Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಪಾವಗಡ: ಮೃತ ದಲಿತ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಸವರ್ಣಿಯರು ಅಡ್ಡಿಪಡಿಸಿ, ತಡೆದ ಘಟನೆ ಪಾವಗಡ ತಾಲೂಕಿನ ಕ್ಯಾತಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಅಂತ್ಯಸಂಸ್ಕಾರಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ದಲಿತರು ಬೇರೆ ದಾರಿ ಕಾಣದೇ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ರಸ್ತೆಯಲ್ಲೇ ನಡೆಸಿದ್ದಾರೆ. ಗ್ರಾಮದ 65 ವರ್ಷ ವಯಸ್ಸಿನ ಈರಣ್ಣ ಎಂಬವರು ಮೃತಪಟ್ಟಿದ್ದರು. ಹೀಗಾಗಿ ಪಾವಗಡ ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕ್ಯಾತಗಾನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಜಮೀನು ಜಾಗದಲ್ಲಿ ಈರಣ್ಣ ಅವರ ಅಂತ್ಯ ಸಂಸ್ಕಾರ ನಡೆಸಲು ದಲಿತ ಸಮುದಾಯದವರು ಮುಂದಾಗಿದ್ದರು. ಆದ್ರೆ, ಈ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡಲು ಇಲ್ಲಿನ ಕೆಲವು ಸವರ್ಣಿಯರು ಅಡ್ಡಿಪಡಿಸಿದ್ದು, ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದವರು ರಸ್ತೆಯಲ್ಲೇ ವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ವಿಚಾರ ತಿಳಿದ ಊರಿನ ದಲಿತ ಸಮುದಾಯದವರು ಹಾಗೂ ದಲಿತ ಸಂಘಟನೆಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದರು. ಬಳಿಕ ತಾಲೂಕು ದಂಡಾಧಿಕಾರಿಗಳಾದ ವರದರಾಜ್ ಅವರಿಗೆ ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ವರದರಾಜು ಅವರು ಮಾತನಾಡಿ, ಈ ಸರ್ಕಾರಿ ಜಮೀನು ಒತ್ತುವರಿ…
ಬೆಂಗಳೂರು: 2023 ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ…
ಬೆಂಗಳೂರು: ನೀರು ಹರಿಸದಿದ್ರೆ ಆದೇಶ ಉಲ್ಲಂಘನೆ ಅಂತಾ ಸಚಿವರು ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡಲು CWMA ಆದೇಶ ವಿಚಾರ ಸಂಬಂಧ ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. ಹಿಂದಿನ ಸರ್ಕಾರ ನೀರು ಬಿಟ್ಟಿಲ್ಲ ಅಂತಾ ಹೇಳಬಹುದು. ಹೌದು ನೀರು ಬಿಟ್ಟಿದ್ದಾರೆ ಅನಿವಾರ್ಯತೆ ಇದೆ ಅದನ್ನು ಒಪ್ಪುತ್ತೇನೆ. ಆದರೆ ಮಳೆ ಕೊರತೆಯಿಂದ ನಮ್ಮ ರೈತರ ಬೆಳೆ ನಾಶವಾಗ್ತಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಕಾವೇರಿ ನದಿ ಸಂಬಂಧ ಸಭೆಗಳಲ್ಲಿ ತಮಿಳುನಾಡಿನ 10-15 ಅಧಿಕಾರಿಗಳು ಭಾಗಿಯಾಗ್ತಾರೆ. ಆದರೆ ನಮ್ಮ ಅಧಿಕಾರಿಗಳು ಒಬ್ಬರೋ ಇಬ್ಬರೂ ಕಾಟಾಚಾರಕ್ಕೆ ಭಾಗಿಯಾಗುತ್ತಿದ್ದಾರೆ ಎಂದರು.
ಉಡುಪಿ: ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಬಟ್ಟೆ ಅಂಗಡಿ ತೆರೆಯುವ ಹೆಸರಿನಲ್ಲಿ 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನ ಮೇರೆಗೆ ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬ್ರಹ್ಮಾವರದ ಸುದಿನ ಎಂಬುವವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಹಿಂದು ಧ್ವಜ, ಕೇಸರಿ ಬಂಟಿಂಗ್ಸ್ ಉದ್ಯಮ ಆರಂಭಿಸುವುದಾಗಿ ಸುಮಾರು 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿಜೆಪಿ ಟಿಕೆಟ್ ಹೆಸರಿನಲ್ಲಿ ವಂಚನೆ ಎಸಗಿದ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ಎಸ್ಕೇಪ್ ಆಗಿದ್ದರು. ಆಶ್ರಮದಲ್ಲಿರುವ ಕಾರನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ದಾರಿಯೂ, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು. ಆದರೆ, ಸೆ. 19ರ ಬೆಳಗ್ಗೆ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಮಾಡುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯ ಬಳಿಕ ಅವರು ಮಾತನಾಡಿದರು. ಹುಕ್ಕಾ ಬಾರ್ ನಿಂದಚಿಕ್ಕ ಮಕ್ಕಳ ಬಹಳವೇ ಪರಿಣಾಮ ಆಗುತ್ತಿದೆ. ಇದು ತಂಬಾಕು ಸೇವನೆಯ ಪ್ರಕ್ರಿಯೆಯಾಗಿದೆ. ಹುಕ್ಕಾಬಾರ್ ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ನಾವು ಕಂಟ್ರೋಲ್ ಮಾಡಲು ಮುಂದಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಹುಕ್ಕಾ ಬಾರ್ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ. ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲು ಮುಂದಾಗಿದ್ದೇವೆ. ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟಕ್ಕೆ…
ನವದೆಹಲಿ: ಆಡಳಿತಾರೂಢ ಎನ್ ಡಿಎ, ಸಂಸತ್ತಿನಲ್ಲಿ ಮಹಿಳೆಯರಿಗೆ ಗಣನೀಯ ಪ್ರಮಾಣದ ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಮಂಡಿಸಿದೆ. ಇಂದು ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಹಿಳೆಯರಿಗೆ ಶೇಖಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾಯಿತ ಮಸೂದೆಯನ್ನು ಮಂಡಿಸಿದರು. ಹೊಸ ಸಂಸತ್ ಭವನದಲ್ಲಿ ನಡೆದ ಎರಡನೇ ದಿನದ ಸಂಸತ್ ವಿಶೇಷ ಅಧಿವೇಶನ ನಾಳೆಗೆ ಮುಂದೂಡಲ್ಪಟ್ಟಿದೆ. ನಾಳೆ 11ಗಂಟೆಗೆ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ನಾಳಿನ ಅಧಿವೇಶನದಲ್ಲಿ ಅಂಗೀಕಾರ ಸಿಗುವ ಸಾಧ್ಯತೆ ಇದೆ.
33 ರಷ್ಟು ವೇತನ ಮೀಸಲಾತಿಗೆ ಗುರಿಪಡಿಸುವ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಬುಧವಾರ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗಲಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳು ಮತ್ತು ಸ್ಥಳೀಯ ಪಕ್ಷಗಳು ರಂಗಕ್ಕೆ ಬಂದವು. ವಿಶೇಷ ಅಧಿವೇಶನಕ್ಕೂ ಮುನ್ನ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಪಕ್ಷಗಳು ಮುಂದಾಗಿದ್ದವು. ಸರ್ವಪಕ್ಷ ಸಭೆಯ ನಂತರ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಈ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಬೇಕೆಂದು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ಹೇಳಿಕೆ ನೀಡಿದ್ದರು. 34 ಪಕ್ಷಗಳು ಭಾಗವಹಿಸಿದ್ದ ಸರ್ವಪಕ್ಷ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪ್ರಮುಖ ಬೇಡಿಕೆಯಾಗಿತ್ತು. ಪ್ರತಿಪಕ್ಷಗಳ ಹೊರತಾಗಿ ಬಿಜೆಪಿಯ ಮಿತ್ರಪಕ್ಷಗಳು ಕೂಡ ಮಸೂದೆಯ ಪರವಾಗಿ ನಿಲುವು ತಳೆದಿವೆ. ಮಹಿಳಾ ಮೀಸಲಾತಿ ವಿಧೇಯಕ ತರಬೇಕು ಎಂದು ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ಸೇರಿದಂತೆ ಒತ್ತಾಯಿಸಿದರು.
ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಾಯಕಾರಿ ಬೈಕ್ ಸ್ಟಂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾದ ಜನಪ್ರಿಯ ಬೈಕ್ ಸವಾರ/ ಯೂಟ್ಯೂಬರ್ ಟಿಟಿಎಫ್ ವಾಸನ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಲ್ಲಿ 24 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಕಾಂಚೀಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಕೈ ಮುರಿದಿದ್ದು, ಮೊಣಕಾಲಿಗೂ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ತಮಿಳು ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ಲಸ್ ಟು ವಿದ್ಯಾರ್ಥಿನಿ ಮೀರಾ (16) ಮೃತರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.