Author: admin

ತುಮಕೂರು: ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂಧಗೆ ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಎಲ್ಲಾ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದು ವ್ಯಾಪಾರವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ನಗರದಲ್ಲಿ ಆಟೋ ಸಂಚಾರ ಯಥಾ ಸ್ಥಿತಿಯಲ್ಲಿದೆ, ಆದರೂ ಆಟಗಳ ಸಂಖ್ಯೆ ರಸ್ತೆಯಲ್ಲಿ ವಿರಳ ಸಂಖ್ಯೆಯಲ್ಲಿ ಸಾಗುತ್ತಿರುವುದು ಕಂಡುಬಂದಿದೆ. ಇನ್ನು ಬೆಂಗಳೂರಿಗೆ ತೆರಳುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ತೆರಳುತ್ತಿದ್ದರು ಪ್ರಯಾಣಿಕರ ಸಂಖ್ಯೆ ಅತಿ ಕಡಿಮೆ ಸಂಖ್ಯೆಯಲ್ಲಿದೆ. ಇನ್ನೊಂದೆಡೆ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಘೋಷಣೆ ಕೂಗಿದರು. ವಿಶೇಷವಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಣುಕು ಶವಯಾತ್ರೆಯನ್ನು ಮಾಡಿದರು. ರೈತ ಸಂಘ, ಕನ್ನಡ ಸೇನೆ , ಜೈ ಕರ್ನಾಟಕ, ರಕ್ಷಣಾ ವೇದಿಕೆ ಸೇರಿದಂತೆ ವಿಧ ಕನ್ನಡಪರ ಸಂಘಟನೆಗಳು ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ಮೆರವಣಿಗೆ…

Read More

ಬೆಂಗಳೂರು: ಯಲಹಂಕ ಬಳಿಯ ಚೊಕ್ಕನಹಳ್ಳಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಭಾರತೀಯ ನೌಕಾಪಡೆಯ 74 ವರ್ಷದ ನಿವೃತ್ತ ಎಂಜಿನಿಯರ್ ಮೇಲೆ ಹಲ್ಲೆ ನಡೆದಿದೆ. ಸ್ಥಳೀಯ ನಿವಾಸಿಯೊಬ್ಬರು ಮರದ ಹಲಗೆಯಿಂದ ಹೊಡೆದಿದ್ದು, ಗಾಯಗೊಂಡಿರುವ ವೃದ್ಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೊಕ್ಕನಹಳ್ಳಿಯ ಎನ್‌ ಆರ್ ಲೇಔಟ್ ನಿವಾಸಿ ಕೆ. ಅಮರನಾಥ ಚವ್ಹಾಣ್ ಹಲ್ಲೆಗೊಳಗಾದ ವ್ಯಕ್ತಿ. ಚೊಕ್ಕನಹಳ್ಳಿಯ ಎಸ್ ಮತ್ತು ಎನ್ ಲೇಔಟ್ ನಲ್ಲಿ ಭಾನುವಾರ ಬೆಳಗ್ಗೆ 7:15 ರಿಂದ 7:30 ರ ನಡುವೆ ಅವರ ಮೇಲೆ ಹಲ್ಲೆ ನಡೆದಿದೆ. ಕಳೆದ ಮೂರು ವರ್ಷಗಳಿಂದ ಈ ಪ್ರದೇಶದ ನಿವಾಸಿಯಾಗಿರುವ ಅವರು ಪ್ರತಿದಿನ ಬೆಳಗ್ಗೆ 7 ರಿಂದ 7:45 ರವರೆಗೆ ವಾಕಿಂಗ್ ಹೋಗುತ್ತಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರವೊಂದರಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸುತ್ತಿದ್ದ ತಮಿಳು ನಟ ಸಿದ್ಧಾರ್ಥ್ ವಿರುದ್ಧ ಕರವೇ ಸ್ವಾಭಿಮಾನದ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿ ಸುದ್ದಿಗೋಷ್ಠಿಗೆ ತಡೆ ಒಡ್ಡಿದರು. ಕಾವೇರಿ ನೀರು ವಿಚಾರವಾಗಿ ಎರಡು ರಾಜ್ಯದ ನಡುವೆ ಪರಿಸ್ಥಿತಿ ಹದಗೆಟ್ಟಿದೆ. ಈ ಸಮಯದಲ್ಲಿ ಇದು ಬೇಕಾ, ನಾವು ಸುದ್ದಿಗೋಷ್ಠಿ ನಿಲ್ಲಿಸಿ ಎಂದು ಆರ್ಡರ್ ಮಾಡುತ್ತಿಲ್ಲ. ಮನವಿ ಮಾಡುತ್ತಿದ್ದೇವೆ. ದಯವಿಟ್ಟು ನೀವೂ ಕಾವೇರಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಆಗ್ರಹಿಸಿದರು.

Read More

ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟಗಾರರ ಮೇಲೆ ಹಲ್ಲೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ 6 ಫೇಸ್‌ಬುಕ್ ಹಾಗೂ ಟೆಲಿಗ್ರಾಪ್ ಗ್ರೂಪ್‌ಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆ.24ರಂದು ದೊಡ್ಡಬಳ್ಳಾಪುರದ ಐಬಿ ವೃತ್ತದಲ್ಲಿ ಅಕ್ರಮವಾಗಿ 18 ಟನ್ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದು, ಕಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರಹಾಕಿದ್ದರು.

Read More

ಬೆಂಗಳೂರು: ಪ್ರತಿಷ್ಠಿತ ಮಾಲ್‌ ವೊಂದರ ಸಿದ್ಧ ಉಡುಪು ಮಾರಾಟ ಮಳಿಗೆಯಲ್ಲಿ ಬಿಲ್ ಮಾಡುವ ವಿಚಾರವಾಗಿ ಆ ಮಳಿಗೆಯ ಇಬ್ಬರು ಕ್ಯಾಶಿಯರ್ ‌ಗಳ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಯಲಹಂಕದ ಆರ್‌ ಎಂಝಡ್ ಗ್ಯಾಲೇರಿಯಾ ಮಾಲ್ ನ 1ನೇ ಮಹಡಿಯಲ್ಲಿರುವ ಲೈಫ್ ಸ್ಟೈಲ್ ಶೋ ರೂಂ ಕ್ಯಾಶಿಯರ್ ಕುರುವ ಮಲ್ಲಿಕಾರ್ಜುನ್ (24) ಹತ್ಯೆಯಾಗೀಡಾದ ಯುವಕ. ಪ್ರಕರಣ ಸಂಬಂಧ ಮೃತನ ಸಹೋದ್ಯೋಗಿ ರಾಜರಥನ್ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

Read More

ರಾಜಧಾನಿಯಲ್ಲಿ ರೌಡಿಶೀಟರ್ ಸುಹೇಲ್ ಅಲಿಯಾಸ್ ಪಪ್ಪಾಯಿ ಎಂಬಾತನನ್ನು ಕೊಚ್ಚಿ ಹತ್ಯೆಮಾಡಲಾಗಿದೆ. ಡಿಜೆ ಹಳ್ಳಿ ಪೋಲಿಸ್ ಠಾಣೆ ರೌಡಿಶೀಟರ್ ಸುಹೇಲ್  ಪಪ್ಪಾಯಿ ಎಂಬಾತನ ಮೇಲೆ ಡಿಜೆ ಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ಗುರುತು ಪತ್ತೆಯಾಗಬೇಕಿದೆ. ಗ್ಯಾಂಗ್‌ ವಾರ್ ಅಥವಾ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

Read More

ರಾಜ್ಯದಲ್ಲಿ ‘108’ ಆ್ಯಂಬುಲೆನ್ಸ್ ಜನರ ಅತ್ಯಂತ ನಂಬಿಕಸ್ಥ ವೈದ್ಯಕೀಯ ವ್ಯವಸ್ಥೆಯಾಗಿದೆ. ಎಲ್ಲಿ ಯಾವುದೇ ಆರೋಗ್ಯ ತುರ್ತು ಸ್ಥಿತಿ ಇದ್ದರೂ, ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನ ತಲುಪಿಸಿ, ಅವರ ಜೀವ ಉಳಿಸುವ ಪುಣ್ಯದ ಕಾರ್ಯವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ಮಾಡುತ್ತಿದ್ದಾರೆ. ಆದರೆ, ಹಾಸನ ಜಿಲ್ಲೆಯಲ್ಲಿ ‘108’ ಆ್ಯಂಬುಲೆನ್ಸ್ ಸಿಬ್ಬಂದಿಯ ನಡೆಯ ಬಗ್ಗೆ ತೀವ್ರ ಆತಂಕಕ್ಕೊಳಗಾಗುವ ವಿಚಾರವೊಂದು ಕೇಳಿ ಬಂದಿದೆ. ಹೌದು..! 108 ಆ್ಯಂಬುಲೆನ್ಸ್ ನಲ್ಲಿ ಕರೆತರುವ ರೋಗಿಗಳನ್ನು ಕಮಿಷನ್ ಆಸೆಗೆ ಆ್ಯಂಬುಲೆನ್ಸ್ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ಸೇರಿಸುತ್ತಿದ್ದಾರೆ ಎಂದು ಹಾಸನದ ಯುವ ಮುಖಂಡ ಪ್ರದೀಪ್ ಅವರು ಗಂಭೀರ ಆರೋಪ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗೆ ಸೇರಿದ ವ್ಯಕ್ತಿಗಳು ರೋಗಿಗಳ ಬ್ರೈನ್ ವಾಶ್ ಮಾಡಿ, ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯುತ್ತಿರುವ ಘಟನೆಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದೊಯ್ದರೆ 15ರಿಂದ 20% ಕಮಿಷನ್ ಸಿಗುತ್ತದೆ ಎನ್ನುವ ಆಸೆಗೆ ಬಡ ರೋಗಿಗಳನ್ನ ವ್ಯವಸ್ಥಿತವಾಗಿ ಸುಳ್ಳು ಹೇಳಿ ವಂಚಿಸಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಗುತ್ತಿದೆ. ಕಮಿಷನ್…

Read More

ಬೆಂಗಳೂರು: ನಾಳೆ ಯಾವುದೇ ರೀತಿಯ ಪ್ರತಿಭಟನಾ ಜಾಥಾ, ಮೆರವಣಿಗೆಗೆ ಅವಕಾಶ ಇಲ್ಲ. ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಲಿದೆ ಪೊಲೀಸ್  ಕಮಿಷನರ್‌  ದಯಾನಂದ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವು ಸಂಘಟನೆಗಳು 29 ನೇ ತಾರೀಖು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ  ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ನಾಳೆ ಯಾವುದೇ ರೀತಿಯ ಪ್ರತಿಭಟನಾ ಜಾಥಾ, ಮೆರವಣಿಗೆಗೆ ಅವಕಾಶ ಇಲ್ಲ. ನಗರದಲ್ಲಿ ಇಂದು ರಾತ್ರಿ 12 ಗಂಟೆಯಿಂದ ನಾಳೆ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಕರ್ನಾಟಕ ಬಂದ್​ ಕರೆ ನೀಡಿದವರಿಗೆ ನೋಟಿಸ್ ನೀಡಲಾಗುತ್ತದೆ. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ಆದೇಶದ ಪ್ರಕಾರ, ಬಂದ್​ಗೆ ಕರೆ ನೀಡುವುದು ಕಾನೂನು ಬಾಹಿರ. ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಆದೇಶದಂತೆ ಕಾರ್ಯ ನಿರ್ವಹಿಸಲಿದೆ ಎಂದು ಕಮಿಷನರ್ ಮಾಹಿತಿ ನೀಡಿದರು.

Read More

ಬೆಂಗಳೂರು, ಸೆಪ್ಟೆಂಬರ್ 28: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭ ವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಹಿರೇಮಠ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ರವಿಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳು…

Read More

ಬೆಂಗಳೂರು: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ನಾಳೆ ಸಾರ್ವಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ.  ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ,  ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಅವರು ಮನವಿ ಮಾಡಿದರು. ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್‌ ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್ಸ್ ನೀರು ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ಸ್ ನೀರು ಹೋಗುತ್ತಿರಬಹುದು ಎಂದು ತಿಳಿಸಿದರು.

Read More