Subscribe to Updates
Get the latest creative news from FooBar about art, design and business.
- ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ನೋಂದಾಯಿಸಲು ಡಿ.10 ಕೊನೆಯ ದಿನ
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
Author: admin
ಹೆಚ್.ಡಿ.ಕೋಟೆ: ತಮಿಳುನಾಡು ರಾಜ್ಯದ ಕೊಯಂತ್ತೂರಿನ ಮುತ್ತು ಸೆಲ್ವರಾಜ್ ಎಂಬುವ ಯುವಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ನಂತರ ಅವರ ವಿಚಾರಗಳನ್ನು ತಿಳಿದು ರಾಜ್ಯ ಮತ್ತು ಅಂತಾರಾಜ್ಯ ಪರ್ಯಾಟನೆ ಮಾಡುತ್ತಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಆಗಮಿಸಿದ ಅವರು ಮಾದ್ಯಮಗಳೊಂದಿಗೆ ಮಾತನಾಡಿ, ಪುನೀತ್ ಅಭಿಮಾನಿಯಾಗಿ ಅವರ ವಿಚಾರಗಳನ್ನು ದೇಶ ವಿದೇಶಗಳಿಗೆ ಬಿತ್ತರಿಸಬೇಕೆಂಬ ಮಹಾದಾಸೆ ನನ್ನದು. ಆದರಿಂದ ಸೈಕಲ್ ನಲ್ಲಿ ಅವರ ವಿಚಾರಗಳನ್ನ ದೇಶದಾದ್ಯಂತ ಭಿತ್ತರಿಸಲು ಆರಂಬಿಸಿದ್ದೇನೆ ಎಂದು ತಿಳಿಸಿದರು. ಇಂದಿಗೆ ಸುಮಾರು ಎರಡೂ ವರ್ಷಗಳ ಹತ್ತಿರವಾಗಿದ್ದೂ 19,000 ಕಿ.ಲೋ. ಮೀಟರ್ ಕ್ರಮಿಸಿದ್ದೇನೆ ಎಂದು ತಿಳಿಸಿದರು. ಹೆಚ್.ಡಿ.ಕೋಟೆಗೆ ಆಗಮಿಸಿದ ಮುತ್ತುಸೆಲ್ವರಾಜ್ ರನ್ನು ಕಂಡು ಹೆಚ್.ಡಿ ಕೋಟೆ ಜನರು ಹರ್ಷ ವ್ಯಕ್ತಪಡಿಸಿದರು ಈ ವ್ಯಕ್ತಿಯನ್ನು ಕಂಡ ಕೂಡಲೇ ರಾಜ್ ಕುಟುಂಬದ ಅಪ್ಪಟ ಅಭಿಮಾನಿ ಟೀ ಅಂಗಡಿ ಮುತ್ತಣ್ಣ ಅವರಿಗೆ ಆತ್ಮೀಯತೆಯಿಂದ ಧನ್ಯವಾದವನ್ನು ತಿಳಿಸಿ ಕೇರಳ ರಾಜ್ಯದೆಡೆಗೆ ಬಾವಲಿ ಮಾರ್ಗವಾಗಿ ಬೀಳ್ಕೊಟ್ಟರು ವರದಿ: ಮಲಾರ ಮಹದೇವಸ್ವಾಮಿ
ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದರು.
ಕಾವೇರಿ ನೀರು ವಿಚಾರವಾಗಿ ತಮಿಳುನಾಡು ಜೊತೆ ಸಿಎಂ ಮಾತಾಡಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದರು. ತಮಿಳುನಾಡು ಸಿಎಂ ಸ್ಟಾಲಿನ್ ಗೂ ಸಿದ್ದರಾಮಯ್ಯಗೂ ಸಂಬಂಧ ಚೆನ್ನಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಇಬ್ಬರೂ ತಮಿಳುನಾಡಿಗೆ ಹೋಗಿ ಸಿಎಂ ಸ್ಟಾಲಿನ್ ಜೊತೆ ಮಾತಾಡಿ ರಾಜ್ಯದ ಜನರ ಕಷ್ಟದ ಬಗ್ಗೆ ವಿವರಿಸಿ. ಇದರಿಂದ ನಿಮಗೆ ತಾನೇ ರಾಜಕೀಯ ಲಾಭ ಆಗೋದು. ನೀವು ಯಾಕೆ ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಬಾರದು? ನೀವು ನಮ್ಮನ್ನು ರಾಜಕಾರಣ ಮಾಡುತ್ತಿದ್ದೀರಿ ಎನ್ನುವುದು ತಪ್ಪುತ್ತದೆ. ನಿಮ್ಮ ಅವರ ನಡುವಿನ ಸಂಬಂಧ ಹೇಗಿದೆ ಅಂತಾ ನನಗೆ ಗೊತ್ತು. ಸಿಎಂ ಸ್ಟಾಲಿನ್ ಜೊತೆ ಸಿದ್ದರಾಮಯ್ಯ, ಡಿಕೆ ಮಾತಾಡಿ ಪುಣ್ಯ ಕಟ್ಟಿಕೊಳ್ಳಿ. ನೀವು ಮಾತಾಡಿದರೆ ತಮಿಳುನಾಡಿನವರು ಯಾವುದೇ ಬೇಡಿಕೆ ಇಡಲ್ಲ ಎಂದರು.
ವಿಧಾನಸೌಧದ ಆವರಣದಲ್ಲಿ ಕಾವೇರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ನಳಿನ್ ಕುಮಾರ್ ಕಟೀಲು, ಗೋವಿಂದ ಕಾರಜೋಳ, ಸದಾನಂದಗೌಡ, ಅಶ್ವತ್ಥನಾರಾಯಣ, ಮುನಿರತ್ನ ಸೇರಿ ಹಲವರು ಭಾಗಿಯಾಗಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನ ಭೇಟಿ ಆಗುವ ಮೊದಲು ಹೋಂ ಮಿನಿಸ್ಟರ್ ಬಳಿ ನಾನು ಚರ್ಚೆ ಮಾಡಿದ್ದೇನೆ. ಕದ್ದು ಮುಚ್ಚಿ ಮಾತನಾಡುವ ಅಗತ್ಯ ಇಲ್ಲ. ಕರ್ನಾಟಕ ಪರಿಸ್ಥಿತಿ ಏನಿದೆ ಅಂತ ಶಾ ಅವರತ್ರ ಎಲ್ಲಾ ವಿಚಾರ ಮಾತಾಡಿದ್ದೇನೆ. ಇದನ್ನು ಮೊದಲು ಸರಿ ಮಾಡಿ ನಂತರ ಕುಮಾರಸ್ವಾಮಿ ಅವರು ಬಂದು ಮಾತಾಡ್ತಾರೆ ಎಂದೆ. ಯಾವುದೇ ಸಮುದಾಯಕ್ಕೆ ಈ ಪಕ್ಷದಿಂದ ಅನ್ಯಾಯ ಆಗಲು ಬಿಟ್ಟಿಲ್ಲ. ಇವತ್ತು ಯಾಕೆ ಹೀಗಾಯ್ತು, ಯಾರು ಇದಕ್ಕೆ ಕಾರಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರ ಸರ್ಕಾರ ತೆಗೆದದ್ದು ಯಾರು? ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಸವಿತಾ ಪುನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡ ತನ್ನ ಮೊದಲ ಪಂದ್ಯದಲ್ಲಿ ಸಿಂಗಾಪುರವನ್ನು 13-0 ಅಂತರದಿಂದ ಸೋಲಿಸಿದೆ. ಭಾರತ ಪರ ಸಂಗೀತಾ ಕುಮಾರಿ 3 ಗೋಲು ಗಳಿಸಿದರು. ಸಿಂಗಾಪುರಕ್ಕೆ ಸತತ ಎರಡನೇ ಸೋಲು ಸಂಭವಿಸಿದೆ. ಭಾರತ ಮಹಿಳಾ ಹಾಕಿ ತಂಡ ತನ್ನ ಅಭಿಯಾನಕ್ಕೆ ಶುಭಾರಂಭ ಮಾಡಿದೆ. ಮಲೇಷ್ಯಾ, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಸಿಂಗಾಪುರದೊಂದಿಗೆ ಭಾರತ ತಂಡ ಪೂಲ್-ಎಯಲ್ಲಿ ಸ್ಥಾನ ಪಡೆದಿದೆ. ಈ ಪೂಲ್ ನ ಮೊದಲ ಪಂದ್ಯದಲ್ಲಿ ಮಲೇಷ್ಯಾ 8-0 ಗೋಲುಗಳಿಂದ ಹಾಂಕಾಂಗ್ ತಂಡವನ್ನು ಸೋಲಿಸಿತು. ಆದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಕೊರಿಯಾ 4-0 ಗೋಲುಗಳಿಂದ ಸಿಂಗಾಪುರವನ್ನು ಸೋಲಿಸಿತು. ಇದೀಗ ಭಾರತ ತಂಡ ಸಿಂಗಾಪುರವನ್ನು 13-0 ಅಂತರದಿಂದ ಸೋಲಿಸಿದೆ. ಈ ಮೂಲಕ ಸಿಂಗಾಪುರ ತಂಡ ಸತತ 2ನೇ ಪಂದ್ಯದಲ್ಲಿಯೂ ಕೂಡ ಸೋಲನ್ನು ಕಂಡಿದೆ. ಸವಿತಾ ಪುನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡ ಚಿನ್ನದ ಪದಕ ಗೆಲ್ಲುವಲ್ಲಿ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಭಾರತೀಯ ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನ ಅಕ್ಟೋಬರ್ 2 ರಂದು ಸಂಜೆ 4.30 ಕ್ಕೆ ನಗರದ ಭಗವಾನ್ ಮಹಾವೀರ(ಇನ್‌ಫೆಂಟ್ರಿ) ರಸ್ತೆಯ ವಾರ್ತಾ ಸೌಧದ ಸುಲೋಚನ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಐದು ಲಕ್ಷ ರೂಪಾಯಿ ನಗದು ಒಳಗೊಂಡ ರಾಜ್ಯ ಸರ್ಕಾರದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು, ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸುವರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 25 ವರ್ಷಗಳ ಸಂಭ್ರಮಕ್ಕೆ ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ. ತನ್ನ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಸುಗಮ ಸಾರಿಗೆ ಸೇವೆ ನೀಡುತ್ತಾ ಬಂದಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 25 ವರ್ಷಗಳ ಸಂಭ್ರಮ. ಈ 25 ವಸಂತಗಳ ಸುದೀರ್ಘ ಹಾದಿಯಲ್ಲಿ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಸೇವೆಗೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ ಎಂದು ಹೆಮ್ಮೆಯಿಂದ ಸಿಎಂ ಹೇಳಿದ್ದಾರೆ. ನಮ್ಮ ಸರ್ಕಾರವು 921 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಈ ವರ್ಷಾಂತ್ಯದೊಳಗೆ 1,900 ಹೊಸ ಬಸ್ ಗಳನ್ನು ಖರೀದಿಸಿ ಬಿಎಂಟಿಸಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಪರಿಸರ ಸ್ನೇಹಿಯಾಗಿಸಲು ಕಾರ್ಯಪ್ರವೃತ್ತವಾಗಿದೆ. ಬೆಂಗಳೂರಿನ ಜನತೆ ಹೆಚ್ಚೆಚ್ಚು ಸಾರ್ವಜನಿಕ ಸಾರಿಗೆಯನ್ನು ಬಳಸುವ ಮೂಲಕ ಪರಿಸರ ಮಾಲಿನ್ಯ ಮತ್ತು ಸಂಚಾರ ದಟ್ಟಣೆ ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇರಾಕ್ ನಲ್ಲಿ ಮದುವೆ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಬೆಂಕಿ ಅಪಘಾತದಲ್ಲಿ 113 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ನಿನೆವೆ ಪ್ರಾಂತ್ಯದ ಅಲ್ ಹಮ್ದಾನಿಯಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ನಂಬಲಾಗಿದೆ. ವರದಿಗಳ ಪ್ರಕಾರ, ಅಪಘಾತದಲ್ಲಿ ವಧು-ವರರು ಸಾವನ್ನಪ್ಪಿದ್ದಾರೆ. ನೂರಾರು ಜನರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ಸಂಜೆ ಸಂಭ್ರಮಾಚರಣೆ ನಡೆಯುತಿತ್ತು. ಮದುವೆ ನಡೆದ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಪಘಾತದ ವ್ಯಾಪ್ತಿ ಹೆಚ್ಚಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕಟ್ಟಡಗಳು ಕುಸಿದಿರುವುದು ಕೂಡ ದುರಂತದ ತೀವ್ರತೆಯನ್ನು ಹೆಚ್ಚಿಸಿದೆ. ಇರಾಕ್ ನ, ರಾಜ್ಯ ಸುದ್ದಿ ಸಂಸ್ಥೆ ಐಎನ್ ಎ ವರದಿ ಮಾಡಿದೆ, ಬೆಂಕಿಯ ಅಪಾಯ ಹೆಚ್ಚು ಮತ್ತು ಕಡಿಮೆ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡವು ಬೆಂಕಿಯ ಕೆಲವೇ ನಿಮಿಷಗಳಲ್ಲಿ ಕುಸಿದಿದೆ. ಇಂದು ಬೆಳಗ್ಗೆಯೂ ರಕ್ಷಣಾ ಕಾರ್ಯಾಚರಣೆ ಚುರುಕಾಗಿತ್ತು. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು…
ಒಡಿಶಾದಲ್ಲಿ ವಾಮಾಚಾರ ಆರೋಪದ ಮೇಲೆ ಗ್ರಾಮಸ್ಥರು ಕಡಿದು ಕೊಂದಿದ್ದಾರೆ. ಘೋಡಪಂಕದ ಸ್ಥಳೀಯರಾದ ಕಪಿಲೇಂದ್ರ ಮತ್ತು ಸಸ್ಮತಿ ಮಲಿಕ್ ಮೃತಪಟ್ಟವರು. ಇಂದು ಬೆಳಗ್ಗೆ ಪತ್ನಿ ಹಾಗೂ ಸಹೋದರನನ್ನು ಕಡಿದು ಕೊಲೆ ಮಾಡಿರುವ ಮಾಹಿತಿ ಲಭಿಸಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಸೋದರ ಮಾವನ ಮನೆಗೆ ಬಂದಾಗ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ತಂಗಿಯ ಶವ ಪತ್ತೆಯಾಗಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಕಪಿಲೇಂದ್ರನನ್ನು ತನ್ನ ಕಣ್ಣೆದುರೇ ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ ಮತ್ತು ಅವರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಸಸ್ಮಿತಾ ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ಮಹಿಳೆ ತನ್ನ ದಾಳಿಕೋರರ ಹೆಸರುಗಳನ್ನೂ ಬಹಿರಂಗಪಡಿಸಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಹಲ್ಲೆಕೋರರನ್ನು ಕೂಡಲೇ ಬಂಧಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ನಿನ್ನೆ ರಾತ್ರಿ ದಂಪತಿಗಳು ಮಲಗಿದ್ದಾಗ ಅವರ ಮನೆಗೆ ಬಂದ ತಂಡ ಹಲ್ಲೆ ನಡೆಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಫೆಬ್ರವರಿ 11 ರಂದು ಕಪಿಲೇಂದ್ರನನ್ನು ವಾಮಾಚಾರಕ್ಕಾಗಿ ಗುಂಡು ಹಾರಿಸಲಾಯಿತು. ಸುದೀರ್ಘ ಚಿಕಿತ್ಸೆಯ ನಂತರ ಎರಡು ತಿಂಗಳ ನಂತರ…