Author: admin

2024 ರ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯನ್ನು ರಚಿಸಿತು. ಪಿ. ಚಿದಂಬರಂ ಅವರನ್ನು ಸಮಿತಿಯ ಅಧ್ಯಕ್ಷರಾಗಿ ಮತ್ತು ಟಿಎಸ್ ಸಿಂಗ್ ದೇವ್ ಅವರನ್ನು ಸಮಿತಿ ಸಂಚಾಲಕರನ್ನಾಗಿ ನೇಮಿಸಲಾಯಿತು. ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಸಿದ್ದರಾಮಯ್ಯ ಮತ್ತು ಜೈರಾಮ್ ರಮೇಶ್ ಅವರನ್ನೊಳಗೊಂಡ 16 ಸದಸ್ಯರ ಸಮಿತಿಯನ್ನು ರಚಿಸಲಾಯಿತು. ಕಾಂಗ್ರೆಸ್ ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಚರ್ಚೆಗೆ ಬರಲಿದೆ. ಇದೇ ವೇಳೆ ಪ್ರಧಾನಿ ಮುಖಾಮುಖಿ ವಿಚಾರವಾಗಿ ಭಾರತ ಮೈತ್ರಿಯಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯವನ್ನು ಬಗೆಹರಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶೀಘ್ರದಲ್ಲೇ ಭಾರತದ ಮೈತ್ರಿಕೂಟದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಕಳೆದ ದಿನ ರಾಹುಲ್ ಗಾಂಧಿ ಅವರು ನಿತೀಶ್ ಕುಮಾರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು.

Read More

ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲು ಇಂದು ದೆಹಲಿಯಲ್ಲಿ ಬಿಜೆಪಿ ನಾಯಕತ್ವ ಸಭೆ. ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಹಿಸಿದ್ದರು. ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಕಳೆದ ಐದು ರಾಜ್ಯಗಳ ಚುನಾವಣಾ ಫಲಿತಾಂಶಗಳ ಮೌಲ್ಯಮಾಪನವೂ ನಡೆಯಲಿದೆ. ಸಭೆಯಲ್ಲಿ ಮೈತ್ರಿಯನ್ನು ಎದುರಿಸಲು ಭಾರತ ಕಾರ್ಯತಂತ್ರಗಳನ್ನು ರೂಪಿಸಲಿದೆ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನಿರಂತರ ಅಧಿಕಾರದ ಗುರಿ ಹೊಂದಿದೆ. ಮಹಿಳಾ ಮೀಸಲಾತಿ, ಕೇಂದ್ರದ ಯೋಜನೆಗಳ ಉತ್ತೇಜನ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಅಭಿವೃದ್ಧಿ ಸಾಧನೆಗಳ ಕುರಿತು ಲೋಕಸಭೆ ಚುನಾವಣೆಗೂ ಮುನ್ನ ಪ್ರಚಾರವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.

Read More

ದತ್ತಪೀಠದಲ್ಲಿ ದತ್ತಜಯಂತಿ ನಡೆಯುವ ಹಿನ್ನೆಲೆ  ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಚಿಕ್ಕಮಗಳೂರಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿದೆ. ಹೀಗಾಗಿ ಡಿಸೆಂಬರ್ 22ರಿಂದ 27ರವರೆಗೆ ಈ ಪ್ರದೇಶದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ರಜೆ ಇದೆ. ಹೀಗಾಗಿ ಅನೇಕರು ಪ್ರವಾಸಕ್ಕೆ ಬರುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ. ಇನ್ನು 3 ದಿನ ಮದ್ಯ ಮಾರಾಟವನ್ನೂ ಕೂಡ ನಿಷೇಧಿಸಲಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ಶೃಂಗೇರಿ ಕೊಪ್ಪ ಎನ್.ಆರ್. ಪುರದಲ್ಲಿ ಮದ್ಯ ನಿಷೇಧ ಹೇರಲಾಗಿದೆ.

Read More

ಧಾರವಾಡ ಲೋಕಸಭಾ ಕ್ಷೇತ್ರದಿಂದ  ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಹಬ್ಬಿದ್ದು, ಈ ಬಗ್ಗೆ ಸ್ವತಃ ಜಗದೀಶ್ ಶೆಟ್ಟರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿಎಂ ಸಮ್ಮುಖದಲ್ಲೇ  ನಾನು ಚುನಾವಣೆಗೆ ನಿಲ್ಲಲ್ಲ ಎಂದಿದ್ದೇನೆ. ಕಾಂಗ್ರೆಸ್ ನಿಂದ ಯಾರನ್ನೇ ಕಣಕ್ಕಿಳಿಸಿದರೂ ಫೈಟ್ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸಲು ಶ್ರಮಿಸುತ್ತೇನೆ. ಲೋಸಕಭೆ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು. ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಅಭ್ಯರ್ಥಿ ಆಯ್ಕೆ ಸಂಬಂಧ ಮೊನ್ನೆಯಷ್ಟೆ ವೀಕ್ಷಕರ ಸಭೆ ನಡೆಸಿದ್ದಾರೆ.  ಇದರ ನಡುವೆಯೇ ನನ್ನ ಹೆಸರು ಕಳಿಸಿದ್ದಾರೆ ಎನ್ನುತ್ತಿದ್ದೀರಿ. ಆದರೆ ಸಿಎಂ ಸಮ್ಮುಖದಲ್ಲೇ ನಾನು ಸ್ಪರ್ಧೆ ಮಾಡಲ್ಲ ಎಂದಿದ್ದೇನೆ ಎಂದರು.

Read More

ಕೋವಿಡ್ ಮಹಾಮಾರಿಯಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ..! ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾ ಸೋಂಕಿನ ವಿರುದ್ದದ ಹೋರಾಟದಲ್ಲಿ ಎಲ್ಲರೂ ಸರ್ಕಾರದ ಜೊತೆ ಕೈಜೋಡಿಸಬೇಕು. ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆಯುವುದು, ಕೆಮ್ಮುವಾಗ-ಸೀನುವಾಗ ಕರವಸ್ತ್ರವನ್ನು ಅಡ್ಡಲಾಗಿ ಹಿಡಿಯುವುದು, ನೈರ್ಮಲ್ಯ ಕಾಪಾಡುವುದು ಮತ್ತಿತರ ಸೂಕ್ತ ಅಭ್ಯಾಸಗಳನ್ನು ಎಲ್ಲರೂ ಅನುಸರಿಸಬೇಕು. ಹಸಿರು ಪಪ್ಪಾಯಿಯಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು: ಚಳಿಗಾಲದಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದು ದೇಹವನ್ನು ಒಳಗಿನಿಂದ ಬೆಚ್ಚಗಿಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಕಾಯಿ/ ಹಸಿ ಪಪ್ಪಾಯಿಯನ್ನು ತಿನ್ನುವುದರಿಂದ ಅಸಿಡಿಟಿ, ವಾಯು ಮತ್ತು ಮಲಬದ್ಧತೆಯಂತಹ ಅಜೀರ್ಣ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಯಂತಹ ಪೋಷಕಾಂಶಗಳಿವೆ. ಹಸಿ ಪಪ್ಪಾಯಿ ಜ್ಯೂಸ್ ಕುಡಿಯುವುದರಿಂದ ಡೆಂಗ್ಯೂ ವಾಸಿಯಾಗುತ್ತದೆ. ತೂಕ ನಷ್ಟಕ್ಕೂ ಇದು ಉಪಯುಕ್ತವಾಗಿದೆ. ಮೂಲಂಗಿ ಎಲೆಗಳಲ್ಲಿ ಇವೆ ಹಲವಾರು ಆರೋಗ್ಯ ಪ್ರಯೋಜನಗಳು: ಮೂಲಂಗಿ ಎಲೆಗಳಲ್ಲಿ ಪೋಷಕಾಂಶಗಳು ಹೇರಳವಾಗಿವೆ ಎನ್ನುತ್ತಾರೆ ತಜ್ಞರು. ಈ ಎಲೆಗಳಲ್ಲಿ…

Read More

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿ ಆಗಿರುತ್ತದೆ ಎಂದು ಹೇಳಿದರು. ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು. ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ…

Read More

ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೊದಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಗಣ ರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಜನವರಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಫ್ರಾನ್ಸ್ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅವರೇ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ. ಶಾಲಾ ಮಕ್ಕಳನ್ನು ಯಾರೂ ದುರುಪಯೋಗ ಮಾಡಿಕೊಳ್ಳಬಾರದು. NSS ಇತ್ತು, ಗಿಡ ನೆಡುವುದು, ಸ್ವಚ್ಛತೆ ಮಾಡುವ ಕೆಲಸ ಮಾಡುತ್ತಿದ್ದರು. ಆದ್ರೆ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ ಎಂದು ಖಡಕ್ ಆಗಿ ಹೇಳಿದರು. ಮಕ್ಕಳಿಗೆ ಶಕ್ತಿಕೊಡುವ ಕೆಲಸ ಮಾಡಬೇಕು. ಶಾಲೆಯಲ್ಲಿ ಕಮಿಟಿ ಇದೆ. ಸ್ವಚ್ಛತೆ ಮಾಡುವ ಸಂದರ್ಭದಲ್ಲಿ ಅವರು ಕ್ರಮ ವಹಿಸಬೇಕು. ಮಕ್ಕಳನ್ನು ದುರುಪಯೋಗ ಮಾಡುವುದನ್ನು ತಡೆಯಬೇಕಿದೆ. ಎನ್ ಎಸ್ಎಸ್ ಆ ಜಾಗವನ್ನು ಸ್ವಚ್ಛತೆ ಮಾಡುವುದು, ಗಿಡ ನೆಡುವುದನ್ನು ಮಾಡುತ್ತಿದ್ದರು. ಈಗ ಶೌಚಾಲಯ ಸ್ವಚ್ಛತೆ ಮಾಡುವುದಕ್ಕೆ ಬಿಡೋದಿಲ್ಲ. ಮುಂದಕ್ಕೂ ಬಿಡುವುದಿಲ್ಲ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದರು.

Read More

ಬೆಂಗಳೂರು: ಗೃಹ ಸಚಿವ ಡಾ. ಪರಮೇಶ್ವರ್ ಅವರು ಹೊಸವರ್ಷಾಚರಣೆ ಸಂಬಂಧ ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಹೊಸ ವರ್ಷಾಚರಣೆ ವೇಳೆ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ. ಹಾಗೂ ಕೊರೊನಾ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ. ಗೃಹ ಸಚಿವ ಡಾ.ಪರಮೇಶ್ವರ್ ಅವರು ಇಂದು ವಿಧಾನಸೌಧದಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವಾರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ MG ರೋಡ್, ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನ ಸೇರಿ ಹೊಸ ವರ್ಷವನ್ನು ಆಚರಣೆ ಮಾಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಕೆಲವು ಅಹಿತಕರ ಘಟನೆಗಳು ಸಹ ನಡೆದಿದೆ. ಪೊಲೀಸ್ ಇಲಾಖೆ, ಮತ್ತು ಅಬಕಾರಿ ಇಲಾಖೆ, ಮೆಟ್ರೋ, ಕೆಎಸ್ಆರ್ಟಿಸಿ ಎಲ್ಲರನ್ನೂ ಕರೆದು ಸಭೆ ಮಾಡಿದ್ದೇನೆ. ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯಬಾರದು. ಅದರ ಜೊತೆಗೂ ಕೋವಿಡ್ ಪ್ರಾರಂಭವಾಗಿದೆ. ಈ…

Read More

ಬೆಂಗಳೂರು: ಅಪ್ಪ- ಮಗನಿಂದ ವ್ಯಕ್ತಿಯೋರ್ವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಆರ್ ಆರ್ ನಗರದ ಜವರೇಗೌಡನಗರದಲ್ಲಿ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಜವರೇಗೌಡ ನಗರದ ರಾಮದಾಸ್ 7 ನೇ ಕ್ರಾಸ್ ನಲ್ಲಿ ಮೋಹನ್ ಗೌಡ ಹಾಗೂ ಪಕ್ಕದಲ್ಲಿ ಕೃಷ್ಣಪ್ಪ ಎನ್ನುವವರ ಮನೆ ಇದೆ. ಕೃಷ್ಣಪ್ಪ ಟಾಟಾ ಏಸ್ ಗಾಡಿ ತಂದು ಅವರ ಮನೆ ಮುಂದೆ ಪಾರ್ಕ್ ಮಾಡಿದ್ದಾಗ, ಗಾಡಿ ಮೋಹನ್ ಗೌಡ ಅವರ ಮನೆಯ ಸೀಟ್ ಗೆ ಟಚ್ ಆಗಿತ್ತು. ಈ ಹಿನ್ನಲೆ ಪಕ್ಕದ ಮನೆಯ ಮೋಹನ್ ಗೌಡ್ ಹಾಗೂ ಆತನ ಮಗ ತೇಜಸ್ ಗೌಡ ಎಂಬುವವರು ಕಿರಿಕ್ ಮಾಡಿದ್ದರು. ಟಾಟ್ ಏಸ್ ನಮ್ಮ ಮನೆ ಸೀಟ್ ಗೆ ಟಚ್ ಆಗಿದೆ ಎಂದು ಕೃಷ್ಣಪ್ಪ ಜೊತೆ ಗಲಾಟೆ ಶುರು ಮಾಡಿದ ಅಪ್ಪ ಮತ್ತು ಮಗ. ಈ ವೇಳೆ ಏಕಾಏಕಿ ಕೃಷ್ಣಪ್ಪ ಮೇಲೆ ಅಪ್ಪ ಮೋಹನ್ ಗೌಡ, ಮಗ ತೇಜಸ್ ಗೌಡ ಮನಸೋ ಇಚ್ಚೆ ಹಲ್ಲೆ ನಡೆಸಿ ಕೃಷ್ಣಪ್ಪನನ್ನು ಥಳಿಸಿದ್ದು,…

Read More