Author: admin

ರಾಘವೇಂದ್ರ ಅಡಿಗ ಎಚ್ಚೆನ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್‍ನ ಯಶಸ್ಸಿ ನಿರ್ದೇಶಕ  ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ಧಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ, ನಿರೀಕ್ಷೆ ಹೆಚ್ಚು ಮಾಡಿದೆ. ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದರು. ಬಹುತಾರಾಗಣದ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣದಿದ್ದರೂ ಬಾಕ್ಸ್ ಆಫೀಸ್‍ನಲ್ಲಿ ದೊಡ್ಡ ಗಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಲೋಕೇಶ್ ಕನಕರಾಜು ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲಕ್ಕೆ ತೆರೆಬಿದ್ದಿ. ಕಳೆದ ಕೆಲ ಸಮಯದ ಹಿಂದಷ್ಟೇ ಲೋಕೇಶ್ — ಅಲ್ಲು ಅರ್ಜುನ್ ಪ್ರಾಜೆಕ್ಟ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿತ್ತು. ಇದೀಗ ಸಿನಿಮಾದ ಸ್ಕ್ರಿಪ್ಟ್ ಅಂತಿಮವಾಗಿದ್ದು, ಚಿತ್ರ ಸೆಟ್ಟೇರೋದು ಪಕ್ಕಾ ಎಂದಿದ್ದಾರೆ. ‘ಪುಷ್ಪ’ ಸಿನಿಮಾದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ…

Read More

ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಮಾದೇನಹಳ್ಳಿ ತಾಂಡದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕಿ ಗುಣಶೀಲ ಅವರು ಬೇರೆಡೆ ವರ್ಗಾವಣೆಯಾದ ಹಿನ್ನೆಲೆ ಗ್ರಾಮಸ್ಥರು ಬೀ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಮಾದೇನಹಳ್ಳಿ ತಾಂಡದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಸುಮಾರು 14  ವರ್ಷದಿಂದ ಮುಖ್ಯ ಶಿಕ್ಷಕಿ ಗುಣಶೀಲ ಅವರು ಈ ಗ್ರಾಮದಲ್ಲಿರುವ ಬಡ ವಿದ್ಯಾರ್ಥಿಗಳಿಗೆ ಪಾಠವನ್ನ ಹೇಳಿ ಕೊಟ್ಟಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುತ್ತಿರುವ ಉದಾಹರಣೆಗಳಿವೆ ಎಂದು ಇಲ್ಲಿನ ಪೋಷಕರು ತಿಳಿಸಿದ್ದಾರೆ. ಮುಖ್ಯ ಶಿಕ್ಷಕಿ ವರ್ಗಾವಣೆ ಆಗಿರುವುದು ಇಲ್ಲಿನ ಗ್ರಾಮಸ್ಥರಿಗೆ ನೋವು ತಂದಿದೆ ಎಂದು ಪೋಷಕರು ತಮ್ಮ ಆಳಲನ್ನ ತೊಡಿಕೊಂಡರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಣ್ಣ ಮಾತನಾಡಿ, ಮುಖ್ಯ ಶಿಕ್ಷಕಿ ಗುಣಶೀಲ ಅವರು 14 ವರ್ಷದಿಂದ ನಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಮ್ಮ ಬಡ ಮಕ್ಕಳಿಗೆ ಭೋದನೆ ಮಾಡುತ್ತಿದ್ದರು. ಇಲ್ಲಿ ಇವರು ಕೇವಲ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರಲಿಲ್ಲ ನಮ್ಮ ಗ್ರಾಮದ ಹೆಣ್ಣು ಮಗಳು ತರ…

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್, ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ನೀಡಲಾಗುವುದು. ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುತ್ತಿದ್ದು, ಆಸಕ್ತರು ಜನವರಿ 17ರ ಸಂಜೆ 4.30 ಗಂಟೆಯೊಳಗಾಗಿ ದೂ.ವಾ.ಸಂ. 0821–2515944ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಪೊಲೋ ಫಾರ್ಮಸಿ, ಇಂಡ್‌ ಆಟೋ ಫಿಲ್ಟರ್ಸ್‌, ಪಿಟ್ಟಿ ಇನ್‌ಡಸ್ಟ್ರೀಸ್‌ ಪ್ರೈ. ಲಿ., ವಾಹಿನಿ ಪೈಪ್ಸ್‌ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಜನವರಿ 16ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ, ಡಿಪ್ಲೊಮಾ (ಮೆಕ್ಯಾನಿಕಲ್), ಡಿ.ಫಾರ್ಮ್ ಹಾಗೂ ಬಿ.ಫಾರ್ಮ್, ಬಿ.ಇ ಹಾಗೂ ಬಿ.ಇ (ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಕನಿಷ್ಠ 5 ವರ್ಷ ಅನುಭವ) ಪಾಸಾದ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಜನವರಿ 16ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು–572102 ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2278488ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಶಿರಾ: ತಾಲೂಕಿನ ಚಿಕ್ಕಗೊಳ್ಳ ಕದಿರೇಕಂಬದಹಳ್ಳಿಯಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ನೂತನ ದೇವಸ್ಥಾನ ಮತ್ತು ಶ್ರೀ ನವಗ್ರಹ, ಶ್ರೀ ನಾಗದೇವತಾ, ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ವಿಮಾನ ಕಳಸ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವು ಜ.22 ರಿಂದ 25 ರವರೆಗೆ ನಡೆಯಲಿದೆ. ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಸೇವಾ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಜ.22, 23 ಮತ್ತು 24ರಂದು ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿವೆ. 24ರಂದು ರಾತ್ರಿ 10 ಗಂಟೆಗೆ ನೂತನ ಸ್ಥಿರಬಿಂಬ ಪ್ರತಿಷ್ಠಾಪನಾ ಪಿಂಡಿಕಾ ಪೂಜಾ ವಿಧಿವಿಧಾನ ನಡೆಯಲಿದೆ. ಸಿದ್ಧಲಿಂಗ ಸ್ವಾಮೀಜಿ, ವೀರೇಶಾನಂದರ ಸಾನ್ನಿಧ್ಯದಲ್ಲಿ ಸಾಮೂಹಿಕ ವಿವಾಹ: ಜ.25 ರಂದು ಬೆಳಿಗ್ಗೆ 10.30ಕ್ಕೆ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹಾಗೂ ಶ್ರೀ ರಾಮಕೃಷ್ಣ ವೀರೇಶಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಪಾರ್ವತಮ್ಮ ಮುಲ್ಲೇಗೌಡ ಕುಟುಂಬದವರಿಂದ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಮಹಿಳಾ ವೀರಗಾಸೆ ಉತ್ಸವ ಮೆರವಣಿಗೆ: ಜ.25 ರಂದು ಸಂಜೆ ಉತ್ಸವ ನಡೆಯಲಿದ್ದು, ತ್ಯಾಗನಕಟ್ಟೆಯ ನವದುರ್ಗಿ ಮಹಿಳಾ…

Read More

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ/ ಕಂಪನಿ/ ಜವಳಿ ಸಹಕಾರಿ ಸಂಘ/ ಸಂಸ್ಥೆಗಳು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿಸಣ್ಣ ಘಟಕಗಳನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಅತಿಸಣ್ಣ ಘಟಕಗಳನ್ನು ಸ್ಥಾಪಿಸಲು ಈಗಾಗಲೇ ಜಿಲ್ಲಾ ಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದ ಹಾಗೂ ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲ ಮಂಜೂರಾತಿ ಪಡೆದಿರುವ ಅರ್ಹ ಘಟಕಗಳು ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಜನವರಿ 31ರೊಳಗಾಗಿ ಸಲ್ಲಿಸಬೇಕು. ಯೋಜನೆ ಕುರಿತು ಪೂರ್ಣ ಮಾಹಿತಿಯನ್ನು ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ನಾಗನಿಲಯ, ಕಸಬಾ ಮುಖ್ಯರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಅಥವಾ ದೂ.ವಾ.ಸಂ. 0816–2275370ಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ತುಮಕೂರು: ಮಧುಗಿರಿಯಿಂದ ಕೊರಟಗೆರೆ ಕಡೆಗೆ ಬರುತ್ತಿದ್ದ ಲಾರಿಯೊಂದು ರಸ್ತೆ ಬದಿ ಕುಳಿತಿದ್ದ ಮೂವರ ಮೇಲೆ ಹರಿದ ಪರಿಣಾಮವಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರತರ ಗಾಯಗಳಾಗಿವೆ. ಈ ಘಟನೆ ಕೊರಟಗೆರೆ ತಾಲ್ಲೂಕಿನ ಹೊಮ್ಮದೇವನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಹಿಂದೂ ಸಮಾಜೋತ್ಸವ ಸಮಿತಿ ತುಮಕೂರು ಇವರ ವತಿಯಿಂದ ಜ.18ರ ಭಾನುವಾರ ನಳಂದ ಪ್ರೌಢಶಾಲಾ ಆವರಣ, ರಾಘವೇಂದ್ರ ನಗರ, ತುಮಕೂರು ಇಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ. ದಿವ್ಯ ಸಾನ್ನಿಧ್ಯವನ್ನು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಜಪಾನಂದಜೀ ಮಹಾರಾಜ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಸ್ಪೂರ್ತಿ ಡೆವಲಪರ್ಸ್‌ನ ಎಸ್.ಪಿ. ಸದಾನಂದ ವಹಿಸುವರು. ಮುಖ್ಯ ಭಾಷಣಕಾರರಾಗಿ ಎಂ. ಬಾಲಚಂದ್ರ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಡಾ.ನೀತಾ ಲವ ಆಗಮಿಸುವರು. ಮಧ್ಯಾಹ್ನ 4ಕ್ಕೆ ಭಾರತಮಾತಾ ಹಾಗೂ ಲಲಿತಾ ತ್ರಿಪುರಸುಂದರಿ ಅಷ್ಟೋತ್ತರ ಪೂಜೆ ಬರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ ಸಂಕ್ರಾಂತಿ –ಸುಗ್ಗಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಟಗೆರೆ ತಾಲ್ಲೂಕು ಎಲೆರಾಂಪುರದ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಹನುಮಂತನಾಥ ಸ್ವಾಮೀಜಿಯವರು ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಬಳಗದ ಅಧ್ಯಕ್ಷರಾದ ಲಲಿತಾ ಮಲ್ಲಪ್ಪನವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕುಂಚಿಟಿಗ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀಧರ್ ಅವರು ಮತ್ತು ಜಿಲ್ಲಾ ಕುಂಚಿಟಿಗ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರಾದ ದೊಡ್ಡಲಿಂಗಪ್ಪನವರು ಹಾಗೂ ತುಮಕೂರಿನ ರಾಘು ಸ್ಕ್ಯಾನಿಂಗ್ ಸೆಂಟರ್‌ನ ಡಾ. ಚಂದ್ರಕಲಾ ಮತ್ತು ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಭವ್ಯ ರವರು ಆಗಮಿಸುವರು. ಸಮಾಜದ ಎಲ್ಲಾ ಕುಲಬಾಂಧವರು ಕುಟುಂಬ ಸಮೇತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು/ಚಿಕ್ಕಬಳ್ಳಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಚಿಕ್ಕಬಳ್ಳಾಪುರ ಶಾಖೆ ವತಿಯಿಂದ 6ನೇ ತರಗತಿಗೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ, ಮನೆ ಭೇಟಿ ಮತ್ತು ಹಿನ್ನೆಲೆಯ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು. 2026-27ನೇ ಸಾಲಿಗೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ. ಜ.8 ರಿಂದ ಮಾರ್ಚ್ 14ರವರೆಗೆ ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟ, ಮಾಲೂರು, ಶ್ರೀ ನಿವಾಸಪುರ ಮತ್ತು ಕೋಲಾರದ ಬಿಜಿಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ತುಮಕೂರು ಜಿಲ್ಲೆ ತಿಪಟೂರಿನ ಠಾಗೂರ್ ಶಾಲೆ, ಕುಣಿಗಲ್‌ ನ ಬಿಜಿಎಸ್ ಶಾಲೆ, ಮಧುಗಿರಿಯ ಚೇತನ ಇಂಗ್ಲಿಷ್ ಶಾಲೆಗಳಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾ.14 ಕಡೆಯ ದಿನವಾಗಿರುತ್ತದೆ. ಏಪ್ರಿಲ್ 5 ರಂದು ಪ್ರವೇಶ ಪರೀಕ್ಷೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಗಳ ಬಿಜಿಎಸ್ ಸಂಸ್ಥೆಗಳಲ್ಲಿ ಹಾಗೂ ತುಮಕೂರಿನ ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ನಳಂದ ಶಾಲೆಯಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9611130481 (ತುಮಕೂರು), 9611568306 (ಕುಣಿಗಲ್), 9632352946 (ತಿಪಟೂರು),…

Read More