Subscribe to Updates
Get the latest creative news from FooBar about art, design and business.
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
- ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
- ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
- ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
- ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
Author: admin
ಪಾವಗಡ: ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪ್ರಾಂಶುಪಾಲರುಗಳು ವಸತಿ ನಿಲಯ ನನ್ನದು ಮಕ್ಕಳು ನಮ್ಮವರು ಎಂದು ಪರಿಭಾವಿಸಿದಾಗ ಮಾತ್ರ ವಸತಿ ನಿಲಯಗಳಲ್ಲಿ ಇರುವಂತಹ ವಿದ್ಯಾರ್ಥಿಗಳು ಉದ್ಧಾರ ಆಗಲು ಸಾಧ್ಯವಾಗುತ್ತದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ಹೇಳಿದ್ದಾರೆ. ಶನಿವಾರ ಪಾವಗಡ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಹಮ್ಮಿಕೊಂಡಿದ್ದ ದೂರ ತರಂಗ ಶಿಕ್ಷಣ ಉದ್ಘಾಟನೆ ಸಮಾರಂಭ ಹಾಗೂ ಜ್ಞಾನ ಸಿಂಚನ 2023 ನೇ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಶಾಸಕರು ಮಾತನಾಡುತ್ತಿದ್ದರು. ಮಕ್ಕಳಿಗೆ ನೀಡುವ ಆಹಾರದಲ್ಲಿ ಕತ್ತರಿ ಹೊಡೆಯುವುದು, ಗುಣಮಟ್ಟ ಆಹಾರವನ್ನು ನೀಡದೆ ಇರುವುದು, ಬೇಕಾಬಿಟ್ಟಿಯಾಗಿ ಕರ್ತವ್ಯ ನಿರ್ವಹಿಸುವುದು ಮಾಡಬಾರದು. ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುವಂತಹ ಮಕ್ಕಳು ನಮ್ಮ ಮಕ್ಕಳು ಎಂದು ಭಾವಿಸಬೇಕು ಎಂದು ಅವರು ತಿಳಿಸಿದರು. ವಿದ್ಯಾಭ್ಯಾಸಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು, ಜಪಾನಂದ ಸ್ವಾಮೀಜಿ ಅವರು, ಪಾವಗಡ ತಾಲೂಕಿಗೆ ಒಂದು ರೀತಿಯ ವರ ಇದ್ದ ಹಾಗೆ ತಾಲ್ಲೂಕಿನಾದ್ಯಂತ ಅನೇಕ ಆರೋಗ್ಯ ಶಿಬಿರಗಳನ್ನು ನೆರವೇರಿಸಿದ್ದಾರೆ. ಬರಬಂದಂತಹ…
ಮಧುಗಿರಿ: ವಿವಾಹ ನೋಂದಣಿ ಪತ್ರ ನೀಡಲು ಅರ್ಜಿದಾರನಿಂದ ಲಂಚ ಸ್ವೀಕರಿಸುತ್ತಿರುವ ಉಪ ನೋಂದಣಾಧಿಕಾರಿಗಳ ಕಚೇರಿ ಸಿಬ್ಬಂದಿಯ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಮಧುಗಿರಿ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಎರಡು ದಿನದ ಹಿಂದೆ ವಿವಾಹ ನೋಂದಣಿ ಮಾಡಿಕೊಂಡ ಅನಾಮಯ ಅರ್ಜಿದಾರರು ವಿವಾಹ ನೋಂದಣಿ ಪತ್ರ ಪಡೆಯಲು ಸಿಬ್ಬಂದಿ ರತ್ನಮ್ಮ ಬಳಿ ತೆರಳಿದಾಗ, ರತ್ನಮ್ಮ ಅರ್ಜಿದಾರರಿಗೆ 300 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಅರ್ಜಿದಾರರಿಂದ ಸ್ವೀಕರಿಸುವ ದೃಶ್ಯವನ್ನು ಸ್ವತಃ ಅರ್ಜಿದಾರರೇ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಉಪನೋಂದಣಾಧಿಕಾರಿಗಳು ಇದ್ದು ಇಲ್ಲದಂತಾಗಿದೆ: ಮಧುಗಿರಿ ಉಪನೋಂದಣ ಕಚೇರಿಯಲ್ಲಿ ನೋಂದಣಾಧಿಕಾರಿಗಳು ಇದ್ದು ಸಹ ಇಲ್ಲದಂತಾಗಿದೆ. ಏಕೆಂದರೆ ಕಚೇರಿಯ ಸಿಬ್ಬಂದಿಗಳು ಸಾರ್ವಜನಿಕರಿಂದ ಪ್ರತ್ಯೇಕ ಕೆಲಸಕಾರ್ಯಗಳಿಗೆ ಇಂತಿಷ್ಟು ಹಣದ ಬೇಡಿಕೆ ಒಡ್ಡುವುದು ಸರ್ವೇಸಾಮಾನ್ಯವಾಗಿದೆ ಮತ್ತು ಅರ್ಜಿದಾರರು ಹಣ ನೀಡದಿದ್ದರೆ ಕೆಲಸ ಕಾರ್ಯ ಮಾಡದೆ, ಅರ್ಜಿದಾರರನ್ನು ಪದೇ ಪದೇ ಕಚೇರಿಗೆ ಅಲೆದಾಡಿಸುವ ಕೆಲಸ ಮಾಡ್ತಿದ್ದಾರೆ. ಈ ವಿಚಾರವಾಗಿ ಹಲವಾರು ಬಾರಿ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನ ಆಗಿಲ್ಲ ಎಂದು ಸಾರ್ವಜನಿಕರು…
ಬೆಂಗಳೂರು: 27 ವರ್ಷದ ಟೆಕ್ಕಿಯೊಬ್ಬ ಸಿಗರೇಟ್ ಸೇದುವ ವೇಳೆ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 33ನೇ ಮಹಡಿಯ ಬಾಲ್ಕನಿಯಿಂದ ಯುವಕ ಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತನನ್ನು ದಿಪಾಂಶು ಶರ್ಮಾ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದಿಪಾಂಶು ಶರ್ಮಾ, ಇಬ್ಬರು ಯುವತಿಯರು ಹಾಗೂ ಓರ್ವ ಸ್ನೇಹಿತ ಸೇರಿ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಕಂಠಪೂರ್ತಿ ಕುಡಿದು ಗಾಂಜಾ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೃತ ಟೆಕ್ಕಿಯು ಆರ್ಮಿ ಸಿಬ್ಬಂದಿಯ ಮಗನಾಗಿದ್ದು, ಉತ್ತರ ಪ್ರದೇಶ ಮೂಲದವನಾಗಿದ್ದಾನೆ. ಪಿಜಿಯಲ್ಲಿ ವಾಸವಾಗಿದ್ದು ಮೊನ್ನೆ ರಾತ್ರಿ ಸ್ನೇಹಿತರ ಮನೆಯಲ್ಲಿ ಪಾರ್ಟಿಗೆಂದು ಹೋಗಿದ್ದ ಎಂದು ತಿಳಿದು ಬಂದಿದೆ.
ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ,…
ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬರೋಬ್ಬರಿ 6 ಕೋಟಿ 96 ಲಕ್ಷ 70 ಸಾವಿರ ರೂ. ದಂಡವನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಿಸಿದೆ. ದಂಡ ಪಾವತಿಸದೇ ಇದ್ದರೇ 6 ತಿಂಗಳು ಸೆರೆವಾಸ ಅನುಭವಿಸುವಂತೆ ಆದೇಶಿಸಿದೆ. ದಂಡದ ಹಣದಲ್ಲಿ 6,96,60,000 ಹಣವನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಅಲ್ಲದೇ 10 ಸಾವಿರ ರೂ. ಹಣವನ್ನು ಸರ್ಕಾರಕ್ಕೆ ದಂಡವನ್ನು ನೀಡುವಂತೆ ಆದೇಶಿಸಿದೆ. ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆ 6.60 ಕೋಟಿ ರೂ. ಚೆಕ್ ಬೌನ್ಸ್ ಕೇಸ್ ಹಾಕಿತ್ತು. ಸಚಿವ ಮಧು ಬಂಗಾರಪ್ಪ ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ನಡುವೆ ದೂರುದಾರ ಕಂಪನಿಗೆ ಬಾಕಿ ಪಾವತಿಗೆ ಮಧು ಬಂಗಾರಪ್ಪ 6.60 ಕೋಟಿ ರೂ.ನ ಚೆಕ್ ನೀಡಿದ್ದರು. ಆದರೆ 2011ರಲ್ಲಿ ಚೆಕ್ ಬೌನ್ಸ್ ಆಗಿತ್ತು. ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್…
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ನಂದಿಬೆಟ್ಟಕ್ಕೆ ಬೇಕಾದರೇ ರೋಪ್ ವೇ ನಿರ್ಮಿಸಲಿ ಎಂದು ಹೇಳಿದರು. ಚಾಮುಂಡಿ ಬೆಟ್ಟ ಪ್ರೇಕ್ಷಣಿಕ ಸ್ಥಳ, ಧಾರ್ಮಿಕ ತಾಣ ಚಾಮುಂಡಿಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು. ರೋಪ್ ವೇನಲ್ಲಿ ಹೋಗಿ ನೋಡುವಂತಹದ್ದು ಅಲ್ಲ. ರೋಪ್ ವೇಗೆ ನಮ್ಮ ವಿರೋಧವಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿ ವೇತನವನ್ನ ರಾಜ್ಯ ಸರ್ಕಾರವೇ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಈವರೆಗೆ ವಿದ್ಯಾರ್ಥಿ ವೇತನ ನೀಡಲಾಗಿರಲಿಲ್ಲ. ಈ ಕುರಿತು ಇಂದು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದೆ. 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸೂಚನೆ ನೀಡಿದರು. ಇನ್ನು ಇದೇ ವೇಳೆ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನ ಬಂಧಿಸಿ, ಎಫ್ ಐ ಆರ್ ದಾಖಲು ಮಾಡಿರುವುದನ್ನು ರಾಜ್ಯ ಆಮ್ ಆದ್ಮಿ ಪಕ್ಷದ(AAP) ಮುಖ್ಯಸ್ಥ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಚಂದ್ರು, ರಾಜ್ಯ ವಿಂಗಡಣೆ ಆಗಿರುವುದು ಭಾಷೆ ಮೇಲೆ. ಭಾಷೆ ಬಗ್ಗೆ ದನಿ ಎತ್ತಿದರೇ ದೇಶ ದ್ರೋಹವಾಗಲ್ಲ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿದ್ದು ಸರಿಯಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ದದ ಕೇಸ್ ವಾಪಸ್ ಪಡೆಯುತ್ತೀರಿ. ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯೋಕೆ ಆಗಲ್ಲವಾ..? ಎಂದು ಕಿಡಿಕಾರಿದರು. ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸುತ್ತಿಲ್ಲ. ಅಧಿಕಾರಿಗಳನ್ನ ಜೈಲಿಗೆ ಕಳುಹಿಸಬೇಕು. ಕ್ಷಮೆ ಕೇಳಿ ಕನ್ನಡ ಕಾರ್ಯಕರ್ತರನ್ನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು. ಸರ್ಕಾರ ಮಾಲ್ ಗಳ ಪರ ನಿಂತು ದ್ರೋಹ ಮಾಡುತ್ತಿದೆ. ಕಮಿಷನ್ ಗಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಸರ್ಕಾರದ ವಿರುದ್ದ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.
ಸ್ವಪಕ್ಷದ ವಿರುದ್ದವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ವಿ. ಸದಾನಂದಗೌಡರು, ಯತ್ನಾಳ್ ವಿರುದ್ದ ನಾವು ಕ್ರಮ ಕೈಗೊಳ್ಳಲ್ಲ. ಯತ್ನಾಳ್ ವಿಚಾರವನ್ನ ಹೈಕಮಾಂಡ್ ಗೆ ತಿಳಿಸಿದ್ದೇವೆ. ಯತ್ನಾಳ್ ವಿರುದ್ದ ಕೇಂದ್ರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಬಿಜೆಪಿ ಪದಾಧಿಕಾರಿಗಳ ನೇಮಕಕ್ಕೆ ಅಪಸ್ವರ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ವಿ. ಸದಾನಂದಗೌಡರು, ನೂರಾರು ತಪ್ಪುಗಳಿಂದ ಚುನವಣೆಯಲ್ಲಿ ಸೋಲನುಭವಿಸ ಬೇಕಾಯಿತು. ಬೇಗ ಪಟ್ಟಿ ಕಳುಹಿಸಿ ಎಂದು ಹೈಕಮಾಂಡ್ ಸೂಚಿಸಿತ್ತು. ಕೆಲವರ ಜೊತೆ ಚರ್ಚಿಸಿ ಪಟ್ಟಿ ಕಳುಹಿಸಿದ್ದಾರೆ. ಜಿಲ್ಲಾಧ್ಯಕ್ಷರ ನೇಮಕಕ್ಕೂ ಮುನ್ನ ಚರ್ಚಿಸಬೇಕಿತ್ತು. ರಾಜ್ಯ ಘಟಕಕ್ಕಿಂತ ಜಿಲ್ಲಾ ಘಟಕ ಪ್ರಮುಖವಾದದ್ದು ಎಂದು ತಿಳಿಸಿದರು.
ತಮಿಳುನಾಡು: ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ನಡೆದಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಏಕಾಏಕಿ ಟೀ ಅಂಗಡಿಗೆ ನುಗ್ಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದು, ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ, ತಿರುಚ್ಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ಟೀ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.