Author: admin

ನಟಿ ತ್ರಿಷಾ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ನಟ ಮನ್ಸೂರ್ ಅಲಿ ಖಾನ್ ಅವರನ್ನು ಮದ್ರಾಸ್ ಹೈಕೋರ್ಟ್ ತೀವ್ರವಾಗಿ ಟೀಕಿಸಿದೆ. ನಿಜವಾಗಿ ತ್ರಿಷಾ ಕೇಸ್ ಹಾಕಬೇಕಿತ್ತು. ಸಾರ್ವಜನಿಕವಾಗಿ ಹೇಗೆ ವರ್ತಿಸಬೇಕು ಎಂಬುದನ್ನು ಮನ್ಸೂರ್ ಕಲಿಯಬೇಕು ಎಂದು ಕೋರ್ಟ್ ಹೇಳಿದೆ. ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಮುಂದೂಡಲಾಯಿತು. ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ತ್ರಿಶಾ ಕೃಷ್ಣನ್, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಮತ್ತು ನಟ ಚಿರಂಜೀವಿ ಅವರಿಗೆ ಹೈಕೋರ್ಟ್ ಸೂಚಿಸಿದೆ. ಮನ್ಸೂರ್ ಅಲಿ ಖಾನ್ ಅವರು ತಲಾ ರೂ.1 ಕೋಟಿ ಪರಿಹಾರ ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಲಿಯೋ ಚಿತ್ರದ ಪ್ರಚಾರದ ಭಾಗವಾಗಿ ಯೂಟ್ಯೂಬ್ ಚಾನೆಲ್‌ ಗೆ ನೀಡಿದ ಸಂದರ್ಶನದಲ್ಲಿ ಮನ್ಸೂರ್ ಅಲಿ ಖಾನ್ ದ್ವೇಷದ ಹೇಳಿಕೆಗಳನ್ನು ನೀಡಿದ್ದಾರೆ. ಚಿತ್ರದಲ್ಲಿ ತ್ರಿಷಾ ಬಗ್ಗೆ ಗೊತ್ತಾದಾಗ ಬೆಡ್‌ ರೂಮ್ ದೃಶ್ಯಗಳು ಮತ್ತು ಅತ್ಯಾಚಾರದ ದೃಶ್ಯಗಳು ಇರುತ್ತವೆ ಎಂದು ಭಾವಿಸಿದ್ದೇನೆ ಎಂದು ಮನ್ಸೂರ್ ಹೇಳಿದರು. ನಟಿಯ ವಿರುದ್ಧ ಲೈಂಗಿಕ ಟೀಕೆ ವಿವಾದದ ನಂತರ, ತಮಿಳು ಚಿತ್ರರಂಗದ…

Read More

ಡಿ.13 ಕ್ಕೆ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಸುಮಾರ 25ಸಾವಿರಕ್ಕೂ ಹೆಚ್ಚಿನ ಜನ ಸೇರಿ ಬೃಹತ್ ಜನಾಂದೋಲನ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗುವದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಕರೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿ, ರಾಜ್ಯ ರಾಜಕೀಯ ಬದಲಾವಣೆಗೆ ಬೆಳಗಾವಿ ಹೆಸರಾಗಿದ್ದು ಬದಲಾವಣೆಯ ಗಾಳಿ ಬೆಳಗಾವಿಯಿಂದ ಮಾಡಲು ನಿರ್ಣಯ ಕೈಗೊಳ್ಳಲಾಯಿತು. ರಾಷ್ಟ್ರ ರಾಜಕೀಯಕ್ಕೆ ಕರ್ನಾಟಕ ಅತ್ಯಂತ ಪ್ರಮುಖ‌ ಸ್ಥಾನ ವಹಿಸಿದರೆ ಕರ್ನಾಟಕ್ಕೆ ಬೆಳಗಾವಿ ಜಿಲ್ಲೆ ಮಹತ್ವ ಹೊಂದಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಿಂದ ಭ್ರಷ್ಟಾಚಾರದಲ್ಲಿ ಮುಳಗಿರುವ ರಾಜ್ಯ ಕಾಂಗ್ರೆಸ್ ಕಿತ್ತೊಗೆಯಲು ಗಂಡು ಮೆಟ್ಟಿನ ಸ್ಥಳ ಬೆಳಗಾವಿಯಿಂದ ಪ್ರತಿಭಟನಾ ಹಮ್ಮಿಕೊಳ್ಳುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವವರೆಗೆ ವಿಶ್ರಮಿಸದೆ ಕಾರ್ಯಕರ್ತರಾದ ನಾವೆಲ್ಲರೂ ಶ್ರಮಿಸೋಣ. ಭೀಕರ ಬರಗಾಲದಲ್ಲಿ ಎಕರೆಗೆ ಪುಡಿಗಾಸು ನೀಡಲು ಇನ್ನು ಯೋಚಿಸುತ್ತಿರುವ ಹಾಗೂ ಹಿಂದೂ ವಿರೊಧಿ ನೀತಿ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ತೊಲಗುವಂತೆ ರಾಜ್ಯ…

Read More

ಉತ್ತರ ಪ್ರದೇಶದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಮಗಳ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. 22 ವರ್ಷದ ಯುವತಿಗೆ ಮೂವರು ವ್ಯಕ್ತಿಗಳು ನೀಡಿದ ಮಾದಕ ದ್ರವ್ಯ ಸೇವಿಸಿ ಪ್ರಜ್ಞಾಹೀನಳಾಗಿದ್ದರು. ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಡಿಸೆಂಬರ್ 5 ರಂದು ಈ ಘಟನೆ ನಡೆದಿದೆ. ಬಾಲಕಿ ಚಿಕಿತ್ಸೆಗಾಗಿ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗಕ್ಕೆ ಬಂದಿದ್ದಳು. ಬಾಲಕಿ ಆಗಾಗ ಇಲ್ಲಿ ಚಿಕಿತ್ಸೆಗೆ ಬರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆ ತಲುಪಿದಾಗ ಫೋನ್ ಚಾರ್ಜ್ ಮುಗಿದಿರುವುದನ್ನು ಗಮನಿಸಿದಳು. ನಂತರ ಆಸ್ಪತ್ರೆ ಬಳಿ ಇರುವ ಟೀ ಮಾರುವವರ ಸಹಾಯ ಕೇಳಿದರು. ಸತ್ಯ ಮಿಶ್ರಾ ಅವರ ಅಂಗಡಿಗೆ ಬಾಲಕಿ ಆಸ್ಪತ್ರೆಗೆ ತಲುಪಿದಾಗ ನಿಯಮಿತವಾಗಿ ಭೇಟಿ ನೀಡುತ್ತಿದ್ದಳು ಮತ್ತು ಆತನ ಪರಿಚಯವಿತ್ತು ಎಂದು ಪೊಲೀಸರು ಹೇಳುತ್ತಾರೆ. ನಂತರ ಆಕೆಯ ಮೊಬೈಲ್ ಫೋನ್ ಚಾರ್ಜ್ ಮಾಡಲು ಮಹಿಳೆಯನ್ನು ಹತ್ತಿರ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ ಗೆ ಕರೆದೊಯ್ದಿದ್ದಾನೆ. ಸ್ವಲ್ಪ ಸಮಯದ ನಂತರ ಮಹಿಳೆ ಹಿಂತಿರುಗಿದಾಗ ಆಂಬುಲೆನ್ಸ್ ಇರಲಿಲ್ಲ. ಮತ್ತೆ ಸತ್ಯಂ…

Read More

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಯುಗ ಅಂತ್ಯವಾಗಿದೆ. ಮೋಹನ್ ಯಾದವ್ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಭೋಪಾಲ್ ನಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ಸಭೆ ನಡೆಯಿತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗಾಗಿ ಶ್ರೇಯಾಂಕಗಳು ನಡೆಯುತ್ತಿರುವ ಸಮಯದಲ್ಲಿ ಬಿಜೆಪಿಯ ಅನಿರೀಕ್ಷಿತ ಘೋಷಣೆಯಾಗಿದೆ. ಒಬಿಸಿ ನಾಯಕ ಮೋಹನ್ ಯಾದವ್ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಬಂದಿದ್ದಾರೆ. ಅವರು ಹಿಂದಿನ ಸಚಿವ ಸಂಪುಟದ ಭಾಗವಾಗಿದ್ದರು. ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 58 ವರ್ಷದ ಮೋಹನ್ ಯಾದವ್ ಉಜ್ಜಯಿನಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಘೋಷಣೆಯ ನಂತರ ಮೋಹನ್ ಯಾದವ್ ಪ್ರತಿಕ್ರಿಯಿಸಿ, ತಮ್ಮಂತಹ ವಿನಮ್ರ ಪಕ್ಷದ ಕಾರ್ಯಕರ್ತರಿಗೆ ಈ ಒಂದು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು. ಜಗದೀಶ್ ದೇವ್ಡೇ ಮತ್ತು ರಾಜೇಶ್ ಶುಕ್ಲಾ ಅವರು ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾದರು. 2024ರ ಲೋಕಸಭೆ ಚುನಾವಣೆಗೆ ಮುನ್ನ…

Read More

ಭಜರಂಗದಳ ಕಾರ್ಯಕರ್ತ ಮುಸ್ಲಿಂ ಮಹಿಳೆಯನ್ನು ಮದುವೆಯಾದ. ದಕ್ಷಿಣ ಕನ್ನಡದ ಸುರತ್ಕಲ್ ಪ್ರದೇಶದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಭಂಡಾರಿ ಅವರು ಆಯೇಷಾ ಎಂಬ ಯುವತಿಯನ್ನು ವಿವಾಹವಾದರು. ನವೆಂಬರ್ 30 ರಂದು ಪ್ರಶಾಂತ್ ಆಯೇಷಾಳನ್ನು ಮದುವೆಯಾಗುವ ಆಸಕ್ತಿಯನ್ನು ವ್ಯಕ್ತಪಡಿಸಿ ಹುಡುಗಿಯ ಮನೆಯವರನ್ನು ಸಂಪರ್ಕಿಸಿದ್ದ. ನಂತರ ಅವರು ರಹಸ್ಯವಾಗಿ ವಿವಾಹವಾದರು. ಆದರೆ ಮಗಳು ಕಾಣೆಯಾಗಿದ್ದಾಳೆ ಎಂದು ಆಯೇಷಾ ಕುಟುಂಬಸ್ಥರು ದೂರು ದಾಖಲಿಸಿದ್ದರು. ಇದಾದ ನಂತರ ಡಿಸೆಂಬರ್ 8 ರಂದು ಇಬ್ಬರೂ ಮದುವೆಯಾಗಿದ್ದರು. ಇದೇ ವೇಳೆ ಬಜರಂಗದಳದ ಕಾರ್ಯಕರ್ತರು ತಮ್ಮ ಮದುವೆಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ ಎಂದು ಕನ್ನಡ ಮಾಧ್ಯಮಗಳಲ್ಲಿ ವರದಿಯಾಗಿದೆ. ಲೌಜಿಹಾದ್ ವಿಚಾರವಾಗಿ ಬಜರಂಗದಳದ ಕಾರ್ಯಕ್ರಮಗಳಲ್ಲಿ ಪ್ರಶಾಂತ್ ಮುಂಚೂಣಿಯಲ್ಲಿದ್ದರು. ಪ್ರಶಾಂತ್ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ. ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರು ಮದುವೆ ದಿರಿಸಿನಲ್ಲಿರುವ ಜೋಡಿಗಳ ಫೋಟೋಗಳನ್ನು ಹರಿಬಿಟ್ಟು ದೊಡ್ಡ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Read More

2 ಲಕ್ಷ ಮೌಲ್ಯದ ನೋಟುಗಳನ್ನು ಇಲಿಗಳು ತಿಂದು ಹಾಕಿವೆ. ತೆಲಂಗಾಣದ ವಿಕಾರಾಬಾದ್‌ ಜಿಲ್ಲೆಯ ಪರಿಗಿಯ ಶಿವಲೀಲಾ ಎಂಬ ಮಹಿಳೆ ತಾನು ಕಷ್ಟಪಟ್ಟು ದುಡಿದ 2 ಲಕ್ಷ ರೂ. ಮೌಲ್ಯದ ನೋಟುಗಳನ್ನು ಪಡಿತರ ಅಕ್ಕಿಯ ಚೀಲದಲ್ಲಿ 8 ತಿಂಗಳ ಹಿಂದೆ ಬಚ್ಚಿಟ್ಟಿದ್ದರು. ಈ ಕ್ರಮದಲ್ಲಿ ಇಲಿಗಳು ಅಕ್ಕಿಯ ಜೊತೆಗೆ ನೋಟುಗಳನ್ನೂ ಕೂಡ ತಿಂದು ಹಾಕಿವೆ. ಇದರಿಂದ ಅರೆಬರೆ ತಿಂದ ನೋಟುಗಳೊಂದಿಗೆ ಬ್ಯಾಂಕ್ ಗಳಿಗೆ ಹೋದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಮಹಿಳೆ ಗೋಳಾಡಿದ್ದಾರೆ. ಆಕೆಯ ಪತಿ ನರಸಿಲ್ಲು ಕೊರೋನಾ ಸಮಯದಲ್ಲಿ ನಿಧನರಾಗಿದ್ದಾರೆ.

Read More

ಸುಪ್ರೀಂಕೋರ್ಟ್ & ಹೈಕೋರ್ಟ್‌ನ ನ್ಯಾಯಮೂರ್ತಿಗಳ ವಲಯದಲ್ಲಿ ‘ಅಜಾತಶತ್ರು’ ಎಂದೇ ಹೆಸರಾಗಿದ್ದ ನ್ಯಾಯಮೂರ್ತಿ ನಾಗನಾಥ ಕಂಟೆಪ್ಪ ಪಾಟೀಲ್(70) ಅವರು ಸೋಮವಾರ ಹೈದರಾಬಾದಿನಲ್ಲಿ ನಿಧನರಾದರು. ಅವರು ಮೂಲತಃ ಬೀದರ್ ಜಿಲ್ಲೆಯ ಭಾಲ್ಕಿಯ ನಿಡೆಬಾನ್ ಗ್ರಾಮದವರಾಗಿದ್ದಾರೆ. ಕಲಬುರಗಿ & ಧಾರವಾಡದ ಹೈಕೋರ್ಟ್ ಪೀಠಗಳ ಕಟ್ಟಡ & ಕಾರ್ಯಾರಂಭಕ್ಕೆ ಇವರ ಕೊಡುಗೆ ಅನನ್ಯವಾಗಿದೆ. ಇಂದು(ಡಿ. ೧೨) ಸಂಜೆ ಬೆಂಗಳೂರಿನ ಹೆಬ್ಬಾಳದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

Read More

ಅಮಿತಾ ಜಿಂದಾಲ್ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣ, ರಾಜ್ಯದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ಭೂ ಬಿಡಲಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್‌ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಕೂಲಂಕುಷವಾಗಿ ವಿಚಾರಣೆ ನಡೆಸಿದ್ದು, ಇದರಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ನಾಯಕರ ವಿರುದ್ದ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿಕೆ ನಾಣು ಅವರನ್ನ ನೇಮಕ ಮಾಡಿದ್ದಾರೆ. ನೆನ್ನೆ ನಡೆದ ಸಭೆಯಲ್ಲಿಉಚ್ಛಾಟಿತ ನಾಯಕ ಸಿಕೆ ನಾಣು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ. ಹಳ್ಳಿಯ ಖಾಸಗಿ ಹೋಟೆಲ್​ ನಲ್ಲಿ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ. ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಇಬ್ರಾಹಿಂ,  ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿ.ಕೆ. ನಾಣು ಅವರನ್ನು ನೇಮಕ ಮಾಡಲಾಗಿದೆ. ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್​ ಭೇಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು. ಮಕ್ಕಳ ಹಿತ, ಎರಡು ಸೀಟ್​ ಗಾಗಿ ಸಿದ್ಧಾಂತ ಬಲಿ ಕೊಟ್ಟಿದ್ದೀರಿ. ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕವನ್ನು ನಾಣುಗೆ ನೀಡಲಾಗಿದೆ. ನಾವು ಮೂರು ಅವಕಾಶ…

Read More

ತುಮಕೂರು: ವಕೀಲರ ರಕ್ಷಣಾ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಪಟಾಕಿ ಸಿಡಿಸಿ ಸಂಘದ ಸದಸ್ಯರುಗಳಿಗೆ ಸಿಹಿ ನೀಡುವುದರ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಆಡಳಿತ ವಕೀಲರ ಸಂಘದ ಪದಾಧಿಕಾರಿಗಳು ಆಡಳಿತ ಮಂಡಳಿ ಸದಸ್ಯರು ಹಾಗು ವಕೀಲರೆಲ್ಲರೂ ಪಾಲ್ಗೊಂಡಿದ್ದರು.

Read More