Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದವರ ಜೊತೆ ಅಭಿನಯಿಸಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ವರಹಸಂದ್ರ ಗೊಲ್ಲರಟ್ಟಿಯಲ್ಲಿ ಮೂಢನಂಬಿಕೆಗಳ ಕಾರಣದಿಂದ ಊರಿನಿಂದ ಹೊರಗೆ ಇಟ್ಟಿದ್ದ, ಮೂವರು ಹೆಣ್ಣು ಮಕ್ಕಳು, ಒಂದು ಪುಟ್ಟ ಮಗುವನ್ನು, ಜೊತೆಗೆ ಪೂಜಾರಿ ಕುಟುಂಬದ ಹೆಣ್ಣು ಮಗಳನ್ನು ತಾಲೂಕು ದಂಡಾಧಿಕಾರಿ ವೈ.ಎಂ. ರೇಣು ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಮನೆಗೆ ಸೇರಿಸಿದೆ. ತಹಶೀಲ್ದಾರ್ ವೈ.ಎಂ. ರೇಣು ಕುಮಾರ್ ಹಾಗೂ ಹಲವು ಮೇಲಾಧಿಕಾರಿಗಳ ತಂಡ ತಾಲೂಕಿನ ಪ್ರತಿಯೊಂದು ಗೊಲ್ಲರಹಟ್ಟಿಗೆ ಭೇಟಿಕೊಟ್ಟು, ಮೂಢನಂಬಿಕೆಗಳ ವಿರುದ್ಧ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೂಡ ಮಾಡಿದ್ದರು, ಆದರೆ ವರಹಸಂದ್ರ ಗೊಲ್ಲರಹಟ್ಟಿ ಗ್ರಾಮದಲ್ಲಿ ಮೂಢನಂಬಿಕೆಗಳ ವಿರುದ್ಧ ಅಧಿಕಾರಿಗಳು ಮಾಡಿದ ಕಾರ್ಯಕ್ರಮಕ್ಕೂ ಜಗ್ಗದೆ ತಮ್ಮ ಮೂಢನಂಬಿಕೆಗಳನ್ನೇ ಮುಂದುವರಿಸಿಕೊಂಡು ಹೆಣ್ಣು ಮಕ್ಕಳನ್ನು ಊರಿನಿಂದ ಆಚೆ ಇಡುವ ಪದ್ಧತಿಯನ್ನೇ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವರಹಸಂದ್ರ ಗೊಲ್ಲರಟ್ಟಿ ಗ್ರಾಮಕ್ಕೆ ಬೆಳಿಗ್ಗೆ 5:45 ಕ್ಕೆ ಖಚಿತ ಮಾಹಿತಿ ಮೇರೆಗೆ ತಮ್ಮ ಸಿಬ್ಬಂದಿಗಳೊಂದಿಗೆ ಭೇಟಿ ಕೊಟ್ಟ ತಹಶೀಲ್ದಾರ್, ಹೆಣ್ಣು ಮಕ್ಕಳನ್ನು ಮನೆಗೆ ಸೇರಿಸುವ ಕಾರ್ಯ ಮಾಡಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.
ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ತಿಪಟೂರಿನಲ್ಲಿ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಯಶಸ್ವಿ ಮೊದಲ ವರ್ಷದ ಹರ್ಷ. ನಮ್ಮ ಆರೋಗ್ಯ ಕೇಂದ್ರಗಳು ಆರಂಭವಾಗಿ ಇಂದಿಗೆ ಒಂದು ವರ್ಷ ಪೂರೈಸಿದೆ. ಈ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳುವುದಕ್ಕೆ ನಾವು ನಿಜಕ್ಕೂ ಹೆಮ್ಮೆಪಡುತ್ತೇವೆ. ತಿಪಟೂರಿನ ಹಾಲ್ಕುರಿಕೆ ಗ್ರಾಮದಲ್ಲಿ ಮೊದಲ ಬಾರಿಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಯಿತು. ನಂತರ ಕೆ.ಬಿ ಕ್ರಾಸ್ ನಲ್ಲಿ ಇನ್ನೊಂದು ಆರೋಗ್ಯ ಕೇಂದ್ರದ ಘಟಕವನ್ನು ಆರಂಭಿಸಲಾಯಿತು. ಈ ಎರಡು ಘಟಕಗಳು ನೂರಾರು ಮಹಿಳೆಯರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ರೀತಿಯಲ್ಲಿ ಇಂದು ವರ್ಷದಿಂದ ಯಶಸ್ವಿಯಾಗಿ ಮತ್ತು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಇದು ತುಮಕೂರು ಜಿಲ್ಲೆಯಲ್ಲಿಯೇ ಮೊದಲ ಖಾಸಗಿ ಯೋಜನೆಯಾಗಿದೆ ಎಂಬುದು ನಮ್ಮ ಹೆಮ್ಮೆ. ‘ನಮ್ಮ ಆರೋಗ್ಯ ಕೇಂದ್ರ’ ಸ್ಥಾಪಿಸಿದ ಕೀರ್ತಿ ಜನಸ್ಪಂದನ ಟ್ರಸ್ಟ್ ಗೆ ಸಲ್ಲುತ್ತದೆ. ಜನಸ್ಪಂದನ ಟ್ರಸ್ಟ್ ಮುಖ್ಯಸ್ಥ ಮತ್ತು ಕಾಂಗ್ರೆಸ್ ಮುಖಂಡ ಸಿ.ಬಿ. ಶಶಿಧರ್ ಟುಡ, ನಮ್ಮ ಆರೋಗ್ಯ ಕೇಂದ್ರದ ಸಹ ಸಂಸ್ಥಾಪಕರು ಮತ್ತು ಆರ್ಟಿಸ್ಟ್…
ಕೊರಟಗೆರೆ ತಾಲೂಕಿನ ನವಿಲುಕುರಿಕೆ ಗ್ರಾಮಸ್ಥರು ನಿವೇಶನ ಹಾಗೂ ಸ್ಮಶಾನಕ್ಕಾಗಿ ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ. ನಿರಾಶ್ರಿತರಿಗೆ ಮೀಸಲಿಟ್ಟ ನಿವೇಶನ ಜಾಗವನ್ನು ಖಾಸಗಿಯವರು ಅತಿಕ್ರಮ ಮಾಡುತ್ತಿದ್ದಾರೆ. ಇದರಿಂದಾಗಿ ಸ್ಮಶಾನಕ್ಕೆ ಜಾಗವಿಲ್ಲದೆ ಸಾರ್ವಜನಿಕರು, ಪರಿತಪಿಸುತ್ತಿದ್ದಾರೆ. ಇದೇ ವೇಳೆ, ತಹಶೀಲ್ದಾರ್ ಮಂಜುನಾಥ್ ನಿವೇಶನ ಹಾಗೂ ಸ್ಮಶಾನ ಜಾಗ ತ್ವರಿತವಾಗಿ ನೀಡುವ ಭರವಸೆ ನೀಡಿದ ಬಳಿಕ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಸಾರ್ವನಿಕರು ಗ್ರಾಮಕ್ಕೆ ಹಿಂದುರುಗಿದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಿವ್ ಇನ್ ರಿಲೇಶನ್ ಶಿಪ್ ವಿರುದ್ಧ ಬಿಜೆಪಿ ಸಂಸದ ಧರ್ಮೀರ್ ಸಿಂಗ್. ಇಂತಹ ಸಂಬಂಧಗಳು ಸಮಾಜದಿಂದ ನಿರ್ಮೂಲನೆ ಮಾಡಬೇಕಾದ ಅಪಾಯಕಾರಿ ಕಾಯಿಲೆಯಾಗಿದೆ. ಇದರ ವಿರುದ್ಧ ಕೇಂದ್ರ ಸರ್ಕಾರ ಕಾನೂನು ತರಬೇಕು ಎಂದು ಒತ್ತಾಯಿಸಿದರು. ಧರ್ಮಬೀರ್ ಸಿಂಗ್ ಹರಿಯಾಣದ ಮಹೇಂದ್ರಗಢದಿಂದ ಬಿಜೆಪಿ ಸಂಸದರಾಗಿದ್ದಾರೆ. ಧರ್ಮಬೀರ್ ಸಿಂಗ್ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು. ಪ್ರೇಮ ವಿವಾಹಗಳಲ್ಲಿ ವಿಚ್ಛೇದನ ಪ್ರಮಾಣ ಹೆಚ್ಚಿದ್ದು, ಪ್ರೇಮ ವಿವಾಹಕ್ಕೆ ವಧುವರರ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು ಎಂದು ಧರಂಭೀರ್ ಸಿಂಗ್ ಹೇಳಿದ್ದಾರೆ. ಭಾರತೀಯ ಸಂಸ್ಕೃತಿಯು ವಸುಧೈವ ಕುಟುಂಬ ಮತ್ತು ಸಹೋದರತ್ವದ ತತ್ವಶಾಸ್ತ್ರಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿದೆ. ವಿವಿಧತೆಯಲ್ಲಿ ನಮ್ಮ ಏಕತೆ ಇಡೀ ಜಗತ್ತನ್ನು ಮೆಚ್ಚಿಸುತ್ತದೆ. ಭಾರತದಲ್ಲಿ ವಿಚ್ಛೇದನ ಪ್ರಮಾಣವು USA (40%) ಗೆ ಹೋಲಿಸಿದರೆ 1.1% ಮಾತ್ರ ಎಂದು ಅವರು ಹೇಳಿದರು.
ತುಮಕೂರು: ಕಲ್ಬುರ್ಗಿಯಲ್ಲಿ ನಡೆದ ವಕೀಲರಾದ ಈರಣ್ಣ ಗೌಡ ಅವರ ಹತ್ಯೆ ಹಾಗೂ ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರ ಹಲ್ಲೆಯನ್ನು ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘ ಪ್ರತಿಭಟನೆ ನಡೆಸಿತು. ಶುಕ್ರವಾರ ನಡೆದ ಕಾರ್ಯಕಾರಿ ಮಂಡಳಿ ಸಭೆಯ ನಿರ್ಣಯದಂತೆ ಕಾರ್ಯಕಲಾಪಗಳಿಂದ ಹೊರಗುಳಿದು ವಕೀಲರ ರಕ್ಷಣಾ ಕಾಯ್ದೆಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಶಿಫಾರಾಸು ಮಾಡಬೇಕೆಂಬ ಒತ್ತಾಯವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಕೀಲರ ಸಂಘ ನೀಡಿತು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ, ಉಪಾಧ್ಯಕ್ಷರಾದ ಶಿವಶಂಕರಯ್ಯ, ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ, ಜೊತೆ ಕಾರ್ಯದರ್ಶಿ ಪಾಲಾಕ್ಷಯ್ಯ ಸಿ., ಖಜಾಂಚಿ ಕೆ.ಎಲ್.ಭಾರತಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ.ಎಸ್.ಸಂದೀಪ್, ಎಂ.ಬಿ.ನವೀನ್ ಕುಮಾರ್, ಎಂ.ಬಿ.ಗುರುಪ್ರಸಾದ್, ಶಿವಕುಮಾರ ಸ್ವಾಮಿ ಸಿ., ಜನಾರ್ಧನ ಟಿ.ಎಸ್., ಮಂಜುಳ ಟಿ.ಎಸ್., ಮಂಜುಳಾ ಹೆಚ್.ಎನ್., ಮೋಹನ್ ಎಸ್., ಹಿಮಾನಂದ್, ಚಂದ್ರಣ್ಣ, ಮಲ್ಲಿಕಾರ್ಜುನ್, ಗಣೇಶ್ ಎಂ. ಎಸ್.ಪದ್ಮನಾಭ್ ಇನ್ನಿತರೇ ಅನೇಕ ವಕೀಲರು ಭಾಗವಹಿಸಿದ್ದರು.
ಕಳೆದ ಐದು ವರ್ಷಗಳಲ್ಲಿ ವಿದೇಶದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. 2018 ರಿಂದ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ. ಕೇಂದ್ರ ಸಚಿವ ವಿ ಮುರಳೀಧರನ್ ರಾಜ್ಯಸಭೆಯಲ್ಲಿ ವರದಿ ಮಂಡಿಸಿದರು. 34 ದೇಶಗಳಲ್ಲಿ ಕೆನಡಾ ಅತಿ ಹೆಚ್ಚು ಸಾವುಗಳನ್ನು ಹೊಂದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, 2018 ರಿಂದ ಕೆನಡಾದಲ್ಲಿ 91 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಯುನೈಟೆಡ್ ಕಿಂಗ್ ಡಮ್ (48), ರಷ್ಯಾ (40), ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (36), ಆಸ್ಟ್ರೇಲಿಯಾ (35), ಉಕ್ರೇನ್ (21), ಜರ್ಮನಿ (20), ಸೈಪ್ರಸ್ (14), ಇಟಲಿ ಮತ್ತು ಫಿಲಿಪೈನ್ಸ್ (ತಲಾ 10) ನಂತರದ ಸ್ಥಾನದಲ್ಲಿವೆ. . ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲ್ಯಾಣವನ್ನು ಕೇಂದ್ರ ಸರ್ಕಾರ ಖಚಿತಪಡಿಸುತ್ತದೆ. ಇದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರು ಹೇಳಿದರು. ವೈಯಕ್ತಿಕ ಪ್ರಕರಣಗಳನ್ನು ವ್ಯವಹರಿಸಲಾಗುವುದು ಮತ್ತು ಭವಿಷ್ಯದಲ್ಲಿ ಅಹಿತಕರ…
ಭಯೋತ್ಪಾದನೆ ನಿಧಿ ಪ್ರಕರಣದ ಆರೋಪಿ ವಿದ್ಯಾರ್ಥಿಗೆ ಜೈಲಿಗೆ ಹಾಜರಾಗಲು ಅವಕಾಶ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೊಹಮ್ಮದ್ ಮೊಹ್ಸಿನ್ ಅಹ್ಮದ್ ಗೆ ತಿಹಾರ್ ಜೈಲಿನಲ್ಲಿ ಬಿಟೆಕ್ ಪರೀಕ್ಷೆಗೆ ಹಾಜರಾಗಲು ದೆಹಲಿಯ ವಿಶೇಷ ಎನ್ ಐಎ ನ್ಯಾಯಾಲಯ ಅನುಮತಿ ನೀಡಿದೆ. ಅಹಮದ್ ಅವರು ಏಳನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಪಟಿಯಾಲ ಹೌಸ್ ಕೋರ್ಟ್‌ನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಂಜಯ್ ಗರ್ಗ್ ಮೊಹಮ್ಮದ್ ಅವರು ಅರ್ಜಿಯ ವಿಚಾರಣೆ ನಡೆಸಿದರು. ಪರೀಕ್ಷೆಯನ್ನು ವೇಳಾಪಟ್ಟಿಯಂತೆ ನಡೆಸಲಾಗುವುದು ಮತ್ತು ಅದಕ್ಕಾಗಿ ಜೈಲು ಸಂಕೀರ್ಣದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರ ವಾದ ಮಂಡಿಸಿದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಕಳೆದ ವರ್ಷ ಅಹ್ಮದ್ ನನ್ನು ಎನ್ ಐಎ ಬಂಧಿಸಿತ್ತು. ಐಸಿಸ್‌ಗೆ ನಿಧಿ ಸಂಗ್ರಹಿಸುತ್ತಿರುವ ಆರೋಪ. ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಯುಎಪಿಎ 1967 ರ ಸೆಕ್ಷನ್ 18,…
ಸೀಮಿತ ಅವಧಿಯ ಉದ್ಯೋಗಗಳ ಹೆಸರಿನಲ್ಲಿ ನಿರುದ್ಯೋಗಿಗಳನ್ನು ವಂಚಿಸುತ್ತಿರುವ 100ಕ್ಕೂ ಹೆಚ್ಚು ವೆಬ್ ಸೈಟ್ ಗಳನ್ನು ಮುಚ್ಚಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಈ ವೆಬ್ ಸೈಟ್ ಗಳು ಹಣಕಾಸು ಅಕ್ರಮಗಳಿಗೆ ದಾರಿ ಮಾಡಿಕೊಡುತ್ತಿದೆ. ಈ ವೆಬ್ ಸೈಟ್ ಗಳನ್ನು ವಿದೇಶದಿಂದ ನಡೆಸಲಾಗುತ್ತಿದೆ. ಈ ವೆಬ್ ಸೈಟ್ ಗಳನ್ನು ಗುರುತಿಸಲು ಮತ್ತು ತಕ್ಷಣವೇ ಅವುಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಗೃಹ ಸಚಿವಾಲಯದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ವಂಚನೆಯ ವೆಬ್ ಸೈಟ್ ಗಳನ್ನು ಗುರುತಿಸಿ ಮುಚ್ಚಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.