Subscribe to Updates
Get the latest creative news from FooBar about art, design and business.
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
- ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
- ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
- ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
- ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
Author: admin
ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣದ ವಿಚಾರಣೆಯನ್ನ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ನಡೆಸುತ್ತಿದೆ. ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸಾಕ್ಷ್ಯಾಧಾರಗಳನ್ನು ಒದಗಿಸಲು ಸೂಚಿಸುವಂತೆ ದೂರುದಾರರು ಮನವಿ ಮಾಡಿದ್ದರು. ದೂರುದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ತನಿಖಾ ಆಯೋಗ, ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವರಾಜ ದಡೇಸೂರು, ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವತ್ಥ ನಾರಾಯಣ್, ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಮೂರ್ತಿ ಬಿ.ವೀರಪ್ಪ ಅವರ…
ಬೆಂಗಳೂರು: ಕೊರೊನಾ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಕುಟುಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಅದರಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ಹೊಸ ವರ್ಷಾಚರಣೆ ದಿವಸ ಕ್ಲಬ್ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ವೈನ್ ಶಾಪ್ ಗಳಿಗೆ ರಾತ್ರಿ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಭದ್ರತೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಪಿಐ, 600 ಸಬ್ಇನ್ಸ್ಪೆಕ್ಟರ್ಗಳು, 600 ಎಎಸ್ಐ, 1800 ಹೆಡ್ಕಾನ್ಸ್ಟೇಬಲ್ಸ್, 5,200 ಕಾನ್ಸ್ಟೇಬಲ್ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು. ಫ್ಲೈ ಓವರ್ ಮೇಲೆ ವೇಗವಾಗಿ ವಾಹನ ಚಲಾಯಿಸುವುದು…
ಬೆಂಗಳೂರು: ಕೋವಿಡ್ ರೂಪಾಂತರಿ ಜೆಎನ್.1 ಉಪತಳಿ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಸಂಬಂಧ ಡಿಸೆಂಬರ್ 26ರಂದು ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಉಪತಳಿ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಡಿಸೆಂಬರ್ 25ರ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ. ಇದು ಎಕ್ಸ್ ಪೆಕ್ಟ್ ಮಾಡಲಾಗಿತ್ತು. Variant of interest ಅಂತ WHO ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು. ಸಿಎಂ ಎಚ್ಚರಿಕೆಯಿಂದ ಇರಿ ಎಂದು ಸಲಹೆ…
ಬೆಂಗಳೂರು: ” ಐದು ಬೆರಳು ಸೇರಿ ಒಂದು ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು. ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕರ್ನಾಟಕ ಸಮೃದ್ಧವಾಯಿತು. ಕರ್ನಾಟಕ ಪ್ರಬುದ್ಧವಾಯಿತು” – ಇದು ಯುವ ನಿಧಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಜೆಪಿ, ಜೆಡಿಎಸ್ ಗೆ ಟಾಂಗ್ ನೀಡಲು ಹೇಳಿದ ಕವನ. ನನಗೆ ಹೆಚ್ಚು ಖುಷಿ ಕೊಟ್ಟಿರುವ ಯೋಜನೆ ಇದಾಗಿದೆ. ಈ ಯೋಜನೆ ಮೂಲಕ ಕನಸಿನ ಕರ್ನಾಟಕದ ಆಸೆ ನನಗೂ ಸಿಎಂಗೂ ಇದೆ. ಈಗಿನ ಯುವಕರು ಅದೃಷ್ಟವಂತರು. ಯಾಕೆಂದರೆ ನನಗೂ ಸಿದ್ದರಾಮಯ್ಯ ಅವರಿಗೆ ಇಂತಹ ಭಾಗ್ಯ ಇರಲಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ ಆದಾಗ ಮಹಿಳೆಯರು, ಯುವಕರ ಮೇಲೆ ನಂಬಿಕೆ ಇಡಬೇಕು ಅಂತ ಹೇಳಿದ್ದೆ ಎಂದರು. ಬಿಜೆಪಿ (BJP) 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು…
ಜಾತಿಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿ ಎರಡು ಸದನಗಳಲ್ಲಿ ಮಂಡಿಸಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಸರ್ಕಾರಕ್ಕೆ ಆಗ್ರಹಿಸಿದೆ. ಜಾತಿಗಣತಿ ವಿಷಯದಲ್ಲಿ ಕೆಲವು ಸಮುದಾಯಗಳು ಅಪಸ್ವರ ಎತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಾತಿಯ ಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಹಾಗೂ ಎರಡು ಸದನಗಳಲ್ಲಿ ಮಂಡಿಸಿ ಚರ್ಚೆ ಮಾಡಬೇಕು ಎಂದು ಒತ್ತಾಯಿಸಿತು. ನಿವೃತ್ತ ಐಎಎಸ್ ಅಧಿಕಾರಿ ಜಾಗತಿಕ ಲಿಂಗಾಯತ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ್ ಜಮಾದಾರ ಮಾತನಾಡಿ, 2014ರಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಬಜೆಟ್ ದಿಂದ 160 ಕೋಟಿಗಳನ್ನು ಮೀಸಲಿಟ್ಟು ಈ ವರದಿಯನ್ನು ಸಿದ್ಧಪಡಿಸಿತ್ತು. ಆದರೆ 8 ವರ್ಷಗಳ ಕಾಲ ಈ ವರದಿ ಸರ್ಕಾರ ಸ್ವೀಕರಿಸದೆ ಇರಲು ಕಾರಣವೇನು ಇದನ್ನು ಕೂಡಲೇ ಸ್ವೀಕರಿಸಬೇಕು ಹಾಗೂ ಸದನಗಳಲ್ಲಿ ಚರ್ಚೆ ಆಗಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಒತ್ತಾಯ ಮಾಡುತ್ತದೆ ಎಂದರು. ಇಲ್ಲಿವರೆಗೆ ಸ್ವೀಕರಿಸದೆ ಇರುವ ಕಾರಣ ಇದರ ಹಿಂದೆ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಖಿಲ…
ಮೈಸೂರು: ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, “ಸೋಮಾರಿ ಸಿದ್ದ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಮಾಡಿದ್ದು, ಈ ಸಂಬಂಧ . ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ, ಸಂಸದ ಪ್ರತಾಪ್ ಸಿಂಹ ತಮ್ಮ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಎಫ್ ಐಆರ್ ದಾಖಲಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿದೆ. ಪ್ರತಾಪ್ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ನಡಿತಾ ಇದೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು…
ಕನೌಜ್: ರೌಡಿ ಶೀಟರ್‌ನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಯ ಕುಟುಂಬಸ್ಥರು ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ ವಿಷುಂಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಪೇದೆ ಸಚಿನ್ ರಾಠಿ (28) ಅವರಿಗೆ ಗುಂಡು ತಗುಲಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್ ಕುಮಾರ್ ಆನಂದ್ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಆರೋಪಿ ಅಶೋಕ್ ಕುಮಾರ್ ಅಲಿಯಾಸ್ ಮುನ್ನಾ ಯಾದವ್ ಮತ್ತು ಆತನ ಮಗನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಅವರನ್ನೂ ಕನೌಜ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕ್ ಕುಮಾರ್ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ 20 ಪ್ರಕರಣಗಳು ದಾಖಲಾಗಿತ್ತು. ಆತನ ವಿರುದ್ಧ ಜಾಮೀನು ರಹಿತ ವಾರೆಂಟ್ ಇದೆ ಎಂದು ಎಸ್ಪಿ ತಿಳಿಸಿದ್ದಾರೆ. ಅಶೋಕ್ ಮನೆಯಲ್ಲಿರುವ ವಿಚಾರ ತಿಳಿದು ಪೊಲೀಸರು ಆತನ ಮನೆಗೆ ತೆರಳಿದ್ದರು. ಈ ವೇಳೆ ಅಶೋಕ್ ಕುಮಾರ್, ಆತನ ಪತ್ನಿ ಮತ್ತು ಮಗ ಪೊಲೀಸ್…
ಚಿಕ್ಕಬಳ್ಳಾಪುರ: ಹೊಸ ವರ್ಷವನ್ನು ಸಂಭ್ರಮಿಸಲು ಜನ ಸಿದ್ಧರಾಗಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಆದೇಶಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಂದಿಗಿರಿಧಾಮದಲ್ಲಿ ಡಿಸೆಂಬರ್ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ.
ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವಕ ಹಾಗೂ ಯುವತಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಕಾಂಗ್ರೆಸ್ ಕೊಟ್ಟಾಗ, ಅದನ್ನು ಜಾರಿ ಮಾಡಲು ಆಗುವುದಿಲ್ಲ. ಜಾರಿಯಾದರೆ ಕರ್ನಾಟಕ ಸರ್ಕಾರ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದರು. ಆದರೆ, ರಾಜ್ಯ ದಿವಾಳಿ ಆಗಿಲ್ಲ, ಐದು ಗ್ಯಾರಂಟಿ ಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಜಾರಿ ಮಾಡಿದ…