Author: admin

ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ 5 ಕೋಟಿ ವಂಚಿಸಿ ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಚೈತ್ರಾ ಕುಂದಾಪುರ ಹಾಗೂ ಟೀಂ ವಿಚಾರಣೆಯನ್ನು ಅಧಿಕಾರಿಗಳು ಮುಕ್ತಾಯಗೊಳಿಸಿದ್ದಾರೆ. ಇಂದು ಚೈತ್ರಾ ಕುಂದಾಪುರ ಡ್ ಟೀಂನ ನೇರವಾಗಿ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿರುವ ಸೆರೆಮನೆಗೆ ಕಳುಹಿಸಲಿದ್ದು, ಆರೋಪಿಗಳ ಕಸ್ಟಡಿ ಅಂತ್ಯವಾಗುವ ಮತ್ತೆ ಕೋರ್ಟ್‌ಗೆ ಅವರನ್ನು ಹಾಜರುಪಡಿಸಲಿದ್ದಾರೆ.

Read More

ಉಡುಪಿ: ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳ ಸಭೆಯಲ್ಲಿ ಸಚಿವರು ಮಾತನಾಡಿದರು. ನಾಲ್ಕು ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷ ಇಡೀ ರಾಜ್ಯದಲ್ಲಿ ಜಯಭೇರಿ ಬಾರಿಸಿದರೂ ಉಡುಪಿ ಜಿಲ್ಲೆಯಲ್ಲಿ ನೆಲಕಚ್ಚಿತು. ಪಕ್ಷದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಮುಂದಿನ ದಿನಗಳಲ್ಲಿ ಸಮರ್ಥವಾಗಿ ಪಕ್ಷವನ್ನು ಕಟ್ಟೋಣ ಎಂದರು. ಉಡುಪಿ ಜಿಲ್ಲೆಯಲ್ಲಿ ಶೇಕಡಾ 95% ಮಂದಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಮಹಿಳೆಯರು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಇದರ ಲಾಭ ಸರ್ಕಾರಕ್ಕೆ ಸಿಗುವಂತೆ ಮಾಡಬೇಕು…

Read More

ಬೆಳಗಾವಿ: 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು – ಉಗರಖೋಡ, ಮೂಡಲಗಿ – ರಾಜಾಪೂರ, ನಿಪ್ಪಾಣಿ – ಸಿದ್ನಾಳ, ರಾಮದುರ್ಗ – ಸುರೇಬಾನ, ರಾಯಬಾಗ – ಜಲಾಲಪೂರ, ಸವದತ್ತಿ – ಸಿಧೋಗಿ. ಅಥಣಿ – ಐಗಿಳಿ, ಬೈಲಹೊಂಗಲ – ಉಡಿಕೇರಿ, ಬೆಳಗಾವಿ – ಬಸ್ತವಾಡ, ಚಿಕ್ಕೋಡಿ – ಅಂಕಲಿ, ಗೋಕಾಕ್ – ಮಕ್ಕಳಗೇರಿ, ಹುಕ್ಕೇರಿ – ಕುರಣಿ, ಕಾಗವಾಡ – ಮಂಗಸೂಳಿ ಗ್ರಾ.ಪಂಗಳು ಆಯ್ಕೆಯಾಗಿವೆ.

Read More

ಶಿವಮೊಗ್ಗ: ಹಳೆ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಈ ವೇಳೆ ಗಲಾಟೆಯಲ್ಲಿ 5 ಮಂದಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ದ್ರೌಪದಮ್ಮ ಸರ್ಕಲ್ ನಲ್ಲಿ ತಡರಾತ್ರಿ ನಡೆದಿದೆ. ಪವನ್ ಹಾಗೂ ಕಿರಣ್ ಎಂಬ ಎರಡು ಗುಂಪಿನಿಂದ ಗಲಾಟೆ ನಡೆದಿದ್ದು, ಚಾಕು ಇರಿತಕ್ಕೊಳಗಾದ ಐದು ಮಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯಲ್ಲಿಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ ನಡೆಯಲಿದೆ. ಇಡೀ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ.ಕೆ.ಹಳ್ಳಿ ಪಂಪ್ಹೌಸ್ಗೆ ಕನ್ನಡಪರ ಸಂಘಟನೆಗಳ ಮುತ್ತಿಗೆ ಹಾಕಲಿದ್ದು, ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಲಿದ್ದಾರೆ.

Read More

ಬೆಂಗಳೂರು: ರಾಜ್ಯವು ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಅಮಿತ್ ಶಾ ಅವರಿಗೆ ರಾಜ್ಯದ ಕಾವೇರಿ ಕುರಿತ ವಾಸ್ತವ ಸ್ಥಿತಿಯನ್ನು ವಿವರಿಸಿದ್ದೇನೆ. ಕಾವೇರಿ ಸಮಸ್ಯೆ, ಬರ ಇತ್ಯಾದಿ ವಿಷಯಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೇನೆ ಎಂದ ಅವರು; ಕಾವೇರಿ ನದಿ ನೀರಿನ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಬಹಳ ಅಸಡ್ಡೆ ಪ್ರದರ್ಶಿಸಿದೆ. ಕನ್ನಡನಾಡಿನ ರೈತರು, ಜನರ ವಿಷಯದಲ್ಲಿ ಚೆಲ್ಲಾಟವಾಡಿದೆ ಎಂದು ಕಿಡಿಕಾರಿದರು. ಒಂದು ಕಡೆ ನೀರಿನಲ್ಲ ಎಂದು ಸರಕಾರವೇ ಹೇಳುತ್ತದೆ, ಇನ್ನೊಂದೆಡೆ ತಮಿಳುನಾಡಿಗೆ ನೀರು ಹರಿಸುತ್ತದೆ. ಸುಪ್ರೀಂ ಕೋರ್ಟ್ ಮುಂದೆ ಅತ್ಯಂತ ತಡವಾಗಿ ಅರ್ಜಿಯನ್ನು ಹಾಕಿದೆ ಸರಕಾರ. ರೈತರ ಬಗ್ಗೆ ಇವರಿಗೆ ಬದ್ಧತೆ ಎನ್ನುವುದು ಇದ್ದಿದ್ದರೆ ಅರ್ಜಿ ಸಲ್ಲಿಸುವ ಬಗ್ಗೆ…

Read More

ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳೆ ಮಕ್ಕಳಿಗೆ ನೀಡುವ ಊಟದ ಅಕ್ಕಿ ಕದ್ದ ದುರ್ಘಟನೆ ನಡೆದಿದೆ. ವಡ್ಡಗೆರೆಯ ಲಲಿತಮ್ಮ ಮತ್ತು ಪುಟ್ಟಮ್ಮ ಎಂಬ ಇಬ್ಬರು ಅಡುಗೆ ಸಿಬ್ಬಂದಿಗಳು ಸುಮಾರು 50 ಕೆಜಿ ಅಕ್ಕಿ ಕದ್ದಿರುವ ಆರೋಪ ಕೇಳಿ ಬಂದಿದೆ. ಲಲಿತಮ್ಮ ಎಂಬ ಅಡುಗೆ ಸಿಬ್ಬಂದಿ ತನ್ನ ಮಗನಾದ ವೆಂಕಟೇಶ್ ಎಂಬುವರನ್ನು ಶಾಲೆಯ ಆವರಣಕ್ಕೆ ಕರೆಯಿಸಿ ಕೊಂಡು ಸುಮಾರು 59 ಕೆ.ಜಿ.ಯಷ್ಟು ಅಕ್ಕಿಯನ್ನು ಕದ್ದು ದ್ವಿಚಕ್ರ ವಾಹನದಲ್ಲಿ ಕೊಟ್ಟು ಕಳಿಸಿದ್ದಾರೆ. ವೆಂಕಟೇಶ್ ತನ್ನ ತಾಯಿಯ ಜೊತೆ ಕೆಲಸ ಮಾಡುವ ಪುಟ್ಟಮ್ಮನ ಮನೆಗೆ ತೆಗೆದುಕೊಂಡು ಹೋಗುವಾಗ ಗ್ರಾಮದ ಸಾರ್ವಜನಿಕರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಈ ಘಟನೆ ನಡೆದಿದೆ. ಬಹಳ ದಿನಗಳಿಂದ ಇಂತಹ ಕೆಲಸ ಮಾಡುತಿದ್ದನ್ನು ಕಂಡ ಗ್ರಾಮಸ್ಥರು ಇಂದು ಮಾಲು ಸಹಿತ ಹಿಡಿದಿದ್ದಾರೆ. ಕದ್ದ ಅಕ್ಕಿಯನ್ನು ಮನೆಗೆ ಕೊಂಡೊಯ್ದ ಸಿಬ್ಬಂದಿಗಳನ್ನು ತನಿಖೆ ಮಾಡದ…

Read More

ಬೆಂಗಳೂರು: ಕರ್ನಾಟಕ ರಾಜ್ಯವು ಈಗ ಅಭಿವೃದ್ಧಿಯ ಹೊಸ ಯುಗದತ್ತ ಸಾಗುತ್ತಿದೆ. ಸಾಮಾಜಿಕ ಸಮಾನತೆ ಮತ್ತು ಸಾಮರಸ್ಯದ ಜೊತೆಗೆ, ರಾಜ್ಯವು ಕ್ರಿಯಾತ್ಮಕ ಮೂಲಸೌಕರ್ಯ, ಪರಿಣಾಮಕಾರಿ ಪರಿಸರ ವ್ಯವಸ್ಥೆ ಮತ್ತು ಒಟ್ಟಾರೆ ಧನಾತ್ಮಕ ಆರ್ಥಿಕ ವಾತಾವರಣವನ್ನು ಹೊಂದಿಂದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಆಯೋಜಿಸಿದ್ದ “ವಿಷನ್ 2030 ಕರ್ನಾಟಕ” ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯವು ಭಾರತದ ಪ್ರಗತಿಪರ ರಾಜ್ಯವಾಗಿದೆ ಮತ್ತು ದೇಶದ ಜಿಡಿಪಿಗೆ ಗಣನೀಯವಾಗಿ ಕೊಡುಗೆ ನೀಡುತ್ತಿದೆ. ಕರ್ನಾಟಕ ರಾಜ್ಯವು ಜ್ಞಾನ ಮತ್ತು ವಿಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗಳ ಕೇಂದ್ರವಾಗಿದೆ ಮತ್ತು ಸಾಫ್ಟ್ವೇರ್ನ ಅತಿದೊಡ್ಡ ರಫ್ತುದಾರ. ದೇಶದಲ್ಲಿ ಬಂಡವಾಳ ಹೂಡಿಕೆಯನ್ನು ಪಡೆಯುವ ರಾಜ್ಯಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಕರ್ನಾಟಕ ರಾಜ್ಯವು ಕಳೆದ ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ 6 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯನ್ನು ಸ್ವೀಕರಿಸಿದೆ ಎಂದು…

Read More

ಬೆಂಗಳೂರು: ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಂದ್, ಪ್ರತಿಭಟನೆ ಮಾಡುವುದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ ಎಂದಿದ್ದಾರೆ. ಯಾರೂ ಬೇಕಾದರೂ ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ , ಜನ ಸಮುದಾಯಕ್ಕೆ ತೊಂದರೆ ಮಾಡಬಾರದು. ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದಲ್ಲಿ ಅದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದರು.

Read More

ಬೆಂಗಳೂರು: ಸಂಕಷ್ಟ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಹೆಬ್ಬಾಳದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ಮತ್ತು ನಾಮ ನಿರ್ದೇಶಿತ ಸದಸ್ಯರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ರಚಿಸಿದ ನಂತರ ಕೇಂದ್ರ ಅಥವಾ ಸಿ.ಡಬ್ಲ್ಯೂ ಎಂ ಎ. ಬರ ಪರಿಸ್ಥಿತಿಯಲ್ಲಿ, ಜಲಾಶಯಗಳಲ್ಲಿ ನೀರಿನ ಲಭ್ಯತೆ ಕೊರತೆ ಇರುವ ಸಂದರ್ಭದಲ್ಲಿ ಯಾವ ಮಾನ ದಂಡಗಳನ್ನು ಅನುಸರಿಸಬೇಕು ಎಂಬ ಸೂತ್ರವೇ ಸಿದ್ದಪಡಿಸಿಲ್ಲ ಹಾಗಾಗಿ ಕರ್ನಾಟಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.. ರಾಜ್ಯದಲ್ಲಿ ಬರ ಆವರಿಸಿದೆ . 195 ಜಿಲೆಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು ಪರಿಹಾrಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತಿದೆ . ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ದವಾಗಿದೆ ಎಂದರು.

Read More