Subscribe to Updates
Get the latest creative news from FooBar about art, design and business.
- LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ
- ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ
- ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ನೋಂದಾಯಿಸಲು ಡಿ.10 ಕೊನೆಯ ದಿನ
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
Author: admin
ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕರಣಗಳ ಸಂಖ್ಯೆ ಲೆಕ್ಕಕ್ಕೆ ಸಿಕ್ಕರೂ, ಖಾಸಗಿ ಆಸ್ಪತ್ರೆಗಳಲ್ಲೇ ಹೆಚ್ಚು ರೋಗಿಗಳು ದಾಖಲಾಗುತ್ತಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 18 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ 300ಕ್ಕೂ ಹೆಚ್ಚು ಮಾದರಿಗಳ ವರದಿ ಬರುವುದು ಬಾಕಿಯಿದೆ. ಇದು ಸರ್ಕಾರಿ ಆಸ್ಪತ್ರೆಗಳ ವರದಿಯಾದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಇನ್ನೂ ಹೆಚ್ಚಿದೆ. ಹೀಗಾಗಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಬೆಳಗಾವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಸೆ.29) ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ. ಸೆ.29 ಹಾಗೂ 30 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ. ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ…
5 ಗ್ಯಾರಂಟಿಗಳ ಘೋಷಣೆ ಮಾಡಿದ್ದೆವು, ಅದರಂತೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಸರ್ಕಾರಕ್ಕೆ ಬಸವಣ್ಣನವರೇ ಪ್ರೇರಣೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ತರಳಬಾಳು ಮಠ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವಣ್ಣನವರ ಹಾದಿಯಲ್ಲಿ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಅವರು ಹೇಳಿದರು. ಅಕ್ಷರ ದಾಸೋಹ, ಬಸವತತ್ವ, ರೈತರ ಬಗ್ಗೆ ನೀರಾವರಿಯ ಬಗ್ಗೆ ಕಾಳಜಿ ಹೊಂದಿರುವ ತರಳಬಾಳು ಶ್ರೀಗಳು, ನ್ಯಾಯಾಲಯ ಬಿಟ್ಟರೇ ತರಳಬಾಳು ಮಠದ ಸದ್ಧರ್ಮ ನ್ಯಾಯ ಪೀಠವೇ ಅತ್ಯಂತ ಶಕ್ತಿಯುತವಾದ ನ್ಯಾಯಪೀಠ ಎಂದರು.
ಅವಧಿ ಮೀರಿದ ಔಷಧ ಹಾಗೂ ಸೌಂದರ್ಯ ವರ್ಧಕ ಮಾರಾಟ ಮಾಡುತ್ತಿದ್ದ ಆರೋಪದಡಿ ರಾಜಾಜಿನಗರದ ಮೆಡಿಗೇಟ್ಸ್ ಫಾರ್ಮಸಿ ಕಂಪನಿ ಕಚೇರಿ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಕಂಪನಿ ನಡೆಸುತ್ತಿದ್ದ ಅಪ್ಪ-ಮಗನನ್ನು ಬಂಧಿಸಿದ್ದಾರೆ. ಹೊರರಾಜ್ಯಗಳಿಂದ ಔಷಧ ಹಾಗೂ ಸೌಂದರ್ಯ ವರ್ಧಕ ತರಿಸಿಕೊಂಡು ಮಾರುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ದಾಳಿ ಮಾಡಿ, 1 1. 50 ಕೋಟಿ ಮೌಲ್ಯದ ಔಷಧ ಹಾಗೂ ಸೌಂದರ್ಯ ವರ್ಧಕ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದರು.
ಬೆಂಗಳೂರು : ಚಲಿಸುತ್ತಿದ್ದ ಕಾರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಅದೃಷ್ಟವಶಾತ್ ಸಮಯಪ್ರಜ್ಞೆಯಿಂದ ಚಾಲಕ ಪಾರಾಗಿದ್ದಾನೆ. ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರಸ್ತೆ ಬದಿಗೆ ಕಾರ್ ನಿಲ್ಲಿಸಿ ಚಾಲಕ ಹಾಗೂ ಸ್ನೇಹಿತ ಇಳಿದಿದ್ದಾರೆ. ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಲ್ಲಿ ಕೆಲ ವಸ್ತುಗಳಿದ್ದು, ಬೆಂಕಿಗೆ ಆಹುತಿಯಾಗಿವೆ.
ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಜನರಿಂದ 1854 ಕೋಟಿ ಕಟ್ಟಿಸಿಕೊಂಡು ವಂಚಿಸಿದ್ದ ಬೃಹತ್ ಜಾಲ ಭೇದಿಸಿರುವ ಸಿಸಿಬಿ ಪೊಲೀಸರು, ಜಾಲದ ಪ್ರಮುಖ ರೂವಾರಿ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್ ಅಲಿಯಾಸ್ ಜಾಕ್, ಫಣೀಂದ್ರ, ಚಕ್ರಧರ್ ಅಲಿಯಾಸ್ ಚಕ್ರಿ, ಶ್ರೀನಿವಾಸ್, ಸೋಮಶೇಖರ್ ಹಾಗೂ ವಸಂತ್ ಕುಮಾರ್ ಬಂಧಿತರು. ಇವರೆಲ್ಲರೂ ತಂಡ ಕಟ್ಟಿಕೊಂಡು ಹಲವು ವರ್ಷಗಳಿಂದ ಸೈಬರ್ ಅಪರಾಧ ಎಸಗುತ್ತಿದ್ದರು ಎಂದು ಕಮಿಷನರ್ ಬಿ. ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು : ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸೆಪ್ಟೆಂಬರ್ ನಲ್ಲಿ 293 ಕೆ.ಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಡ್ರಗ್ಸ್ ಮಾರಾಟ ಹಾಗೂ ಸೇವನೆ ತಡೆಯಲು ವಿಶೇಷ ಒತ್ತು ನೀಡಲಾಗಿದೆ. ಸೆಪ್ಟೆಂಬರ್‌ನಲ್ಲಿ 237 ಪ್ರಕರಣ ದಾಖಲಿಸಿಕೊಂಡು, 351 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು. 13 ವಿದೇಶಿಯರು ಹಾಗೂ ಹೊರ ರಾಜ್ಯಗಳ 27 ಆರೋಪಿಗಳನ್ನು ಬಂಧಿಸಲಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಸ್ಥಳೀಯರನ್ನೂ ಸೆರೆ ಹಿಡಿಯಲಾಗಿದೆ. ಇವರೆಲ್ಲರಿಂದ 7 8.63 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದರು.
ಬೆಂಗಳೂರು : ಖಾಲಿ ನಿವೇಶನ, ಫ್ಲ್ಯಾಟ್ ಹಾಗೂ ಮನೆಗಳಿಗೆ ಸಂಬಂಧಪಟ್ಟಂತೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದು ವಂಚಿಸುತ್ತಿದ್ದ ಆರೋಪಿ ಕೃಷ್ಣಕುಮಾರ್ (39) ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆ ನಿವಾಸಿ ಕೃಷ್ಣಕುಮಾರ್, ತನ್ನದೇ ತಂಡ ಕಟ್ಟಿಕೊಂಡು ವಂಚನೆ ಮಾಡುತ್ತಿದ್ದ. ಈತನ ಕೃತ್ಯದ ವಿರುದ್ಧ 9 ಠಾಣೆಗಳಲ್ಲಿ 15 ಪ್ರಕರಣಗಳು ದಾಖಲಾಗಿದ್ದವು. ತನಿಖೆ ಕೈಗೊಂಡು ಇತ್ತೀಚೆಗೆ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು : ದೇವರ ಜೀವನಹಳ್ಳಿ (ಡಿ. ಜೆ. ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿ ಸಯ್ಯದ್ ಸುಹೇಲ್ ಅಲಿಯಾಸ್ ಪಪ್ಪಾಯಿಯನ್ನು (18) ದುಷ್ಕರ್ಮಿಗಳು ಕೊಲೆ ಮಾಡಿ, ಪರಾರಿಯಾಗಿದ್ದಾರೆ. ಅಪರಾಧ ಹಿನ್ನೆಲೆಯುಳ್ಳ ಸುಹೇಲ್, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ಹೆಸರು ರೌಡಿಪಟ್ಟಿಯಲ್ಲಿತ್ತು. ಜನ್ಮದಿನವಾಗಿದ್ದ ಗುರುವಾರವೇ (ಸೆ. 28) ಈತನ ಕೊಲೆಯಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ಹಳೇ ವೈಷಮ್ಯದಿಂದಾಗಿ ಪರಿಚಯಸ್ಥರೇ ಕೃತ್ಯ ಎಸಗಿರುವ ಮಾಹಿತಿ ಇದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ.