Author: admin

ನವದೆಹಲಿ: ಮನೆಕೆಲಸದಾಕೆಯ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಮತ್ತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ ತರುವುದು) ಅಡಿಯಲ್ಲಿನ ಆರೋಪವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್‌ ನ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು, ರಾಜ್ಯ ಸರ್ಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರೇವಣ್ಣ ಅವರಿಗೆ ನೋಟಿಸ್ ನೀಡಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠವು, “ಮನೆಕೆಲಸದಾಕೆಯ ಮೇಲಿನ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಹಲ್ಲೆಯ ಆರೋಪವನ್ನು ಕೈಬಿಟ್ಟಿದ್ದು ಹೇಗೆ? ಕೇವಲ ಲೈಂಗಿಕ ಕಿರುಕುಳ ಆರೋಪದ ಮೇಲೆ ಮಾತ್ರ ವಿಚಾರಣೆ ನಡೆಸುವಂತೆ ಸೂಚಿಸಿ, ಆರೋಪಿಯ ವಿರುದ್ಧದ ಚಾರ್ಜ್‌ಗಳನ್ನು ಕೋರ್ಟ್…

Read More

ಮನೆಗೆ ಹೊಸದಾಗಿ ಬಣ್ಣ ಬಳಿಯುವುದು, ಅದರಲ್ಲೂ ವಿಶೇಷವಾಗಿ ಮರು ಪೇಂಟಿಂಗ್ ಮಾಡಿಸುವುದು ಹಲವರಿಗೆ ದೊಡ್ಡ ತಲೆನೋವಿನ ಕೆಲಸ. ಪೇಂಟಿಂಗ್ ಮುಗಿದ ನಂತರ ಫರ್ನಿಚರ್‌ಗಳು ಹಾಳಾಗುವುದು ಅಥವಾ ನೆಲದ ಮೇಲೆ ಬಣ್ಣ ಬಿದ್ದು ಕಲೆಯಾಗುವುದು ಬಹುತೇಕ ಮನೆಗಳಲ್ಲಿ ಕೇಳಿಬರುವ ಸಾಮಾನ್ಯ ದೂರು. ಆದರೆ, ಕೊಂಚ ಮುನ್ನೆಚ್ಚರಿಕೆ ವಹಿಸಿದರೆ ಕೋಣೆಯಲ್ಲಿರುವ ಬೆಲೆಬಾಳುವ ವಸ್ತುಗಳಿಗೆ ಹಾನಿಯಾಗದಂತೆ ತಡೆಯಬಹುದು. ಪೇಂಟಿಂಗ್ ಮಾಡುವಾಗ ನೆನಪಿನಲ್ಲಿಡಬೇಕಾದ ಕೆಲವು ಮುಖ್ಯವಾದ ಸಲಹೆಗಳು ಇಲ್ಲಿವೆ: ವಸ್ತುಗಳ ರಕ್ಷಣೆ ಮೊದಲು: ಪೇಂಟಿಂಗ್ ಆರಂಭಿಸುವ ಮುನ್ನ ಕೋಣೆಯಲ್ಲಿರುವ ಸಾಧ್ಯವಿರುವ ಎಲ್ಲಾ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಿ. ಇನ್ನುಳಿದ ವಸ್ತುಗಳನ್ನು ಮತ್ತು ಇಡೀ ನೆಲವನ್ನು ಪ್ಲಾಸ್ಟಿಕ್ ಅಥವಾ ದಪ್ಪನೆಯ ಕ್ಯಾನ್ವಾಸ್ ಬಟ್ಟೆಯಿಂದ ಸಂಪೂರ್ಣವಾಗಿ ಮುಚ್ಚಿ. ಪೇಂಟಿಂಗ್ ವೇಳೆ ಬರುವ ಕಸವನ್ನು ಹಾಕಲು ಮೊದಲೇ ಒಂದು ದೊಡ್ಡ ಡಸ್ಟ್‌ಬಿನ್ ರೆಡಿ ಇಟ್ಟುಕೊಳ್ಳಿ. ಗೋಡೆಗಳ ಸ್ವಚ್ಛತೆ ಮತ್ತು ರಿಪೇರಿ: ಬಣ್ಣ ಹಚ್ಚುವ ಮುನ್ನ ಗೋಡೆಗಳನ್ನು ಚೆನ್ನಾಗಿ ತೊಳೆಯಬೇಕು. ಗೋಡೆಗೆ ಅಂಟಿಕೊಂಡಿರುವ ಕಲೆಗಳು ಅಥವಾ ಹಳೆಯ ಪೇಂಟ್ ಅವಶೇಷಗಳನ್ನು ಸ್ಕ್ರಾಪರ್ ಬಳಸಿ ತೆಗೆದುಹಾಕಿ.…

Read More

ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲೆಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ, ಇದು ಬಿಜೆಪಿಯ ಊಹಾಪೋಹ ಅಷ್ಟೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ತಿಳಿಸಿದ್ದಾರೆ. ನಗರದ ಜಯನಗರ ಪೂರ್ವದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ಎಸ್.ಐ.ಆರ್.ಗೆ ಪೂರಕವಾಗಿ ಹೆಲ್ಪ್ ಲೈನ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಮತಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸ ಬೇಕೆಂದರೆ, ರೇಷನ್ ಕಾರ್ಡು, ಪಾಸ್ಪೋರ್ಟ್, ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಕನಿಷ್ಠ ದಾಖಲಾತಿಗಳಾದರೂ ಬೇಕು. ಅಂತಹ ಯಾವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ. ಎಸ್.ಐ.ಆರ್. ಮೂಲಕ ಕಾಂಗ್ರೆಸ್ ಮತದಾರರನ್ನು ಕಿತ್ತು ಹಾಕಬಹುದು ಎಂಬ ಭ್ರಮೆಯಲ್ಲಿದ್ದ ಬಿಜೆಪಿಗೆ, ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಎಸ್.ಐ.ಆರ್. ನಿರಾಸೆ ತಂದಿದೆ. ಹಾಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಹುರುಳು ಇಲ್ಲ ಎಂದರು. ಮಾಜಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಎಸ್.ಷಫಿ ಅಹಮದ್ ಮಾತನಾಡಿ, ಜೂನ್ 30 ರಿಂದ ಜುಲೈ…

Read More

ತುಮಕೂರು: ಜನನ ಪ್ರಮಾಣ ಪತ್ರಗಳಲ್ಲಿ ಮಗುವಿನ ಹೆಸರು, ತಂದೆ ತಾಯಿ ಹೆಸರು, ಇನಿಷಿಯಲ್ ಹಾಗೂ ಇತರೆ ವಿವರಗಳಲ್ಲಿ ಉಂಟಾಗುವ ಸಣ್ಣಪುಟ್ಟ ಲೋಪದೋಷಗಳಿಂದ ಸಾಕಷ್ಟು ಪೋಷಕರು ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿದ್ದ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದು ಇಂತಹ ತಪ್ಪುಗಳನ್ನು ತಡೆಯಲು ಸೂಕ್ತ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದರು. ಸದರಿ ಮನವಿಯನ್ನು ಪರಿಗಣಿಸಿರುವ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ರಕ್ಷಣಾ ಆಯೋಗದ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ಆದೇಶ ಸಾವಿರಾರು ಮಕ್ಕಳು ಮತ್ತು ಪೋಷಕರ ಅನಗತ್ಯ ಅಲೆದಾಟವನ್ನು ತಪ್ಪಿಸಲು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಿಕಟಪೂರ್ವ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ, ಭೂಮಾಪಕರ ಹುದ್ದೆಯಲ್ಲಿ ಖಾಲಿ ಇರುವ 560 ಹುದ್ದೆಗಳಿಗೆ ಅರ್ಜಿ ಹಾಕಲು 7-8-2026 ಅಂತಿಮ ದಿನಾಂಕವಾಗಿದ್ದು ಹಾಗೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯಲ್ಲಿ ಖಾಲಿ ಇರುವ 505 ಹುದ್ದೆಗಳಿಗೆ ಅರ್ಜಿಹಾಕಲು 30-07-2026 ಅಂತಿಮ ದಿನಾಂಕವಾಗಿದ್ದು, ಈ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ತುಮಕೂರು ಸಂಸ್ಥೆ ಮೇಲ್ಕಂಡ ಹುದ್ದೆಗಳ ಜೊತೆಗೆ ಬ್ಯಾಂಕಿಂಗ್/ಎಸ್.ಎಸ್.ಸಿ/ರೈಲ್ವೆ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ದಿನಾಂಕ 15-07-2026ರಿಂದ ನುರಿತ ಉಪನ್ಯಾಸಕರಿಂದ ಪ್ರಾರಂಭಿಸಲಿದೆ. ಆಸಕ್ತರು ದಿನಾಂಕ 14-07-2026ರೊಳಗೆ 9449146200 ನಂಬರ್ ಗೆ ನೋಂದಾಯಿಸಿ ಕೊಳ್ಳಬಹುದೆಂದು, ತುಮಕೂರು ಶಾಖೆಯ ಕಾರ್ಯದರ್ಶಿಗಳಾದ ಹೆಚ್.ಎಸ್. ಹನುಮೇಗೌಡರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಕೊರಟಗೆರೆ ತಾಲ್ಲೂಕಿನ ಬೋರಪ್ಪನಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪುನೀತ್ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್‌ ಗೆ ಒಳಗಾಗಿ ದುರ್ಮರಣ ಹೊಂದಿರುವದು ಅತ್ಯಂತ ದುಃಖಕರ ಹಾಗೂ ಖಂಡನೀಯ ಸಂಗತಿಯಾಗಿದೆ. ಜಿಲ್ಲಾಡಳಿತ ಎಲ್ಲಾ ಶಾಲೆಗಳಲ್ಲೂ ವಿದ್ಯಾರ್ಥಿಗಳ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಓಂಕಾರ್ ಒತ್ತಾಯಿಸಿದ್ದಾರೆ. ಪರಿಶಿಷ್ಟ ಜನಾಂಗದ ಭೋವಿ ಸಮುದಾಯದ ಅಮಾಯಕ ವಿದ್ಯಾರ್ಥಿ ಪುನೀತ್ ತನ್ನ ತಂದೆ ತಾಯಿಯ ಏಕೈಕ ಮಗನಾಗಿದ್ದ, ತಂದೆ ಕಟ್ಟಡ ಕಾರ್ಮಿಕರಾಗಿ ದಿನಗೂಲಿ ಮಾಡಿ ಕುಟುಂಬವನ್ನು ಸಾಗಿಸುತ್ತಿದ್ದು, ಮಗನನ್ನು ಉತ್ತಮ ಶಿಕ್ಷಣ ನೀಡಿ ಜೀವನದಲ್ಲಿ ಉನ್ನತ ಸ್ಥಾನಕ್ಕೆ ತಲುಪಿಸುವ ಕನಸು ಕಂಡಿದ್ದರು. ಭವಿಷ್ಯದಲ್ಲಿ ಕುಟುಂಬಕ್ಕೆ ಆಸರೆಯಾಗಬೇಕಿದ್ದ ಆ ಪುಟ್ಟ ಜೀವ ಇಂದು ನಿರ್ಲಕ್ಷ್ಯದ ಬಲಿಯಾಗಿರುವುದು ಕುಟುಂಬದ ಪಾಲಿಗೆ ಎಂದಿಗೂ ತುಂಬಲಾಗದ ನಷ್ಟವಾಗಿದೆ. ಘಟನೆ ಹಿನ್ನೆಲೆಯಲ್ಲಿ ಓಂಕಾರ್ ಅವರು ಡಿಡಿಪಿಐ ಹಾಗೂ ಬಿಇಒ ಅವರೊಂದಿಗೆ ಬೋರಪ್ಪನಹಳ್ಳಿಯ ಮೃತ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ…

Read More

ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು, ಉತ್ತಮ ನಿದ್ದೆ, ಪೌಷ್ಟಿಕ ಆಹಾರ ಮತ್ತು ಪ್ರಸವಪೂರ್ವ ಜೀವಸತ್ವಗಳ (Prenatal vitamins) ಮೇಲಿರುತ್ತದೆ. ಆದರೆ ಈ ಎಲ್ಲಾ ಚರ್ಚೆಗಳ ನಡುವೆ ಬಾಯಿಯ ಆರೋಗ್ಯ ಮತ್ತು ಸ್ವಚ್ಛತೆಯನ್ನು (Oral hygiene) ಬಹುತೇಕರು ನಿರ್ಲಕ್ಷಿಸುತ್ತಾರೆ. ಆದರೆ ಇತ್ತೀಚಿನ ಸಂಶೋಧನೆಗಳ ಪ್ರಕಾರ, ಹಲ್ಲು ಮತ್ತು ವಸಡುಗಳ ಆರೋಗ್ಯಕ್ಕೂ ಹಾಗೂ ನಿಮ್ಮ ಫಲವತ್ತತೆಗೂ (Fertility) ಹತ್ತಿರದ ಸಂಬಂಧವಿದೆ! ಹೌದು, ತಜ್ಞರ ಪ್ರಕಾರ ಗರ್ಭಧರಿಸುವ ಸಾಧ್ಯತೆಯನ್ನು ಹೆಚ್ಚಿಸಲು ಪ್ರತಿದಿನ ಮಾಡಬೇಕಾದ ಅತ್ಯಂತ ಸರಳ ಮತ್ತು ಮುಖ್ಯವಾದ ಹಲ್ಲಿನ ಹವ್ಯಾಸವೆಂದರೆ ‘ಫ್ಲಾಸಿಂಗ್’ (Flossing). ಅಂದರೆ ದಾರದಿಂದ ಹಲ್ಲುಗಳ ನಡುವಿನ ಸಂದುಗಳನ್ನು ಸ್ವಚ್ಛಗೊಳಿಸುವುದು. ದಂತ ತಜ್ಞರಾದ ಡಾ. ಹೊಮ್ಸಿ ಅವರ ಪ್ರಕಾರ, “ನಿಮ್ಮ ಸಂಗಾತಿಯ ಫ್ಲಾಸಿಂಗ್ ಮಾಡುವ ಹವ್ಯಾಸವು ನೀವು ಗರ್ಭಿಣಿಯಾಗುವ ಸಾಧ್ಯತೆಯ ಮೇಲೆ ನೇರ ಪರಿಣಾಮ ಬೀರಬಹುದು.” ಫ್ಲಾಸಿಂಗ್ ಮತ್ತು ಫಲವತ್ತತೆ ನಡುವಿನ ಲಿಂಕ್ ಏನು? ಫ್ಲಾಸಿಂಗ್ ಕೇವಲ…

Read More

ಬೆಂಗಳೂರು: ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ ಸೇರಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯ 572, ಸರ್ವೆ ಇಲಾಖೆಯ 750 ಭೂಮಾಪಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಾಲೆಗಳ 1,087 ಶಿಕ್ಷಕರು ಹಾಗೂ 2,314 ಕೆಎಸ್ ಆರ್ ಪಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಕಲ್ಯಾಣ ಕರ್ನಾಟಕ ವೃಂದಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದೆ. ಅರ್ಹರು ಅಧಿಸೂಚನೆಯನ್ನು ಒಮ್ಮೆ ಓದಿ, ಅನ್ವಯವಾಗುವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಅಧಿಸೂಚನೆಯಲ್ಲೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದು ಆ ಪ್ರಕಾರ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಅರ್ಜಿ…

Read More

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಭಾನುವಾರ ಭೀಕರ ದುರಂತವೊಂದು ಸಂಭವಿಸಿದೆ. ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋರುತ್ತಿದ್ದ ಮನೆಯೊಂದನ್ನು ದುರಸ್ತಿ ಮಾಡುವಾಗ, ಮೇಲ್ಛಾವಣಿ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮಣ್ಣಿನ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಮಾದೇವ್ ಕೃಷ್ಣಪ್ಪ ಬಡಿಗೇರ್ (48) ಮತ್ತು ಸೈಯದ್ ಕೆಂಪವಾಡಿ (32) ಎಂದು ಗುರುತಿಸಲಾಗಿದೆ. ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಸತತ ಮಳೆಯಿಂದಾಗಿ ಮನೆ ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಮನೆ ರಿಪೇರಿ ಕೆಲಸ ಕೈಗೆತ್ತಿಕೊಳ್ಳಲಾಗಿತ್ತು. ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಇಡೀ ಮನೆ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ಇಬ್ಬರು ಕಾರ್ಮಿಕರು ಮಣ್ಣು ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ದುರಂತ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯ ನಡೆಸಿ, ಅವಶೇಷಗಳ ಅಡಿಯಲ್ಲಿದ್ದ ಇಬ್ಬರನ್ನೂ ಹೊರತೆಗೆದಿದ್ದಾರೆ. ತದನಂತರ ಗಂಭೀರ ಸ್ಥಿತಿಯಲ್ಲಿದ್ದ ಕಾರ್ಮಿಕರನ್ನು ನೆರೆಯ ಮಹಾರಾಷ್ಟ್ರದ ಜತ್ತ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಯಿತು.…

Read More

ಮೈಸೂರು: ದಕ್ಷಿಣ ಭಾರತದ ಖ್ಯಾತ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ (S. Janaki) ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಕಣಿಯನಹುಂಡಿಯ ತೋಟದಲ್ಲಿ ಭಾನುವಾರ ಸಂಜೆ ನೆರವೇರಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಜಾನಕಿ ಅವರು ಶನಿವಾರ ರಾತ್ರಿ ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತದನಂತರ ಸಂಜೆ ವೇಳೆಗೆ ಗಾಯಕಿಯ ಅಂತ್ಯಸಂಸ್ಕಾರದ ವಿಧಿವಿಧಾನಗಳು ನಡೆದವು. ಕಳೆದ ನಾಲ್ಕು ವರ್ಷಗಳ ಹಿಂದೆ ಎಸ್.ಜಾನಕಿ ಅವರು ಮೈಸೂರಿನ ಕಣಿಯನಹುಂಡಿಯಲ್ಲಿ 2 ಎಕರೆ ಜಮೀನು ಖರೀದಿಸಿದ್ದರು. ತಮ್ಮ ಅಂತ್ಯಕ್ರಿಯೆ ಇದೇ ಜಾಗದಲ್ಲಿ ಆಗಬೇಕು ಎಂದು ಅವರು ಇಚ್ಛಿಸಿದ್ದರು. ಅದರಂತೆ ಅವರ ಇಚ್ಛೆಯಂತೆಯೇ ಈ ಖಾಸಗಿ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಇತ್ತೀಚೆಗಷ್ಟೇ ಜಾನಕಮ್ಮ ಅವರ ಪುತ್ರ ನಿಧನರಾಗಿದ್ದ ಹಿನ್ನೆಲೆಯಲ್ಲಿ, ಪುತ್ರನ ಮಗಳು (ಮೊಮ್ಮಗಳು) ಜಾನಕಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಂತ್ಯಸಂಸ್ಕಾರದ ವೇಳೆ ಪೊಲೀಸರು 3 ಸುತ್ತು ಕುಶಾಲತೋಪು ಸಿಡಿಸಿ…

Read More