೂ ಪೂರ್ಣಗೊಂಡಿಲ್ಲ. ಇದರಿಂದ ನಮ್ಮ ವ್ಯಾಪಾರ ವಹಿವಾಟಿಗೆ ಸಮಸ್ಯೆಯಾಗುತ್ತಿದೆ ಎಂದು ವ್ಯಾಪಾರಸ್ಥರು ಗುತ್ತಿಗೆದಾರರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಿತ್ಯ ನಾವು ವ್ಯಾಪಾರ- ವಹಿವಾಟನ್ನೇ ಅವಲಂಬಿಸಿ ಬದುಕು ಸಾಗಿಸುತ್ತಿದ್ದೇವೆ. ಸದ್ಯ ರಸ್ತೆ ಕಾಮಗಾರಿಯಿಂದ ಅಂಗಡಿಗಳು ಬಂದ್ ಆಗಿ ವ್ಯಾಪಾರವಿಲ್ಲದೇ ನಮ್ಮ ಬದುಕು ದುಸ್ತರವಾಗಿದೆ. ನಾವೆಂದೂ ಅಭಿವೃದ್ಧಿಗೆ ಅಡ್ಡಿಪಡಿಸಿಲ್ಲ. ಸಾರ್ವಜನಿಕರ ಉದ್ದೇಶಕ್ಕಾಗಿ ನಡೆಯುವ ಅಭಿವೃದ್ದಿ ಕಾಮಗಾರಿಗೆ ಸಹಕರಿಸಬೇಕೆಂಬ ಕಾರಣಕ್ಕಾಗಿಯೇ ಕಳೆದ ಐದಾರು ತಿಂಗಳಿನಿಂದ ಸಹಕರಿಸುತ್ತಾ ಬಂದಿದ್ದೇವೆ. ಆದರೆ ಈಗ ರಸ್ತೆ ಮಾಡುವುದಕ್ಕಾಗಿ ಕಳೆದ 20 ದಿನಗಳಿಂದ ರಸ್ತೆಯನ್ನು…
BMTC ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. ಅಸಿಸ್ಟೆಂಟ್ ಸೆಕ್ಯುರಿಟಿ ಆ್ಯಂಡ್ ವಿಜಿಲೆನ್ಸ್ ಆಫೀಸರ್ ಸಿ.ಕೆ.ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಆರೋಪಿಗಳು ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಹಾಗೂ ನಿರ್ದೇಶಕ ಕೆ.ಅರುಣ್ ಸಹಿ ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆ ಸೃಷ್ಟಿಸಿದ್ದರು. ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿ 7 ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅತೀ ಹಿಂದುಳಿದ ವರ್ಗಕ್ಕೆ ಸೇರಿದವರು. ಬಿಜೆಪಿ ಸರ್ಕಾರದಲ್ಲಿ ಅತೀ ಹೆಚ್ಚು ಹಿಂದುಳಿದ ಶಾಸಕರು ಹಾಗೂ ಸಂಸದರು ಇರುವುದು. ಜಾತಿ ಹೆಸರು ಹೇಳಿ ತಮ್ಮ ಕುಟುಂಬ ಉದ್ಧಾರ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.
ಬೆಂಗಳೂರು: ಜಾತಿಗಣತಿ ಬಿಡುಗಡೆಯಿಂದ ಮೀಸಲಾತಿ ನೀಡಲು ಅನುಕೂಲ ಆಗಲಿದೆ. ಹೀಗಾಗಿ ನಮ್ಮ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿಂದು ಮಾತನಾಡಿದ ಸಚಿವರು, ಸರ್ಕಾರ ಗಣತಿ ಮಾಡುವ ಜವಾಬ್ದಾರಿ ಸಮಿತಿಗೆ ಕೊಟ್ಟಿತ್ತು. ಜಾತಿಗಣತಿಗೆ 100 ಕೋಟಿ ರೂ.ಗೂ ಹೆಚ್ಚು ಹಣ ಖರ್ಚಾಗಿದೆ. ಇಷ್ಟೆಲ್ಲ ಹಣ ಖರ್ಚು ಮಾಡಿ ವರದಿ ಕೊಡದೇ ಹೋದರೆ ಸರ್ಕಾರಕ್ಕೆ ಅಷ್ಟು ಹಣ ವೇಸ್ಟ್ ಆಗುತ್ತದೆ. ಒಂದು ಉದ್ದೇಶ ಇಟ್ಟುಕೊಂಡು ಜಾತಿಗಣತಿ ಮಾಡಲಾಗಿದೆ. ಸುಮ್ಮನೆ ಸರ್ಕಾರದ ಹಣ ಪೋಲಾಗಲು ಜಾತಿಗಣತಿ ಮಾಡಿಲ್ಲ. ಜಾತಿಗಣತಿಯಿಂದ ಶಾಶ್ವತ ಮಾಹಿತಿ ಇರಲಿ. ಮುಂದೆ ಮೀಸಲಾತಿ ಮಾಡುವ ಸಮಯದಲ್ಲಿ ಇದು ಅನುಕೂಲವಾಗಲಿದೆ.ರಾಜ್ಯದಲ್ಲಿ 50% ಕ್ಕಿಂತ ಹೆಚ್ಚು ಮೀಸಲಾತಿ ಮಾಡಬೇಕು ಅಂತ ಒತ್ತಾಯ ಇದೆ. ವರದಿಯಿಂದ ಇದಕ್ಕೆಲ್ಲ ಅನುಕೂಲ ಆಗಲಿದೆ ಎಂದರು. ಜಾತಿ ಗಣತಿಯನ್ನು ನಮ್ಮ ಸರ್ಕಾರ ಬಿಡುಗಡೆ ಮಾಡುತ್ತದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆದಷ್ಟು ಬೇಗ ವರದಿ ಸರ್ಕಾರಕ್ಕೆ ಕೊಡುತ್ತೇನೆ ಎಂದು…
ಬೆಂಗಳೂರು: ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ. ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೆಲೆ ಜನ ಭರವಸೆ ಇಡುವುದು ಹೇಗೆ ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ . ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜ ಘಾತುಕ ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ ಎಂದರು. ಇಷ್ಟೇ ಅಲ್ಲದೇ ಈ ಥರದ ಕೇಸ್ ಗಳಲ್ಲಿ ಅರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ…
ಬೆಂಗಳೂರು: ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡಿದರು. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು. ಬಂಜಾರ ಸಮುದಾಯದ ಏಳಿಗೆಗೆ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು. ನಾವು…
ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್ ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. “ಬಿಜೆಪಿಯವರಿಗೆ ತಮ್ಮ ಮನೆ ಹುಳುಕು, ದೋಸೆ ತೂತು ಕಾಣುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು. “ಬಿಜೆಪಿಯವರು ಅವರ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ ಎಂದು ತಿಳಿದುಕೊಂಡಿದ್ದಾರೆ. ಜನ ಅವರನ್ನು ಎಲ್ಲಿ ಕೂರಿಸಬೇಕೊ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ. ಬಸವರಾಜ ಬೊಮ್ಮಾಯಿ,…
ಬೆಂಗಳೂರು: ಒಳ ಉಡುಪಿನ ಫೋಟೋ ಶೇರ್ ಮಾಡುವ ಮೂಲಕ ನಟಿ ರೂಪಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ‘ಕೆಜಿಎಫ್’(KGF) ಚಿತ್ರದ ಮೂಲಕ ಚಿರಪರಿಚಿತರಾದ ನಟಿ ರೂಪಾ ರಾಯಪ್ಪ, ಸದ್ಯ ‘ದಿ ಜಡ್ಜ್‌ಮೆಂಟ್’ಎಂಬ ಸಿನಿಮಾದಲ್ಲಿ ರವಿಚಂದ್ರನ್, ಧನ್ಯಾ ರಾಮ್ ಕುಮಾರ್ ಮತ್ತು ದಿಗಂತ್ ಜೊತೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೆಕೆ ಜೊತೆ ‘ಕಾಡ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಎಲ್ರ ಕಾಲೆಳೆಯುತ್ತೆ ಕಾಲ’ ಚಿತ್ರದಲ್ಲಿ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಜೊತೆ ರೂಪಾ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಶ್ವೇತಾ ಶ್ರೀವಾತ್ಸವ್ ಜೊತೆ ಹೊಸ ಪ್ರಾಜೆಕ್ಟ್ ನಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಹಿಂದಿ ವೆಬ್ ಸಿರೀಸ್ ವೊಂದರಲ್ಲಿ ಬಣ್ಣ ಹಚ್ಚಿದ್ದಾರೆ. ಈ ಮೂಲಕ ಹಿಂದಿ ಚಿತ್ರರಂಗಕ್ಕೂ ಪರಿಚಯವಾಗಲಿದ್ದಾರೆ. ಕಳೆದ ಬಾರಿ ವಿವಿಧ ಭಂಗಿಗಳ ಫೋಟೋ ಹಂಚಿಕೊಂಡು ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ರೂಪಾ ಹಾಟ್ ಫೋಟೋ ಜೊತೆ ಟ್ರೋಲ್ ಮಾಡೋರಿಗೆ ಮನವಿ ಕೂಡ ಮಾಡಿದ್ದರು. ನನ್ನ…