Subscribe to Updates
Get the latest creative news from FooBar about art, design and business.
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
Author: admin
ಬೆಂಗಳೂರು: ಅನ್ನಭಾಗ್ಯದ DBT ಹಣ ಇದುವರೆಗೆ ರೇಷನ್ ಕಾರ್ಡ್ ನಲ್ಲಿ ನಮೂದಾಗಿದ್ದ ಮುಖ್ಯಸ್ಥರಿಗೆ ಬರುತ್ತಿತ್ತು. ಆದ್ರೆ ತಾಂತ್ರಿಕ ದೋಷದಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಿದ್ರು. ಈಗ ಇಲಾಖೆ ಇವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನೇಕರಿಗೆ ಅನ್ನಭಾಗ್ಯದ ದುಡ್ಡು ಖಾತೆಗೆ ಜಮೆಯಾಗಿದ್ರೂ ಕೆಲವು ರೇಷನ್ ಕಾರ್ಡ್‌ನ ಮುಖ್ಯಸ್ಥರಿಗೆ ತಾಂತ್ರಿಕ ದೋಷದಿಂದ ದುಡ್ಡು ಜಮೆಯಾಗಿರಲಿಲ್ಲ. ಹೀಗಾಗಿ ಸರ್ಕಾರದ ಅನುಮತಿ ಪಡೆದು ಆಹಾರ ಇಲಾಖೆ ಮನೆಯ 2ನೇ ಯಜಮಾನರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಹಾಕಲಿದೆ. ಈ ತಿಂಗಳಿಂದಲೇ ಮನೆಯ 2ನೇ ಯಜಮಾನರ ಖಾತೆಗೆ ದುಡ್ಡು ಹೋಗಲಿದೆ. ಒಟ್ಟು 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ದುಡ್ಡು ಜಮೆಯಾಗಿಲ್ಲ. ಈ ಫಲಾನುಭವಿಗಳ ರೇಷನ್ ಕಾರ್ಡ್ ನಲ್ಲಿದ್ದ ಮನೆಯ ಹಿರಿಯ ಸದಸ್ಯರ ಆಕೌಂಟ್ ನಿಷ್ಕ್ರಿಯ, ಆಧಾರ್ ಸೀಡಿಂಗ್ ಸಮಸ್ಯೆ ಕೆ ವೈಸಿ ಸಮಸ್ಯೆ ಇತ್ತು. ಆದ್ದರಿಂದ ಈ ವಿವರವನ್ನು ಈಗಾಗಲೇ ಆಹಾರ ಇಲಾಖೆ ಕಲೆ ಹಾಕಿದೆ. ಹೀಗಾಗಿ…
ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು. ಗ್ಯಾರಂಟಿ ಗಳನ್ನು ಘೋಷಿಸಿದಕ್ಕಾಗೇ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲ್ಲುವುದು ಸಾಧ್ಯವಾಯಿತು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ಗೆದ್ದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದ್ದು ಚುನಾವಣೆಯಲ್ಲಿ ಗೆಲ್ಲುವುದಕ್ಕಲ್ಲ, ಅವು ಎಲ್ಲಾ ವರ್ಗಗಳ ಬಡವರಿಗೆ ನೆರವಾಗಲು ರೂಪಿಸಿರುವ ಕಾರ್ಯಕ್ರಮಗಳು ಎಂದು ಹೇಳಿದ ಸಿದ್ದರಾಮಯ್ಯ, ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು 6 ತಿಂಗಳು ಸಮಯ ತೆಗೆದುಕೊಂಡ ಬಿಜೆಪಿಗೆ ತಮ್ಮ ಸರ್ಕಾರಕ್ಕೆ ಸಲಹೆ ನೀಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.
ಚೆನ್ನೈ: ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಮಿಳು ನಟ ವಿಶಾಲ್ ಮನೆಯಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು 24 ಗಂಟೆಯ ಬಳಿಕ ರಕ್ಷಿಸಲಾಗಿದೆ. ಚೆನ್ನೈನ ಕರಪಕಮ್ ಪ್ರದೇಶದಲ್ಲಿರುವ ವಿಶಾಲ್ ಮನೆಯಲ್ಲಿ ಅಮೀರ್ ಖಾನ್ ಉಳಿದುಕೊಂಡಿದ್ದರು. ಎಡಬಿಡದೆ ಸುರಿದ ಮಳೆಯಿಂದಾಗಿ ಅವರಿರುವ ಪ್ರದೇಶ ಜಲಾವೃತಗೊಂಡು ಮನೆಯಿಂದ ಹೊರಬರಲಾರದೆ ಸಿಲುಕಿಕೊಂಡಿದ್ದರು. ಮಳೆಯಿಂದಾಗಿ ಮನೆಯ ಸುತ್ತಮುತ್ತ ನೀರು ತುಂಬಿರುವ ಬಗ್ಗೆ ನಟ ವಿಶಾಲ್ ಎಕ್ಸ್ ತಾಣದಲ್ಲಿ ಹಂಚಿಕೊಂಡಿದ್ದು, ತಕ್ಷಣ ಸಹಾಯಕ್ಕೆ ಧಾವಿಸಿ ರಕ್ಷಿಸಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ವಿಶಾಲ್ ರಕ್ಷಣಾ ಕಾರ್ಯಾಚರಣೆಯ ಪೋಟೊ ಹಂಚಿಕೊಂಡಿದ್ದು, ಅದರಲ್ಲಿ ಅಮೀರ್ ಖಾನ್, ಜ್ವಾಲಾ ಗುಟ್ಟಾ ಸಹ ಕಾಣಿಸಿಕೊಂಡಿದ್ದಾರೆ. ತಾಯಿಯ ಚಿಕಿತ್ಸೆಗಾಗಿ ಅಮೀರ್ ಕಾನ್ ಅವರು ಕೆಲವು ತಿಂಗಳ ಹಿಂದೆ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.
ತಿಪಟೂರು: ತಾಲ್ಲೂಕಿನ ನೊಣವಿನಕೆರೆ ಹೋಬಳಿ ಹೊನ್ನೆನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹೊನ್ನೆನಹಳ್ಳಿ ಗ್ರಾಮದ ವಾಸಿ ಮಹೇಶ್(24) ಮೃತ ದುರ್ದೈವಿ. ತಮ್ಮ ತೋಟದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತ ಮಹೇಶ್ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ನೊಣವಿನಕೆರೆ ಪೊಲೀಸ್ ಠಾಣೆ ಪೋಲೀಸರು ಸ್ಥಳಪರಿಶೀಲನೆ ನಡೆಸಿದ್ದಾರೆ. ಸದ್ಯ, ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ವರದಿ: ಆನಂದ್ ತಿಪಟೂರು
ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಕರ ಕೊರತೆಯನ್ನು ತುಂಬುವುದರ ಜೊತೆಗೆ ಈ ಭಾಗದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಆದ್ಯತೆಯಲ್ಲಿ ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಶಶೀಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಣ ಆಯುಕ್ತಾಲಯದಲ್ಲಿ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಸಿಬ್ಬಂದಿಗಳ ವರ್ಗಾವಣೆಗೆೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದ ಪ್ರಾಥಮಿಕ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಕುರಿತಂತೆ ಸದಸ್ಯ ಎಸ್.ವಿ. ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್. ಮಧು ಬಂಗಾರಪ್ಪ ಅವರು, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು…
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆಯನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್ ಅವರು ವಿಷಯ ಪ್ರಸ್ತಾಪಿಸಿ, ರಕ್ತಹೀನತೆ ಮತ್ತು ಅಪೌಷ್ಠಿಕತೆಯಿಂದ ಮಹಿಳೆಯರು ಮತ್ತು ಮಕ್ಕಳು ಬಳಲುತ್ತಿರುವ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಅನೇಮಿಯಾದಿಂದ ಬಳಲುತ್ತಿರುವ ಮಹಿಳೆಯರು ಮತ್ತು ಹದಿಹರೆಯದವರ ಸಂಖ್ಯೆ ಸುಮಾರು 2 ಕೋಟಿ ಎಂದು ಗುರುತಿಸಲಾಗಿದೆ. ಇದರ ನಿವಾರಣೆಗೆ 185 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, 2030 ರ ವೇಳೆಗೆ ರಾಜ್ಯದಲ್ಲಿ ಈ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಕುರಿತಂತೆ ಸದಸ್ಯ ಯು.ಬಿ. ವೆಂಕಟೇಶ್ ಪ್ರಸ್ತಾಪಿಸಿದರು. ಈ ಪ್ರಕರಣವನ್ನು ಈಗಾಗಲೇ ಸಿಓಡಿ ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಚಿಕನ್ ಇಲ್ಲದ ಬಿರಿಯಾನಿ ನೀಡಿದ ತಪ್ಪಿಗಾಗಿ 1000 ರೂ. ಪರಿಹಾರ ಮತ್ತು 150 ರೂ. ಬಿರಿಯಾನಿ ಹಣವನ್ನು ಗ್ರಾಹಕನಿಗೆ ನೀಡುವಂತೆ ಹೋಟೆಲ್ ಮಾಲಿಕನಿಗೆ ಗ್ರಾಹಕರ ನ್ಯಾಯಾಲಯ ಆದೇಶ ನೀಡಿದೆ. ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಅಡುಗೆ ಅನಿಲ ಖಾಲಿಯಾಯಿತು. ಹೀಗಾಗಿ ದಂಪತಿ ಐಟಿಐ ಲೇಔಟ್‌ನಲ್ಲಿರುವ ಹೋಟೆಲ್ ಪ್ರಶಾಂತ್‌ಗೆ ತೆರಳಿದರು. ಹೋಟೆಲ್‌ನಲ್ಲಿ 150 ರೂಪಾಯಿ ಕೊಟ್ಟು ಚಿಕನ್ ಬಿರಿಯಾನಿ ಖರೀದಿಸಿದರು. ದಂಪತಿ ಮನೆಗೆ ಬಂದು ಪಾರ್ಸೆಲ್ ತೆರೆದು ನೋಡಿದಾಗ ಬಿರಿಯಾನಿಯಲ್ಲಿ ಒಂದು ಚೂರು ಮಾಂಸ ಇರಲಿಲ್ಲ.
ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದು ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್ ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹವಾಮಾನ ವೈಪರೀತ್ಯದಿಂದ ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಬೋಟ್ ಮತ್ತೆಯಾಗಿದೆ. ಕೋಸ್ಟ್ ಗಾರ್ಡ್ ಸಿಬ್ಬಂದಿ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಗೋವಾ ಮೂಲದ ಬೋಟ್ ಪತ್ತೆಯಾಗಿದ್ದು, ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬೇಲಿಕೇರಿ ಬಂದರಿನಿಂದ 30 ನಾಟಿಕನ್ ಮೈಲಿದೂರದಲ್ಲಿ ಬೋಟ್ ಪತ್ತೆ ಮಾಡಿ 27 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ನವೆಂಬರ್ 29 ರಂದು ಗೋವಾದ ಪಣಜಿಯ IND-GA-01MM2233 ನೋಂದಣಿಯ ಕ್ರಿಸ್ಟೋ ಹೆಸರಿನ ಬೋಟ್ನ ಇಂಜಿನ್ ನಲ್ಲಿ ಸಮಸ್ಯೆಯಾಗಿ ತೇಲಿಹೋಗಿತ್ತು. ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಬಳಿಕ ಬೋಟ್ ನ ಮಾಲೀಕ ಕೂಡಲೇ ಕೋಸ್ಟ್‌ಗಾರ್ಡ್ಸ್ ಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಇದೀಗ ಬೋಟ್ ಪತ್ತೆ ಮಾಡಿದ್ದಾರೆ. 30 ನಾಟಿಕನ್ ಮೈಲಿ ದೂರದಲ್ಲಿ ಪತ್ತೆಯಾದ ಕ್ರಿಸ್ಟೋ ಬೋಟ್ ಸಿಕ್ಕಿದ್ದು, 27 ಮೀನುಗಾರರ ಸಮೇತ ಕ್ರಿಸ್ಟೋ ಬೋಟ್ ಬೇಲಿಕೇರಿ…
ತುಮಕೂರು: ಮಾಗಡಿ ತಾಲ್ಲೂಕು ಕುದೂರು ಹೋಬಳಿ ಬೆಟ್ಟಹಳ್ಳಿ ಗ್ರಾಮದ ರೈತರಿಗೆ ಸರ್ಕಾರಿ ಸೇವೆ ನೀಡಲು ಮಾಗಡಿ ಸರ್ವೆ ಇಲಾಖೆಯ ಸರ್ವೆಯರ್ ಸಂತೋಷ್ ಎಂಬಾತ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಮುಂಗಡವಾಗಿ 5 ಸಾವಿರ ರೂಪಾಯಿ ಲಂಚ ಪಡೆದುಕೊಂಡಿದ್ದಾನೆ. ಉಳಿದ ಲಂಚದ ಹಣವನ್ನು ತಾಲೂಕು ಕಚೇರಿ ಬಳಿ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ರೈತರಿಗೆ ಸರ್ಕಾರಿ ಸೇವೆ ಒದಗಿಸಲು ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ತುಮಕೂರು ಭೂಮಿ ವಸತಿ ಸಮಿತಿ, ನೈಜ ಹೋರಾಟಗಾರರ ತಂಡಕ್ಕೆ ನೊಂದ ರೈತರು ವಿಚಾರ ಮುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಹೋರಾಟಗಾರರು ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿಯ ಮೇರೆಗೆ ರಾಮನಗರ ಲೋಕಾಯುಕ್ತ DSP ಸುಧೀರ್ ರವರ ತಂಡದೊಂದಿಗೆ ಇನ್ಸ್ ಪೆಕ್ಟರ್ ಅನಂತರಾಮ್ ಹಾಗೂ ಸಿಬ್ಬಂದಿ ಆರೋಪಿ ಸರ್ವೆಯರ್ ಸಂತೋಷ್ ನನ್ನು ಬಂಧಿಸಿದ್ದಾರೆ. ಲೋಕಾಯುಕ್ತ SP ಅಯ್ಯಪ್ಪ ಮಾರ್ಗದರ್ಶನದಲ್ಲಿ ಇತರ ಅಧಿಕಾರಿಗಳು ದಾಳಿ ನಡೆಸಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.