Subscribe to Updates
Get the latest creative news from FooBar about art, design and business.
- ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
- 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
- ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
- ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
- ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
- ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
Author: admin
ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಾಸ್ಯನಟ ಬೋಂಡಾ ಮಣಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ. ಶ್ರೀಲಂಕಾ ಮೂಲದ ಬೋಂಡಾ ಮಣಿ ಅವರು ಭಾಗ್ಯರಾಜ್ ಅವರ 1991 ರ ಚಲನಚಿತ್ರ ‘ಪೌನು ಪೌನುತಾನ್’ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅದಾದ ನಂತರ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಲು ಆರಂಭಿಸಿದ ಅವರು ವಿವಿಧ ಪಾತ್ರಗಳಲ್ಲಿ ನಟಿಸಿ ಹಾಸ್ಯ ನಟರಾಗಿ ಖ್ಯಾತಿ ಪಡೆದರು. ‘ಸುಂಧರಾ ಟ್ರಾವೆಲ್ಸ್’, ‘ಮರುದಮಲೈ’, ‘ವಿನ್ನರ್’, ‘ವೇಲಾಯುತಂ’, ‘ಜಿಲ್ಲಾ’ ಸೇರಿದಂತೆ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದರು. ಅವರು 2019 ರಲ್ಲಿ ಬಿಡುಗಡೆಯಾದ ‘ತನಿಮಾಯಿ’ ಚಿತ್ರದಲ್ಲಿ ನಟಿಸಿದ್ದಾರೆ. ವಡಿವೇಲು ಅವರೊಂದಿಗಿನ ಅವರ ವಿವಿಧ ಹಾಸ್ಯ ದೃಶ್ಯಗಳು ಗಮನ ಸೆಳೆದವು. ಕಳೆದ ವರ್ಷ ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡೂ ಕಿಡ್ನಿಗಳು ವಿಫಲವಾದಾಗ ತಿಂಗಳಿಗೊಮ್ಮೆ ಡಯಾಲಿಸಿಸ್ ಮಾಡಲು ಆಸ್ಪತ್ರೆಗೆ ಹೋಗುತ್ತಿದ್ದರು. ಈ ಪರಿಸ್ಥಿತಿಯಲ್ಲಿ ನಿನ್ನೆ (ಡಿ.23) ರಾತ್ರಿ 11.30ಕ್ಕೆ ಪಲ್ಲಾವರಂ ಬಳಿಯ ಬೋಜಿಚಲೂರಿನಲ್ಲಿರುವ ತಮ್ಮ ಮನೆಯಲ್ಲಿ ನಟ ಬೋಂಡಾ ಮಣಿ ಅವರು ಹಠಾತ್…
ಸಿದ್ದರಾಮಯ್ಯ ಅವರು ಯಾವುದೇ ಒಂದು ಪಂಗಡದ ಸಿಎಂ ಅಲ್ಲ; ಅವರು ಕರ್ನಾಟಕದ ಎಲ್ಲ ಸಮುದಾಯದ ಮುಖ್ಯಮಂತ್ರಿ: ಪೇಜಾವರ ಶ್ರೀಗಳು
ಹಿಜಾಬ್ ನಿಷೇಧ ವಾಪಾಸ್ ಪಡೆಯುತ್ತೇವೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು, ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟಾಗುತ್ತದೆ. ಕಾನೂನು ಮಾಡಲಿ ಅದು ಸಮಾಜದಲ್ಲಿ ಒಂದು ಪಂಗಡವನ್ನ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಅವರು ಕರ್ನಾಟಕದ ಎಲ್ಲ ಸಮುದಾಯದ ಮುಖ್ಯಮಂತ್ರಿ. ಸರ್ಕಾರ, ಸಿಎಂ ವರ್ತನೆ ಸಮಾಜದಲ್ಲಿ ಶೋಭೆ ತರುವಂತಹದ್ದು ಅಲ್ಲ. ಇಂತಹ ನಡವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಸಿದ್ದರಾಮಯ್ಯ ಹೀಗೆ ಆಡಳಿತ ಮಾಡಬಾರದು ಎಂದು ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ, ಮಿಷನ್ 2024 ಕ್ಕೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಎರಡು ದಿನಗಳ ಸಭೆಯಲ್ಲಿ ಮೋದಿ ಈ ಕರೆ ನೀಡಿದ್ದಾರೆ. ಮಹಿಳೆಯರು, ಯುವಕರು, ರೈತರು ಮತ್ತು ಬಡವರನ್ನ ದೇಶಾದ್ಯಂತ ಪಕ್ಷದೊಂದಿಗೆ ಸಂಪರ್ಕಿಸಲು ಬಿಜೆಪಿ ಅಭಿಯಾನ ನಡೆಸಲಿದೆ. ಜತೆಗೆ ಮೋದಿ ಅವರು ಜನವರಿಯಲ್ಲಿ ದೇಶಾದ್ಯಂತ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಮತದಾರರೊಂದಿಗೆ ಸಂಪರ್ಕದಲ್ಲಿರಲು ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಕಾರ್ಯಕರ್ತರು ಆಯಾ ಬೂತ್ ಗಳ ಮತದಾರರ ಮನೆಗಳಿಗೆ ಹೋಗಿ ಅವರನ್ನ ಭೇಟಿ ಮಾಡಬೇಕು ಎಂದು ಹೇಳಲಾಗಿದೆ.
ಬೆಂಗಳೂರು: ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ನಿರ್ಧಾರವನ್ನ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ಈ ನಿರ್ಧಾರವನ್ನ ಖಂಡಿಸುತ್ತೇನೆ. ಇದು ಶೋಭೆ ತರುವಂತಹದ್ದಲ್ಲ, ಅಧಿಕಾರ ಇದೆ ಅಂತ ರಾಜಕೀಯ ದೊಂಬರಾಟ ಮಾಡಲು ಹೊರಟಿದ್ದಾರೆ. ನೋಡೋಣ ಎಲ್ಲಿಯವರೆಗೆ ಇದೇ ರೀತಿ ಮಾಡ್ತಾರೆ ಅಂತ. ಬಿಜೆಪಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ವಿಚಾರ ಇಲ್ಲ, ಜನರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ. ಶಾಲೆಗಳಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯಬೇಕೆಂಬ ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ. ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ ಅಗತ್ಯ. ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ. ಈಗಲೇ ಎಚ್ಚೆತ್ತು ತೀರ್ಮಾನ ವಾಪಸ್ ಪಡೆಯಬೇಕು ಎಂದು ಎಚ್ಚರಿಸಿದ್ದಾರೆ.
ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹಿಜಾಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಾಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದು ಎಚ್ಚರಿಸಿದರು. ಈ ರೀತಿ ಆದ್ರೆ ಶ್ರೀಮಂತರ ಒಳ್ಳೆಯ ಬಟ್ಟೆ, ಬಂಗಾರ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳಿಗೆ ಹೇಗೆ ಅನಿಸುತ್ತೆ, ಬೇಜಾರಾಗುತ್ತೆ. ಹಿಂದೂಗಳು ಗೋಮಾಂಸ ತಿನ್ನಬಾರದು ಅಂತಾ ಇದೆ, ಅದಕ್ಕೆ ನಾವು ತಿನ್ನಲ್ಲ. ಮುಸ್ಲಿಮರು ಹಂದಿ ತಿನ್ನಬಾರದು ಅಂತಾ ಇದೆ, ಅದಕ್ಕೆ ಅವರು ತಿನ್ನಲ್ಲ. ತಿನ್ನುವುದರ ಬಗ್ಗೆ ಯಾರೂ ಏನೂ ಹೇಳಿಲ್ಲ. ಒಟ್ಟಿನಲ್ಲಿ…
ರಾಜ್ಯದಲ್ಲಿ ಕೊರೋನಾ ಏರಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ, ನಿರ್ವಹಣೆಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಸಚಿವರಾದ ಹೆಚ್.ಸಿ. ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್ ಹಾಗೂ ಎಂ.ಸಿ. ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೋವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.
ಬರ ಪರಿಸ್ಥಿತಿ ಸಂಬಂಧ ಚರ್ಚಿಸಲು ತೆರಳಿದ್ದ ವೇಳೆ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದನ್ನು ಟೀಕಿಸಿದ್ದ ಬಿಜೆಪಿ ನಾಯಕರಿಗೆ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೆ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ. ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್ ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ ಎಂದು ಟಾಂಗ್ ನೀಡಿದ್ದಾರೆ. ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್ ವರೆಗೆ ಪ್ರಧಾನಿ ನರೇಂದ್ರ…
ಮದುವೆಯಾಗಿ ಐದು ವರ್ಷ ಆಗಿತ್ತು. ಆರಂಭದಲ್ಲಿ ಸಂಸಾರ ಚೆನ್ನಾಗಿಯೇ ಇತ್ತು. ಬಳಿಕ ಇಬ್ಬರಲ್ಲಿಯೂ ಭಿನ್ನಾಭಿಪ್ರಾಯ ಶುರುವಾಗಿ ಪತ್ನಿಯು ಕಳೆದ ಎರಡು ವರ್ಷದಿಂದ ಗಂಡನ ಮನೆ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದಳು. ಈ ನಡುವೆ ಪತ್ನಿಯು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕವನ ಮೃತ ದರ್ದೈವಿಯಾಗಿದ್ದಾಳೆ. ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಈ ನಡುವೆ ಪತಿ ಪತ್ನಿ ನಡುವೆ ಮನಸ್ತಾಪ ಜಗಳ ಶುರುವಾಗಿತ್ತು. ಪತಿ ಕುಡಿದು ಬಂದು ಪದೇ ಪದೇ ಪತ್ನಿಯ ಜೊತೆ ಗಲಾಟೆ ಮಾಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸೇರಿ ಇಬ್ಬರೂ ರಿಪ್ಪನಪೇಟೆಯಲ್ಲಿ ವಾಸವಾಗಿದ್ದರು. ಇದರ ಬಳಿಕವೂ ಕಳೆದ ಎರಡು ವರ್ಷದ ಹಿಂದೆ ಪತಿ ಗಲಾಟೆ ಮಾಡಿಕೊಂಡು ಹೋಗಿದ್ದಾನೆ. ಆತ ವಾಪಸ್ ಬರಲೇ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕವನಾ ಮಗಳನ್ನು ತವರು ಮನೆಗೆ ಕಳುಹಿಸಿ, ಒಬ್ಬಳೇ ಮನೆಯಲ್ಲಿ ವಾಸವಾಗಿದ್ದಳು. ರಿಪ್ಪನಪೇಟೆ ಪಟ್ಟಣದ ಸೂಪರ್ ಮಾರ್ಕೇಟ್ ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಸ್ನೇಹಿತೆಯೊಬ್ಬರು ಮನೆ ಹತ್ತಿರ ಹೋಗಿ ನೋಡಿದಾಗ ಮನೆ ಬಾಗಿಲು…
ಉತ್ತರ ಕನ್ನಡ: ಆಟವಾಡುತ್ತಾ ಇಟ್ಟಿಗೆ ತಯಾರಿಕೆಗೆ ಶೇಖರಿಸಿಟ್ಟಿದ್ದ ನೀರಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ. ಇಂದೂರಿನ ಮಾನ್ವಿತ ಮಲ್ಲಿಕಾರ್ಜುನ ಹೊಸೂರ(3) ಮೃತ ಮಗು. ಇನ್ನು ಮಗುವಿನ ತಾಯಿ ಮಾನ್ವಿತಳನ್ನು ತನ್ನ ಜೊತೆಗೆ ಇಟ್ಟಿಗೆ ಕೆಲಸಕ್ಕೆ ಕರೆತಂದಿದ್ದಳು. ತಾಯಿ ತನ್ನ ಕೆಲಸದಲ್ಲಿ ನಿರತಳಾಗಿದ್ದಾಗ ಮಗು ಮಾನ್ವಿತ ನೀರಿಗೆ ಬಿದ್ದು ಕೊನೆಯುಸಿರೆಳೆದಿದೆ. ಇನ್ನು ಮಗು ಬಿದ್ದಿದ್ದನ್ನು ನೋಡಿದ ತಾಯಿ ಕೂಡಲೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ಮಗುವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಕ್ರಿಸ್ ಮಸ್ ಹಬ್ಬಕ್ಕೆ ರಜೆಯಿರುವ ಹಿನ್ನೆಲೆ ಕೆಎಸ್ ಆರ್ ಟಿಸಿ ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ ಹೆಚ್ಚುವರಿ ಬಸ್ ಗಳು ಕಾರ್ಯನಿರ್ವಹಿಸಲಿವೆ. ಅದರಂತೆ ಡಿ.25 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ಕಾರ್ಯಾಚರಣೆಗೊಳ್ಳಲಿದೆ. ವಿವಿಧ ಸ್ಥಳಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದ್ದು ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದು ಎಂದು ತಿಳಿಸಲಾಗಿದೆ. ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದಾಗಿದೆ. ಇ-ಟಿಕೆಟ್ ಸಹ ವೆಬ್ ಸೈಟ್ ಮೂಲಕ ಪಡೆಯಬಹುದು. ಇನ್ನು ಕೆಎಸ್ ಆರ್ ಟಿಸಿಯು ಪ್ರತಿ ಹಬ್ಬಗಳಲ್ಲೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ…