Author: admin

ಮುಸ್ಲಿಂ ಸಮುದಾಯದ ಕೈದಿಗಳಿಗೆ ಜಿಹಾದಿ ಬೋಧನೆ ಹಾಗೂ ಅನ್ಯಧರ್ಮೀಯರ ಮತಾಂತರಕ್ಕೆ ಯತ್ನ ಸೇರಿದಂತೆ ಅಕ್ರಮ ಚಟುವಟಿಕೆಗಳ ಆರೋಪ ಹಿನ್ನಲೆಯಲ್ಲಿ ಜೈಲಿನಲ್ಲಿರುವ ಶಂಕಿತ ಭಯೋತ್ಪಾದಕರ ಮೇಲಿನ ಕಣ್ಣಾವಲಿಗೆ ಅಧೀಕ್ಷಕರ (ಸೂಪರಿಂಟೆಂಡೆಂಟ್) ಸಾರಥ್ಯದಲ್ಲಿ ವಿಶೇಷ ತಂಡವನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಮುಖ್ಯಸ್ಥರು ನೇಮಿಸಿದ್ದಾರೆ. ಈ ಮೊದಲು ಶಂಕಿತ ಉಗ್ರರ ಬ್ಯಾರಕ್ ಗಳ ಮೇಲುಸ್ತುವಾರಿಯನ್ನು ಜೈಲರುಗಳು ಹಾಗೂ ಸಹಾಯಕ ಸೂಪರಿಂಟೆಂಡೆಂಟ್‌ ಗಳು ನಿರ್ವಹಿಸುತ್ತಿದ್ದರು.

Read More

ಎಸ್ಸೆಸ್ಸೆಲ್ಸಿ ಹಾಗೂ ದ್ವಿತಿಯ ಪಿಯುಸಿ ವಾರ್ಷಿಕ ಮೂರನೇ ಪರೀಕ್ಷೇಯ ಮಾರ್ಗಸೂಚಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕ್ರಮವಹಿಸಲು ಸೂಚನೆ. ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ವಾರ್ಷಿಕ ಹಾಜರಾತಿ ಶೇಕಡಾ 75 ರಷ್ಟು ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಶೇ. 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅರ್ಹರಿರುವುದಿಲ್ಲ ಎಂದು ಮಂಡಲಿಯಿಂದ ತಿಳಿಸಿದ್ದಾರೆ.

Read More

ಕಾವೇರಿಗಾಗಿ ಪ.26ರಂದು (ಮಂಗಳವಾರ) ಕರೆ ನೀಡಿರುವ ‘ಬೆಂಗಳೂರು ಬಂದ್’ ಗೆ ಬಿಜೆಪಿ ಸಂಪೂರ್ಣ ಬೆಂಬಲ ಘೋಷಿಸಿದೆ. ಹೋರಾಟಕ್ಕೆ ಕೈ ಜೋಡಿಸುವಂತೆ ಪಕ್ಷದ ಕಾರ್ಯಕರ್ತರಿಗೂ ಕರೆ ನೀಡಿದೆ. ಬಂದ್‌ ಗೆ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳ ಜೊತೆ ರಾಜಕೀಯ ಪಕ್ಷದ ಬಲವೂ ಸಿಕ್ಕಿದಂತಾಗಿದೆ. ಬಿಜೆಪಿ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಹಾಗು ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಬಂದ್‌ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಒಕ್ಕೂಟಗಳು, ಹೋಟೆಲ್ ಸಂಘ ಸಂಸ್ಥೆಗಳು, ಕೆಲವು ಖಾಸಗಿ ಶಾಲೆಗಳು, ಇನ್ನು ಹಲವಾರು ವಿಭಾಗದಿಂದ ವ್ಯಾಪಕ ಬೆಂಬಲ ಸೂಚಿಸಿದ್ದಾರೆ.

Read More

ಸೆಪ್ಟೆಂಬರ್ 28 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅರಮನೆ ಮೈದಾನದ ಆವರಣದಲ್ಲಿ ವಿಶ್ವ ಕಾಫಿ ಸಮ್ಮೇಳನ-2023 ನಡೆಯಲಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ 5ನೇ ವಿಶ್ವ ಕಾಫಿ ಸಮ್ಮೇಳನ ಏರ್ಪಾಡಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಕರ್ನಾಟಕ ಸರ್ಕಾರ ಮತ್ತು ಕಾಫಿ ಉದ್ಯಮದ ಸಹಯೋಗದೊಂದಿಗೆ ಸಮ್ಮೇಳನ ನಡೆಯಲಿದೆ.

Read More

ಬೆಂಗಳೂರು: ಆಟೋ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು 3.36 ಲಕ್ಷ ರೂ ದಂಡ ವಿಧಿಸಿದ್ದಾರೆ. ಸೆ.14ರಿಂದ 23ರವರೆಗೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 670 ಪ್ರಕರಣ ದಾಖಲಿಸಿಕೊಂಡು, 3.36 ಲಕ್ಷ ರೂ ದಂಡ ವಸೂಲಿ ಮಾಡಿದ್ದಾರೆ. ಹೆಚ್ಚಿನ ದರ ಪಡೆಯುತ್ತಿದ್ದ ಆಟೋ ಚಾಲಕರಿಗೆ ಪೊಲೀಸರು ದಂಡದ ಬರೆ ಎಳೆದಿದ್ದಾರೆ. ಈಶಾನ್ಯ ಉಪ ವಿಭಾಗದಲ್ಲಿಹೆಚ್ಚು ಹಣ ಪಡೆದ ಆರೋಪದಡಿ ಒಟ್ಟು 141 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 72,000 ರೂ ದಂಡ ಹಾಕಲಾಗಿದೆ.

Read More

ಕೊರಟಗೆರೆ: ಸಮಿಶ್ರ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ದೇವೇಗೌಡರು ತುಮಕೂರಿಗೆ ಬಂದ್ರೆ ಸ್ವಾಗತ. ಮಾಜಿ ಪ್ರಧಾನಿ ದೇವೇಗೌಡರನ್ನು ಗೆಲ್ಲಿಸಿದ್ರೆ ನಮ್ ತುಮಕೂರು ಕ್ಷೇತ್ರಕ್ಕೆ ಹೆಮ್ಮೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಮುಳುಗುವ ಹಡಗು ಎಂದರು. ಬಿಜೆಪಿ ಪಕ್ಷವು ದೇವೇಗೌಡರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವಕಾಶ ಕೊಟ್ಟರೆ, ಬಹಳ ಸಂತೋಷ ಎಂದು ಇದೇ ವೇಳೆ ಹೇಳಿದರು. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖ ಮಠಕ್ಕೆ ಸೌಹಾರ್ದಯುತ ಭೇಟಿ ನೀಡಿದ ಕೆ.ಎನ್. ರಾಜಣ್ಣರವರಿಗೆ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸನ್ಮಾನಿಸಿ ಆಶೀರ್ವಾದಿಸಿದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

Read More

ಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರೊಬ್ಬರು ಇಂದು ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕನ್ನಡಿಗರ ಬಾಯಿಗೆ ಮಣ್ಣು ಹಾಕುವ, ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಾ ಬಂದಿರುವುದನ್ನು ಬಿಜೆಪಿ ಕಾರ್ಯಕರ್ತ ಸಾಂಕೇತಿಕವಾಗಿ ಆಚರಿಸಿದ್ದಾನೆ ಎಂದು ಬಿ.ವಿ.ಶ್ರೀನಿವಾಸ್ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾದರು. ಆದರೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗದಂತೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಂತೆ ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಂಸದರು ಮತ್ತು ಸದಸ್ಯರ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನೆಪಕ್ಕಾದರೂ ಭಾಗವಹಿಸಲಿಲ್ಲ. ರಾಜ್ಯಕ್ಕೆ ಬರಬೇಕಾದ GST ಪಾಲಿನಲ್ಲಿ, 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆದಾಗ ರಾಜ್ಯವನ್ನು ಪ್ರತಿನಿಧಿಸುವ 25…

Read More

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಧರ್ಮಸ್ಥಳ ಗ್ರಾಮದ ಸಂಘ ಸಂಸ್ಥೆಯ ಮುಖಂಡರು, ದೇವಸ್ಥಾನ ಚರ್ಚ್, ಮಸೀದಿ ಮುಖಂಡರುಗಳು, ಊರಿನ ಹಿರಿಯ ಪ್ರಮುಖರು, ನಿವೃತ್ತ ನೌಕರರು, ಅಧಿಕಾರಿಗಳು, ಮಹಿಳಾ ಸ್ವಸಹಾಯ ಸಂಘದ ಒಟ್ಟು ಸೇರಿ ಧರ್ಮಸ್ಥಳ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಸಮಾಲೋಚನ ಸಭೆ ನಡೆಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ನಿರ್ದೇಶನದಂತೆ ಕರ್ನಾಟಕದ ಪ್ರಮುಖ 5 ನಗರಗಳನ್ನು ಆಯ್ಕೆ ಮಾಡಿ, ಕಲಬುರ್ಗಿ, ಬೀದರ್, ಮೈಸೂರು, ಮಂಗಳೂರು, ಧರ್ಮಸ್ಥಳ ಸೇರಿದಂತೆಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯದಲ್ಲಿ ಆಯ್ಕೆ ಮಾಡಿ ಸೂಚನೆ ನೀಡಿರುವುದರಿಂದ ಸದರಿ ಸರಕಾರದ ಸುತ್ತೋಲೆಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನ ಅಂದರೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ಗಳು, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟುಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನುಗಳು, ಅಂಟಿಕೊಳ್ಳುವ ಫಿಲ್ಮಗಳು, ಎಲ್ಲಾ ದಪ್ಪದ ಡೈನಿಂಗ್…

Read More

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ನೀಡಿದೆ. 2023-24ನೇ ಸಾಲಿನಿಂದಲೇ ಬೋರ್ಡ್ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.

Read More

ಬೆಂಗಳೂರಿನ ಗಾಣಕಲ್ ರಸ್ತೆಯಲ್ಲಿ ನೆನ್ನೆ ಬೆಳಗ್ಗೆ ಹಿಟ್ ಆಂಡ್ ರನ್ ಗೆ ಓರ್ವ ಬೈಕ್ ಸವಾರ ಬಲಿಯಾಗಿದ್ದಾರೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್‌ ನಿಂದ ಬೈಕ್‌ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ವೇಗವಾಗಿ ಕಾರು ವೇಗವಾಗಿ ಚಲಿಸಿದೆ. ಕಾರು ಡಿಕ್ಕಿ ಪರಿಣಾಮ ಬೈಕ್ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ

Read More