Author: admin

ಬೆಂಗಳೂರು: ಕಾವೇರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಡಿಸಿಎಂ ಯಾವಾಗಲೂ  ಬ್ರಾಂಡ್ ಬೆಂಗಳೂರು ಅಂತ ಭಾಷಣ ಮಾಡಿದರೆ ಸಾಲದು, ಬೆಂಗಳೂರಿಗೆ ಕಾವೇರಿ ನೀರು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ  ಬ್ಯಾಡ್ ಬೆಂಗಳೂರು ಆಗುತ್ತದೆ ಎಂದರು. ಸಂಕಷ್ಟ ಸೂತ್ರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2018 ಕ್ಕೂ ಮೊದಲು ಸಂಕಷ್ಟ ಸೂತ್ರ ಜಾರಿಗೊಳಿಸಲು ಈ ಪರಿಸ್ಥಿತಿ ಇರಲಿಲ್ಲ. ಸಿಡಬ್ಲುಎಂಎ ಬಂದ ಮೇಲೆ ನೀರಿನ ಸಮಸ್ಯೆ ಈಗ ಬಂದಿದೆ. ಹೀಗಾಗಿ ಸಂಕಷ್ಟ ಸೂತ್ರ ಜಾರಿ…

Read More

ಚಾಮರಾಜನಗರ: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಚಾಲಕ  ಸ್ಥಳದಲ್ಲೇ ಮೃತಪಟ್ಟಿದ್ದಾನೆ.  ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿಲಾಗಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

Read More

ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ  ಕಾವೇರಿ ನೀರಿನ ವಿಚಾರದಲ್ಲಿ  ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ  ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ  ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಬೈಕ್ ನಲ್ಲಿ ಹೊರಟು ರೈಲ್ವೆ ನಿಲ್ದಾಣಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ,  ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ, ಕರ್ನಾಟಕ  ಸರ್ಕಾರ, ಸಂಸದರ ವಿರುದ್ದ ದಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,  ಕಾವೇರಿ ನೀರು‌ ಹಂಚಿಕೆಯಲ್ಲಿ  ಕಾವೇರಿ ನ್ಯಾಯಾಧೀಕರಣ ಕರ್ನಾಟಕ ಪಾಲಿಗ ಮರಣಶಾಸನ ಬರೆದಿದ್ದು ಅನ್ಯಾಯ ಮಾಡಿದೆ.  ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಗುಣರಾಜು ಇದ್ದರು.

Read More

ಮುಂಬೈ: ಮಹಾರಾಷ್ಟ್ರದ ಹಾದಿಯಲ್ಲಿ ಮಲಗಿದ್ದ ಐದು ಕಾರ್ಮಿಕರು ಟ್ರಕ್ಸ್ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಬುಲ್ದಾನ ಜಿಲ್ಲೆಯ ವಾಡ್ನರ್ ಭೋಲ್ಜಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಅಪಘಾತ ನಡೆದಿದೆ. ದಾರಿಯುದ್ದಕ್ಕೂ ತಾತ್ಕಾಲಿಕವಾಗಿ ಕಟ್ಟೆಯ ಶೆಡ್ಡುಗಳಲ್ಲಿ ಕಾರ್ಮಿಕರು ಮಲಗಿದ್ದರು. ಈ ಸಮಯದಲ್ಲಿ ಅಪಘಾತ ನಡೆದಿದೆ. ಮೂರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಟ್ರಕ್ ಚಾಲಕರು ಅಡಗಿರುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿತ್ತು. ಅದಾದ ನಂತರ ಇದೀಗ ಮಂಗಳೂರು ತಾಲೂಕಿನ ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ಈದ್ ಮಿಲಾದ್ ಮೆರವಣಿಗೆ ಹೆಸರಲ್ಲಿ ಪುಂಡರು ಹಸಿರು ಬಾವುಟ ಪ್ರದರ್ಶಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 28ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ರಸ್ತೆ ಬಂದ್ ಮಾಡಿ ಬೈಕ್ ಹಾರ್ನ್ ಹಾಕಿಕೊಂಡು ಯುವಕರಿಂದ ಹುಚ್ಚಾಟ ನಡೆದಿತ್ತು. ಸದ್ಯ ವಿಡಿಯೋವನ್ನು ಆಧರಿಸಿ ಯುವಕರನ್ನು ಉಳ್ಳಾಲ ಪೋಲೀಸರು ಇದೀಗ ಪತ್ತೆ ಹಚ್ಚಿದ್ದಾರೆ. ಉಳ್ಳಾಲದ ವೀರರಾಣಿ ಅಬ್ಬಕ್ಕ ಸರ್ಕಲ್ ಮೇಲೆ ಯುವಕರ ಗುಂಪೊಂದು ಹಸಿರು ಬಾವುಟ ಪ್ರದರ್ಶಿಸಿದ್ದ ವಿಡಿಯೋ ಒಂದು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಮೂಲಕ ವಿಡಿಯೋ ಅಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

Read More

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸಿನಿಮೀಯ ರೀತಿಯಲ್ಲಿ ಮಹಿಳಾ ಉದ್ಯಮಿಯ ಹಲ್ಲೆ ನಡೆಸಿ ಕಿಟ್ರ್ಯಾಪ್ ಮಾಡಲು ಯತ್ನಿಸಿ, ಜಾಲಹಳ್ಳಿ ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್ ಆಗಿದ್ದಾರೆ. ಹೋಟೆಲ್ ಉದ್ಯಮಿ ಆಗಿರುವ ಪಂಕಜಾ ಅವರನ್ನು ಬುರ್ಖಾ ಧರಿಸಿ ಬಂದಿದ್ದವರು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋ ಹಿಂಬಾಲಿಸಿದ ಪೊಲೀಸರು ಬಿಇಎಲ್ ಸರ್ಕಲ್ ಬಳಿ ಅಡ್ಡಹಾಕಿ ಉದ್ಯಮಿ ಪಂಕಜ ಅವರನ್ನು ರಕ್ಷಣೆ ಮಾಡಿದ್ದಾರೆ.

Read More

ಈ ವರ್ಷದ ವೈದ್ಯಕೀಯ ನೊಬೆಲ್ ಪ್ರಶಸ್ತಿಯು ಹಂಗೇರಿಯನ್-ಅಮೆರಿಕನ್ ಜೀವ ರಸಾಯನಶಾಸ್ತ್ರಜ್ಞ ಕ್ಯಾಥ್ಲೀನ್ ಕ್ಯಾರಿಕೊ ಮತ್ತು ಅಮೆರಿಕನ್ ಮೂಲದ ವೈದ್ಯ ಮತ್ತು ವಿಜ್ಞಾನಿ ಡ್ರೂ ವೈಸ್ಮನ್ ಅವರಿಗೆ ಸಂದಿದೆ. ಅವರ ಆವಿಷ್ಕಾರಗಳು ಕೋವಿಡ್-19 ವಿರುದ್ಧ mRNA ಲಸಿಕೆಯನ್ನು ಅಭಿವೃದ್ಧಿಪಡಿಸಲು ಕಾರಣವಾಯಿತು. ಸಾಹಿತ್ಯ ಮತ್ತು ಶಾಂತಿ ಸೇರಿದಂತೆ ಇತರ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹಂಗೇರಿಯ ಸಗಾನ್ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಕಟೆಲಿನ್ ಕರಿಕೊ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡ್ರೂ ವೈಸ್ಮನ್ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಅವರು ನಡೆಸಿದ ಸಂಶೋಧನೆಯು ಕೋವಿಡ್ ಲಸಿಕೆ ಅಭಿವೃದ್ಧಿಯಲ್ಲಿ ನಿರ್ಣಾಯಕವಾಗಿದೆ. ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿಯ ದಿನವಾದ ಡಿಸೆಂಬರ್ 10 ರಂದು ಸ್ಟಾಕ್‌ ಹೋಮ್‌ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಪ್ರಮಾಣಪತ್ರ, ಚಿನ್ನದ ಪದಕ ಮತ್ತು 10 ಲಕ್ಷ ಡಾಲರ್‌ ಗಳನ್ನು ಒಳಗೊಂಡಿದೆ.

Read More

ಬೆಂಗಳೂರು: ವಿದೇಶಿ ಮೂಲದ ಯುವತಿಯರನ್ನು ಬಳಸಿಕೊಂಡು ನಡೆಸಲಾಗುತ್ತಿದ್ದ ಮಾದಕ ವಸ್ತು ವ್ಯವಹಾರ, ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೆ. ಆರ್. ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಡ್ರಗ್ ಹಾಗೂ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಆಫ್ರಿಕಾ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ದಂಧೆ ನಡೆಸುತ್ತಿದ್ದವರು ಪರಾರಿಯಾಗಿದ್ದು, ಪತ್ತೆಗೆ ಬಲೆ ಬೀಸಲಾಗಿದೆ. ಯುವತಿಯರ ಪಾಸ್‌ ಪೋರ್ಟ್ ಕಸಿದಿಟ್ಟುಕೊಂಡು ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂದು ಗೊತ್ತಾಗಿದೆ.

Read More

ಬೆಂಗಳೂರು: ಬೆಂಗಳೂರಿನ ಬೆಟ್ಟಹಲಸೂರು ಗ್ರಾಮದಲ್ಲಿ ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್‌ ಗಳು ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್‌ ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ. ನಾಲೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಬೈಕ್ ‌ಗಳು ಕದಿಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಕಾರುಗಳಲ್ಲಿ ಬೈಕ್ ‌ಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ, ತಾಯಿ- ಮಗು ಸಜೀವ ದಹನಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧು ಎಂದು ಗುರುತಿಸಲಾಗಿದೆ. ಕಾರು, ಲಾರಿ ಮತ್ತು ಮೋರಿಯ ಗೋಡೆಗೆ ಡಿಕ್ಕಿಯಾಗಿದೆ. ಲಾರಿಯೂ ಸಹ ಪಲ್ಟಿಯಾಗಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಅದರೊಳಗೇ ಸುಟ್ಟು ಹೋಗಿದ್ದಾರೆ.

Read More