Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯನ್ನು ಪ್ಲಾಸ್ಕ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಮಾಡಿ ಬಳಿಕ ಶವವನ್ನು ಸ್ಥಳಾಂತರ ಮಾಡಲು ಹೋಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸೀಗೆಹಳ್ಳಿ ನಿವಾಸಿ ತೇಜೇಶ್ವರ್ ಕೊಲೆಯಾದ ವ್ಯಕ್ತಿ. ಆರೋಪಿ ಧರ್ಮೇಂದ್ರ ಸಿಂಗ್ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮದ್ಯ ವ್ಯಸನಿಯಾಗಿದ್ದ. ಬೆಳಿಗ್ಗೆಯೇ ಮದ್ಯ ಸೇವಿಸಿ ಕೆಲಸಕ್ಕೆ ತೆರಳುತ್ತಿದ್ದ. ಇದರಿಂದ ತೇಜೇಶ್ವರ್ ನನ್ನು ಹೋಟೆಲ್ನ ಸೆಕ್ಯೂರಿಟಿ ಕೆಲಸದಿಂದ ತೆಗೆದುಹಾಕಲಾಗಿತ್ತು. ಇಬ್ಬರು ನೇಪಾಳ ಮೂಲದವರಾಗಿದ್ದಾರೆ. ಬುಧವಾರ ಬೆಳಿಗ್ಗೆ ಆರೋಪಿ ಸೇರಿದಂತೆ ನಾಲ್ವರು ಬಾರ್ ವೊಂದಕ್ಕೆ ತೆರಳಿ ಮದ್ಯ ಸೇವಿಸಿದ್ದರು. ಮಧ್ಯಾಹ್ನದ ಬಳಿಕ ಕೊಲೆಯಾದ ವ್ಯಕ್ತಿ ಹಾಗೂ ಆರೋಪಿ ಮನೆಯೊಂದರಲ್ಲಿ ಪಾರ್ಟಿ ನಡೆಸುತ್ತಿದ್ದರು. ಆಗ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ, ತೇಜೇಶ್ವರ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರ ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ನೀರು ಬಿಟ್ಟು ತಪ್ಪು ಮಾಡಿತು. ಈಗ ಕೋರ್ಟ್ ಮುಂದೆ ಸಮರ್ಪಕವಾದ ವಾದ ಮಂಡಿಸುವಲ್ಲಿ ವಿಫಲವಾಯಿತು. ಸರಿಯಾಗಿ ಹೋಂ ವರ್ಕ್ ಮಾಡದೆ ಕೋರ್ಟ್ ಮೆಟ್ಟಿಲೇರಿರುವುದು ಸಾಬೀತಾಗಿದೆ ಎಂದರು. ಕೋರ್ಟ್ ಆದೇಶಕ್ಕೂ ಮೊದಲೇ ನೀರು ಬಿಟ್ಟು ತಪ್ಪು ಮಾಡಿದರು. ಈಗ ಕೋರ್ಟ್ ನಲ್ಲಿ ಸರಿಯಾಗಿ ವಾದ ಮಂಡಿಸದೇ ವಿಫಲರಾದರು. ನಾವು ನೀಡುವ ಅಂಕಿ ಅಂಶಗಳ ಮೇಲೆ ಕೋರ್ಟ್ ಆದೇಶ ನೀಡುತ್ತದೆ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ವಾದ ಮಾಡದಿರುವುದು ಹಿನ್ನಡೆಗೆ ಕಾರಣವಾಗಿದೆ ಎಂದರು. ಸರ್ಕಾರ ಮೊದಲಿನಿಂದಲು ಕಾವೇರಿ ವಿಚಾರದಲ್ಲಿ ತಪ್ಪು ಮಾಡಿಕೊಂಡು ಬಂದಿದೆ. ಡಿಎಂಕೆ ಹಾಗೂ ಕಾಂಗ್ರೆಸ್ ನಡುವೆ ಹೊಂದಾಣಿಕೆ ಕೂಡಾ ಇದಕ್ಕೆ ಒಂದು ಕಾರಣ ಎಂದು…
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲುಎಂಎ ಆದೇಶ ಅಂತಿಮವಲ್ಲ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್ ಗಳ ನೀರಿನಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್ ಗಳಲ್ಲಿ ನ ನೀರಿನ ಮಟ್ಟ ಲೆಕ್ಕ ಹಾಕಬೇಕು ಎಂದು ಆಗ್ರಹಿಸಿದರು. ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಮೆಲ್ಮನವಿ ಸಲ್ಲಿಸಬೇಕಿತ್ತು. ಸರ್ಕಾರ ಎರಡು…
ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಒತ್ತಾಯ ಮಾಡಿರುವ ಅವರು; ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಹಾಗೂ ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಪಡಿಸಿದರು. ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ರಾಜ್ಯ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ…
ದೆಹಲಿ: “ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್ ಮೆಂಟ್ ಆಗಿದೆ. ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ʼನೀರಿನ ಕಳ್ಳʼ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರು ಬುಧವಾರ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯೆ ನೀಡಿದರು. “ಈಗ ಈಶ್ವರಪ್ಪ ಅವರು ಎಲ್ಲಿದ್ದಾರೆ? ನಾನೆಲ್ಲಿ ಇದ್ದೀನಿ? ವಿಧಾನಸಭೆಯಲ್ಲಿ ನನ್ನ ಅಪ್ಪನ ಬಗ್ಗೆ ಮಾತಾಡಿದ್ದರು. ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ, ತೆಗೆದುಕೊಳ್ಳಲಿ ಎಂದರು. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಕಾವೇರಿ ನೀರನ್ನು ಒತ್ತೆ ಇಟ್ಟಿದ್ದಾರೆ, ಅವರು ʼನೀರಿನ ಕಳ್ಳʼ ಎಂದು ಜರೆದಿದ್ದರು.
ತೃಣಮೂಲ ಕಾಂಗ್ರೆಸ್ ಸಂಸದ ಕಾಕೋಲಿ ಘೋಷ್ ದಸ್ತಿದಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ದಸ್ತಿದಾರ್ ಪ್ರಶ್ನಿಸಿದ್ದಾರೆ. ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪಕ್ಷವು ಮಹಿಳೆಯರಿಗೆ ಗೌರವ ನೀಡಬೇಕು ಎಂದು ದಸ್ತಿದಾರ್ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ ಬರಸಮ್‌ನ ಟಿಎಂಸಿ ಸಂಸದ ಸಂಸತ್ತಿನಲ್ಲಿ ಮಾತನಾಡುತ್ತಿದ್ದರು. ದೇಶಕ್ಕಾಗಿ ಚಿನ್ನದ ಪದಕ ಗೆದ್ದ ನಮ್ಮ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನ್ಯಾಯಕ್ಕಾಗಿ ಜಂತರಂಮಂದಿರದಲ್ಲಿ ಪ್ರತಿಭಟನೆ ನಡೆಸಬೇಕಾಯಿತು. ಆದರೂ ಬ್ರಿಜ್ ಭೂಷಣ್ ಸಿಂಗ್ ಇಂದು ಇಲ್ಲಿ ಕುಳಿತಿದ್ದಾರೆ. ತಪ್ಪಿತಸ್ಥನನ್ನು ಏಕೆ ನ್ಯಾಯದ ಮುಂದೆ ತರಬಾರದು? ನಿಮಗೆ ಮಹಿಳೆಯರ ಪ್ರಗತಿ ಮತ್ತು ಉನ್ನತಿ ಬೇಕಾದರೆ, ನಿಮಗೆ ನಿಜವಾಗಿಯೂ ಅದರ ಬಗ್ಗೆ ಕಾಳಜಿ ಇದ್ದರೆ, ಬ್ರಿಜ್ ಭೂಷಣ್ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು? – ಎಂದು ಟಿಎಂಸಿ ಸಂಸದರು ಪ್ರಶ್ನಿಸಿದರು. ಹತ್ರಾಸ್ ಮತ್ತು…
ಭಾರತೀಯ ರೈಲ್ವೇಯು ಮಕ್ಕಳ ಶುಲ್ಕದ ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಏಳು ವರ್ಷಗಳಲ್ಲಿ 2,800 ಕೋಟಿ ರೂಪಾಯಿಗಳ ಹೆಚ್ಚುವರಿ ಆದಾಯವನ್ನು ಗಳಿಸಿದೆ ಎಂದು ವರದಿಯಾಗಿದೆ. 2022-23ರಲ್ಲಿ ರೈಲ್ವೆಗೆ ಹೆಚ್ಚುವರಿ ಆದಾಯವಾಗಿ 560 ಕೋಟಿ ರೂ. ಆರ್‌ಟಿಐ ಕಾಯ್ದೆಯಡಿ ಸೆಂಟರ್ ಫಾರ್ ರೈಲ್ವೇ ಮಾಹಿತಿ ವ್ಯವಸ್ಥೆ (ಸಿಆರ್‌ಐಎಸ್) ನೀಡಿರುವ ಉತ್ತರದಲ್ಲಿ ಇದನ್ನು ಹೇಳಲಾಗಿದೆ. ಮಾರ್ಚ್ 2016 ರಲ್ಲಿ, ರೈಲ್ವೆಯು ಮಕ್ಕಳ ಪ್ರಯಾಣ ದರವನ್ನು ಪರಿಷ್ಕರಿಸಿತು. ಐದು ಮತ್ತು ಹನ್ನೆರಡು ವರ್ಷದೊಳಗಿನ ಮಕ್ಕಳು ವಿಶೇಷ ಸೀಟುಗಳು ಅಥವಾ ಬರ್ತ್‌ಗಳನ್ನು ಕಾಯ್ದಿರಿಸಲು ಬಯಸಿದರೆ ವಯಸ್ಕರಿಗೆ ಸಮಾನವಾದ ದರವನ್ನು ವಿಧಿಸಲಾಗುವುದು ಎಂದು ರೈಲ್ವೇ ಘೋಷಿಸಿತ್ತು. ಪರಿಷ್ಕೃತ ಮಾನದಂಡಗಳು 21 ಏಪ್ರಿಲ್ 2016 ರಿಂದ ಜಾರಿಗೆ ಬಂದವು. ಸಚಿವಾಲಯವು 2016-2017 ರಿಂದ 2020-2023 ರ ಆರ್ಥಿಕ ವರ್ಷದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. 70 ರಷ್ಟು ಮಕ್ಕಳ ಪ್ರಯಾಣಿಕರು ಪೂರ್ಣ ಶುಲ್ಕದ ಪ್ರಯಾಣಿಕರಾಗಿದ್ದರು. 3.6 ಕೋಟಿ ಮಕ್ಕಳು ಅರ್ಧ ದರದಲ್ಲಿ ಪ್ರಯಾಣಿಸಿದ್ದಾರೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಮೊದಲು ಮಕ್ಕಳಿಗೆ ಅರ್ಧ…
ಭಾರತದ ಎರಡನೇ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆಯನ್ನು ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ನಿರ್ಮಿಸಬಹುದು. ನೌಕಾಪಡೆಯು ಈ ಶಿಫಾರಸನ್ನು ರಕ್ಷಣಾ ಸಚಿವಾಲಯಕ್ಕೆ ರವಾನಿಸಿದೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದು ವರದಿಯಾಗಿದೆ. ಎರಡನೇ ವಿಮಾನವಾಹಕ ನೌಕೆಯನ್ನು ಸ್ವದೇಶಿ ವಿಮಾನವಾಹಕ ನೌಕೆ-2 ಎಂದು ಕರೆಯಲಾಗುವುದು. INS ವಿಕ್ರಾಂತ್, ಮೊದಲ ಸ್ವದೇಶಿ ವಿಮಾನವಾಹಕ ನೌಕೆಯನ್ನು ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ನಿರ್ಮಿಸಲಾಯಿತು. ಕೊಚ್ಚಿ ಶಿಪ್ ಯಾರ್ಡ್ ಐಎನ್ ಎಸ್ ವಿಕ್ರಾಂತ್ ನಿರ್ಮಾಣಕ್ಕೆ ಭಾರಿ ಪುರಸ್ಕಾರ ಪಡೆದಿರುವ ಹಿನ್ನೆಲೆಯಲ್ಲಿ ಕೊಚ್ಚಿಯಲ್ಲಿ ಎರಡನೇ ವಿಮಾನವಾಹಕ ನೌಕೆ ನಿರ್ಮಿಸುವ ಕ್ರಮವೂ ನಡೆದಿದೆ. ವಿಶಾಖಪಟ್ಟಣದಲ್ಲಿ ಐಎನ್ ಎಸ್ ವಿಕ್ರಾಂತ್ ಕಾರ್ಯಾಚರಣೆಯನ್ನು ಕ್ರೋಢೀಕರಿಸುವ ಪ್ರಯತ್ನಗಳು ಸಹ ನಡೆಯುತ್ತಿವೆ.
ಬೆಂಗಳೂರು: ದನದ ಮಾಂಸ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ 10 ಸಾವಿರ ಹಣ ಪಡೆದು, ಮಾಂಸ ದೋಚಿದ್ದ ಮಾಂಸದಂಗಡಿ ಮಾಲೀಕ ಸೇರಿದಂತೆ ನಾಲ್ವರನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ದನದ ಮಾಂಸದಂಗಡಿ ಮಾಲೀಕ ಮೊಹಮ್ಮದ್ ಹಾಗೂ ಮಧು, ದಿನೇಶ್, ಕಾರ್ತಿಕ್ ಬಂಧಿತರು. ಇಲಿಯಾಸ್ ನಗರದಲ್ಲಿ ಮೊಹಮ್ಮದ್ ದನದ ಮಾಂಸದ ಅಂಗಡಿ ನಡೆಸುತ್ತಿದ್ದು, ಫಯಾಜ್ ಎಂಬಾತ ರಾಮನಗರದಿಂದ ಮಾಂಸವನ್ನು ಬೊಲೆರೋ ವಾಹನದಲ್ಲಿ ತಂದು ಈತನ ಅಂಗಡಿಗೆ ಕೊಡುತ್ತಿದ್ದರು.
ಯಮಕನಮರಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹೆಚ್ಚಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಚಿಲಭಾಂವಿ ಗ್ರಾಮದಲ್ಲಿ ನಡೆದ ಸೆಂಟ್ ಥೆರೆಸಾ ಶಾಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತಮಾಡಿದ ಅವರು, ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ಸೈಂಟ್ ಥೆರೆಸಾ ಶಾಲೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಒಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರಷ್ಟೇ ಪೋಷಕರು ಕೂಡ ಮುಖ್ಯ. ಹೀಗಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಳಜಿ ವಹಿಸಬೇಕು. ಶಿಕ್ಷಕರು ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಿ ಅವರ ಪ್ರಗತಿಗೆ ಪೂರಕವಾಗಿ ಕಾರ್ಯೋನ್ಮುಖರಾಗಬೇಕು. ವಿದ್ಯಾರ್ಥಿಗಳ ಸಮಸ್ಯೆ, ಕಷ್ಟ ದುಃಖಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಶಿಕ್ಷಕರು ಮಕ್ಕಳನ್ನು ಕೇವಲ ಶಾಲೆಗೆ ಸೇರಿಸಿ ಸುಮ್ಮನಾಗದೇ ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದರು. ಶಿಕ್ಷಕರು, ವಿದ್ಯಾರ್ಥಿಗಳಾಗಲಿ ಶಿಸ್ತನ್ನು ಮೈಗೂಡಿಸಿಕೊಳ್ಳದಿದ್ದರೇ ನಮ್ಮ ಧ್ಯೇಯವನ್ನು ಸುಲಭವಾಗಿ ಈಡೇರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಿಸ್ತಿಗೆ…