Author: admin

ಮೈಸೂರು: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಹೇಳಿಕೆಗೆ ಸಿಎಂ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಕ್ಷಮೆ ಕೇಳೋದಿಲ್ಲ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಅವರ ಕೊಡುಗೆಗಳನ್ನ ಗೌಣ ಮಾಡಬೇಕು ಅಂತ ಹೇಳಿಲ್ಲ. ಮೈಸೂರು ಅಭಿವೃದ್ಧಿಗೆ ನಾಲ್ವಡಿ ಅವರನ್ನ ಬಿಟ್ರೆ ಹೆಚ್ಚು ಅನುದಾನ ಕೊಟ್ಟಿರುವುದು ಸಿಎಂ ಸಿದ್ದರಾಮಯ್ಯ ಅಂತ ಹೇಳಿದ್ದೇನೆ. ನಮ್ಮಪ್ಪ ಮುಖ್ಯಮಂತ್ರಿಯಾದ ಮೇಲೆ ಕೊಟ್ಟಷ್ಟು ಅನುದಾನವನ್ನ ಬೇರೆ ಯಾವ ಮುಖ್ಯಮಂತ್ರಿಗಳೂ ಕೊಟ್ಟಿಲ್ಲ. ಅದನ್ನ ಮಾತ್ರ ನಾನು ಹೇಳಿದ್ದು. ಬಹಿರಂಗವಾಗಿ ಕ್ಷಮೆ ಕೇಳುವುದಿಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ದಿನಾಂಕ: 28—07–2025 ರಂದು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಭೆಯನ್ನು ಕಾರಣಾಂತರದಿಂದ ದಿನಾಂಕ: 29–07–2025 ರಂದು ಟೌನ್‌ಹಾಲ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಮಯ ಬೆಳಗ್ಗೆ 11.00 ಗಂಟೆಗೆ ಮುಂದೂಡಲಾಗಿದೆ. ಈ ಸಭೆಯನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐ.ಪಿ.ಎಸ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಉಪಾಧೀಕ್ಷಕರುಗಳ ಸಮ್ಮುಖದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಾಗಬೇಕಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ರಾಜ್ಯಗಳು ಒಳಮೀಸಲಾತಿ ಜಾರಿ ಮಾಡಬಹುದೆಂದು 2024 ರ ಆ.1 ರಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು. ಆ ತೀರ್ಪಿಗೆ ಬರುವ ಆ.1 ಕ್ಕೆ ಒಂದು ವರ್ಷ ತುಂಬುತ್ತದೆ. ಆದರೂ ನಮ್ಮ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲಿಲ್ಲ. ಹಾಗಾಗಿ ಬರುವ ಆ.1 ರಂದು ಅರೆಬೆತ್ತಲೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಕುಂಟು ನೆಪವೊಡ್ಡಿ ವಿಳಂಬ ಮಾಡುತ್ತಿದೆ. ಇದುವರೆಗೆ ಕೇವಲ 80 ರಷ್ಟು ಮಾತ್ರ ಜಾತಿ ಜನಗಣತಿ ಮಾಡಲಾಗಿದೆ. ಬೆಂಗಳೂರಲ್ಲಂತೂ ಅದು ಶೇ. 40 ರಷ್ಟು ಕೂಡ ದಾಟಲಿಲ್ಲ ಎಂದು ಆರೋಪಿಸಿದರು. ಸಚಿವ ಎಚ್.ಸಿ ಮಹಾದೇವಪ್ಪ ಹೇಳಿದ ಹಾಗೆ ಸಿಎಂ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಅವರಿಗೆ ಒಳಮೀಸಲಾತಿ ಜಾರಿ ಮಾಡುವ ಮನಸ್ಸಿಲ್ಲ. ಮಾದಿಗ ಸಮುದಾಯದ ಸಚಿವರಿಗೆ ಮಾನ,…

Read More

ತುಮಕೂರು:  ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ  ಬೈಕ್ ಸವಾರರೊಬ್ಬರು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಿಗಳ ಪ್ರಕಾರ  ಸಪ್ತಗಿರಿ ಬಡಾವಣೆ ನಿವಾಸಿ ಲತೀಶ್ ಎಂಬವರು ಬೈಕ್ ಕಳವಾಗಿರುವ ಬಗ್ಗೆ ದೂರು ನೀಡಿರುವವರಾಗಿದ್ದಾರೆ. ಜು.2ರಂದು ತಾನು ಬೆಳಗ್ಗೆ 11 ಗಂಟೆಗೆ ಎಂದಿನಂತೆ ತುಮಕೂರು ರೈಲ್ವೆ ನಿಲ್ದಾಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದೆ, ಸಂಜೆ 7 ಗಂಟೆಯ ವೇಳೆ ಮರಳಿ ಬಂದಾಗ ಬೈಕ್ ನಾಪತ್ತೆಯಾಗಿತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ರೈಲ್ವೆ ನಿಲ್ದಾಣದ ಬಳಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಹಲವರು ತಮ್ಮ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿಯೇ ನಿಲ್ಲಿಸಿ ಕೆಲಸಕ್ಕೆ ಹೋಗುತ್ತಿದ್ದಾರೆ. ಇದರಿಂದಾಗಿ ಒಂದೆಡೆ ಟ್ರಾಫಿಕ್ ಜಾಮ್ ಸಮಸ್ಯೆಯಾದರೆ, ಇನ್ನೊಂದೆಡೆ ಕಳ್ಳರ ಕಾಟದಿಂದಾಗಿ ವಾಹನಗಳಿಗೂ ಸುರಕ್ಷತೆ ಇಲ್ಲದಂತಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಕೊರಟಗೆರೆ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಬೇಸಾಯಕ್ಕೆ ತಂದಿದ್ದ ಬಿತ್ತನೆ ಬೀಜ ರಸಗೊಬ್ಬರ ಸೇರಿದಂತೆ ದಿನಬಳಕೆ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಘಟನೆ ಕ್ಯಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ನಾಗರಾಜು ಎಂಬುವರಿಗೆ ಸೇರಿದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,  ಬಿತ್ತನೆ ಬೀಜ, ರಸಗೊಬ್ಬರ ಬೇಸಾಯಕ್ಕೆ  ಸಂಬಂಧಪಟ್ಟ ವಸ್ತುಗಳು ಸುಟ್ಟು ಕರಕಲಾಗಿವೆ. ಭಾನುವಾರ ಸಂಜೆ 5 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನ  ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಘಟನೆ ವೇಳೆ ಯಾರೂ ಮನೆಯಲ್ಲಿ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ದಿನಬಳಕೆ ಸಾಮಗ್ರಿಗಳು, ಬಟ್ಟೆ ಬರೆ ಸೇರಿದಂತೆ ದಿನಸಿ ಸಾಮಗ್ರಿಗಳು ಸಹ ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ  ಎಂದು ಅಂದಾಜಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ನೊಂದ ರೈತನಿಗೆ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಶಿವಮೊಗ್ಗ: ಅಣ್ಣನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ತುಂಗಾನಗರ ಠಾಣೆ ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸಿದ್ದಾರೆ. ಜುಲೈ 27ರ ಬೆಳಗ್ಗೆ ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ಮಣಿಕಂಠ ಎಂಬಾತ ತನ್ನ ಮನೆಯಲ್ಲಿಯೇ ಕೊಲೆಯಾಗಿದ್ದ. ಮಣಿಕಂಠ ಹಾಗೂ ಆತನ ತಮ್ಮ ಸಂತೋಷ್ ಒಟ್ಟಿಗೆ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ಮನೆ ಪಕ್ಕದಲ್ಲಿಯೇ ವಾಸವಾಗಿರುವ ಸಹೋದರಿಯರು ಟೀ ಕೊಡಲೆಂದು ಹೋದಾಗ ಕೊಲೆ ಪ್ರಕರಣ ಬಯಲಿಗೆ ಬಂದಿತ್ತು. ಮಣಿಕಂಠನ ತಲೆ ಮೇಲೆ ಚಪ್ಪಡಿ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದರು. ಆದರೆ, ಈ ವೇಳೆ ಕೊಲೆಯಾದವನ ಸಹೋದರ ಸಂತೋಷ್ ಕಾಣೆಯಾಗಿದ್ದ. ಹೀಗಾಗಿ, ಅನುಮಾನಗೊಂಡ ಪೊಲೀಸರು ಮೊದಲು ಸಂತೋಷ್​ಗಾಗಿ ಹುಡುಕಾಟ ನಡೆಸಿದ್ದಾರೆ. ಬಳಿಕ ಆತನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಣಿಕಂಠ ಹಾಗೂ ಸಂತೋಷ್ ಒಂದೇ ಮನೆಯಲ್ಲಿ ವಾಸವಿದ್ದು, ಈ ಮನೆಯು ಇವರ ತಂದೆಯ ಹೆಸರಿನಲ್ಲಿತ್ತು.…

Read More

ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಆರೋಗ್ಯದ ಸಮಸ್ಯೆ ಇದ್ದಾಗ ಮುಜುಗರಕ್ಕೆ ಒಳಗಾಗದೆ ತಪಾಸಣೆ ಮಾಡಿಸುವುದರಿಂದ ಆಗಬಹುದಾದ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು ಎಂದು ವೈದ್ಯರಾದ ಡಾ.ವೈ.ಎಂ.ಚಂದ್ರಶೇಖರಮೂರ್ತಿ ತಿಳಿಸಿದರು. ಗ್ರಾಮದ ಲಕ್ಷ್ಮಿನಾರಾಯಣ ಆಸ್ಪತ್ರೆ, ವೈ.ಎನ್.ಹೊಸಕೋಟೆ, ಡಾ.ಶಿವಕುಮಾರ್ ಆಸ್ಪತ್ರೆ, ಪಾವಗಡ, ಡಾ.ಚಂದ್ರಶೇಖರ್ ಆಸ್ಪತ್ರೆ ಬೆಂಗಳೂರು ಮತ್ತು ಸ್ಪೆಕ್ಟ್ರಮ್ ಡಯೋಗ್ನಸ್ಟಿಕ್ಸ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹೃದಯರೋಗ ಸ್ಕ್ರೀನಿಂಗ್, ಗರ್ಭಕೋಶ ಕ್ಯಾನ್ಸರ್ ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ವ್ಯವಸ್ಥೆಯಲ್ಲಿ ಮನುಷ್ಯನಿಗೆ ಅನಾರೋಗ್ಯ ಕಾಡುವುದು ಸಹಜ. ಕೆಲವು ಬಹಿರಂಗವಾಗಿ ತಿಳಿಯುತ್ತವೆ. ಹಲವು ಗೌಪ್ಯವಾಗಿದ್ದು ಮುಂದೊಮ್ಮೆ ತೊಂದರೆಗೆ ಗುರಿ ಮಾಡುತ್ತವೆ. ಆದಾಗಿ ಯಾರೊಬ್ಬರೂ ಅನಾರೋಗ್ಯದ ಬಗ್ಗೆ ತಾತ್ಸಾರ ಹೊಂದದೆ ಅವಶ್ಯಕತೆ ಇದ್ದಲ್ಲಿ ತಪಾಸಣೆ ಮಾಡಿಸಿಕೊಂಡು ಅರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದರು. ಶಿಬಿರದಲ್ಲಿ ಒಟ್ಟು 350 ರೋಗಿಗಳ ತಪಾಸಣೆ ಮಾಡಲಾಯಿತು. 100 ಕ್ಕೂ ಹೆಚ್ಚು ಜನರಿಗೆ ಇಸಿಜಿ ಮಾಡಲಾಯಿತು ಮತ್ತು  80 ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು…

Read More

ವರದಿ: ಹಾದನೂರು ಚಂದ್ರ ಸರಗೂರು:   ಕೇರಳದ ವಯನಾಡು, ಕಲ್ಪಿಟ್ಟ ಜಿಲ್ಲೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬಾರಿ ಮಳೆ ಆಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಭದ್ರತಾ ದೃಷ್ಟಿಯಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ. ವಯನಾಡ್ ಹಾಗೂ ಕಲ್ಪಿಟ್ಟ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 60 ಮಿ.ಮೀಟರ್‌ಗೂ ಹೆಚ್ಚು ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಇದೆ. ಜತೆಗೆ ಕೇರಳ ಮತ್ತು ಕೊಡಗು ಜಿಲ್ಲೆಯ ಗಡಿ ಭಾಗದ ಪಾಪನಾಶಿನಿ ಹೊಳೆ ಪಾತ್ರದಿಂದ 30 ಸಾವಿರ ಕ್ಯೂಸೆಕ್‌ ಗಿಂತ ಹೆಚ್ಚು ನೀರು ಹರಿದುಬರುತ್ತಿದೆ. ಹಾಗಾಗಿ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಇದೆ. ಈಗಾಗಲೇ ಜಲಾಶಯದ ಮುಂಭಾಗದ ಸೇತುವೆ ಮುಳುಗಡೆ ಆಗಿ ಬೀಚನಹಳ್ಳಿ– ಬಿದರಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಕಡಿತಗೊಂಡು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳು ಸರಗೂರು ಮಾರ್ಗವಾಗಿ…

Read More

ಸರಗೂರು:  ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ 2379. 30 ಅಡಿಗಳನ್ನು ತಲುಪಿದೆ. ಕೆಲ ದಿನಗಳ ಹಿಂದೆ ಜಲಾಶಯದಲ್ಲಿ 111ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ 1654 ಕ್ಯೂಸೆಕ್ಸ್ ನೀರು ಒಳಹರಿವಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಿಂಗಳಿನಲ್ಲಿ ಜಲಾಶಯದಲ್ಲಿ ಈ ಮಟ್ಟದ ನೀರು ಸಂಗ್ರಹವಾಗಿದೆ. ನುಗು ಜಲಾಶಯದ ಗರಿಷ್ಟ ಮಟ್ಟ 110 ಅಡಿಗಳಿದ್ದು, ಸದ್ಯ ನೀರಿನ ಮಟ್ಟ 109 ಅಡಿಗಳಷ್ಟಿದೆ ಎಂದು ನುಗು ಜಲಾಶಯದ ಸಹಾಯಕ ಕಾರ್ಯಪಾಲಕ ಅಭಿಯಂತರರು ಉಮೇಶ್ ತಿಳಿಸಿದ್ದಾರೆ. 5.44 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯ ವ್ಯಾಪ್ತಿಯಲ್ಲಿ ಸುಮಾರು 18.110ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಸರಗೂರು ತಾಲ್ಲೂಕಿನ 1500 ಎಕರೆ…

Read More

ಸರಗೂರು:   ತಾಲೂಕಿನಲ್ಲಿ ಫಸಲು ತಿಂದು, ನಾಶಪಡಿಸಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಡ್ರೋನ್ ಕಾರ್ಯಾಚರಣೆ ಮೂಲಕ ಕಾಡಿಗಟ್ಟುವ ಕಾರ್ಯ ಆರಂಭವಾಗಿದ್ದು, ಕಾಡಾನೆಯನ್ನು  ಕಾಡಿಗೆ ಹೊರಡಿಸಲು ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ಆರು ದಿನಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಿಂದ ಮೂರು ಕಾಡಾನೆಗಳನ್ನು ಮೊಳೆಯೂರು ವನ್ಯಜೀವಿ ವಲಯಕ್ಕೆ ಹಿಮ್ಮೆಟ್ಟಿಸಲಾಗಿದೆ. ಕಾಡಾನೆಗಳ ಹಾವಳಿ ಹೆಚ್ಚಾಗಿರುವುದನ್ನು ವಿರೋಧಿಸಿ ಗ್ರಾಮಸ್ಥರು, ರೈತರು ಮತ್ತು ಸಂಘ–ಸಂಘಗಳು ತೀವ್ರ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ನಂದೀಶ್.ಎಲ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸಿಎಫ್ ಸುಮಿತ್ರ ಎಸ್‌ರವರ ನೇತೃತ್ವದಲ್ಲಿ  ಎಲ್‌ ಟಿಎಫ್ ತಂಡ, ಇಟಿಎಫ್ ಹುಣಸೂರು ತಂಡ ಡೋನ್ ಕಾರ್ಯಾಚರಣೆ ಕೈಗೊಂಡು, ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ನಡೆಸಿದರು. ನಮ್ಮ ಕಾಡಿನ ಹತ್ತಿರ ರೈತರ ಜಮೀನುಗಳು ಇದ್ದು, ಈ ಸಮಯದಲ್ಲಿ ಕಾಡು ಪ್ರಾಣಿಗಳನ್ನು ಹಾಗೂ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಿದರೂ ಮತ್ತೆ ಮತ್ತೆ ಜಮೀನಿಗೆ ಬರುತ್ತಿವೆ. ಕಾಡಿನ ಹತ್ತಿರ ಜಮೀನಿನಲ್ಲಿ…

Read More