Author: admin

ಸರಗೂರು:  ಶನಿವಾರ ಮತ್ತು ಭಾನುವಾರ ರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 3 ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ತಾಲೂಕಿನ ಹೂವಿನಕೊಳ ಗ್ರಾಮದಲ್ಲಿ ನಡೆದಿದೆ. ನಂಜು ಮಣಿ ಎಂಬುವರಿಗೆ ಸೇರಿದ 3 ಎಕರೆಯಲ್ಲಿ ಜಮೀನಲ್ಲಿ ಬಾಳೆ ತೋಟದಲ್ಲಿನ 4,000  ಗಿಡಗಳ ಪೈಕಿ 2,000 ಗಿಡಗಳು ನೆಲಸವಾಗಿದೆ. ಇದರಿಂದ ಕೈಬಂದ ಅಂತಹ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿಯಾಗಿದೆ ಎಂದು ನಂಜುಮಣಿ ಅಳಲು ತೋಡಿಕೊಂಡರು. ಕೆಲವೊಂದಿಷ್ಟು ನಿಂತಿರುವ ಬಾಳೆ ಗಿಡಗಳು ರಸಭಸದ ಗಾಳಿಗೆ ಸಂಪೂರ್ಣವಾಗಿ ಬೆಂಡಾಗಿವೆ. 4,000 ಸಾವಿರ ಗಿಡ ನೆಟ್ಟು10 ತಿಂಗಳಿಂದ ಪಾಲನೆ ಪೋಷಣೆ ಮಾಡಿ ಉತ್ತಮ ರಿತಿ ಬೆಳೆಸಿದ್ದರು. ಈಗಾಗಲೇ ಬಾಳೆಗಿಡ ಗೊನೆ ಬಿಡುವುದಕ್ಕೆ ಪ್ರಾರಂಭಿಸಿದ್ದವು. ಸಸಿ ಗೊಬ್ಬರ ಕೂಲಿ ನಿರ್ವಹಣೆ ಸೇರಿ ಪ್ರತಿ ಎಕರೆಗೆ 1ಲಕ್ಷ ರೂ.ನಂತೆ ಸುಮಾರು 4 ಲಕ್ಷ ರೂ. ವರೆಗೂ ಖರ್ಚು ಮಾಡಿದ್ದರು. ಉತ್ತಮ ಲಾಭದ ನಿರೀಕ್ಷೆ ಹೊಂದಿದ್ದರು. ಅದರೆ ಈಗ ಬಿರುಸಾದ ಗಾಳಿ ಮಳೆಗೆ ಆರ್ಭಟಕ್ಕೆ ಕಂಗಾಲಾಗಿದ್ದಾರೆ. ಅದಕ್ಕಾಗಿ…

Read More

ಮುಂಬೈ:  ಅರಬ್ಬಿ ಸಮುದ್ರದಲ್ಲಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಮೂವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ. ಈ ದೋಣಿಯು ಖಾಂಡೇರಿಯಿಂದ ಅಲಿಬಾಗ್ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ. ದುರ್ಘಟನೆ ವೇಳೆ 8 ಮಂದಿ ಮೀನುಗಾರರು ದೋಣಿಯಲ್ಲಿದ್ದರು. ಈ ಪೈಕಿ 5 ಮಂದಿ ಈಜಿ ದಡ ಸೇರಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ.  ಕಾಣೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ನಾಪತ್ತೆಯಾಗಿರುವ ಮೂವರು ಮೀನುಗಾರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಗೆದ್ದ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕು ಎಂದರೆ ಸುರ್ಜೆವಾಲ ಹತ್ತಿರ ಹೋಗುವ ಸ್ಥಿತಿ ಉದ್ಭವವಾಗಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರು ಸಿಎಂ ಅಂತ ಇಲ್ಲಿಯವರೆಗೆ ನಾವು ಅಂದುಕೊಂಡಿದ್ದೆವು. ಆದರೆ ಸೂಪರ್ ಸಿಎಂ ಬಗ್ಗೆ ಜನ ಚರ್ಚೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಗೆದ್ದ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕೆಂದರೆ ಸುರ್ಜೆವಾಲರ ಹತ್ತಿರ ಹೋಗುವ ಸ್ಥಿತಿ ಉದ್ಭವವಾಗಿದೆ ಎಂದರು. ಹೀಗಾಗಿಯೇ ರಾಜ್ಯ ಸರ್ಕಾರ ಯಾರಿಗೆ ಸಿಎಂ ಸ್ಥಾನ ಕೊಟ್ಟಿದೆ ಎಂದು ಜನ ಚರ್ಚೆ ಮಾಡುತ್ತಿದ್ದಾರೆ. ಅದರ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಲಕ್ನೋ: ಯೂಟ್ಯೂಬ್ ಚಾನೆಲ್ ನಲ್ಲಿ ಅಶ್ಲೀಲ, ನಿಂದನಾತ್ಮಕ ಕಂಟೆಂಟ್ ವಿಡಿಯೋ ಹಂಚಿಕೊಳ್ಳುತ್ತಿದ್ದ ಖ್ಯಾತ ಯೂಟ್ಯೂಬರ್ ವೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಮೀರ್ ಎಂಬಾತ ಬಂಧಿತ ಯೂಟ್ಯೂಬರ್ ಆಗಿದ್ದಾನೆ. 5.83 ಮಿಲಿಯನ್ ಚಂದಾದಾರರನ್ನು ಹೊಂದಿರುವ ಈತನ ಯೂಟ್ಯೂಬ್ ಚಾನೆಲ್ ನಲ್ಲಿ ಅಶ್ಲೀಲ, ನಿಂದನೀಯ ಕಂಟೆಂಟ್ ಹಾಗೂ ಹಾದಿತಪ್ಪಿಸುವ ಕಂಟೆಂಟ್ ಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಅಮನ್ ಠಾಕೂರ್ ಎಂಬವರು ಸಮಾಜದ ಸ್ವಾಸ್ತ್ಯ ಕದಡುತ್ತಿರುವ ಯುಟ್ಯೂಬರ್ ಮೊಹಮ್ಮದ್ ಆಮೀರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದರು. ಹಾಗೆಯೇ ಮೊಹಮ್ಮದ್ ಅಮೀರ್‌ ನ ವಿಡಿಯೋಗಳನ್ನು ಮೊರಾದಾಬಾದ್ ಮತ್ತು ಉತ್ತರ ಪ್ರದೇಶ ಪೊಲೀಸರ ಗಮನಕ್ಕೆ ತಂದಿದ್ದರು. ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್: ಟಾಪ್ ರಿಯಲ್ ಟೀಮ್ ಎಂಬ ಯುಟ್ಯೂಬ್ ಚಾನೆಲ್ ನಡೆಸುತ್ತಿರುವ ಅಮೀರ್ ಹಾಗೂ ಆತನ ತಂಡ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ವಿಡಿಯೋಗಳನ್ನು ಫೋಸ್ಟ್ ಮಾಡುವ ಮೂಲಕ ವ್ಯಾಪಕ ಟೀಕೆಗಳಿಗೆ ಗುರಿಯಾಗಿದೆ. ಸಂತರು ಮತ್ತು ದೇವತೆಗಳ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ ಮಾಡುತ್ತಿದ್ದನು.…

Read More

ತಿರುಪತಿ: ತಿರುಪತಿ ತಿರುಮಲ ಬೆಟ್ಟದಲ್ಲಿ ಬೈಕ್ ಸವಾರನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ಬೈಕ್ ವೊಂದು ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ಹೊಂಚುಹಾಕಿ ಬೇಟೆಗಾಗಿ ಕಾಯುತ್ತಿದ್ದ ಚಿರತೆ ಏಕಾಏಕಿ ರಸ್ತೆಗೆ ಹಾರಿ ಬೈಕ್ ನನ್ನು ಹಿಡಿಯಲು ಮುಂದಾಗಿದೆ. ಆದರೆ ಬೈಕ್ ವೇಗವಾಗಿ ಇದ್ದುದರಿಂದಾಗಿ ಚಿರತೆಗೆ ಬೈಕ್ ಸಿಕ್ಕಿಲ್ಲ. ಹೀಗಾಗಿ ಬೈಕ್  ಸವಾರ ಸ್ವಲ್ಪದರಲ್ಲಿ ಪಾರಾಗಿದ್ದಾನೆ. ಚಿರತೆ ಬೈಕ್ ನ ಮೇಲೆ ಹಾರುತ್ತಿರುವ ದೃಶ್ಯವನ್ನು ಇತರ ವಾಹನದಲ್ಲಿದ್ದವರು ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗ್ತಿದೆ.  ಅಂದ ಹಾಗೆ  ತಿರುಮಲದಲ್ಲಿ ಚಿರತೆ ದಾಳಿ ಇದೇ ಮೊದಲೇನಲ್ಲ.. ಈ ಹಿಂದೆ ಅಲಿಪಿರಿಯಲ್ಲಿ 350ನೇ ಮೆಟ್ಟಿಲು ಬಳಿ ಚಿರತೆ ಕಾಣಿಸಿಕೊಂಡಿತ್ತು. ತಿರುಪತಿ-ತಿರುಮಲ ಮೆಟ್ಟಿಲುಗಳ ಮೇಲೆ ಚಿರತೆ ಕಾಣಿಸಿಕೊಂಡಿದ್ದು, ಈ ಸುದ್ದಿ ಕೇಳಿ ಜನರು ಭಯಭೀತರಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಕಲಬುರಗಿ:  ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದ ಪರಿಣಾಮ ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವಡೆ ಮನೆಗಳ ಗೋಡೆ ಕುಸಿದಿದ್ದು, ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆಗಳು ಸಂಭವಿಸಿವೆ. ಕಮಲಾಪುರ ತಾಲೂಕಿನ ಕುದಮೂಡ ಗ್ರಾಮದ ಸೇತುವೆ ಮೇಲೆ ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಚಿತ್ತಾಪುರ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು, ಅಪಾರ ಹಾನಿ ಉಂಟಾಗಿದೆ. ರಸೂಲ್ ಸಾಬ್ ಡೋಂಗಾ ಅವರಿಗೆ ಸೇರಿದ ಮನೆಯ ಮೂರು ಕೋಣೆಯ ಗೋಡೆ ಹಾಗೂ ಪುಥಲಿ ಬೇಗಂ ಡೋಂಗಾ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಯಾವುದೇ ಕುರುಹು  ಕಂಡಿಬಂದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಪಷ್ಟನೆ ನೀಡಿದ್ದಾರೆ. ಬಾಲಕಿಗೆ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು , ವೈದ್ಯಾಧಿಕಾರಿಗಳು ಕುಲಂಕುಶವಾಗಿ ವೈದ್ಯಕೀಯ ತಪಾಸಣೆ ನಡೆಸಿ ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ರೀತಿಯ ಪುರಾವೆ ಕಂಡು ಬಂದಿಲ್ಲ ಎಂದು ವರದಿ ನೀಡಿದ್ದಾರೆ. ಮಗುವಿಗೆ ಆದ ಗಾಯಗಳು ಆಕಸ್ಮಿಕವಾಗಿ ಯಾವುದೋ ವಸ್ತು ಚುಚ್ಚಿದ್ದರಿಂದ ಕೇವಲ ಮೇಲ್ಭಾಗದಲ್ಲಿ ಗಾಯವಾಗಿದೆ ಎಂದು ಪ್ರಾಥಮಿಕ ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮಗುವಿಗೆ ಮತ್ತು ಮಗುವಿನ ಪಾಲಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮಕ್ಕಳ ರಕ್ಷಣಾ ಘಟಕದಲ್ಲಿ ಆಪ್ತ ಸಮಾಲೋಚನೆ ನಡೆಸಿದ್ದು, ಮಗುವಿನ…

Read More

ಸರಗೂರು:  ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಸದಾ ಮುಂದಿದ್ದು ಬದ್ಧತೆಯಿಂದ ಕೆಲಸ ಮಾಡುವ,  ಉತ್ತಮ ವಿದ್ಯಾರ್ಹತೆ ಪಡೆದ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿದ್ದಾರೆ ಎಂದು ಸರಗೂರು ಲಯನ್ಸ್ ಅಕಾಡೆಮಿ ಷೇರುದಾರರಾದ ಸುರೇಶ್ ಜೈನರವರು ಅಭಿಪ್ರಾಯಪಟ್ಟರು. ತಾಲೂಕಿನ ಹಂಚೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಉನ್ನತೀಕರಿಸಿದ ಹಳಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಉಚಿತವಾಗಿ ಕ್ರೀಡಾ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು. ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಸಾಕಷ್ಟು ಸೌಕರ್ಯಗಳು ದೊರಕುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಲು ಶ್ರಮಿಸಬೇಕು  ಎಂದು ಕರೆ ನೀಡಿದರು. ಶಾಲೆಯ ಶಿಕ್ಷಕ ರಂಗನಾಥ್ ಡಿ. ಮಾತನಾಡಿ, ಭಾರತೀಯ ಪರಂಪರೆಯಲ್ಲಿ ದಾನಶೀಲ ಮೌಲ್ಯಗುಣ ಮುಖ್ಯವಾಗಿದ್ದು, ಇಂತಹ ಕಾರ್ಯಗಳಿಂದ ಸಮಾಜದ ಸಮತೋಲನ  ಸ್ವಲ್ಪ ಮಟ್ಟಿಗಾದರೂ ಸಾಧ್ಯವಾಗುತ್ತದೆ. ಹಾಗೂ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅಂಕಣದಲ್ಲಿ ಉತ್ತಮ ಆಟವಾಡುವುದರ ಮೂಲಕ ವ್ಯಕ್ತಪಡಿಸಬೇಕು ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ವಿಜೇತರಾದ ಮಹೇಂದ್ರ…

Read More

ಔರಾದ:  ಪಾಲನೆ ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಸೂಕ್ತ ಪರಿಹಾರದ ವ್ಯವಸ್ಥೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಇದರಿಂದ ಮಕ್ಕಳು ಮಾನಸಿಕ ದೈಹಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸಂಯೋಜಕ ರಮೇಶ್ ಸೂರ್ಯವಂಶಿ ಹೇಳಿದರು. ತಾಲೂಕಿನ ಚಿಂತಾಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಷಕತ್ವ ಸಂಸ್ಥೆಗಳಪಾಲುದಾರರಿಗೆ ನಡೆದ ಜಿಲ್ಲಾಮಟ್ಟದ ಸಮಾಲೋಚನೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪೋಷಕತ್ವ ಎಂದರೆ ಕಾನೂನಿನ ಪ್ರಕಾರ ಅನಾಥರು ಎಂದು ಪರಿಗಣಿಸಿದ ಮಕ್ಕಳು ಪರಿವಾರದ ಆರೈಕೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕ ಪರಿವಾರದ ಮೂಲಕ ಸಿಗುವ ಕಾಳಜಿಯಾಗಿದೆ. ಬಾಲನ್ಯಾಯಕಾಯ್ದೆ– 2015 ತಿದ್ದುಪಡಿ 21ರ ಅನ್ವಯ ಪೋಷಕತ್ವ ಯೋಜನೆ 2022 ಅನುಷ್ಠಾನಗೊಳ್ಳಲು ಸರ್ಕಾರ ಜನರ ಮಧ್ಯೆ ಸ್ವಯಂ ಸೇವಾ ಸಂಸ್ಥೆಗಳು ಸೇತುವೆಯಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಡಾನ್ ಬೋಸ್ಕೊ ಕಾರ್ಯ ಶ್ಲಾಘನೀಯ ಎಂದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸಿಮಪ್ಪ ಆರೋಗ್ಯ ಸಿಬ್ಬಂದಿ, ವಲಯ ಮಟ್ಟದ ಆಶಾ ಕಾರ್ಯಕರ್ತರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ತಿಪಟೂರು: ತಾಲ್ಲೂಕಿನ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್, ಸಿರಿಧಾನ್ಯಗಳಾದ ನವಣೆ, ಸಾವೆ, ಹಾರಕ, ಊದಲು, ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು ತಿಳಿಸಿದರು. ಸಿರಿಧಾನ್ಯ ಬೆಳೆಗಾರರ ಉತ್ತೇಜನಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗ್ರಾಮಮಟ್ಟದಲ್ಲಿ ರೈತರನ್ನು ಒಟ್ಟುಗೂಡಿಸಿ ಸಿರಿಧಾನ್ಯ ಬೆಳೆಗಳ ಉಪಯೋಗಗಳ ಬಗ್ಗೆ ಉಚಿತ ಮಾಹಿತಿ ತರಬೇತುಗಳನ್ನು ಕೊಡಿಸುವುದಲ್ಲದೇ, ಉಚಿತ ಸಿರಿ ಅದ್ಯಯನ ಪ್ರವಾಸಗಳನ್ನು ಏರ್ಪಡಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದು. ಇಷ್ಟಲ್ಲದೇ ಕೃಷಿ ಇಲಾಖೆಯ ವತಿಯಿಂದ 1 ಎಕರೆಯಿಂದ 2.5 ಎಕರೆಯಷ್ಟು ಸಿರಿದಾನ್ಯ ಬೆಳೆಯುವ ರೈತನೋರ್ವನಿಗೆ ಕನಿಷ್ಟ 4 ಸಾವಿರದಿಂದ ಗರಿಷ್ಟ 10 ಸಾವಿರದವರೆಗೆ ಪ್ರೋತ್ಸಾಹಧನ ಸಿಗುತ್ತದೆಂದು ತಿಳಿಸಿದರು. ಬಳಿಕ ಮಾತನಾಡಿದ ತಾಲ್ಲೂಕು ಯೋಜನಾಧಿಕಾರಿ ಕೆ.ಉದಯ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More