Author: admin

ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪ ಮೌದ್ಗಲ್ ಮಾಡಿದ್ದ ಆಕ್ಷೇಪಾರ್ಹ ಸೋಷಿಯಲ್ ಮೀಡಿಯಾ ಪೋಸ್ಟ್ ಗಳನ್ನು ಡಿಲಿಟ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನಾಳೆಯೊಳಗೆ ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ವಿರುದ್ಧ ಪೋಸ್ಟ್ ಮಾಡಿದ್ದ ಎಲ್ಲ ಪೋಸ್ಟ್ ಗಳು ಹಾಗೂ ಕಾಮೆಂಟ್ ಗಳನ್ನು ಡಿಲೀಟ್ ಮಾಡುವಂತೆ ಸುಪ್ರೀಂ ಕೋರ್ಟ್ ಮೌಖಿಕ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಹಾಗೂ ಪಂಕಜ್ ಮಿತ್ತಲ್ ಅವರನ್ನುಒಳಗೊಂಡ ಪೀಠ ಇಂದು ಮೇಲಿನ ಸೂಚನೆ ನೀಡಿದೆ. ಇತ್ತೀಚಿಗೆ ರಾಜ್ಯದಲ್ಲಿ ಈ ಇಬ್ಬರು ಅಧಿಕಾರಿಗಳ ವಾಗ್ವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜತೆಗೆ ಸರಕಾರಕ್ಕೂ ಮುಜುಗರ ತಂದೊಡ್ಡಿತ್ತು. ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಹಲವಾರು ಆರೋಪಗಳನ್ನು ಮಾಡಿದ್ದರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪೋಸ್ಟ್ ಗಳನ್ನು ಹಾಕಿದ್ದರು. ಈ ಕುರಿತು ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಅಧಿಕಾರಿಗಳು ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳುವಂತೆ…

Read More

ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದಿಂದ ಗುರುವಾರ ಪ್ರತಿಭಟನೆ ನಡೆದಿದೆ. ಈ ವೇಳೆ ಸಚಿವ ಸಂತೋಷ್ ಲಾಡ್ ಮದ್ಯಪ್ರಿಯರ ಬೇಡಿಕೆಗಳನ್ನು ಆಲಿಸಿದರು. ಒಬ್ಬರಿಗೆ 1 ಕ್ವಾರ್ಟರ್ ನಿಗದಿ ಮಾಡಿ ಬಾರ್ ಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಬಾರ್ ‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ, ಮದ್ಯಪ್ರಿಯರ ಭವನ ಸ್ಥಾಪಿಸಬೇಕು. ಡಿಸೆಂಬರ್ 31 ಮದ್ಯಪಾನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು. ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಮದ್ಯಪ್ರಿಯರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ. ‘ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ’ ಎಂಬ ಘೋಷಣಾ ವಾಕ್ಯದಡಿ ಸುವರ್ಣಗಾರ್ಡನ್ ಟೆಂಟ್ ‌ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸಿದೆ. ಇನ್ನು ಸಚಿವ ಸಂತೋಷ್ ಲಾಡ್ ಮದ್ಯಪ್ರಿಯರ ಸಮಸ್ಯೆ ಆಲಿಸಿದರು. ಲಿವರ್‌ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು. ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯಪ್ರಿಯರು ಎಂದು ಮಾಡಬೇಕು ಎಂದು ಸಚಿವರ ಬಳಿ ಮದ್ಯಪ್ರಿಯರು…

Read More

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅವರು ನಾಶ ಆಗುತ್ತಾರೆ ಎಂದು ಎಂಪಿ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಾಪದ ಕೊಡ ತುಂಬಿರುವುದಕ್ಕೆ ಇಬ್ಬರೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ. ಯತ್ನಾಳ್ ಮತ್ತು ಸೋಮಣ್ಣನವರೇ ಎಚ್ಚರ ನಾನು ಸುಮ್ಮನಿರಲ್ಲ. ಎಲ್ಲಿಯವರೆಗೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮಾತಾಡುತ್ತೀರಿ ಅಲ್ಲಿಯವರೆಗೆ ನಾನು ಮಾತನಾಡುವೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು: ಯಲಹಂಕದ ಕೊಂಡಪ್ಪ ಲೇಔಟ್ ಬಳಿ ಇರುವ ಶಿವಚೇತನಾ ಪ್ರಾವಿಷನ್ ಸ್ಟೋರ್ ನಲ್ಲಿ ರಾಬರಿ ನಡೆಸಿದ ಕದೀಮರು ಸುಮಾರು 66 ಸಾವಿರ ಮೌಲ್ಯದ ಸಿಗರೇಟ್ ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ಬೆನ್ನುಹತ್ತಿದ ಯಲಹಂಕ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಸಿಗರೇಟ್ ದೋಚಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಸದ್ಯ ಈ ಕೃತ್ಯಕ್ಕೆ ಬಳಕೆ ಮಾಡಿದ್ದ ವಸ್ತುಗಳು ಹಾಗೂ ಸಿಗರೇಟ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

Read More

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಬೀಗ ಹಾಕಿ ಸೀಲ್ ಮಾಡಲಾಗಿದೆ. ಆದರೂ ಬಳಕೆ ಮಾಡುತ್ತಿರುವ ಹಿನ್ನೆಲೆ  ಜೆಪಿ ಪಾರ್ಕ್ ವಾರ್ಡ್ ನಲ್ಲಿ ಆರ್.ಎಸ್. ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್. ನಗರ ವಾರ್ಡ್ ನಲ್ಲಿ ಮಾತಾಜಿ ಡಿಪಾರ್ಟ್ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿದಂತೆ ಒಟ್ಟು ಆರು ಮಳಿಗೆಗಳಿಗೆ ಬೀಗ ಹಾಕಿ ಸೀಲ್  ಮಾಡಲಾಗಿದೆ. ಇದೆ ಬೆಂಗಳೂರು ನಗರದಲ್ಲಿ ಸಾಕಷ್ಟು ಏಕ ಬಳಕೆ ನಿಷೇದಿತ ಪ್ಲಾಸ್ಟಿಕ್ ಬಳಸುತ್ತಿರುವುದು ತಿಳಿದು ಬಂದಿದೆ. ಪೊಲೀಸ್ ಹಾಗೂ ಬಿಬಿಎಂಪಿ ಇಲಾಖೆಯ ಅಧಿಕಾರಿಗಳು, ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಅಂಗಡಿ ಸೀಲ್ ಮಾಡಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

Read More

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ನಡೆದಿದೆ. ಬಸ್ ಚಕ್ರ ಹರಿದ ಪರಿಣಾಮ ಸೀಮಾ(21) ಸ್ಥಳದಲ್ಲೇ ಸಾವನ್ನಪ್ಪಿದರೆ, ಒಂದೂವರೆ ವರ್ಷದ ಹೆಣ್ಣು ಮಗು ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬಸ್‌ ಡಿಕ್ಕಿಯಾದ ರಭಸಕ್ಕೆ ದಂಪತಿ ನೆಲಕ್ಕೆ ಬಿದ್ದಾಗ ಸೀಮಾ ಅವರ ಮೇಲೆ ಬಸ್‌ ನ ಹಿಂಬದಿ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read More

ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲನೇ ಸಿರಿಧಾನ್ಯ ಮೇಳ ನಡೆದಿದ್ದು ೨೦೧೭ ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. ೫ ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ ಎಂದರು. ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ ಎಂದರು.

Read More

ಒಂದಲ್ಲ ಎರಡಲ್ಲ ಬರೋಬ್ಬರಿ ಹತ್ತು ದಿನದಿಂದ RTO ದಲ್ಲಿ ವಾಹನಸವಾರರಿಗೆ ಸಂಕಷ್ಟ ಎದುರಾಗಿದೆ. ಸಾರಿಗೆ ಇಲಾಖೆ ಕಚೇರಿಯಲ್ಲಿ ಆಫೀಸರ್ಸ್ ಏನ್ಮಾಡ್ತಿದ್ದಾರೆ. ಆ‌ರ್ ಟಿಓ ಕಚೇರಿಗಳಲ್ಲಿ ಡಿಎಲ್- ಆರ್ಸಿಗೆ ಸ್ಮಾರ್ಟ್ ಸಮಸ್ಯೆ ಎದುರಾಗಿದೆ. ಬೆಂಗಳೂರು ಆ‌ರ್ ಟಿಓ ಕಚೇರಿಗಳಲ್ಲಿ ಡಿಎಲ್-ಆರ್ಸಿ ಕಾರ್ಡ್, ಲೈಸೆನ್ಸ್ ಕಳೆದ ಹತ್ತು ದಿನದಿಂದ ಸಿಗ್ತಿಲ್ಲ. ಕೈಗೆ ಕಾರ್ಡ್ ಸಿಗದೇ ಮನೆ ಮುಂದೆ ಬೈಕ್, ಕಾರು ನಿಂತಿದೆ. ಆ‌ರ್ ಟಿಓ ಕಚೇರಿಗಳಲ್ಲಿ ಚಾಲನಾ ಪರೀಕ್ಷೆ ಪಾಸ್ ಆದ್ರೂ ಡಿ ಎಲ್‌ ಸಿಗುತ್ತಿಲ್ಲ. ಆರ್ ಟಿ ಓ ಕಚೇರಿಗಳಲ್ಲಿ ಚಾಲನಾ ಪರೀಕ್ಷೆ ಪಾಸ್ ಆದ್ರೂ ಡಿ ಎಲ್‌ ಸಿಗುತ್ತಿಲ್ಲ. ಸ್ಮಾರ್ಡ್ ಕಾರ್ಡ್ ಗೆ ಟೆಕ್ನಿಕಲ್ ಸಮಸ್ಯೆ ತಲೆದೋರಿದೆ. ಸಾರಿಗೆ ಇಲಾಖೆ ಕಚೇರಿಗಳಲ್ಲಿ ಸ್ಮಾರ್ಡ್ ಕಾರ್ಡ್ ಗಳಿಗೆ ಸಕಾಲದಲ್ಲಿ ಚಿಪ್ ಪೂರೈಕೆಯಾಗ್ತಿಲ್ಲ. ಶೋ ರೂಂನಿಂದ ಹೊಸದಾಗಿ ವಾಹನ ಖರೀದಿಸಿದ್ರೂ ವಾಹನ ರಸ್ತೆಗಿಳಿಸದ ಸ್ಥಿತಿ ಇದೆ. ಹೀಗಾಗಿ ಬೆಂಗಳೂರು ಆ‌ರ್ ಟಿಓ ಕಚೇರಿಗಳಲ್ಲಿ ಅಧಿಕಾರಿಗಳ ವಿರುದ್ಧ ವಾಹನಸವಾರರು ಆಕ್ರೋಶ ಹೊರಹಾಕಿದ್ದಾರೆ.

Read More

ಸಂಸತ್‌ ನಲ್ಲಿ ಭದ್ರತಾ ವೈಪಲ್ಯ ಹಿನ್ನೆಲೆ ಸಂಸದ ಪ್ರತಾಪ್ ಸಿಂಹನನ್ನು ಬಂಧಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಭಯೋತ್ಪಾದಕರನ್ನ ಬೆಂಬಲಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ನಕ್ಸಲೇಟ್‌ ವೇಷದಲ್ಲಿರುವ ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಪ್ರತಾಪ್ ಸಿಂಹರನ್ನ ಕೂಡಲೇ ಬಂಧಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅಲ್ಲದೇ ಭಯೋತ್ಪಾದಕರನ್ನ ಬೆಂಬಲಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

Read More

ವರ್ಗಾವಣೆಯಾಗಿ ಹಲವು ತಿಂಗಳಾದರೂ ವರ್ಗಾವಣೆಯಾದ ಸ್ಥಳಕ್ಕೆ ವರದಿ ಮಾಡಿಕೊಳ್ಳದೇ, ಗೈರು ಹಾಜರಾದ ರಾಜ್ಯದ 44 ಪೊಲೀಸ್ ಇನ್‌ ಸ್ಪೆಕ್ಟರ್ ‌ಗಳು ಕರ್ತವ್ಯ ಲೋಪವೆಸಗಿದ್ದು, ಇದೀಗ ಅಂತಹವರನ್ನ ಅಮಾನತು ಮಾಡಲು ಪೊಲೀಸ್‌ ಇಲಾಖೆ ಮುಂದಾಗಿದೆ. ವರ್ಗಾವಣೆಗೊಂಡ ಪೊಲೀಸರು ವರದಿ ಮಾಡಿ ಪಾಲನಾ ವರದಿಯನ್ನ ಪೊಲೀಸ್‌ ಪ್ರಧಾನ ಕಚೇರಿಗೆ ಕಳುಹಿಸಬೇಕು. ಆದರೆ, ಕೆಲ ಪೊಲೀಸ್ ಇನ್‌ ಸ್ಪೆಕ್ಟರ್ ‌ಗಳು ವರ್ಗಾವಣೆಯಾಗಿ ಹಲವು ತಿಂಗಳಾದರೂ ವರ್ಗವಾದ ಸ್ಥಳಕ್ಕೆ ವರದಿ ಮಾಡಿಕೊಳ್ಳದೇ ಹಿರಿಯ ಅಧಿಕಾರಿಗಳ ಆದೇಶ ಉಲ್ಲಂಘಿಸಿದ್ದಾರೆ.

Read More