Author: admin

ಸಿಎಂ ಸಿದ್ದರಾಮಯ್ಯ ಯಾರ ಮುಲಾಜಿಗೂ ಒಳಗಾಗದೆ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ  ಹೆಚ್.ವಿಶ್ವನಾಥ್ ಆಗ್ರಹಿಸಿದರು. ಮೈಸೂರಿನಲ್ಲಿ  ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್,  ಜಾತಿ ಗಣತಿ ವರದಿ ಬಿಡುಗಡೆಗೆ ವೀರಶೈವ ಲಿಂಗಾಯತ ಸಮುದಾಯ ಏಕೆ ವಿರೋಧ ಮಾಡುತ್ತಿದೆ ಗೊತ್ತಾಗುತ್ತಿಲ್ಲ. ಮೊದಲು ವರದಿಯನ್ನು ಬಿಡುಗಡೆ ಆಗಲಿ. ಅಲ್ಲಿ ಏನಿದೆ ಅಂತ ಚರ್ಚೆ ಆಗಲಿ. ವರದಿ ನೋಡದೇ, ತಿಳಿಯದೇ ಸುಮ್ಮನೇ  ಆರಂಭದಲ್ಲೇ ವಿರೋಧ ಮಾಡುವುದು ಸರಿಯಲ್ಲ ಎಂದರು. ಇದೇ  ರೀತಿ ಅಂದು ಹಾವನೂರು ಆಯೋಗದ ವರದಿಯನ್ನು ಕೂಡ ಸಾಕಷ್ಟು ವಿರೋಧ ಮಾಡಿದರು. ಆದರೆ ಅಂದಿನ ಸಿಎಂ ದೇವರಾಜ ಅರಸು ಎಲ್ಲರ ವಿರೋಧದ ನಡುವೆಯೇ ಹಾವನೂರು ವರದಿ ಬಿಡುಗಡೆ ಮಾಡಿದರು. ಈಗಲೂ ಸಿಎಂ ಸಿದ್ದರಾಮಯ್ಯ ಈ ವರದಿಯನ್ನು ಬಿಡುಗಡೆ ಮಾಡಬೇಕು. ಯಾರ ಮುಲಾಜಿಗೂ ಒಳಗಾಗಬಾರದು. ವರದಿ ಬಂದ ಬಳಿಕ ಚರ್ಚೆ ನಡೆಯಲಿ ಏನು ಇದೆ, ಏನಿಲ್ಲ ಅನ್ನೋದನ್ನ ಅಮೇಲೆ ಚರ್ಚೆ ಮಾಡಲಿ. ಸುಮ್ಮನೇ ಇಲ್ಲ ಸಲ್ಲದ ಆರೋಪ ಮಾಡುವುದು…

Read More

ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಸಂಬಂಧ ನಿಮಗೂ ಮನೋರಂಜನ್ ಗೂ ಲಿಂಕ್ ಏನು ..? ಪ್ರಕರಣದಲ್ಲಿ ನಿಮ್ಮ ಪಾತ್ರವೇನು ಅಂತ ಹೇಳಿ ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆಗಳ ಸುರಿಮಳೆಗೈದರು. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ.ಲಕ್ಷ್ಮಣ್, ನಿಮಗೆ ಜನ ಈ ಬಾರಿ ಚುನಾವಣೆಯಲ್ಲಿ ಬುದ್ದಿ ಕಲಿಸುತ್ತಾರೆ. ಜನರಿಗೆ ನಿಮ್ಮ ಬಿಜೆಪಿ ಬುದ್ದಿ ಎಲ್ಲಾ ಗೊತ್ತಾಗಿದೆ. ತಾಯಿ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ನಿಮ್ಮ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ಅಂತ ಹೇಳಿ. ನೀವು ಎಷ್ಟು ವೋಟ್ ಗಳಲ್ಲಿ ಸೋಲುತ್ತೀರಿ ಅಂತನೂ ಹೇಳಿ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಪ್ರತಾಪ್ ಸಿಂಹ ನಾನೇನಾದರೂ ತಪ್ಪು ಮಾಡಿದರೇ ಚಾಮುಂಡೇಶ್ವರಿ ನೋಡಿ ಕೊಳ್ತಾರೆ. ನನ್ನ ಕ್ಷೇತ್ರದ ಜನ ನೋಡಿಕೊಳ್ಳುತ್ತಾರೆ ಅಂತ ಹೇಳಿದ್ದಾರೆ. ಹೋಗಲಿ ನಿಮಗೂ ಮನೋರಂಜನ್ ಗೂ ಏನು ಲಿಂಕ್ ಇದೆ ಅಂತ ಹೇಳಿ? ಬೇರೆ ಏನೂ ಬೇಡ. ಮನೋರಂಜನ್…

Read More

ಕರ್ನಾಟಕದ ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ಅವರ ವಿರುದ್ದ ಪ್ರೀತಿಸಿ ವಂಚಿಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಅವರ ಮಾಜಿ ಪ್ರೇಯಸಿ ಆರ್ .ಟಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕೆ.ಸಿ ಕಾರಿಯಪ್ಪ ಅವರೂ ಸಹ ಮಾಜಿ ಪ್ರೇಯಸಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಮದುವೆಯಾಗುವುದಾಗಿ  ನಂಬಿಸಿ ಬಳಸಿಕೊಂಡು, ಈಗ ಮೋಸ ಮಾಡಿದ್ದಾರೆ ಎಂದು ಕಾರಿಯಪ್ಪ ಅವರ ಮಾಜಿ ಪ್ರಿಯತಮೆ ಆರ್‌.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ನನಗೆ ಗರ್ಭಪಾತ ಮಾಡಿಸಿಕೊಳ್ಳಲು ಹೇಳಿದ್ದರು.  ನಾನು  ಮಗು ಬೇಕು ಅಂತಾ ಒತ್ತಾಯಿಸಿದ್ದೆ. ಆದರೆ ಬಲವಂತವಾಗಿ ನನಗೆ ಮಾತ್ರೆ ಕುಡಿಸಿದರು. ನನಗೆ ತುಂಬಾ ಮಾನಸಿಕವಾಗಿ ನೋವು ನೀಡಿದ್ದಾರೆ.  ದೂರು ಕೊಟ್ಟಾಗಲೆಲ್ಲ ರಾಜಿ ಮಾಡಿಕೊಂಡರು  ಎಂದು ಕೆ.ಸಿ ಕಾರಿಯಪ್ಪ ವಿರುದ್ದ ಮಾಜಿ ಪ್ರೇಯಸಿ ಆರೋಪ ಮಾಡಿದ್ದಾರೆ. ಇನ್ನು ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ಅವರು ಕೂಡಾ  ಮಾಜಿ ಪ್ರೇಯಸಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ…

Read More

ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ರೈತರ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ. ಅನ್ನದಾತನ ಸಂಕಷ್ಟವನ್ನು ಅವಮಾನಿಸುವುದು ಸರಿಯಲ್ಲ . ರೈತರು ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ ಎಂದು ವಾಗ್ದಾಳಿ ನಡೆಸಿದರು. ನಾನು ಕೃಷಿ ಸಾಲಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ನೆನೆಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತರ ಕಷ್ಟಗಳನ್ನು ಅವಮಾನ ಮಾಡುವುದು ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಎಚ್ಚರಿಕೆ, ಸೂಕ್ಷ್ಮತೆಯಿಂದ ಮಾತನಾಡಬೇಕು.  ಸಚಿವರು ತಕ್ಷಣ ಕ್ಷಮೆ ಕೇಳಿ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.

Read More

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿದ  ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಹಿಜಾಬ್ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ, ಈ ವಿಚಾರದ ಬಗ್ಗೆ ನಾವಿನ್ನೂ ಯೋಚನೆ ಮಾಡಿಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,   ಹಿಜಾಬ್ ವಿಚಾರ ಚರ್ಚೆಗೆ ಬರುತ್ತಿದೆ, ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಆದರೆ ಅದೇ ವಿಚಾರವನ್ನ ದೊಡ್ಡದು ಮಾಡಲಾಗಿದೆ ಎಂದರು. ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಹೇಳಿಕೆ ಕುರಿತು  ನಾನು ಪ್ರತಿಕ್ರಿಯಿಸುವುದಿಲ್ಲ,  ಆ ಬಗ್ಗೆ ಅವರನ್ನೇ ಕೇಳಿ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಚಿವರನ್ನು,ವೀಕ್ಷಕರನ್ನಾಗಿ ನೇಮಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ನಾನು ಮತ್ತು ಸಿಎಂ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Read More

ರಾಜ್ಯದಲ್ಲಿ ಈಗಿರುವ ಕೋವಿಡ್ ಮಾರ್ಗಸೂಚಿಯೇ ಮುಂದುವರೆಯಲಿದ್ದು, ಹೊಸ ವರ್ಷಾಚರಣೆ, ಸಭೆ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಒಮಿಕ್ರಾನ್ ಉಪತಳಿ ಜೆಎನ್.1 ಬಂದಿರುವ ಬಗ್ಗೆ ಮಾಹಿತಿ ಇತ್ತು. ಒಮಿಕ್ರಾನ್ JN.1 ಬಂದ ತಕ್ಷಣ ಯಾರು ಗಾಬರಿಯಾಗುವುದು ಬೇಡ. ರಾಜ್ಯದಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು. ಆರೋಗ್ಯ ಇಲಾಖೆ ಅಧಿಕಾರಿಗಳು ಬಿಬಿಎಂಪಿ ಜೊತೆ ಸಭೆ ನಡೆಸಿದ್ದೇವೆ. ಹೊಸ ವರ್ಷಾಸರಣೆ ಸೇರಿದಂತೆ ಸಭೆ ಸಮಾರಂಭಗಳಿಗೆ ನಿರ್ಬಂಧ ವಿಲ್ಲ. ರಾಜ್ಯದಲ್ಲಿ ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ. ಏನಾದರೂ ಬದಲಾವಣೆ ತಂದರೆ ಮಾಹಿತಿ ನೀಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Read More

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ.ಕೇವಲ ಆರೇ ಆರು ತಿಂಗಳಲ್ಲಿ 18.50 ಕೋಟಿ ರು ಜಾಹೀರಾತಿಗೆ ಬಿಡುಗಡೆ ಆಗಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 2023-24ನೇ ಸಾಲಿನ ಆಯವ್ಯಯದಲ್ಲಿ  ಒದಗಿಸಿದ್ದ 37.95 ಕೋಟಿ ರು. ನಲ್ಲಿ ಈಗಾಗಲೇ 18.50 ಕೋಟಿ ರು. ಗೂ ಹೆಚ್ಚು ಮೊತ್ತದಲ್ಲಿ ಜಾಹೀರಾತು ಬಿಡುಗಡೆ ಆಗಿರುವುದು ಇದೀಗ ಬಹಿರಂಗವಾಗಿದೆ ಎಂದು ಕರ್ನಾಟಕ ರಾಷ್ರ್ಟಸಮಿತಿ ಪಕ್ಷ  ರಾಜ್ಶ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ, ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮತ್ತು ಬರ  ಪರಿಹಾರಕ್ಕೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಸರ್ಕಾರವು ಜಾಹೀರಾತುಗಳಿಗೆ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ ಎಂದು ಅವರು ಆರೋಫಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು “ದ ಪಾಲಿಸಿ ಫ್ರಂಟ್‌ ” ನ ಸೇವೆ ಪಡೆಯಲು ವಾರ್ತಾ ಇಲಾಖೆ ಕೋರಿದ್ದ ಪ್ರಸ್ತಾವನೆಯಲ್ಲಿ ಜಾಹೀರಾತಿಗೆ ಮಾಡಿರುವ ಖರ್ಚಿನ ವಿವರವನ್ನು ಪ್ರಸ್ತಾವಿಸಲಾಗಿದೆ. ‘ಸಿದ್ದರಾಮಯ್ಯ ಅವರ ಅಂತರ್ಜಾಲದಿಂದ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿದರು. ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರಾದ‌ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕ್ರಿಸ್ ಮಸ್ ಟ್ರಿ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಎಂಬುವರು ನೀಡಿರುವ ದೂರಿನನ್ವಯ ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು: ಯಾವ ದೇವರು ಮತ್ತು ಧರ್ಮ ನಮ್ಮನ್ನು ಉದ್ಧಾರ ಮಾಡುವುದಿಲ್ಲ, ಶಿಕ್ಷಣ ಹಾಗೂ ನಮ್ಮ ಸ್ವಯಂ ಪರಿಶ್ರಮದಿಂದಲೇ ನಮ್ಮ ಉದ್ಧಾರ ಸಾಧ್ಯ ಎಂಬ ಬಾಬಾ ಸಾಹೇಬರ ಮಾತುಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಅವರ ಮಾತನ್ನು ನಾವು ಮರೆತರೆ ರಾಜಕೀಯ ಕಾರಣಕ್ಕಾಗಿ ಇವರು ಮಂದಿರ ಮಸೀದಿಗಳೇ ಪ್ರಮುಖವೆಂದು ವಾದಿಸುತ್ತಾ, ಅದರೊಳಗೆ ಶೋಷಿತ ಸಮುದಾಯ ಪ್ರವೇಶ ಮಾಡದಂತೆ ಹುನ್ನಾರ ರೂಪಿಸುತ್ತವೆ ಎಂದರು. ರಾಜ್ಯದ ಶಾಲೆ ಹಾಗೂ ಹಾಸ್ಟೆಲ್ ಸ್ಥಿತಿಗತಿ ಅರಿಯಲು ವಿಚಕ್ಷಣ ದಳ ರಚನೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌ಸಿ ಮಹದೇವಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಸತಿ ಶಾಲೆಗಳನ್ನು ಶಿಸ್ತುಬದ್ಧವಾಗಿ ಮತ್ತು ಶಿಕ್ಷಣದ ಆಶಯಕ್ಕೆ ಅನುಗುಣವಾಗಿ ನಿರ್ವಹಣೆ ಮಾಡಲು ಬೇಕಾದ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ ಎಂದರು. ಇನ್ನು ಮುಂದೆ ಶಾಲೆ ಹಾಗೂ ಹಾಸ್ಟೆಲ್ ಗಳ ಹಂತದಲ್ಲಿ ವಿಚಕ್ಷಣ ದಳವನ್ನು ರಚಿಸುವ ಕೆಲಸ…

Read More