Author: admin

ರೈತ ಸಮುದಾಯ, ಹಾಲು ಉತ್ಪಾದಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜಾನುವಾರುಗಳ ಆರೈಕೆಗೆ ಇನ್ಮುಂದೆ ಮನೆ ಬಾಗಿಲಿಗೆ ಪಶು ಸಖಿಯರು ಬರಲಿದ್ದಾರೆ. ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರ ರೀತಿಯಲ್ಲೇ ಪಶುಸಂಗೋಪನೆ ಇಲಾಖೆಯಲ್ಲಿ 5,962 ‘ಪಶು ಸಖಿ’ಯರನ್ನು ನೇಮಿಸಲಾಗಿದೆ. ಕನಿಷ್ಠ 18 ದಿನಗಳ ಸಾಮಾನ್ಯ ತರಬೇತಿ ನಂತರ, ಜಾನುವಾರುಗಳ ವೈಜ್ಞಾನಿಕ ಸಾಕಣೆ ಹಾಗೂ ಪೋಷಣೆ, ರೋಗ ನಿಯಂತ್ರಣ ಕ್ರಮಗಳ ಬಗ್ಗೆ 16 ದಿನಗಳ ತರಬೇತಿ ಕೊಡಲಾಗುತ್ತದೆ. ಬಳಿಕ ಕೆಲಸಕ್ಕೆ ನಿಯೋಜಿಸಲಾಗುತ್ತದೆ.

Read More

ಬೆಂಗಳೂರು: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದವನೇ ಹೆಣವಾದ ಘಟನೆ ಇಲ್ಲಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದನಗರದಲ್ಲಿ ನಡೆದಿದೆ. ಗಣೇಶ್ ನಾಯ್ಕ ಕೊಲೆಯಾದವ. ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Read More

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರ, ಕನ್ನಡಪರ ಸಂಘಟನೆಗಳ ದಂಡು. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‌. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಆದರೆ ಸುಮಾರು 175 ಸಂಘಟನೆಗಳು ಬಂದ್‌ ಗೆ ಬೆಂಬಲ ಘೋಷಿಸಿವೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿಯಿಂದ 24 ಗಂಟೆಗಳ ಕರ್ಫ್ಯೂ ಘೋಷಿಸಲಾಗಿದೆ. ನೀರು ಬಿಟ್ಟರೆ ಕರ್ನಾಟಕದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ರೈತ ಸಂಘಟನೆಗಳು ಹೇಳುತ್ತಿವೆ. ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿ 29ರಂದು ಕರ್ನಾಟಕ ಬಂದ್ ಆಚರಿಸಲು ನಿರ್ಧರಿಸಿದ್ದಾರೆ.

Read More

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದ ರಾಜ್ಯದ ದೇವಾಲಯಗಳನ್ನು ನೋಂದಣಿ ಮಾಡಲು ಹಾಗೂ ದೇವಾಲಯ ಆಸ್ತಿ, ಚಿನ್ನಾಭರಣ ಸೇರಿದಂತೆ ಒಟ್ಟು ಸಂಪನ್ಮೂಲ ದಾಖಲಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ನಿಯೋಗ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ನೀಡಿದೆ. ಹಿಂದಿನ ಸರಕಾರದ ಮುಜರಾಯಿ ಇಲಾಖೆ ಸಚಿವರು ಅಸಂವಿಧಾನಿಕವಾಗಿ ಟಿಪ್ಪಣಿ ಹೊರಡಿಸಿದ್ದರು. ಇಂತಹ ಟಿಪ್ಪಣಿಗೆ ಕಾನೂನಿನಲ್ಲಿ ಯಾವುದೇ ಮಾನ್ಯತೆಯಿಲ್ಲ. ಇದನ್ನು ಈಗಿನ ಸರಕಾರ ಪರಿಗಣಿಸಿ ಇಲಾಖೆಗೆ ದೇವಾಲಯಗಳ ನೋಂದಣಿ ಮಾಡಬೇಕು ಎಂದರು.

Read More

ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲ್ಲೂಕು ಯರೇಕುಪ್ಪಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅಷ್ಟಮಿ ಎಳೆ ಗೌರಿ ಪೂಜೆ ನೆರವೇರಿಸಲಾಯಿತು. ದಿವಂಗತ ಕಾಳಪ್ಪಜ್ಜ ಅಕ್ಕಾಚಾರಿ ಇವರು ಪೂಜಿಸುತ್ತಿದ್ದ ಅಷ್ಟಮಿ ಎಳೆ ಗೌರಿ ಪೂಜೆಯನ್ನು ಮಕ್ಕಳು ಮುಂದುವರಿಸಿದ್ದಾರೆ. ಈ ಹಬ್ಬದ ವಿಶೇಷವಾಗಿ ಪೂಜೆಯ ಜೊತೆಗೆ ಗೊಂಬೆಯಾಟದ ಗೊಂಬೆಯನ್ನು ಸಹ ಕೂರಿಸುತ್ತಾರೆ. ಈ ಗೊಂಬೆಗಳು, ಗೊಂಬೆಯಾಟದಲ್ಲಿ ದೇಶ ವಿದೇಶದಲ್ಲಿ ಪ್ರದರ್ಶನ ನೀಡಿ ಬಹುಮಾನ ಪಡೆದಿವೆ. ಈ ಬಾರಿ ಗೊಂಬೆ ಆಟ ಆಡಿಸುವರು ಇಲ್ಲದ ಕಾರಣ ಗೊಂಬೆಗಳನ್ನು ಇಟ್ಟು ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಪೂಜೆಯಲ್ಲಿ ಶ್ರೀ ಮಾರುತಿ ಭಜನಾ ಸಂಘ ಇವರ ಭಜನಾ ಸೇವೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಅಕ್ಕಾಚಾರಿ, ಚನ್ನವೀರಪ್ಪ ಅಕ್ಕಾಚಾರಿ, ನಾಗಪ್ಪ ಅಂಗಡಿ, ದ್ಯಾವಣ್ಣ ತೊಳಲಿ, ಹನುಮಪ್ಪ ಹೂರಕೇರಿ, ಮುಕುಂದಪ್ಪ ಯೋಗಿ, ಜನಾರ್ಧನ್ ಗೌಡ ಪಾಟೀಲ್ ಮತ್ತು ಊರಿನ ಎಲ್ಲಾ ಗ್ರಾಮಸ್ಥರು ಹಾಜರಿದ್ದರು. ವರದಿ: ಮಂಜು ಶ್ರವಣೂರು

Read More

ತುಮಕೂರು: ಜನತಾ ದರ್ಶನ ಕಾರ್ಯಕ್ರಮವು ಸರ್ಕಾರದ ಕಾರ್ಯಕ್ರಮವಾಗಿದ್ದು ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ ಎಂದು ನಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ್ದು, ಅದರಂತೆ ನಾವು ನಡೆದುಕೊಳ್ಳುತ್ತಿದ್ದೇವೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಜನತಾದಶಃ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನಾವು ಜನ ಪರವಾದ ಆಡಳಿತ ಕೊಡ್ತೆವೆ ಅಂತ ಹೇಳಿಕೊಂಡು ಬಂದಿದ್ದೇವೆ. ಅದೇ ರೀತಿ ನಮ್ಮ ಆಡಳಿತ ಚುರುಕಾಗಬೇಕು ಎಂದರು. ಹೆಚ್ಚಿನ ರೀತಿಯಲ್ಲಿ ಜನರಿಗೆ ಸ್ಪಂದನೆ ಮಾಡಬೇಕು ಎಂದು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಕೂಡಾ ನಮ್ಮ ಸರ್ಕಾರ ಮಾಡಿದೆ. ಅದನ್ನ ಮತ್ತೆ ಪ್ರಾರಂಭ ಮಾಡಿದ್ದೆವೆ ಎಂದರು. ಜನರ ಅರ್ಜಿಗಳನ್ನ ತಗೊಂಡು ಸಮಸ್ಯೆಗಳು ಏನಿದೆ ಅದನ್ನ ಪರಿಹರಿಸಿ ಉತ್ತರ ಕೊಡ್ತಾರೆ. ಮೊದಲನೇಯದಾಗಿ ಇವತ್ತು ನಾವು ಪ್ರಾರಂಭ ಮಾಡ್ತಿದ್ದೇವೆ ಎಂದರು. ಇಡೀ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಪ್ರಾರಂಭ ಮಾಡ್ತಾರೆ. ಬೆಂಗಳೂರಿನಲ್ಲಿ 30ನೇ ತಾರೀಖು ಮುಖ್ಯಮಂತ್ರಿಗಳು ಜನತಾ ದರ್ಶನವನ್ನ ಇಟ್ಟುಕೊಂಡಿದ್ದಾರೆ ಎಂದರು. ಲೋಕಾಸಭಾ ಚುನಾವಣೆಗೆ ಜಿಲ್ಲೆಗೆ…

Read More

ತುಮಕೂರು: ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ ಎಂದು ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್. ಶಾಸಕ ಸುರೇಶ್ ಬಾಬು ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಅಂತಾ ತೀರ್ಮಾನ ತಗೊಂಡಿದ್ದಾರೆ ಎಂದರು. ಪಕ್ಷದ ತೀರ್ಮಾನಕ್ಕೆ ನಾವು ಬದ್ದ. ಯಾವ ಯಾವ ಚುನಾವಣೆ ಹೊಂದಾಣಿಕೆ ಮಾಡ್ಕೊಳ್ತಾರೆ ಎಂಬುದನ್ನು ತಿರ್ಮಾನ ಮಾಡಿಲ್ಲ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಆಗುತ್ತೆ ಎಂದರು. ಮಾಧುಸ್ವಾಮಿ ಜೊತೆ ಕೈ ಜೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಕ್ಷ ಏನು ತೀರ್ಮಾನ ತಗೊಳುತ್ತೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ತಿಳಿಸಿದರು ಜೆ.ಡಿ.ಎಸ್.ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಪಕ್ಷದಲ್ಲೂ ಎಲ್ಲಾ ಸಮುದಾಯದವರೂ ಇದ್ದಾರೆ. ಎಲ್ಲಾ ಪಕ್ಷದಲ್ಲೂ ಮುಸ್ಲಿಂ ಇದ್ದಾರೆ. ಮುಸ್ಲಿಂ ಬರಿ ಕಾಂಗ್ರೆಸ್ ನಲ್ಲಿ ಮಾತ್ರ ಇಲ್ಲ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ…

Read More

ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನದ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲು ಮಾಡಿರುವ ಕಾರ್ಯಕ್ರಮ ಸ್ವಾಗತಾರ್ಹವಾಗಿದ್ದು, ಇದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಉಡುಪಿ ಜಿಲ್ಲೆಯನ್ನು ಮಾತ್ರ ನಿರಂತರವಾಗಿ ಕಡೆಗಣಿಸುತ್ತಾ ಬಜೆಟ್ ಅನುದಾನದಲ್ಲಿಯೂ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಜಿಲ್ಲೆಯಲ್ಲಿ 5 ಕ್ಕೆ 5 ಬಿಜೆಪಿ ಶಾಸಕರು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹತಾಶೆಗೊಂಡ ರಾಜ್ಯ ಸರ್ಕಾರ ಶಾಸಕರು ಸಲ್ಲಿಸಿದ ಯಾವುದೇ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸೇವೆ ಸಮಸ್ಯೆ, ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅನುದಾನ ಬಿಡುಗಡೆ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಬಿಡುಗಡೆ ಮಾಡುವಲ್ಲಿ ತಾರತಮ್ಯ, ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ ಸಹಿತ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡದೇ ಸಾರ್ವಜನಿಕರ ದಿನನಿತ್ಯದ ಕೆಲಸ ಕಾರ್ಯಗಳಿಗೆ ತೀರ ಅನಾನುಕೂಲತೆಯಿಂದ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದೆ ನೀಡುತ್ತಿದ್ದ ಅನುದಾನದ ಬಹುಪಾಲನ್ನು ಮೊಟಕುಗೊಳಿಸಿ, ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ…

Read More

ಬೆಂಗಳೂರು: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದರ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೀರಿಗಾಗಿ ನಾವು ಬಡಿದಾಡುತ್ತಾ ಇದ್ದೇವೆ. ಆದರೆ ನಿಮ್ಮ ಬಳಿ ಮಾಹಿತಿಯೇ ಇಲ್ಲ. ಎಷ್ಟು ಶುದ್ಧ ನೀರು ಪೂರೈಕೆ ಘಟಕಗಳು (RO) ಗಳು ಇವೆ. ನಿತ್ಯ ಎಷ್ಟು ನೀರು ಪೂರೈಕೆ ಆಗುತ್ತಿದೆ. ಎಷ್ಟು ಜನ ಬಳಸುತ್ತಿದ್ದಾರೆ ಎಂಬ ವಿವರವೇ ನಿಮ್ಮ ಬಳಿ ಇಲ್ಲ. ಸಭೆಗೆ ಬರುವ ಮುನ್ನ ಸಿದ್ಧತೆಯನ್ನೇ ಮಾಡಿಕೊಂಡು ಬಂದಿಲ್ಲ. ಸಭೆಯ ಗಂಭೀರತೆಯೇ ನಿಮಗೆ ಅರ್ಥವಾಗಿಲ್ಲ. “ಪ್ರತಿ ಕಚೇರಿಯಲ್ಲಿ ಏನು…

Read More

ತುಮಕೂರು: ಜಿಲ್ಲಾ ಪೊಲೀಸ್ ಇಲಾಖೆಯು ಆಯೋಜಿಸಿದ್ದ 2023-24 ನೇ ಸಾಲಿನ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ಜಿಲ್ಲಾ ವರಿಷ್ಠಾಧಿಕಾರಿಯಾದ ಅಶೋಕ್ ಕೆ. ವಿ. ರವರು ವಹಿಸಿಕೊಂಡಿದ್ದರು.ಮುಖ್ಯ ಅತಿಥಿಯಾಗಿ ತುಮಕೂರು ನಗರಸಭೆಯ ಆಯುಕ್ತೆಯಾದ ಅಶ್ವಿಜಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಹತ್ತು ದಿನಗಳ ತರಬೇತಿಯಲ್ಲಿ .22″ ರೈಫಲ್ ನಲ್ಲಿ ಗುರಿ ಅಭ್ಯಾಸ ಮಾಡಿ ಆಯುಧ ನಿರ್ವಹಣೆಯ ತರಬೇತಿಯನ್ನು ಶಿಬಿರಾರ್ಥಿಗಳು ಯಶಸ್ವಿಯಾಗಿ ಪೂರೈಸಿದರು.ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ನಾಗರೀಕರು, ಯುವಕರು,ಮಹಿಳೆಯರು ಶಿಬಿರದಲ್ಲಿ ಹೆಚ್ಚಾಗಿ ಪಾಲ್ಗೊಂಡಿದ್ದರು. ಭಾನುವಾರ ತುಮಕೂರಿನ ಮಂದಾರಗಿರಿ ಬೆಟ್ಟದ ನಡುವಲ್ಲಿ ಗುಂಡಿನ ಸಪ್ಪಳದೊಂದಿಗೆ ಫೈರಿಂಗ್ ಕ್ಯಾಂಪ್ ಆಯೋಜಿಸಿ ನಂತರ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಪಿ. ಅಶೋಕ್ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಅಪರಾಧ ಪ್ರಕರಣಗಳನ್ನು ಕಡಿವಾಣ ಹಾಕಲು ಪ್ರತಿಯೊಬ್ಬರೂ ಸಹಕರಿಸಬೇಕು, ಜೊತೆಗೆ ಸಾರ್ವಜನಿಕರು ತಮ್ಮ ಮನೆ ಸುತ್ತ ಮುತ್ತಲಿನ ಪ್ರದೇಶದಲ್ಲಿ…

Read More