Subscribe to Updates
Get the latest creative news from FooBar about art, design and business.
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
- ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
- ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
- ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
- ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
Author: admin
ಗಂಟಲು ನೋವು, ಕಫದಿಂದ ಕಿರಿಕಿರಿ, ಊತಕ್ಕೆ ಹೇಳಿ ಗುಡ್ ಬೈ: ಕೇವಲ ಈ ಟಿಪ್ಸ್ ಅನುಸರಿಸಿದರೆ ಸಾಕು..! ಗಂಟಲು ನೋವು, ಕಫದಿಂದ ಕಿರಿಕಿರಿ, ಕೆಮ್ಮಿನಿಂದಾಗಿ ನೋವು ಮತ್ತು ಊತವು ಬದಲಾಗುತ್ತಿರುವ ಋತುವಿನಲ್ಲಿ ಸಾಮಾನ್ಯ ಸಮಸ್ಯೆಗಳಾಗಿವೆ. ಇದನ್ನು ತಪ್ಪಿಸಲು ಅರಿಶಿನ ಪುಡಿ ಬೆರೆಸಿದ ಉಗುರು ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಇದನ್ನು ಉಪ್ಪು ನೀರಿನೊಂದಿಗೂ ಸಹ ಮಾಡಬಹುದು ಹೀಗೆ ಮಾಡಿದರೆ ಗಂಟಲು ನೋವು, ಕಿರಿಕಿರಿ ಕಡಿಮೆಯಾಗುತ್ತದೆ. ಜತೆಗೆ ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆಯನ್ನು ಸೇವಿಸುವುದರಿಂದ ಗಂಟಲಿನ ಊತವು ಕಡಿಮೆಯಾಗುತ್ತದೆ. ಮೂಲಂಗಿ ಎಲೆಯಲ್ಲಿದೆ ಆರೋಗ್ಯ.. ಮೂಲಂಗಿಯನ್ನು ಅಡುಗೆಗೆ ಬಳಕೆ ಮಾಡುವುದು ಸಾಮಾನ್ಯ. ಆದರೆ ಮೂಲಂಗಿ ಎಲೆಯಲ್ಲಿ ಹೆಚ್ಚಿನ ಪೋಷಕಾಂಶ ಇದೆ. ಇದರ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಕಾರ್ಯವನ್ನು ಸುಗಮಗೊಳಿಸುತ್ತದೆ. ಮೂಲಂಗಿ ಎಲೆಗಳನ್ನು ತಿನ್ನುವುದರಿಂದ ಮಲಬದ್ಧತೆ, ಆಮ್ಮಿಯತೆ ಮತ್ತು ಗ್ಯಾಸ್ ತಡೆಯುತ್ತದೆ. ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಎಲೆಗಳನ್ನು ಆಹಾರದಲ್ಲಿ ಸೇರಿಸುವುದು ಒಳ್ಳೆಯದು. ಇದು ರಕ್ತದಲ್ಲಿನ ಹಿಮೊಗ್ಲೋಬಿನ್ ಅಂಶವನ್ನು ಹೆಚ್ಚಿಸುತ್ತದೆ.…
ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ದ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು ತಿಳಿಸಿದರು. ಮೈಸೂರು ನಗರ ಮತ್ತು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಸೇವಾದಳ ಸಹಯೋಗದಲ್ಲಿ ಗುರುವಾರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ 138ನೇ ಭಾರತದ ರಾಷ್ಟ್ರೀಯ ಕಾಂಗ್ರೆಸ್ ಹಾಗೂ 100 ನೇ ಕಾಂಗ್ರೆಸ್ ಸೇವಾದಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಳುವಳಿಗೆ ಆಗಾಧವಾದ ಶಕ್ತಿ ಇದೆ. ಇಂದಿನ ದೇಶದ ಪರಿಸ್ಥಿತಿಗೆ ಅನುಗುಣವಾಗಿ ಚಳುವಳಿಯನ್ನು ನಿರಂತರವಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ ಎಂದು ಹೇಳಿದರು. ಅನೇಕ ಧರ್ಮಗಳು, ವಿವಿಧ ಭಾಷೆಯ ಜನರು ವಾಸಿಸುವ ಬಹುತ್ವದ…
ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ
ಲೋಕಸಭಾ ಚುನಾವಣೆಯೂ ಸೇರಿದಂತೆ ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದರು. ಲೋಕಸಭಾ ಚುನಾವಣೆವೆರಗೂ ಶಾಸಕ ಬಸನಗೌಡ ಯತ್ನಾಳ್ ಬಗ್ಗೆ ಸೈಲೆಂಟ್ ಆಗಿರಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾದರೆ ಪಂಚಮಸಾಲಿಗರ ವಿರೋಧ ಕಟ್ಟಿಕೊಳ್ಳಬಹುದು ಅನ್ನೋ ಆತಂಕ ವಿಜಯೇಂದ್ರ ಅವರನ್ನ ಕಾಡುತ್ತಿದೆ. 40 ಲಕ್ಷ ಪಂಚಮಸಾಲಿ ಮತಗಳು ಚದುರುವ ಭಯದ ಜೊತೆ ಸಿ.ಸಿ. ಪಾಟೀಲ್, ಬೆಲ್ಲದ್ ಸೇರಿ ಕೆಲವರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮಕ್ಕೆ ವರಿಷ್ಠರು ಹಿಂದೇಟು ಹಾಕ್ತಿದ್ದಾರೆ.
ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸಿ.ಟಿ ರವಿ, ನಿಜವಾದ ಡೋಂಗಿ ರಾಜಕಾರಣಿ ಯಾರೆಂದು ಕೇಳಿಕೊಳ್ಳಲಿ. ಸಿದ್ದರಾಮಯ್ಯ ತಮ್ಮ ಅಂತರಾಳವನ್ನ ಕೇಳಿಕೊಳ್ಳಲಿ. ದುಬಾರಿ ವಾಚ್ ಕಟ್ಟಿಕೊಂಡು ಮಜವಾದಿ ಅನ್ನಿಸಿಕೊಂಡವರು, ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಿದ್ರೂ ರಾಜೀನಾಮೆ ಇಲ್ಲ. ಬರಗಾಲದಲ್ಲೂ ಐಷರಾಮಿ ಫ್ಲೈಟ್ ನಲ್ಲಿ ಪ್ರಯಾಣಿಸುವವರು. ಸಚಿವರಾದ ಶಿವಾನಂದ್ ಪಾಟೀಲ್, ಜಮೀರ್ ಅಹ್ಮದ್ ಖಾನ್ ಬಳಿ ರಾಜೀನಾಮೆ ಪಡೆಯದವರು. ಸಿದ್ದರಾಮಯ್ಯನವರೇ ಡೋಂಗಿ ರಾಜಕಾರಣಿ ಯಾರೆಂದು ಹೇಳಿ ಎಂದು ಆಕ್ರೋಶ ವ್ಯಕ್ತಪಪಡಿಸಿದರು. ಕನ್ನಡ ಫಲಕ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ, ಕರವೇ ಕಾರ್ಯಕರ್ತರ ಬಂಧನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿ.ಟಿ. ರವಿ, ಕನ್ನಡದ ಆಸ್ಮಿತೆಗಾಗಿ ಹೋರಾಟ ಮಾಡುವುದು ತಪ್ಪಲ್ಲ. ಕನ್ನಡ ಹೋರಾಟಗಾರರ ಬಂಧನ ಸರಿಯಲ್ಲ ಎಂದು ಸರ್ಕಾರದ ನಡೆಗೆ ಕಿಡಿಕಾರಿದರು.
ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಖಂಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಅಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣಗೌಡರನ್ನು ಬಂಧಿಸಿರುವುದನ್ನು ವಿರೋಧಿಸಿ ಖಂಡಿಸುತ್ತೇವೆ. ಕನ್ನಡ ಬೇರೆಯಲ್ಲ, ನಾರಾಯಣಗೌಡರು ಬೇರೆಯಲ್ಲ. ಯಾವ ತಪ್ಪಿಗಾಗಿ ಜೈಲುವಾಸ ನಾರಾಯಣಗೌಡರಿಗೆ, ಇವತ್ತು ಕರ್ನಾಟಕದಲ್ಲಿ ಕನ್ನಡಿಗರು ಒಗ್ಗಟ್ಟಾಗಿ ಒಕ್ಕೊರಲಿನ ಧ್ವನಿಯಂತೆ ಕೇಳಿಸುತ್ತದೆ ಎಂದರೆ ಅದರ ಹಿಂದಿನ ಶಕ್ತಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡರು. ಇಂತಹ ಕನ್ನಡ ಕಟ್ಟಾಳನ್ನು ಬಂಧಿಸಿರುವುದು ಸರ್ಕಾರಕ್ಕೆ ಶೋಭೆ ತರುವಂತಹದ್ದಲ್ಲ, ದ. ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದಂತಹವರು. ಕನ್ನಡಿಗರ ಕಷ್ಟ ಏನೆಂದು ಅವರಿಗೆ ತಿಳಿಯದ ವಿಷಯವೇನಲ್ಲ. ಹಾಗಾಗಿ ಯಾವುದೇ ಒತ್ತಡಕ್ಕೆ ಮಣಿಯದೇ ಈ ಕೂಡಲೇ ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕೆಂದು ವೇದಿಕೆ ಆಗ್ರಹಿಸುತ್ತದೆ. ಭಾರತದಲ್ಲಿ ಪ್ರಾದೇಶಿಕ ಭಾಷಾ…
ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ತಮ್ಮ ಪಕ್ಷದ ಪ್ರಮುಖ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಹಗರಣ. ಯತ್ನಾಳ್ ಬಿಜೆಪಿಯ ಅತ್ಯಂತ ಪ್ರಮುಖ ನಾಯಕರಲ್ಲಿ ಒಬ್ಬರು. ಅವರ ಯಾವ ಹೇಳಿಕೆಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ. ಪ್ರತಿಯೊಂದಕ್ಕೂ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಬಿಜೆಪಿ ನಾಯಕರು ಯತ್ನಾಳ್ ಆರೋಪಕ್ಕೆ ಮೌನ ವಹಿಸಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶೇ.40 ಕಮಿಷನ್ ಆರೋಪಕ್ಕೆ ಯತ್ನಾಳ್ ಅವರೇ ಸಾಕ್ಷಿ ಒದಗಿಸಿದ್ದಾರೆ ಎಂದು ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಮಾತೆತ್ತಿದರೆ ಪ್ರಧಾನಿ ನರೇಂದ್ರ ಮೋದಿಯವರ…
ಅಯೋಧ್ಯೆಯ ರಾಮಮಂದಿರದ 84 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಉತ್ತರ ಪ್ರದೇಶ ಸರ್ಕಾರ ನಿಷೇಧಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕಾರ, ದೇವಸ್ಥಾನದ 84 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನವೇ ಈ ಕ್ರಮ. ಕಳೆದ ವರ್ಷ ಜೂನ್ ನಲ್ಲಿ, ಯುಪಿ ಸರ್ಕಾರವು ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯಮುಕ್ತ ವಲಯಗಳನ್ನು ಘೋಷಿಸಿತ್ತು. ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ ಅಥವಾ ಬೇರೆಡೆಗೆ ಸ್ಥಳಾಂತರಿಸಲಾಗಿದೆ. 2018 ರಿಂದ, ಅಯೋಧ್ಯೆ ನಗರದಲ್ಲಿ ಮದ್ಯ ಮತ್ತು ಮಾಂಸವನ್ನು ನಿಷೇಧಿಸಲು ಬೇಡಿಕೆಯಿದೆ. ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ನಂತರ ಬೇಡಿಕೆ ಬಲವಾಯಿತು.
ಚಿಕ್ಕಬಳ್ಳಾಪುರ: ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿ ಜತೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವಿದ್ಯಾರ್ಥಿ ಜೊತೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬವರು ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿದ್ದಾರೆ. ಮುಖ್ಯ ಶಿಕ್ಷಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.
ಕಾಡಿನ ಸಂರಕ್ಷಣೆ, ಸಂವಿಧಾನದ ಅರಿವು, ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಹಾಗೂ ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷದ ಕಥೆಯನ್ನು ಸವಿಸ್ತಾರವಾಗಿ ತೆರೆದಿಡುವ ಕಥಾ ಸಾರಾಂಶವನ್ನು ಹೊಂದಿರುವ ಅಡವಿ ಚಿತ್ರದ ಲಿರಿಕಲ್ ಸಾಂಗ್ ಅನ್ನು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರ ಕಾಲ, ಕಬಾಲಿ ಮುಂತಾದ ಹಿಟ್ ಚಿತ್ರಗಳನ್ನು ನಿರ್ದೇಶಿಸಿ ಈಗ ದೇಶಾದ್ಯಂತ ಭಾರಿ ಕುತೂಹಲದಿಂದ ನಿರೀಕ್ಷಿಸುತ್ತಿರುವ ತಂಗಲಾನ್ ಚಿತ್ರವನ್ನು ನಿರ್ದೇಶಿಸಿರುವ ದಕ್ಷಿಣ ಭಾರತದ ಸ್ಟಾರ್ ನಿರ್ದೇಶಕ ಪ. ರಂಜಿತ್ ಅವರು ಬಿಡುಗಡೆ ಮಾಡಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್ ಸಾಹಿತ್ಯ ನೀಡಿರುವ ಖ್ಯಾತ ಗಾಯಕ ನವೀನ್ ಸಜ್ಜು ಹಾಡಿರುವ ಸಿಂಗಾರ ಸಿಂಗಾರ ತ್ವಾಟ ಎಂಬ ಲಿರಿಕಲ್ ವಿಡಿಯೋ ಹಾಡನ್ನು ಕೆಜಿಎಫ್ ಮುನಿಸಿಪಲ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು. ಈ ಹಾಡು ವಿ. ಮನೋಹರ್ ಅವರ ಲೇಖನಿಯಿಂದ ಮೂಡಿ ಬಂದಿರುವ 2500 ನೇ ರಚನೆ ಎಂಬುದು ವಿಶೇಷ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪಾರಂಜೀತ್…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಿಸುವಂತೆ ಹಾಗೂ ಆಸ್ಪತ್ರೆಯ ಅವ್ಯವಸ್ಥೆಯನ್ನು ಆರೋಪಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು. ಈ ವೇಳೆ ಧರಣಿಯನ್ನು ಉದ್ದೇಶಿಸಿ ಯುವ ಮುಖಂಡ ರಮೇಶ್ ಮಾತನಾಡಿ, ಹಲವಾರು ವರ್ಷಗಳಿಂದ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಮತ್ತು ಸಿಬ್ಬಂದಿಗಳನ್ನು ಸರ್ಕಾರ ನೇಮಕ ಮಾಡಿಲ್ಲ, ಹೋಬಳಿಯ ಹತ್ತಾರು ಹಳ್ಳಿಗಳಿಂದ ನೂರಾರು ಬಡವರು, ರೈತರು, ಸಾರ್ವಜನಿಕರು ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸೇವೆ ಹಾಗೂ ತುರ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ, ಆಸ್ಪತ್ರೆಯಲ್ಲಿ ಕೆಲವು ಔಷಧಿಗಳು ದೊರೆಯುತ್ತಿಲ್ಲ, ರಕ್ತಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳಿಲ್ಲ, ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು, ಹೀಗಾದರೆ ಬಡವರ ಕಥೆ ಏನು? ಆಸ್ಪತ್ರೆಯಲ್ಲಿ ಕೆಲವು ಸಿಬ್ಬಂದಿಗಳು ರೋಗಿಗಳೊಂದಿಗೆ, ಸಾರ್ವಜನಿಕರೊಂದಿಗೆ ನಿರ್ಲಕ್ಷದಿಂದ ವರ್ತಿಸುತ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು. ದಲಿತ ಯುವ ಮುಖಂಡ ಜಯಣ್ಣ ಮಾತನಾಡಿ, ಮಾಯಸಂದ್ರ ಹೋಬಳಿಯಾದ್ಯಂತ ಹಲವಾರು ಖಾಸಗಿ…