Subscribe to Updates
Get the latest creative news from FooBar about art, design and business.
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
- ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
- ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
- ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
- ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
Author: admin
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ 2024ರ ಜ.9 ರಂದು ಚುನಾವಣೆ ನಿಗದಿ ಮಾಡಿ ಚುನಾವಣಾ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯು 35 ಸದಸ್ಯ ಬಲವನ್ನು ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರ 5, ಎಂಐಎಂ 2 ಹಾಗೂ 1 ಜೆಡಿಎಸ್ ಸದಸ್ಯರನ್ನು ಹೊಂದಿದೆ. ವಾರ್ಡ್ ಮರುವಿಂಗಡಣೆ, ಮೇಯರ್, ಉಪ ಮೇಯರ್ ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿ ವ್ಯಾಜ್ಯವಿತ್ತು. ಕಲಬುರಗಿ ಹೈಕೋರ್ಟ್ ನಲ್ಲಿ ಕೆಲ ಸದಸ್ಯರು ಅರ್ಜಿ ಸಲ್ಲಿಸಿದ್ದ ಕಾರಣ ಚುನಾವಣೆಗೆ ತಡೆ ಬಿದ್ದಿತ್ತು. ಕಳೆದ ಅಕ್ಟೋಬರ್ 30 ರಂದು ನಡೆಯಬೇಕಿದ್ದ ಚುನಾವಣೆಗೂ ಹೈಕೋರ್ಟ್ ತಡೆ ನೀಡಿತ್ತು. ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳ ಮೀಸಲಾತಿ ವಿಚಾರದಲ್ಲಿ ಕೆಲ ಸದಸ್ಯರು ಅರ್ಜಿ ಸಲ್ಲಿಕೆ ಮಾಡಿದ್ದರಿಂದ ತಡೆ ನೀಡಲಾಗಿತ್ತು. ಸದ್ಯ ಇದೀಗಾ ನ್ಯಾಯಾಲಯದ ವಿಚಾರಣೆ…
ಹುಬ್ಬಳ್ಳಿ: ಕರ್ನಾಟಕದಲ್ಲಿ ವ್ಯವಹಾರ ನಡೆಸುವ ಅಂಗಡಿ, ಉದ್ದಿಮೆಗಳ ಮಾಲೀಕರು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು ಎಂದು ಕನ್ನಡ ಸಂಘಟನೆಗಳು ಹೋರಾಟಕ್ಕಿಳಿದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೆಲವು ಅಂಗಡಿಯವರು ಉದ್ದೇಶಪೂರ್ವಕವಾಗಿ ಕನ್ನಡ ಬೋರ್ಡ್ ಹಾಕಲು ಬಯಸುವುದಿಲ್ಲ. ಇದನ್ನು ನಾನು ಒಪ್ಪುವುದಿಲ್ಲ ಎಂದರು. ಕರ್ನಾಟಕದಲ್ಲಿ ಬಹುಪಾಲು ಜನತೆ ಕನ್ನಡ ಮಾತನಾಡುವವರಿದ್ದಾರೆ. ಹೀಗಿರುವಾಗ, ಆಂಗ್ಲ ಮತ್ತು ಹಿಂದಿಯೊಂದಿಗೆ ಕನ್ನಡವನ್ನು ಸೇರಿಸುವಲ್ಲಿ ಅಂಗಡಿ ಮಾಲೀಕರಿಗೆ ಸಮಸ್ಯೆ ಏನು? ಈ ಬಗ್ಗೆ ಜನರು ಪ್ರಶ್ನಿಸಿದಾಗ ಕೆಲ ಉದ್ದಿಮೆಗಳ ಮಾಲೀಕರು ದುರಹಂಕಾರದಿಂದ ವರ್ತಿಸಿದ್ದಾರೆ. ನಾನು ಹಿಂಸಾಚಾರವನ್ನು ಒಪ್ಪುವುದಿಲ್ಲ, ಆದರೆ ಅವರು ಕನ್ನಡ ನಾಮಫಲಕಗಳನ್ನು ಪ್ರದರ್ಶಿಸಲು ಹಿಂದೇಟು ಹಾಕೋದ್ಯಾಕೆ? 20-30% ಅಂಗಡಿಯವರು ಸಹ ಕನ್ನಡದಲ್ಲಿ ಬೋರ್ಡ್ ಹಾಕುವುದಿಲ್ಲ. ಇದು ತಪ್ಪು. ಇಂಗ್ಲೀಷ್ ನ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ತೊಂದರೆಯೇನು? ಇದು ಬ್ರಿಟನ್ ಅಥವಾ ಇಂಗ್ಲೆಂಡ್…
ರಾಮನಗರ: ಸ್ನೇಹಿತನ ಜೊತೆ ಚಾರಣಕ್ಕೆ ಬಂದ ಯುವಕ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ. ಚಾರಣದ ವೇಳೆ ಕಾಲುಜಾರಿ ಕಂದಕಕ್ಕೆ ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕಳೆದ ಭಾನುವಾರ ಉತ್ತರ ಪ್ರದೇಶ ಮೂಲದ ಯುವಕ ಗಗನ್ ದೀಪ್ ಸಿಂಗ್ ಸ್ನೇಹಿತನ ಜೊತೆ ಮಾಗಡಿ ತಾಲೂಕಿನ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಈ ವೇಳೆ ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿದ ಗಗನ್ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು. ಬಳಿಕ ಗಗನ್ ಸ್ನೇಹಿತ ಈ ಸಂಬಂಧ ಮಾಗಡಿ ಪೊಲೀಸರ ಸಹಾಯ ಕೋರಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ, ಥರ್ಮಲ್ ಡ್ರೋನ್, ಶ್ವಾನದಳ ಸೇರಿ ಎಸ್ ಡಿಆರ್ ಎಫ್ ತಂಡದಿಂದಲೂ ಶೋಧ ನಡೆಸಿ ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಗಗನ್ ದೀಪ್ ಸಿಂಗ್…
ವಿಜಯಪುರ: ಮಹಿಳೆ ಹೊರತಾಗಿ ಸಂಸ್ಕೃತಿ ಇಲ್ಲ, ಸಂಸ್ಕೃತಿ ಹೊರತಾಗಿ ಮಹಿಳೆ ಇಲ್ಲ. ಸಂಸ್ಕೃತಿ ಉಳಿದಿದ್ದು ಮಹಿಳೆಯಿಂದ, ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬುಧವಾರ ಸಂಜೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ, ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳೆ ಮತ್ತು ಸಂಸ್ಕೃತಿ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ದೇಶಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಭಾರತ ದೇಶದ ವೈಭವಪೂರಿತ ಇತಿಹಾಸವನ್ನು ನಾವು ಕೇಳಿ ತಿಳಿದುಕೊಂಡಿದ್ದೇವೆ. ಆದರೆ ಮಹಿಳೆಯನ್ನು ಕೇವಲ ಹೆರೋಕೆ, ಲಾಲಿ ಹಾಡೋಕೆ, ಅಡುಗೆ ಮಾಡೋಕೆ ಸೀಮಿತ ಮಾಡಲಾಗಿದೆ. ಗಂಡ ಸತ್ತರೆ ಬದುಕಲು ಸಾಧ್ಯವೇ ಇಲ್ಲ ಎಂದು ಚಿತೆಗೆ ಹಾರಿ ಪ್ರಾಣ ಬಿಡುವ ಅನಿಷ್ಠ ಪದ್ಧತಿಯನ್ನು ಭಾರತ ಕಂಡಿದೆ. ಇಂದು ಹೆಣ್ಣು ಬದಲಾಗಿದ್ದಾಳೆ. ಪೈಲಟ್ ಆಗಿಯೂ ಸಾಧನೆ ಮಾಡಿದ್ದಾಳೆ, ಕೂಲಿ ಮಾಡಿಯೂ ಸಂಸಾರ ನಡೆಸುತ್ತಾಳೆ, ಗಂಡನ ಹೆಗಲಿಗೆ ಹೆಗಲು ಕೊಟ್ಟು ಸಂಸಾರದ ಚಕ್ಕಡಿಯನ್ನು ಮುಂದೆ ಒಯ್ಯುತ್ತಾಳೆ. ಹಾಗಾಗಿ ಮಹಿಳೆ…
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಗುಡ್ಡದ ನೆರಲೆಗೇರಿ ಗ್ರಾಮದ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತಾದವರು. ಡಿಡಿಪಿಐ ಪರಮೇಶ್ವರಪ್ಪ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯದ ಸ್ವಚ್ಚತೆ ಕಾರ್ಯವನ್ನ ಮಾಡಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೀಗ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪರನ್ನ ಅಮಾನತು ಮಾಡಲಾಗಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಅಮಾನವೀಯ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಇದೇ ರೀತಿಯ ಮತ್ತೊಂದು ಘಟನೆ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಮರುಕಳಿಸಿತ್ತು.
ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು ಸಂಭ್ರಮಿಸಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎನ್.ಪಿ. ಅಮೃತೇಶ್ ಎಂಬವರು ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆ.ವಿ. ಅರವಿಂದ ಅವರಿದ್ದ ಪೀಠ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರಲು ನಿರಾಕರಿಸಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವಂತೆ ವಕೀಲ ಅಮೃತೇಶ್ ಮನವಿ ಮಾಡಿದ್ದರು. ಆದರೆ ಇದನ್ನು ತಿರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್ ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿದ್ದು, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ.
ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೇದಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನ ಮನೆಯ ಮೇಲೆ ಬುಲ್ಡೋಜರ್ ಕ್ರಮ. ಪ್ರಮುಖ ಆರೋಪಿ ರೋಹಿತ್ ರಾಥೋಡ್ ಅವರ ಮನೆಯನ್ನು ಅಧಿಕಾರಿಗಳು ಗುರುವಾರ ನೆಲಸಮಗೊಳಿಸಿದ್ದಾರೆ. ಖತೀಪುರದಲ್ಲಿರುವ ರಾಥೋಡ್ ಅವರ ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಜೈಪುರ ಬೃಹತ್ ಮಹಾನಗರ ಪಾಲಿಕೆ ಕ್ರಮ ಕೈಗೊಂಡಿದೆ. ಕರ್ಣಿ ಸೇನಾ ಮುಖ್ಯಸ್ಥರನ್ನು ಡಿಸೆಂಬರ್ 5 ರಂದು ಜೈಪುರದ ಅವರ ಮನೆಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಕೆಲವೇ ನಿಮಿಷಗಳಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನೊಂದಿಗೆ ಸಂಪರ್ಕ ಹೊಂದಿದ ದರೋಡೆಕೋರ ನಾಯಕ ರೋಹಿತ್ ಗೋಡಾರಾ ದಾಳಿಯ ಹೊಣೆಗಾರಿಕೆಯನ್ನು ವಹಿಸಿಕೊಂಡರು. ಡಿಸೆಂಬರ್ 9 ರಂದು, ಪ್ರಮುಖ ಆರೋಪಿಗಳಾದ ರೋಹಿತ್ ರಾಥೋಡ್ ಮತ್ತು ನಿತಿನ್ ಫೌಜಿ ಮತ್ತು ಅವರ ಸಹಚರರಲ್ಲಿ ಒಬ್ಬರಾದ ಉದ್ಧಮ್ ಅವರನ್ನು ಚಂಡೀಗಢದಲ್ಲಿ ಬಂಧಿಸಲಾಯಿತು. ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರ ಜಂಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಅವರು ಸಿಕ್ಕಿಬಿದ್ದಿದ್ದಾರೆ. ರೋಹಿತ್ ಗೋಡಾರ ಸೂಚನೆ ಮೇರೆಗೆ…
ಶಿಕ್ಷಕರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ಜಾರಿ ನಿರ್ದೇಶನಾಲಯದ ದಾಳಿ. ಹಗರಣದಲ್ಲಿ ಭಾಗಿಯಾಗಿರುವ ಚಾರ್ಟರ್ಡ್ ಅಕೌಂಟೆಂಟ್ ಗಳು ಮತ್ತು ಉದ್ಯಮಿಗಳು ಸೇರಿದಂತೆ ಹಲವಾರು ವ್ಯಕ್ತಿಗಳ ನಿವಾಸಗಳು ಮತ್ತು ಕಚೇರಿಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ. ಕೋಲ್ಕತ್ತಾದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಉದ್ಯಮಿಗಳಾದ ಸುಬೋಧ್ ಸಾಚಾರ್ ಮತ್ತು ಅಶೋಕ್ ಯದುಕಾ ಅವರ ಮಾಣಿಕ್ತಾಲಾದ ಎರಡು ಫ್ಲಾಟ್ ಗಳು ಮತ್ತು ಬುರಾಬಜಾರ್ ನಲ್ಲಿರುವ ಚಾರ್ಟರ್ಡ್ ಅಕೌಂಟೆಂಟ್ ನಿವಾಸದಲ್ಲಿ ಶೋಧ ನಡೆಸಲಾಗಿದೆ.
ದೇಶದ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ದೆಹಲಿ, ಜೈಪುರ, ಲಕ್ಷ್ಮೀ, ಚಂಡೀಗಢ, ಮುಂಬೈ, ಚೆನ್ನೈ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಸಂಬಂಧಿತ ಮೂಲಗಳು ಬಹಿರಂಗಪಡಿಸಿವೆ. ಬುಧವಾರ ರಾತ್ರಿ 10:23ರ ಸುಮಾರಿಗೆ ಬೆದರಿಕೆ ಮೇಲ್ ಗಳು ಬಂದಿವೆ ಎಂದು ಅವರು ಹೇಳಿದ್ದಾರೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಆಯಾ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ನಡೆಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ ಕೊರಟಗೆರೆ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದು ಕೊರತೆಯ ಸಭೆಯು ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಪ.ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಪ್ರತ್ಯೇಕ ಆದಾಯವನ್ನು ಮೀಸಲು ಇಡಲಾಗಿದೆ, ಎಂದು ಪ.ಪಂ ಮುಖ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದಿನ ಸಭೆಯಲ್ಲಿ ಸಂಪೂರ್ಣ ವರದಿಯನ್ನು ನೀಡುವಂತೆ ಪ.ಪಂ ಮುಖ್ಯಾಧಿಕಾರಿಗೆ ತಿಳಿಸಿದರು. ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆ, ಹೈಮಾಸ್ಕ್ ದೀಪದ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಶನಿವಾರ ನೀಡುವಂತೆ ಕೆಆರ್‍ಡಿಎಲ್ ಇಲಾಖೆಗೆ ಸೂಚಿಸಿದ್ದೇನೆ, ಕಂದಾಯ ಇಲಾಖೆಯ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾ.ಪಂ ಅಧಿಕಾರಿಗಳು ಡಿ.21ರಂದು ದಾಸರಹಳ್ಳಿ ಗ್ರಾಮದ ಸ್ಮಶಾನ ಭೂಮಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸ್ಮಶಾನ ಜಾಗ ಒತ್ತುವಾರಿಯಾಗಿರುವುದು ಕಂಡು ಬಂದಿದೆ ಜ.1ರಂದು ಒತ್ತುವರಿಯಾದ ಸ್ಮಶಾನ ಜಾಗವನ್ನು ತೆರವು ಕಾರ್ಯಾಚರಣೆ ಮಾಡಲಾಗುವುದು…