Author: admin

ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು  ಶಾಸಕ ಹಾಗೂ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ  ಮಾತನಾಡಿದ ಸುನೀಲ್ ಕುಮಾರ್, ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶವೇ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬುವವರನ್ನು ಬಂಧಿಸುವ ಮೂಲಕ ಅಪಶಕುನ ಮಾಡುತ್ತಿದ್ದಾರೆ.  ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರಸೇವಕರನ್ನ ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ. ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ…

Read More

ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿ ಟೀಕಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,  ಪತ್ರ ಬರೆದದ್ದಾಯ್ತು, ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾಯ್ತು, ಕೇಂದ್ರ ಬರ ಅಧ್ಯಯನ ತಂಡ ಬಂದು ಹೋಗಿದ್ದಾಯ್ತು, 18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಕರ್ನಾಟಕದ ಬರ ಪರಿಸ್ಥಿತಿಯ ಬಗ್ಗೆ ಗಮನಿಸಿ ಪರಿಹಾರ ಒದಗಿಸಲು ಕನಿಷ್ಠ 18 ನಿಮಿಷ ಸಮಯವಿಲ್ಲವೇ ಬಿಜೆಪಿ..? ಎಂದು ಲೇವಡಿ ಮಾಡಿದೆ. ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿಕಾರಿದೆ.

Read More

ಮುಸ್ಲಿಂ ಸಮುದಾಯದ ಮಹಿಳೆಯರ  ಬಗ್ಗೆ ಕಲ್ಲಡ್ಕ ಪ್ರಭಾಕರ್ ಅವಹೇಳನ ಹೇಳಿಕ ವಿಚಾರ ಕುರಿತು ಪ್ರಕರಣ ದಾಖಲಾಗಿದ್ದರೂ ಅವರನ್ನ ಬಂಧಿಸದ ಕುರಿತು ಪ್ರತಿಕ್ರಿಯಿಸಿದ ಶಿವರಾಜ್ ತಂಗಡಗಿ, ಕಲ್ಲಡ್ಕ ಪ್ರಭಾಕರ್ ಮೇಲಿಂದ ಇಳಿದು ಬಂದಿಲ್ಲ, ಅವರ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ. ಮಾನ್ಯ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾರನ್ನೂ ಪೋಷಣೆ, ರಕ್ಷಣೆ ಮಾಡುವ ಮಾತೇ ಇಲ್ಲ ಎಂದರು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನ ರಾಜಕೀಯವಾಗಿ ಮುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಅದು ನೂರಕ್ಕೆ ನೂರು ಸತ್ಯ.  ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿಯವರ ಸ್ವಂತ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಕಾನೂನಾತ್ಮಕವಾಗಿ ವಾಪಸ್ ಪಡೆದಿದ್ದರೂ ಮತ್ತೇ ಎದುರಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಮೂಲಕ ಬಿಜೆಪಿ ಪಕ್ಷದ ವಿರುದ್ಧ ಟೀಕೆ ಮಾಡುವವರ ಬಗ್ಗೆ, ಪ್ರಭಾವಿಗಳ ಬಗ್ಗೆ ದ್ವೇಷದ ರಾಜಕೀಯ ಮಾಡುತ್ತಿದೆ. ಅಂತವರನ್ನ ಟಾರ್ಗೆಟ್ ಮಾಡಿ ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತಿದೆ. ಬಿಜೆಪಿಯವರ ಮೇಲೆ ಯಾಕೆ ಇಡಿ, ಸಿಬಿಐ ಕೇಸ್ ಗಳನ್ನು ಹಾಕುತ್ತಿಲ್ಲ. ಭ್ರಷ್ಟಾಚಾರ, ಸುಳ್ಳು…

Read More

ಅಂದಕಾಸುರ ಸಂಹಾರ ವೇಳೆ  ಶ್ರೀಕಂಠೇಶ್ವರ ವಿಗ್ರಹದ ಮೇಲೆ ನೀರೆರಚಿದ ಪ್ರಕರಣವನ್ನು ಖಂಡಿಸಿ ಜನವರಿ 4ರಂದು ಮೈಸೂರು ಜಿಲ್ಲೆ ನಂಜನಗೂಡು ಬಂದ್ ಗೆ ಕರೆ ನೀಡಲಾಗಿದೆ. ಶ್ರೀಕಂಠೇಶ್ವರನ ಭಕ್ತರು ನಂಜನಗೂಡು  ಬಂದ್ ಗೆ ಕರೆ ನೀಡಿದ್ದಾರೆ. ಇತ್ತೀಚೆಗೆ ನಂಜನಗೂಡಿನಲ್ಲಿ ಅಂದಕಾಸುರ ಸಂಹಾರದ ವೇಳೆ ಶ್ರೀಕಂಠೇಶ್ವರ ವಿಗ್ರಹದ ಮೇಲೆ ನೀರೆರಚಿದ ಪ್ರಕರಣ ನಡೆದಿತ್ತು. ಘಟನೆಯ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಇದೀಗ ನಂಜನಗೂಡು ಬಂದ್ ಗೆ ಕರೆ ನೀಡಲಾಗಿದ್ದು ಬಂದ್ ಯಶಸ್ವಿಗೊಳಿಸುವಂತೆ ಭಕ್ತರು ಮನವಿ ಮಾಡಿದ್ದಾರೆ.

Read More

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿ  ಆ  ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ  ಅವರ  ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ…

Read More

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅಂಬೇಡ್ಕ‌ರ್ ಭವನದಲ್ಲಿ ಸಿರಿಧಾನ್ಯ ಹಬ್ಬದ ಹಿನ್ನೆಲೆ, ರಾಗಿಮುದ್ದೆ ತಿನ್ನುವ ಸ್ಪರ್ಧೆ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ ಅರಕೆರೆಯ ಈರೇಗೌಡ ಅವರು ಬರೋಬ್ಬರಿ 2.7 ಕೆ.ಜಿ. ತೂಕದ ಮುದ್ದೆ ತಿನ್ನುವ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸ್ಪರ್ಧಿಗಳಿಗೆ ಮುದ್ದೆ ತಿನ್ನಲು 30 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಮುದ್ದೆ ಜೊತೆ ಬಿಸಿ ನಾಟಿ ಕೋಳಿ ಸಾರನ್ನು ಬಡಿಸಲಾಗಿತ್ತು. 62 ವರ್ಷ ಪ್ರಾಯದ ಈರೇಗೌಡ 10 ಮುದ್ದೆ ತಿಂದು ಅಗ್ರ ಸ್ಥಾನ ಪಡೆದುಕೊಂಡರು.

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ  ಆಗ್ರಹಿಸಿದ ಬಿಜೆಪಿ ನಾಯಕರ ವಿರುದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಶಿವಮೊಗ್ಗದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಿಜೆಪಿ ನಾಯಕಾರದ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ಮತ್ತು ರವಿಕುಮಾರ್ ಅವರು ನನ್ನ ರಾಜೀನಾಮೆ ಕೇಳಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ. ನನ್ನ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ  ಎಂದು  ಪ್ರಶ್ನಿಸಿದರು. ವಿಪಕ್ಷ ನಾಯಕ ಆರ್. ಅಶೋಕ್ ಸಾವಿನಲ್ಲೂ ದುಡ್ಡು ಮಾಡಿದವರು. ಅವರಿಗೆ ಮಾನ ಮರ್ಯಾದೆ, ನೈತಿಕತೆ ಇದ್ದರೆ ನನ್ನ ರಾಜೀನಾಮೆ ಕೇಳುವುದನ್ನು ಬಿಟ್ಟು ಅವರು ರಾಜೀನಾಮೆ ಕೊಡಬೇಕು. ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದ ನಳಿನ್ ಕುಮಾರ್ ಕಟೀಲ್ ಬಿಜೆಪಿಯನ್ನು ಈ ಬಾರಿ ಎಲ್ಲಿಗೆ ತಂದಿಟ್ಟಿದ್ದಾರೆ ಎಂದು ಅವರೇ ಹೇಳಲಿ. ಅವರೂ ಕೊರೋನಾ ಸಂದರ್ಭದಲ್ಲಿ…

Read More

ಬೆಳಗಾವಿ ನಗರಕ್ಕೆ ಆಗಮಿಸಿದ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಇಂದು ನಗರದ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಪದಾಧಿಕಾರಿಗಳ ಜೊತೆ 2024ರ ಲೋಕಸಭೆಯ ಚುನಾವಣೆ ಕುರಿತು ಚರ್ಚಿಸಿದರು. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳು ಈ ಬಾರಿ ಕಾಂಗ್ರೆಸ್ ತೆಕ್ಕೆಗೆ ಬರಲಿವೆ. ಕಾಂಗ್ರೆಸ್ ಸರ್ಕಾರ ನೀಡಿರುವ ಜನಪರ ಯೋಜನೆಗಳು ಮತ್ತು ಗ್ಯಾರಂಟಿಗಳ ಕುರಿತು ಜನರ ಭರವಸೆ ಗೆದ್ದು, ಕಾರ್ಯಕರ್ತರು ಅತಿ ಉತ್ಸಾಹದಿಂದ ಚುನಾವಣೆಯನ್ನು ಎದುರು ನೋಡ್ತಾ ಇದ್ದಾರೆ. ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕರುಗಳಾದ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಚುನಾವಣೆಯಲ್ಲಿ ಪ್ರಭಾವ ಇರಲಿದೆ. ಪೌರಾಡಳಿತ ಇಲಾಖೆಯ ಯಾವುದೇ ಕೆಲಸಗಳು ಇದ್ದರೂ ನನ್ನ ಗಮನಕ್ಕೆ ತಂದರೆ ನಾನು ಕೂಡಲೇ ಪರಿಹಾರ ನೀಡುವೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷರಾದ ವಿನಯ್ ನವಲಗಟ್ಟಿ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಲಕ್ಷ್ಮಣ್ ರಾವ್ ಚಿಂಗಳೆ…

Read More

ಬೆಳಗಾವಿ: 2021 ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಗ್ರಾಮ ಪಂಚಾಯತಿಗಳನ್ನು ಬಡ್ತಿ ನೀಡಿ ಗ್ರಾಮ ಪಂಚಾಯತದಿಂದ ಪಟ್ಟಣ ಪಂಚಾಯತ ಎಂದು ಸರ್ಕಾರ ಆದೇಶ ಮಾಡಿತ್ತು. ಆದರೆ ಪೀರನವಾಡಿ ಪಟ್ಟಣ ಪಂಚಾಯತ್ ಜನಪ್ರತಿನಿಧಿಗಳು ಇಲ್ಲದೆ ಅಧಿಕಾರಿಗಳು ಯದ್ವಾ ತದ್ವಾ ಅಧಿಕಾರ ನಡೆಸುತ್ತಿದ್ದಾರೆ. ಪೀರನವಾಡಿ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಅಧಿಕಾರ ನಡೆಸುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಇಲ್ಲ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಾ ಇಲ್ಲ, ಆದಷ್ಟು ಬೇಗ ಪಟ್ಟಣ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಮುಖ್ಯ ಅಧಿಕಾರಿ ಹನುಮಂತಪ್ಪ ಮನೋ ವಡ್ಡರ ಅವರನ್ನು ಕೂಡಲೇ ಈ ಸ್ಥಳದಿಂದ ವರ್ಗಾವಣೆ ಮಾಡಬೇಕು ಎಂದು ಪೀರನವಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಾಕೇಶ್ ತಳವಾರ್ ನೇತೃತ್ವದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರಿಗೆ ಮನವಿ ನೀಡಿದರು.

Read More

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೇ ಮೇಲಿಂದ ಮೇಲೆ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡೆಸಿದ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ‌ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ, ಹಲ್ಲೆ ನಡೆಸಿ ರಾಕ್ಷಸ ವರ್ತನೆ ತೋರಲಾಗಿದೆ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿದೆ. ಸುಂಗಧಾ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತರೂ ಎಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಮೂಗು ಕತ್ತರಿಸಿರುವ…

Read More