Author: admin

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರ ಸಾಕ್ಷಿ ಗುರುತಿಸಿದ 13 ಸ್ಥಳಗಳಲ್ಲಿ ಇಂದು ಶವ ಹೊರ ತೆಗೆಯುವ ಕಾರ್ಯಾಚರಣೆ ಕಾರ್ಯ ಆರಂಭವಾಗಿದೆ. ಸೋಮವಾರ ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸಕ್ಕೆ ಎಸ್‌ ಐಟಿ ಮುಂದಾಗಿದೆ. ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ. ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನ ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇಂದಿನಿಂದ ಸಮಾಧಿ ಅಗೆಯುವ ಕಾರ್ಯ ಶುರುವಾಗಲಿದೆ. ನೇತ್ರಾವತಿ ಸ್ನಾನಘಟ್ಟದ ಬಳಿ ಈಗಾಗಲೇ ಸಿಬ್ಬಂದಿಗಳು ‌ಬಂದಿದ್ದು, 12 ಕಾರ್ಮಿಕರ ತಂಡ ಆರೆ, ಪಿಕಾಸಿ, ಗುದ್ದಲಿ ಜೊತೆಗೆ ಸಮಾಧಿ ಅಗೆಯಲು ಬೇಕಾದ ಎಲ್ಲ ಸಾಮಗ್ರಿಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಕೆಲವೇ ಕ್ಷಣಗಳಲ್ಲಿ ಇವರೆಲ್ಲರ ಸಮಕ್ಷಮದಲ್ಲಿ ಸಮಾಧಿ ಅಗೆಯುವ ಕೆಲಸ…

Read More

ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಗಣೇಶ್​, ಮುನಿರಾಜ್​ ಮತ್ತು ಶಿವಕುಮಾರ್​​ ಬಂಧಿತರು ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ  ಐದು ತಂಡ ರಚಿಸಿ ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಸದ್ಯ ಮೂವರನ್ನು ಬಂಧಿಸುವ ಮೂಲಕ ಬಂಧಿತರಿಂದ 22 ಜಿಲೆಟಿನ್​ ಜೆಲ್​, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ. ಇನ್ನು ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗಗೊಂಡಿವೆ. ಆರೋಪಿಗಳು ಸ್ಫೋಟಕಗಳನ್ನು ಬ್ಯಾಗ್​ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ  ತೆರಳಿದ್ದು, ಬ್ಯಾಗ್​ಗಳನ್ನು ಹೊರಗಡೆ ಇಟ್ಟು ಹೋಗಿದ್ದಾರೆ. ಈ ವೇಳೆ ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್​ ಇರುವುದನ್ನು​ ನೋಡಿ ಬೆದರಿ ಅಲ್ಲಿಯೇ ಬ್ಯಾಗ್​ ಬಿಟ್ಟು  ಹೋಗಿದ್ದಾರೆ ಎನ್ನುವ ಮಾಹಿತಿ ಪತ್ತೆಯಾಗಿದೆ. ಕೋಲಾರದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಖರೀದಿಸಿದ್ದಾರೆ. ಆರೋಪಿಗಳು ಸ್ಫೋಟಕಗಳನ್ನು…

Read More

ಕಲಬುರಗಿ: ತಂದೆಯ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಸಂಬಂಧ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತಾಯಿ ದಿವ್ಯಾಂಗರಾಗಿದ್ದು, ಹೀಗಾಗಿ ಬಾಲಕಿಯೇ ತಂದೆಯ ಆರೈಕೆ ಬಂದಿದ್ದಳು. ಆ ಸಂದರ್ಭದಲ್ಲಿ ಆಸ್ಪತ್ರೆಯ ಸ್ವಚ್ಛತಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಯೇ ಕೃತ್ಯ ಎಸಗಿದ್ದಾನೆ. ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗ ಮಾಡಿಕೊಂಡು ಸಿಬ್ಬಂದಿ ಸಂಪತ್ ಕಿವಡೇಕರ್ ಎಂಬಾತ ಆಕೆಯನ್ನು ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂಪತ್ ಕಿವಡೇಕರ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವಿಜಯಪುರ:  ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ಕಳೆದ ಮೂರು ದಿನಗಳಿಂದ 30 ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ಎರಡು ಆ್ಯಂಬುಲೆನ್ಸ್ ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ  ಅಸ್ವಸ್ಥಗೊಂಡವರು ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.  ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಡೇಟಿಂಗ್‌ ಆ್ಯಪ್‌ ನ ಮೂಲಕ ಪರಿಚಯವಾಗಿದ್ದ ಉದ್ಯೋಗಿಯನ್ನು ಭೇಟಿಗೆ ಆಹ್ವಾನಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಯಲಹಂಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ(21), ಅಭಿಷೇಕ್(19), ಶ್ಯಾಮ್ ಸುಂದರ್ ಪಾಂಡೆ(20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಬಂಧಿತರು. ತೆಲಂಗಾಣ ರಾಜ್ಯದ ರಾಕೇಶ್‌ ರೆಡ್ಡಿ ಅವರು ನೀಡಿದ ದೂರು ಆಧರಿಸಿ ನಗರದ ವಿವಿಧ ಸ್ಥಳಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ. 15 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ರಾಕೇಶ್ ರೆಡ್ಡಿ ಅವರು ಮಹದೇವಪುರದಲ್ಲಿ ಇರುವ ಬೋಯಿಂಗ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಂದ ಆರೋಪಿಗಳು ₹2 ಲಕ್ಷ ಸುಲಿಗೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಮಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಅಸಹಜ ಸಾವು ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ–ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ–ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ಸಾಕ್ಷಿ–ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ ಕಾನೂನು ಸಲಹೆಗಾರರೊಂದಿಗೆ ಬೆಳ್ತಂಗಡಿಯಲ್ಲಿರುವ ಎಸ್‌ ಐಟಿ ಕಚೇರಿಗೆ ಮುಸುಕುಧಾರಿ ವ್ಯಕ್ತಿಯಾಗಿ ಆಗಮಿಸಿದರು. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು, ಒಂದು ಗಂಟೆ ವಿಚಾರಣೆ ನಡೆಸಿ ಕೆಲವು ದಾಖಲಾತಿ ಕಾರ್ಯಗಳನ್ನು ಪೂರ್ಣಗೊಳಿಸಿದ ನಂತರ, ಸಾಕ್ಷಿ–ದೂರುದಾರ ವ್ಯಕ್ತಿಯನ್ನು ಮೊದಲಿಗೆ ನೇತ್ರಾವತಿ ಸ್ನಾನಘಟ್ಟ ಪ್ರದೇಶಕ್ಕೆ ಕರೆದೊಯ್ದರು, ಅಲ್ಲಿ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದ ಸ್ಥಳವನ್ನು ತೋರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟ ಪ್ರಥಮ್ ಗೆ ಡಿ ಬಾಸ್ ಅಭಿಮಾನಿಗಳು ಜೀವಬೆದರಿಕೆ ಹಾಕಿದ್ದರು ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಡಿ ಕಂಪೆನಿ ಹಾಗೂ ನಟ ಪ್ರಥಮ್ ನಡುವೆ ವಾರ್ ಮುಂದುವರಿದಿದೆ. ಪ್ರಥಮ್ ಆರೋಪಕ್ಕೆ ಡಿ ಕಂಪೆನಿ ಉತ್ತರ: ಪ್ರಥಮ್ ಮೇಲೆ ಹಲ್ಲೆ ಪ್ರಕರಣ ಸತ್ಯ ಹೊರ ಬಂದಿದೆ , ರೌಡಿಗಳ ಜೊತೆ ಹೋಗಿ ಅವರ ಕಾರ್ಯಕ್ರಮದಲ್ಲಿ ಅವರ ಹತ್ತಿರನೇ ತಿಂದು ಅವರಿಗೆ ರೇಗಿಸಿ ಬ್ರೆಡ್ ಚಿಪ್ಸ್ ಕೇಳಿ ಖಾರ ಬನ್ ತಿಂದ ಪ್ರಕರಣವಿದು, ನಮ್ಮ ಪ್ರಶ್ನೆ ದರ್ಶನ ಅವರು ಜೈಲಲ್ಲಿ ಇದ್ದಾಗ ಅಭಿಮಾನಿಗಳಿಗೆ ಪ್ರಚೋದನೆ ಹೇಳಿಕೆ ನೀಡಿ ಕಾಮೆಂಟ್ ಮಾಡಿದವರ ವಿರುದ್ಧ ಸಾಲು ಸಾಲು ದೂರು ದಾಖಲಿಸಿದ ಕುತಂತ್ರಿಗೆ ? ಹಲ್ಲೆ ನಡೆದರೂ ದೂರು ನೀಡಿದಷ್ಟು ಒಳ್ಳೆ ಮನಸ್ಸು ಇದೆಯಾ?  ಕಾರಣ ಇಷ್ಟೇ ಅಂದು ಪೊಲೀಸ್ ದೂರು ನೀಡಲು ವೈದ್ಯರ ವರದಿ ಬೇಕು ಸರ್ಕಾರಿ ಆಸ್ಪತ್ರೆಗೆ ಹೋದರೆ ವೈದ್ಯರ ಪರೀಕ್ಷೆಯಲ್ಲಿ ಕುಡಿದಿರುವುದು ಬೆಳಕಿಗೆ ಬರುತ್ತದೆ…

Read More

ದಾವಣಗೆರೆ:  ಪತಿಯನ್ನು ಹತ್ಯೆ ಮಾಡಿ ಕೇರಳಕ್ಕೆ ಪರಾರಿಯಾಗಿ ಪ್ರಿಯಕರನೊಂದಿಗೆ ವಾಸಿಸುತ್ತಿದ್ದ ಪತ್ನಿಯನ್ನು ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಲಕ್ಷ್ಮೀ (38) ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಪ್ರಿಯಕರ ತಿಪ್ಪೇಶ್ ನಾಯ್ಕ್ (42) ಮತ್ತು ಸಂತೋಷ್‌ (40)  ಬಂಧಿತ ಆರೋಪಿಗಳಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತ್ಯಾಗದಕಟ್ಟೆಯ ನಿವಾಸಿ ಲಕ್ಷ್ಮೀ ಮತ್ತು ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದ ನಿವಾಸಿಯಾಗಿದ್ದ ನಿಂಗಪ್ಪ ಮದುವೆಯಾಗಿ ಎಂಟು ವರ್ಷ ಕಳೆದಿದೆ. ಮದುವೆಯಾಗಿ ಎಂಟು ವರ್ಷ ಕಳೆದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಮಕ್ಕಳ ಭಾಗ್ಯ ಪಡೆಯಲು ಲಕ್ಷ್ಮೀ ಪತಿಯೊಂದಿಗೆ ಸುತ್ತದ ದೇವಾಲಯವಿರಲಿಲ್ಲ, ಹೋಗದ ಆಸ್ಪತ್ರೆಗಳಿರಲಿಲ್ಲ. ಕೊನೆಗೆ ಒಂದು ದಿನ ನಿಂಗಪ್ಪನಿಗೆ ಮಕ್ಕಳಾಗುವ ಯೋಗವಿಲ್ಲ ಎಂಬುದು ಗೊತ್ತಾಗಿದೆ. ನಿಂಗಪ್ಪ ಅಡಿಕೆ ಕೆಲಸ ಮಾಡುತ್ತಿದ್ದು ಆತನ ಸ್ನೇಹಿತರಾದ ತಿಪ್ಪೇಶ್ ನಾಯ್ಕ್​ ಹಾಗೂ ಸಂತೋಷ್ ಕೂಲಿ ಕೆಲಸಕ್ಕೆ ಬರುತ್ತಿದ್ದರು. ಆಗ, ತಿಪ್ಪೇಶ್ ನಾಯ್ಕ್​ಗೆ ಲಕ್ಷ್ಮೀಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ, ಅನೈತಿಕ ಸಂಬಂಧ ಬೆಳದಿದೆ. ಇದರ ಪರಿಣಾಮವಾಗಿ ಲಕ್ಷ್ಮೀ ಗರ್ಭಿಣಿಯಾಗಿದ್ದಳು. ತನಗೆ ಮಕ್ಕಳು…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಮೃತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದ ನಟಿ ರಮ್ಯಾ ವಿರುದ್ಧ ನಟ ದರ್ಶನ್ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್​ ಮತ್ತು​ ನಟಿ ರಮ್ಯಾ ನಡುವೆ ವಾರ್ ಆರಂಭಗೊಂಡಿದೆ. ಮೃತನ ಫ್ಯಾಮಿಲಿ ಪರ ನಿಂತ ನನಗೆ ದರ್ಶನ್​ ಫ್ಯಾನ್ಸ್ ಅಶ್ಲೀಲ ಮೆಸೇಜ್​​ಗಳನ್ನ ಕಳಿಸುತ್ತಿದ್ದಾರೆ ಎಂದು ನಟಿ ರಮ್ಯಾ ಆರೋಪ ಮಾಡಿದ್ದಾರೆ. ಅಲ್ಲದೇ ದರ್ಶನ್​ ಅಭಿಮಾನಿಗಳು ಈ ಮಟ್ಟಕ್ಕೆ ಇಳಿಯಬಾರದು ಎಂದು ರಮ್ಯಾ ಕಿಡಿಕಾರಿದ್ದಾರೆ. ಈ ಸಂಬಂಧ  ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಟ ದರ್ಶನ್ ಫ್ಯಾನ್ಸ್ ಕಮೆಂಟ್ ಬಗ್ಗೆ ನಟಿ ರಮ್ಯಾ ಅವರು ಮೊದಲು ದೂರು ನೀಡಲಿ ಬಳಿಕ ಪೊಲೀಸರು ಏನು ಕ್ರಮ‌ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತಾರೆ. ಸೈಬರ್ ಕ್ರೈಂ ಅವರು ಯಾವುದು ಸೆನ್ಸಿಟೀವ್ ಇರುತ್ತೆ ಅಂತವರನ್ನ ಬ್ಲಾಕ್ ಮಾಡ್ತಾರೆ. ಇಲ್ಲವೇ ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತಾರೆ ಎಂದು ಪರಮೇಶ್ವರ್​ ಹೇಳಿದ್ದಾರೆ. ಈ ಬಗ್ಗೆ ದೂರು ಯಾರಾದ್ರು…

Read More

ಬೆಂಗಳೂರು: ಎಸ್‌ ಸಿಎಸ್‌ಪಿ/ಟಿಎಸ್‌ ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದ್ದಾರೆ. ಒಂದು ಕಡೆ…

Read More