Subscribe to Updates
Get the latest creative news from FooBar about art, design and business.
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
- ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
- ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
- ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
- ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
Author: admin
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಕ್ರಿಸ್ಮಸ್ ಆಚರಣೆ ನಡೆಯಲಿದೆ. ಕ್ರೈಸ್ತ ಸಮುದಾಯದವರಿಗೆ ಪ್ರಧಾನಿ ಔತಣವನ್ನು ಸಿದ್ಧಪಡಿಸಲಿದ್ದಾರೆ. ಕ್ರೈಸ್ತ ಚರ್ಚುಗಳ ಮುಖ್ಯಸ್ಥರು ಮತ್ತು ಕ್ರೈಸ್ತ ಸಮುದಾಯದ ಪ್ರಮುಖರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಕೇರಳ, ಮಹಾರಾಷ್ಟ್ರ, ಗೋವಾ, ಮಣಿಪುರ ಮತ್ತು ಇತರ ರಾಜ್ಯಗಳ ಅಸೆಂಬ್ಲಿಗಳ ಅಧ್ಯಕ್ಷರು ಸಮಾರಂಭದ ಭಾಗವಾಗಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. ಇದೇ ಮೊದಲ ಬಾರಿಗೆ ಪ್ರಧಾನಿ ನಿವಾಸದಲ್ಲಿ ಕ್ರಿಸ್‌ಮಸ್ ಪಾರ್ಟಿ ಆಯೋಜಿಸಲಾಗಿದೆ. ಕಳೆದ ಈಸ್ಟರ್ ವೇಳೆ ಪ್ರಧಾನಿ ದೆಹಲಿಯ ಸೇಕ್ರೆಡ್ ಹಾರ್ಟ್ ಚರ್ಚ್ ಗೆ ಭೇಟಿ ನೀಡಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಕ್ರೈಸ್ತ ಚರ್ಚ್ ಗಳಿಗೆ ಹತ್ತಿರವಾಗುವುದು ಬಿಜೆಪಿ ರಾಷ್ಟ್ರೀಯ ನಾಯಕತ್ವದ ನಿರ್ಧಾರ. ರಾಜ್ಯದಲ್ಲಿ ಕ್ರಿಶ್ಚಿಯನ್ ಗುಂಪುಗಳನ್ನು ಒಟ್ಟಿಗೆ ಇಡುವ ಉದ್ದೇಶದಿಂದ ಬಿಜೆಪಿ ಸ್ನೇಹ ಯಾತ್ರೆ ಆರಂಭಿಸಿತ್ತು. ಸೌಹಾರ್ದತೆಯ ಕ್ಷೇತ್ರಗಳನ್ನು ಹುಡುಕುವುದು ದೇಶದ ಅಗತ್ಯವಾಗಿರುವುದರಿಂದ ಪ್ರಯಾಣ ಎಂಬುದು ಬಿಜೆಪಿಯ ನಿಲುವು. ಸೈರೋ ಮಲಬಾರ್ ಚರ್ಚ್‌ನ ಪ್ರಧಾನ ಕಛೇರಿಯಾದ ಸೇಂಟ್ ಥಾಮಸ್ ಮೌಂಟ್‌ನಿಂದ ಮನೆ ಭೇಟಿ ಪ್ರಾರಂಭವಾಯಿತು. ಕೇಂದ್ರ…
ಕೋವಿಡ್-19 ಸಬ್‌ವೇರಿಯಂಟ್ ವಿರುದ್ಧ ಪ್ರಸ್ತುತ ಯಾವುದೇ ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಎಂದು ಸಾರ್ಕ್ ಕೋವಿಡ್-2 ಜೀನೋಮಿಕ್ಸ್ ಕನ್ಸೋರ್ಟಿಯಂ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಹೇಳಿದ್ದಾರೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಅವರು ಈ ಸಲಹೆ ನೀಡಿದ್ದಾರೆ. 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು, ಕೊಮೊರ್ಬಿಡಿಟಿಗಳನ್ನು ಹೊಂದಿರುವ ಸಾಧ್ಯತೆ ಇರುವವರು ರೋಗನಿರೋಧಕ ಶಕ್ತಿಯನ್ನು ನಿಗ್ರಹಿಸುವ ಔಷಧಗಳನ್ನು ಸೇವಿಸುವುದನ್ನು ತಡೆಗಟ್ಟುವಿಕೆ ಅಗತ್ಯವಿದೆ ಎಂದಿದ್ದಾರೆ. ಕೋವಿಡ್ ಕುರಿತು ಇಲ್ಲಿಯವರೆಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಈಗ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಬೇಕು. ಜತೆಗೆ ಯಾವುದೇ ಹೆಚ್ಚುವರಿ ಡೋಸ್‌ಗಳ ಅಗತ್ಯವಿಲ್ಲ ಎಂದಿದ್ದಾರೆ.
ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ದೇಶದಲ್ಲಿನ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಜೋಶಿ ಹೇಳಿದ್ದಾರೆ. ಬಡವರ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಸ್ತುತ ದೇಶದಲ್ಲಿ 1.1 ಲಕ್ಷದಷ್ಟು ಇರುವ ವೈದ್ಯಕೀಯ ಸೀಟುಗಳನ್ನು 2029ರ ವೇಳೆಗೆ 1.50 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಾಲಮನ್ನಾ ಆಸೆಗೆ ರೈತರು ಬರಗಾಲ ಬರಲಿ ಎನ್ನುತ್ತಾರೆ ಎಂದು ಹೇಳುವ ಮೂಲಕ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಉಡಾಫೆ ಮಾತುಗಳನ್ನಾಡಿದ್ದಾರೆ. ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ಶಿವಾನಂದ್ ಪಾಟೀಲ್, ಪದೇ ಪದೇ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾ ನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್ ಕೂಡ ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಸಾಲಮನ್ನಾ ಆಸೆಗೆ ರೈತರು ಬರಗಾಲ ಬರಲಿ ಎನ್ನುತ್ತಾರೆ. ಹಿಂದಿನ ಸರ್ಕಾರಗಳು ಸಾಲಮನ್ನಾ ಮಾಡಿವೆ. ಆದರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ರೈತರ ಸಾಲಮನ್ನ ಕಷ್ಟ ಸಾಧ್ಯ. ಎಂದು ಸಚಿವ ಶಿವಾನಂದ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು: ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಮಗು, ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಮಗು ರೋಹನ್ ಮತ್ತು ತಂದೆ ಸಂದೇಶ್(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಡಿ.19 ರಂದು ಬೇಗೂರು ಠಾಣಾ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಲಕ್ಷ್ಮೀ ಲೇಔಟ್ನಲ್ಲಿ ಸುಬ್ರಮಣಿ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಂದೇಶ್(30), ಆತನ ನಾದಿನಿ ನಿಖೀಲಾ(26) ಮತ್ತು ಮೂವರು ಮಕ್ಕಳಾದ ರೋಷಿಣಿ, ರೋಹನ್ ಹಾಗೂ ರೋಷನ್ ಎಂಬುವರು ಗಾಯಗೊಂಡಿದ್ದರು. ಆದರೆ ಈಗ ಸಂದೇಶ್ ಹಾಗೂ ರೋಹನ್ ಸಾವನ್ನಪ್ಪಿದ್ದಾರೆ.
ಹಾವೇರಿ: ಹೆಂಡತಿ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲ ನಿವಾಸಿ ಪತಿ ರೇವಣಪ್ಪ ಆರೋಪಿಯಾಗಿದ್ದಾನೆ. ಪವಿತ್ರ ಮೃತ ದುರ್ದೈವಿ. ಮದುವೆ ಆಗಿ ಆರಂಭದಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ಆದರೆ, ಬರು ಬರುತ್ತಾ ಮದ್ಯದ ದಾಸನಾದ ರೇವಣಪ್ಪ ನಿತ್ಯ ಕುಡಿದ ಅಮಲಿನಲ್ಲಿ ಜಗಳ ವಾಡುತ್ತಿದ್ದನಂತೆ. ನೆರೆ-ಹೊರೆಯವರ ಜೊತೆ ಮಾತನಾಡಿದ್ರು, ಸಂಬಂಧ ಕಲ್ಪಿಸಿ ಜಗಳ ವಾಡುತ್ತಾ ಕಿರಿಕಿರಿ ಮಾಡುತ್ತಿದ್ದ. ಆದ್ರೆ, ಈ ಎಲ್ಲವನ್ನು ಸಹಿಸಿಕೊಂಡು ಕಳೆದ ಐದು ವರ್ಷದಿಂದ ಪವಿತ್ರ ಸಂಸಾರ ನಿಬಾಯಿಸಿಕೊಂಡು ಬಂದಿದ್ದಳು. ಪವಿತ್ರಾ ಹಸಿ ಬಾಣಂತಿ ನಿನ್ನೆ ರಾತ್ರಿ ಐದು ತಿಂಗಳ ಕಂದಮ್ಮನನ್ನು ಕಂಕಳಲ್ಲಿ ಕೂರಿಸಿಕೊಂಡು ಏಕಾದಶಿ ಹಿನ್ನೆಲೆ ಶಿವನ ದರ್ಶನಕ್ಕೆ ದೇವಸ್ಥಾನಕ್ಕೆ ಹೋಗಿದ್ದಳು. ತನ್ನ ಗಂಡ ತನ್ನ ತವರು ಮನೆಗೆ ಬಂದಿದ್ದಾನೆ ಎಂದು ಸುದ್ದಿ ಕೇಳಿದ ತಕ್ಷಣ ಪವಿತ್ರ, ನನ್ನ ಗಂಡ ನನ್ನ ಮಕ್ಕಳನ್ನು ಎತ್ತಿಕೊಂಡು ಮುದ್ದಾಡುತ್ತಾನೆ ಎಂಬ ಆಸೆಯಿಂದ ಧಾವಂತದಲ್ಲಿ ಮನೆಗೆ ಬಂದಿದ್ದಳು. ಆದ್ರೆ, ಪಾಪಿ ಪತಿ ಅನುಮಾನ…
ಮಧ್ಯಪ್ರದೇಶ: ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಒಂದು ಕ್ಷುಲ್ಲಕ ಕಾರಣಕ್ಕಾಗಿ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್ ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು. ಆಗ ಆ ವ್ಯಕ್ತಿ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿರುವ ಮಸೀದಿಯಲ್ಲಿ ಉಗ್ರರು ಗುಂಡಿನ ದಾಳಿ ವೇಳೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಅವರು ಗಂಭೀರವಾಗಿ ಗಾಯಗೊಂಡು, ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ದಾಳಿ ನಡೆಸಿದ ಉಗ್ರರು ಸ್ಥಳದಿಂದ ಕಾಲ್ಕಿತ್ತು, ಉಗ್ರರ ಸದೆಬಡಿಯು ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಚಿಕ್ಕಮಗಳೂರು: ದತ್ತ ಜಯಂತಿ ಪ್ರಯುಕ್ತ ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ರಸ್ತೆಯುದ್ಧಕ್ಕೂ ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆಯೊಂದಿಗೆ ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಬಾಳೆಕಾಯಿಯಲ್ಲೂ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಬಾಳೆ ಕಾಯಿಯನ್ನು ತಿನ್ನುವುದರಿಂದ ಹಲವಾರು ಅರೋಗ್ಯ ಪ್ರಯೋಜನಗಳಿವೆ. ಬಾಳೆ ಕಾಯಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪೊಟ್ಯಾಸಿಯಮ್, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಬಾಳೆ ಕಾಯಿಯು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿವನ್ನು ಕಡಿಮೆ ಮಾಡುತ್ತದೆ. ಇವುಗಳಲ್ಲಿರುವ ಪೆಕ್ಟಿನ್ ತೂಕ ಹೆಚ್ಚಾಗುವುದನ್ನು ತಡೆಯುತ್ತದೆ. ಹೃದ್ರೋಗ, ಕ್ಯಾನ್ಸರ್, ಕಣ್ಣಿನ ಸಮಸ್ಯೆಗಳನ್ನು ತಡೆಯುತ್ತದೆ. ನುಗ್ಗೆ ಸೊಪ್ಪಿನಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ?: ಆಯುರ್ವೇದದಲ್ಲಿ ನುಗ್ಗೆ ಸೊಪ್ಪಿಗೆ ವಿಶೇಷ ಸ್ಥಾನವಿದೆ. ಇದನ್ನು ಅಮೃತವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ನುಗ್ಗೆ ಸೊಪ್ಪು 300ಕ್ಕೂ ಹೆಚ್ಚು ರೋಗಗಳನ್ನು ಗುಣಪಡಿಸುತ್ತದೆ ಎನ್ನುತ್ತಾರೆ ತಜ್ಞರು. ಈ ನುಗ್ಗೆ ಸೊಪ್ಪಿನಲ್ಲಿ ವಿಟಮಿನ್ ಸಿ ಇದ್ದು ಇದು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಇದು ಮಧುಮೇಹಿಗಳಿಗೂ ಒಳ್ಳೆಯದು. ನುಗ್ಗೆ ಸೊಪ್ಪು ಮೂಳೆಗಳಿಗೆ ಅಗತ್ಯವಾದ ಕ್ಯಾಲ್ಸಿಯಂ ಮತ್ತು ಮೆಗ್ನಿಸಿಯಮ್ ಅನ್ನು ಒದಗಿಸುತ್ತದೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ. ಚಳಿಗಾಲದಲ್ಲಿ ಮೀನು ತಿನ್ನುತ್ತೀರಾ?…