Author: admin

ಮೋಹನ್ ದಾಸ್ ಕರಮ್ ಚಂದ್ರ ಗಾಂಧಿ ಎನ್ನುವುದು ಕೇವಲ ಹೆಸರಲ್ಲ ಇದು ಭಾರತದ ಆತ್ಮ. ಸ್ವತಂತ್ರ ಹೋರಾಟದ ಅಸ್ತ್ರವಾಗಿದ್ದ ಗಾಂಧಿ ವಿಚಾರಗಳು ಇಂದಿಗೂ ಪ್ರಸ್ತುತ. ಅಕ್ಟೋಬರ್ 2 ಮಹಾತ್ಮ ಗಾಂಧೀಜಿಯವರ ಜನ್ಮ ದಿನದಂದು ಇಡೀ ಮಾನವ ಕುಲಕ್ಕೆ ನೀಡಿದ ಕೊಡುಗೆಗಳ ಸ್ಮರಣೆ ಮಾಡಲೇಬೇಕು. ಈ ದಿನವನ್ನ ಇಡೀ ವಿಶ್ವವೇ ಶಾಂತಿ ದಿನವೆಂದು ಆಚರಣೆ ಮಾಡುತ್ತದೆ. ಅವರ ಸತ್ಯ ಮತ್ತು ಅಹಿಂಸೆಯ ಮಾರ್ಗಗಳು ಜಗತ್ತಿನ ಅನೇಕ ನಾಯಕರುಗಳನ್ನು ಮಹಾತ್ಮರ ವ್ಯಕ್ತಿತ್ವಕ್ಕೆ ಪ್ರಭಾವಿತಗೊಳಿಸಿದ್ದವು. ಗ್ರಾಮೀಣ ಸರ್ವಾಂಗಿನ ಅಭಿವೃದ್ಧಿ ಇಂದಾಗಿ ದೇಶದ ಅಭಿವೃದ್ಧಿವಾಗಲಿದೆ ಎಂಬ ದೃಢವಾದ ನಂಬಿಕೆ ಅವರದಾಗಿತ್ತು. ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಶತಕಗಳ ಹಿಂದೆಯೇ ಯೋಚನೆ ಮಾಡಿದ್ದರು. ಅದರಂತೆ ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಮಹತ್ವವನ್ನು ಗಾಂಧೀಜಿಯವರು ನೀಡುತ್ತಿದ್ದರು. ಅದರ ಪರಿಕಲ್ಪನೆಯ ಪಲವಾಗಿ ಈಗ ಪಂಚಾಯತ್ ರಾಜ್ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳನ್ನು ಸದೃಢವಾಗಿ ಮತ್ತು ಪ್ರಗತಿ ಪರವಾಗಿ ನಡೆಸಿಕೊಂಡು ಬರುತ್ತಿದೆ. ಪ್ರಜಾಪ್ರಭುತ್ವದ ತಳಹದಿಯ ಮೇಲೆ ಗ್ರಾಮ ಸ್ವರಾಜ್ ಗಾಂಧೀಜಿ ಕಂಡ ಕಲ್ಪನೆಯ ವಾಸ್ತುವತೆಯನ್ನು…

Read More

ಬೆಂಗಳೂರು: ಹೊರವಲಯದಲ್ಲಿ ಹುಟ್ಟುಹಬ್ಬದ ಆಚರಣೆ ವೇಳೆ ಅವಘಡ ಸಂಭವಿಸಿದೆ. ಹೀಲಿಯಂ ಬ್ಲಾಸ್ಟ್ ಆಗಿ ಐವರಿಗೆ ಗಾಯವಾಗಿದೆ. ನಿನ್ನೆಹುಟ್ಟುಹಬ್ಬದ ಆಚರಣೆ ವೇಳೆ ಘಟನೆ ಸಂಭವಿಸಿದ್ದು, ಓರ್ವ ವ್ಯಕ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಈ ಘಟನೆಯಲ್ಲಿ ವಿಜಯ್ ಕುಮಾರ್ (44) ಧ್ಯಾನ್(7), ಸಂಜಯ್(8), ಸೋಹಿಲಾ (3) ಗಾಯಗೊಂಡಿದ್ದಾರೆ. ದೇಹದದಲ್ಲಿ ಕೈ-ಕಾಲು ಮುಖದ ಭಾಗಗಳು ಸುಟ್ಟು ಹೋಗಿದ್ದು, ಚರ್ಮವು ಸುಟ್ಟು ಹೋಗಿದೆ.

Read More

ಬೆಂಗಳೂರು: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ’-2023 ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ತಂದೆ- ತಾಯಿ, ಹಿರಿಯರು ನಮಗೆ ಕಣ್ಣಿಗೆ ಕಾಣುವ ದೇವರು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಹಿರಿಯರನ್ನು ಸಾಕುವ ಜವಾಬ್ದಾರಿ ನಮ್ಮದು: ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ‌‌. ಹಿರಿಯ ಜೀವಗಳ…

Read More

ಬೆಂಗಳೂರು: “ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಅಭಿಪ್ರಾಯ ಪಟ್ಟರು. ಚಿತ್ರಕಲಾ ಪರಿಷತ್ ನಲ್ಲಿ ಕಾವೇರಿ ಸಮಸ್ಯೆ ಬಗ್ಗೆ ಮಾಧ್ಯಮಗಳು ಭಾನುವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೀಗೆ ಹೇಳಿದರು. ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಯೋಗ್ಯ ತೀರ್ಮಾನ ತೆಗೆದುಕೊಳ್ಳಬೇಕು. ಶಾಶ್ವತ ಪರಿಹಾರಕ್ಕೆ ಇದೊಂದೇ ಮಾರ್ಗ. “ಮಳೆ ಕಡಿಮೆ ಆದಾಗ ಕಾವೇರಿ ವಿವಾದ ಸದ್ದು ಮಾಡುತ್ತದೆ. ಮಳೆಗಾಲದಲ್ಲಿ ನೀರಿನ ಪ್ರಮಾಣ ಕುಸಿದಾಗ ನೀರಿಗೆ ಒತ್ತಡ ಇರುತ್ತದೆ. ನಮಗೆ ಹೋಲಿಸಿದರೆ ತಮಿಳುನಾಡಿನ ವಸ್ತುಸ್ಥಿತಿ ನಾಚಿಸುವಂತೆ ಇದೆ. ನಾನು ಸಿಎಂ ಆಗಿದ್ದಾಗಲೂ ಕಾವೇರಿ ನೀರು ಹಂಚಿಕೆ ಬಗ್ಗೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆಗ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಉಭಯ ರಾಜ್ಯಗಳ ಸಿಎಂಗಳ ಜೊತೆ ಸಂಧಾನ ಮಾಡಲು ಪ್ರಯತ್ನಿಸಿದ್ದರು. ಆದರೆ ಸಫಲ ಆಗಲಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟ್…

Read More

ಬೀದರ್: ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಬೀದರ ಜಿಲ್ಲಾ ಪೊಲೀಸ್ ಘಟಕದಿಂದ ಇಲಾಖೆಯಲ್ಲಿ  ಪೂರ್ಣಾವಧಿ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದುತ್ತಿರುವ ಪಿ.ಎಸ್.ಐ. ಬೀದರ ನಗರ ಪೊಲೀಸ್ ಠಾಣೆಯ ಮೋಹನ ಮಹಾರಾಜ, ಎ.ಎಸ್.ಐ ಮಾರ್ಕೆಟ್ ಠಾಣೆಯ ವಿನೋದ, ಎ.ಎಸ್.ಐ ಗಾಂಧಿಗಂಜ ಠಾಣೆಯ  ಹಸನಸಾಬ್ ಅವರನ್ನು ಬೀಳ್ಕೊಡಲಾಯಿತು. ನಿವೃತ್ತ ಅಧಿಕಾರಿಗಳು ತಮ್ಮ ನಿವೃತ್ತಿ ಜೀವನವನ್ನು ಸುಖ, ಶಾಂತಿ, ನೆಮ್ಮದಿಯಿಂದ ಕಳೆಯುವಂತಾಗಲಿ ಹಾಗೂ ಅವರ ಅನುಭವದಿಂದ ಸಮಾಜಕ್ಕೆ ಏನಾದರೂ ಕೊಡುಗೆ ದೊರೆಯುವಂತಾಗಲಿ ಎಂದು ಹಾರೈಸಿದ ಅಧಿಕಾರಿಗಳು, ಸಿಬ್ಬಂದಿ ನೆನಪಿನ ಕಾಣಿಕೆ ನೀಡು ಶುಭ ಹಾರೈಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್

Read More

ತುಮಕೂರು: ಆಹಾರ ಅರಸಿ ಮನೆಯೊಂದಕ್ಕೆ ನುಗ್ಗಿದ್ದ ನಾಲ್ಕು ಅಡಿ ಉದ್ದದ ನಾಗರಹಾವು ಕಂಡು ಜನರು ಬೆಚ್ಚಿ ಬಿದ್ದಿದ್ದ ಘಟನೆ ನಗರದ ಯಲ್ಲಾಪುರ ವಿನಾಯಕನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಿದ್ದರಾಜು ಎಂಬುವವರ ಮನೆಯ ದೇವರ ಕೋಣೆಯಲ್ಲಿ ಬೃಹತ್ ಗಾತ್ರದ ನಾಗರಹಾವು ಕಾಣಿಸಿಕೊಂಡಿತ್ತು. ದೇವರ ಮನೆಯಲ್ಲಿ ಪೂಜೆ ಮಾಡಲು ಸಿದ್ದರಾಜು ಅಲ್ಲಿ ಅವಿತು ಕುಳಿತಿದ್ದ ನಾಗರಹಾವನ್ನು ಕಂಡಿದ್ದಾರೆ. ತಕ್ಷಣ ಸಿದ್ದರಾಜು ಭಯಭೀತರಾಗಿ ವಾರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆಯ ಉರಗ ತಜ್ಞ ದಿಲೀಪ್ ಅವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ದಿಲೀಪ್ ಸುಮಾರು ನಾಲ್ಕು ಅಡಿ ಉದ್ದದ ನಾಗರಹಾವು, ರಕ್ಷಣೆ ಮಾಡಿ ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ.

Read More

ತುಮಕೂರು: ನೈಸರ್ಗಿಕ ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಅತಿ ಅಗತ್ಯವಾಗಿರುವಂತಹ  ನಾಟಿ ಹಸುವಿನ ಸಗಣಿ ಮತ್ತು ಗಂಜಲ ಬಳಕೆ ಮಾಡಿಕೊಳ್ಳಲು ಸಹಕಾರಿಯಾಗಲೆಂದು ಆಯ್ದ 50 ಜನ ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರುವನ್ನು ದಾನವಾಗಿ ನೀಡಲಾಗುತ್ತಿದೆ ಎಂದು ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ತಿಳಿಸಿದ್ದಾರೆ. ತುಮಕೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯವಾಗಿ ವಿಷಮುಕ್ತವಾಗಿಸುವ ನಿಟ್ಟಿನಲ್ಲಿ ಸುಭಾಷ್ ಪಾಳೆಕಾರ್ ಅವರ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಗೋ ದಾನ ಕಾರ್ಯಕ್ರಮವನ್ನು ಸಿದ್ದಗಂಗಾ ಮಠದ ಶ್ರೀಗೋಸಲ ಸಿದ್ದೇಶ್ವರ ಸಮುದಾಯಭವನದಲ್ಲಿ ಅಕ್ಟೋಬರ್ 3ರಂದು ಆಯೋಜಿಸಲಾಗಿದೆ ಎಂದರು. ಬಿಜೆಪಿ ರೈತಮೋರ್ಚಾ ವತಿಯಿಂದ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಈ ವೇಳೆ ರೈತ ಸಮುದಾಯವನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಗೋವುಗಳನ್ನು ದಾನವಾಗಿ ನೀಡಿ ನೈಸರ್ಗಿಕ ಕೃಷಿಗೆ ಪ್ರೋತ್ಸಾಹ ನೀಡುವಂತಹ ಚಿಂತನೆ ಗೊಂದಲಾಗಿದೆ ಎಂದು ಹೇಳಿದರು. ರೈತರ ಆದಾಯ ದ್ವಿಗುಣಗೊಳ್ಳಬೇಕು. ರೈತರ ಅರ್ಥಿಕ ಸ್ಥಿತಿ ಸುಧಾರಣೆ ಯಾಗುವುದರ ಜೊತೆಗೆ, ಜನತೆಗೆ ವಿಷಮುಕ್ತ ಆಹಾರ…

Read More

ಬೀದರ್: ಜಿಲ್ಲೆಯ ಔರಾದ ಪಟ್ಟಣದ ಪಶುಚಿಕಿತ್ಸಾಲಯದ ಆವರಣದಲ್ಲಿ ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಾಜಿ  ಪಶು ಸಂಗೋಪನೆ ಸಚಿವರು ಪ್ರಭು ಬಿ. ಚವ್ಹಾಣ ಹಾಗೂ ಔರಾದ ತಾಲೂಕಿನ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರೈತರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಕಾಲು ಬಾಯಿ ಜ್ವರ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕು ಎಂದು ಇದೇ ವೇಳೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್

Read More

ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಇಂದು ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ ಪುಸ್ತಕ ಬಿಡುಗಡೆ ಮಾಡಲಾಗಿದೆ. ಕೃಷ್ಣ ಅವರ ಸಾಧನೆ, ಮಾರ್ಗದರ್ಶನ ನೆನೆದು, ಮುಂದಿನ ಪೀಳಿಗೆ ಸಮಾಜವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎಂದು ತಿಳಿಸಲು ಈ ಪುಸ್ತಕ ಹೊರ ತಂದಿದ್ದಾರೆ. ಕೃಷ್ಣ ಅವರ ಕುಟುಂಬ ಸದಸ್ಯನಾಗಿ, ಸರ್ಕಾರದ ಪ್ರತಿನಿಧಿಯಾಗಿ ಈ ಪುಸ್ತಕ ಬರೆದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. “One who wins without problem it is just victory but one who wins with lot of troubles that is history.” ಎಂದು ಹಿಟ್ಲರ್ ಹೇಳಿದ್ದಾನೆ. ಅದೇ ರೀತಿ ಕೃಷ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಸವಾಲು, ಸಮಸ್ಯೆಗಳನ್ನು ಎದುರಿಸಿ ಗೆದ್ದಿದ್ದಾರೆ. ನನ್ನ ಅವರ ರಾಜಕೀಯ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಸ್ಥಿತಿ ನಾಯಿಪಾಡು ಎಂದು ವೀರಶೈವ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಮನೂರು ಶಿವಶಂಕರಪ್ಪನವರ ಹೇಳಿಕೆ ನನ್ನ ಗಮನಕ್ಕೂ ಬಂದಿದೆ. ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು. ಹಿಂದೆಲ್ಲ ಲಿಂಗಾಯತ ಸಮಾಜ ಕಾಂಗ್ರೆಸ್ ಜೊತೆಗೆ ಇಲ್ಲ ಎಂಬ ಕೊರಗಿತ್ತು. ಆ ಕೊರಗು ಈಗ ಇಲ್ಲ ಎಂದು ತಿಳಿಸಿದರು. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು‌ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Read More