Author: admin

ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ–ಪತ್ನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ (55) ಮತ್ತು ಅವರ ಪತ್ನಿ ಲಕ್ಷ್ಮಿ (48)  ಮೃತಪಟ್ಟವರಾಗಿದ್ದಾರೆ. ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೇವಸ್ಥಾನದ ಬಳಿ ಈ ದಂಪತಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹಾಬಲ ದೇವಾಡಿಗ ದಿನಗೂಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಲಕ್ಷ್ಮಿ ತನ್ನ ಪತಿಯನ್ನು ಹುಡುಕಿಕೊಂಡು ಹೋದಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದನ್ನು ನೋಡಿದ್ದಾಳೆ.  ಪತಿಯನ್ನು ರಕ್ಷಿಸಲು ಹೋಗಿ ಆಕೆಯು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

Read More

ಕೊರಟಗೆರೆ:ಕಾವೇರಿ ನೀರು ಕನ್ನಡಿಗರ ಸ್ವತ್ತು, ಆದರೆ ರಾಜ್ಯ ಸರ್ಕಾರ ತನ್ನ ರಾಜಕೀಯಕ್ಕೋಸ್ಕರಾ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುತ್ತಿದೆ ಎಂದು ಖಂಡಿಸಿ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರಿಗೆ ಬಾರಿ ಕಾಲ್ನಡಿಗೆಯ ಮುಖಾಂತರ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಹಶೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಿದರು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿದ್ದು, ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಬಂದ್‍ನ್ನು ಮಾಡಿದರು, ನಂತರ ಸೆ.29 ರಂದು ಇಡೀ ರಾಜ್ಯವನ್ನೇ ಬಂದ್ ಮಾಡುವಂತೆ ರಾಜ್ಯ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು ಅದರಂತೆ ಜಿಲ್ಲಾದ್ಯಂತ ಬಂದ್‍ಗಳು ನಡೆಯಿತು, ಕೊರಟಗೆರೆಯಲ್ಲೂ ಸಹ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‍ಶೆಟ್ಟಿ ಬಣ), ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆ, ದರ್ಶನ್ ಅಭಿಮಾನಿ ಬಳಗದವರಿಂದ ನಡೆದ ಶುಕ್ರವಾರದ ಕರ್ನಾಟಕ…

Read More

ಬೆಂಗಳೂರು:  ರಾಜ್ಯದ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವದರಿಂದ ಆಗುವ ಅನುಕೂಲಗಳು, ವಿದ್ಯುತ್ ಉತ್ಪಾದನೆಯ ಪ್ರಮಾಣ ಮುಂತಾದ ವಿಷಯಗಳ ಬಗ್ಗೆ ವಿಸ್ತ್ರುತ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಯ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಸೂಚನೆ ನೀಡಿದರು. ಭಾರತೀಯ ವಿಜ್ಞಾನ ಸಂಸ್ಥೆ ಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆಯನ್ನ ನಡೆಸಿ ಮಾತನಾಡಿದ ಅವರು,  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞನ ಮಂಡಳಿ ಐ ಐ ಎಸ್‌ ಸಿ (ಭಾರತೀಯ ವಿಜ್ಞಾನ ಸಂಸ್ಥೆಯ) ಸಹಯೋಗದಲ್ಲಿ ರಾಜ್ಯದ ಹಲವಾರು ಇಲಾಖೆಗಳ ಸಂಶೋಧನೆ ಹಾಗೂ ವರದಿ ಸಿದ್ಧಪಡಿಸುತ್ತದೆ. ಹಾಗೆಯೇ, ತಾಂತ್ರಿಕ ಸಲಹೆಯನ್ನು ನೀಡುತ್ತಿದೆ. ಎನ್ಆರ್ಡಿಎಂಎಸ್ ಮೂಲಕ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯ ಮಾಡುತ್ತಿದೆ. ಅಲ್ಲದೆ, ಜನರಲ್ಲಿ ವೈಜ್ಞಾನಿಕ ಭಾವನೆ ಬೆಳೆಸುವಲ್ಲಿ ಪ್ರಮುಖ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.…

Read More

ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಟಿ.ಬಿ.ಕ್ರಾಸ್ ನೆಹರು ವಿದ್ಯಾ ಶಾಲೆ ಪದವಿ ಪೂರ್ವ ಕಾಲೇಜು ಆವರಣದ ಮುಂಭಾಗ, ತುಮಕೂರಿನಿಂದ ಮೈಸೂರು ರಸ್ತೆ ಮಾರ್ಗ ಕಲ್ಪಿಸುವ ಸ್ಥಳದಲ್ಲಿ ಎರಡು ದ್ವಿಚಕ್ರ ವಾಹನಗಳು ಮೂಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಜಖಂ ಆಗಿದ್ದು, ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಿರೀಶ್  ಎಂಬವರು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನಾಗಿದ್ದು, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,  ಇನ್ನೋರ್ವ ದ್ವಿಚಕ್ರ ವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ , ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಸಂದ್ರ ಉಪ  ಠಾಣೆ ಹೆಡ್ ಕಾನ್ಸ್ಟೇಬಲ್  ಧನಂಜಯ್, ಕಾನ್ಸ್ಟೇಬಲ್ ಆನಂದ್, ಆರಕ್ಷಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಸ್ಥಳ ಪರಿಶೀಲನೆ ಮಾಡಿ ಪ್ರಕರಣದ ದಾಖಲು ಮಾಡಿಕೊಂಡಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

Read More

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ  ನಾಳೆಯೇ ನಮ್ಮ ಬಳಿ  ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು  ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆಯ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು, ಸಂಘ ಸಂಸ್ಥೆಗಳಿಗೆ, ಅಭಿನಂದಿಸಿದ ಮುಖ್ಯಮಂತ್ರಿಗಳು ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳನ್ನು ಕೂಡ  ಅಭಿನಂದಿಸಿದರು. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್  ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಪರಿಣಿತರ ಸಲಹಾ ಸಮಿತಿ: ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ…

Read More

ಚಿತ್ರ : ರವೀಂದ್ರ ಭಟ್ ಉಳ್ಳಿಂಜ ಬರಹ : ಕುಮಾರ್ ಪೆರ್ನಾಜೆ ಪುತ್ತೂರು ಪೆರ್ನಾಜೆ ಮನೆ ಪೆರ್ನಾಜೆ ಕರಾವಳಿಯ ಮುಖ್ಯ ಬೆಳೆ ಅಡಿಕೆ ಅದರಲ್ಲೂ ಒಕ್ಕಣ್ಣ ಇದನ್ನು ನಂಬಬಾರದು ಎಂದು ನಮ್ಮ ಹಿರಿಯರ ಮಾತು ಅಕ್ಷರಶಃ ಸತ್ಯ. ಇದರಲ್ಲಿ ಏರಿಳಿತಗಳು ಸಾಮಾನ್ಯ ಹಾಗೆ ಪ್ರಕೃತಿ ವೈಪರೀತ್ಯಗಳು ಇನ್ನೊಂದೆಡೆ ಮಹಾಮಾರಿ ಕೊಳೆರೋಗ ಹಳದಿ ರೋಗ ಎಲೆ ಚುಕ್ಕೆ ರೋಗಗಳು ಅಲ್ಲದೆ ಅಡಿಕೆಯಲ್ಲಿರುವ ಔಷಧೀಯ ಗುಣಗಳು ಹಾಗೆ ಕೃಷಿಗೆ ಕಾಡುಪ್ರಾಣಿಗಳ ಹಾವಳಿ ಆನೆ ,ಕಾಡೆಮ್ಮೆ ,ಹಂದಿ, ಮಂಗ ಮುಂತಾದವುಗಳು ಕೃಷಿಕರನ್ನು ಬೆಚ್ಚಿ ಬೀಳಿಸುತ್ತದೆ ಪ್ರಯೋಗಗಳು ಬಹಳಷ್ಟು ನಡೆದರು ಪ್ರಕೃತಿಯ ಮುಂದೆ ನಾವು ಏನೇನೋ ಅಲ್ಲ. ಈ ಜಗತ್ತು ಕೆಲವೊಮ್ಮೆ ತುಂಬಾ ವಿಚಿತ್ರ ಅನಿಸುತ್ತದೆ. ನಾವು ಈ ಭೂಮಿಯಲ್ಲಿ ಬಹಳ ಅದ್ಭುತಗಳನ್ನೇ ಕಾಣುತ್ತೇವೆ ಅದೇ ಬೀಜಗಳು ಮೊಳಕೆ ಒಡೆಯುವುದು ಅದ್ಭುತವೇ ಹೊಸ ಹೊಸ ಸೃಷ್ಟಿ ಮೂಡಿ ಮೋಡಿ ಮಾಡಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಉಳ್ಳಿಂಜ ಜಯರಾಮ್ ಭಟ್ರ ತೋಟದಲ್ಲಿ ವಿಶೇಷ ಅಡಿಕೆ ಗಿಡವು ಒಂದು…

Read More

ತುಮಕೂರು: ಮನೆಯೊಂದರಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ ಪರಿಣಾಮ ಮನೆ ಗೋಡೆ ಕುಸಿದು ಆರು ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ನಗರದ ಮಧುಗಿರಿ ರಸ್ತೆಯ ಪಾರ್ಕ್‌ನಲ್ಲಿ ಘಟನೆ ನಡೆದಿದೆ. ಮೊಹಲ್ಲಾದ ನಜೀರ್ ಎಂಬುವವರ ಮನೆ ಕುಸಿದು ಬಿದ್ದಿದೆ. ಸ್ಫೋಟಕ್ಕೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಕಸ್ಮಿಕ ಸ್ಪೋಟಕ್ಕೆ ಕುಸಿದು ಬಿದ್ದ ಮನೆ ಗೋಡೆ ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸಿಲಿಂಡರ್ ಸ್ಫೋಟವಲ್ಲ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿದ್ದು, ತುಮಕೂರು ಎಸ್‌ ಪಿ ಕೆ.ವಿ.ಅಶೋಕ್ ಬಳಿ ಮಾಹಿತಿ ಪಡೆದಿದ್ದಾರೆ. ಸ್ಫೋಟದ ಹಿಂದಿರುವ ಕಾರಣವನ್ನು ತಿಳಿಸಲು ಸೂಚಿಸಿದ್ದಾರೆ. ಇತ್ತ ಸ್ಥಳಕ್ಕೆ ಬಾಂಬ್ ನಿಷ್ಟ್ರೀಯ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ತುರುವೇಕೆರೆ: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟಿರುವ ವಿಚಾರವಾಗಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಗೆ ತುರುವೇಕೆರೆ ಪಟ್ಟಣ ಸ್ತಬ್ಧವಾಗಿದೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನಸಂದಣಿ ವಿರುಳವಾಗಿದ್ದು ರಸ್ತೆ ಸಂಚಾರ ಸುಗಮವಾಗಿದೆ. ಆಸ್ಪತ್ರೆ ಮೆಡಿಕಲ್ ಶಾಪ್ ಹಾಲು ಬಿಟ್ಟು ಮಿಕ್ಕಿಲ್ಲ ಅಂಗಡಿ ಮುಖಂಡರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರುನಾಡ ವಿಜಯ ಸೇನೆ ವಿವಿಧ ಪ್ರಗತಿಪರ ಸಂಘಟನೆಗಳು ಬೀದಿಬದಿ ವ್ಯಾಪಾರಿಗಳು ಸಾರ್ವಜನಿಕರಿಂದ ವ್ಯಾಪಾರಿಗಳಿಂದ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ನಿಂತಲ್ಲಿಯೇ ಬಸ್ ಗಳು ನಿಂತಿವೆ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿದ್ದು ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿದೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

Read More

ಬಿಹಾರದಲ್ಲಿ ಸಾಲ ತೀರಿಸದ ಆರೋಪದ ಮೇಲೆ ಮಹಿಳೆಯನ್ನು ಹೊಡೆದು ಕೊಂದ ಘಟನೆ ನಡೆದಿದೆ ಸಾಲಗಾರರ ದಾಳಿಯಲ್ಲಿ ಮಹಿಳೆಯ ಅಪ್ರಾಪ್ತ ಮಗಳು ಕೂಡ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಪೂರ್ವ ಕತಿಹಾರ್ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ಲೇವಾದೇವಿಗಾರರಿಂದ ಸಾಲ ಪಡೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಗುರುವಾರ ಗುಂಪೊಂದು ಮನೆಗೆ ಬಂದಿತ್ತು. ಕಂತು ಕಟ್ಟಲು ಹಣವಿಲ್ಲದಿದ್ದರೆ ಗ್ಯಾಂಗ್ ಮಹಿಳೆಯ ಮೊಬೈಲ್ ಗೆ ಬೇಡಿಕೆಯಿಟ್ಟಿತು ಎಂದು ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಮಹಿಳೆ ತನ್ನ ಮೊಬೈಲ್ ಫೋನ್ ನೀಡಲು ನಿರಾಕರಿಸಿದಾಗ ವಾಗ್ವಾದ ನಡೆಯಿತು. ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಗುಂಪು ಮಹಿಳೆಗೆ ಥಳಿಸಿದೆ. ಮಹಿಳೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ದಾಳಿಯಲ್ಲಿ ಮಹಿಳೆಯ ಅಪ್ರಾಪ್ತ ಮಗಳು ಕೂಡ ಗಾಯಗೊಂಡಿದ್ದಾರೆ. ಮಹಿಳೆಯ ಕುಟುಂಬದ ದೂರಿನ ಮೇರೆಗೆ ಫಾಲ್ಕಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Read More

ತಮಿಳುನಾಡಿಗೆ 18 ದಿನಗಳ ಕಾಲ ನಿತ್ಯ 3000 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಬಗ್ಗೆ ನಿರ್ಣಯ ಕೈಗೊಳ್ಳುವ ಬಗ್ಗೆ ಕಾವೇರಿ ನೀರುನಿರ್ವಹಣಾ ಪ್ರಾಧಿಕಾರ ಇಂದು ಸಭೆ ನಡೆಸಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ರಾಜ್ಯಗಳ ಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದು, ತಮ್ಮ ತಮ್ಮ ಅಹವಾಲು ಮಂಡನೆ ಮಾಡಲಿದ್ದಾರೆ. ಏತನ್ಮಧ್ಯೆ, ಕಾವೇರಿ ವಿಚಾರವಾಗಿ ಕಾನೂನು ಹೋರಾಟ ತೀವ್ರಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಬೆಳಿಗ್ಗೆ ಹಿರಿಯ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ರಾಜ್ಯ ಸರ್ಕಾರ ಸಭೆ ನಡೆಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಭೆಯಲ್ಲಿ ರಾಜ್ಯವು ವಾಸ್ತವಿಕ ಸ್ಥಿತಿಯನ್ನು ಪ್ರಸ್ತುತಪಡಿಸಲಿದೆ. ಆದಾಗ್ಯೂ ಸಿಡಬ್ಲ್ಯೂಎಂಎ ಏನನ್ನು ಶಿಫಾರಸು ಮಾಡುತ್ತಿದೆ ಎಂಬುದನ್ನು ಕಾದು ನೋಡೋಣ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾವೇರಿ ವಿವಾದದ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಸಭೆ ಕರೆಯಲಿದ್ದು, ಸಭೆಯಲ್ಲಿ ಕೃಷಿ ಮತ್ತು ನೀರಾವರಿ ತಜ್ಞರು ಭಾಗವಹಿಸಲಿದ್ದಾರೆಂದು ತಿಳಿಸಿದರು.

Read More