Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ನೊಣವಿನಕೆರೆ: ಇಲ್ಲಿನ ಪಿಎಂಶ್ರೀ — ಕೆ ಪಿ ಎಸ್ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಹಳ್ಳಿಯ ಸೊಗಡನ್ನು ಮರುಸೃಷ್ಟಿಸುವ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ಆಚರಿಸಲಾಯಿತು. ಹಟ್ಟಿಯ ಗೌಡರಾಗಿ ಮಿಂಚಿದ ಮುಖ್ಯಶಿಕ್ಷಕರು: ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸುರೇಶ್ ಅವರು ಉದ್ಘಾಟಿಸಿದರು. ವಿಶೇಷವಾಗಿ ಅವರು ‘ಪಿ ಎಂ ಶ್ರೀ ಹಟ್ಟಿಯ ಗೌಡರಾಗಿ’ ಸಂಕ್ರಾಂತಿ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶಾಲಾ ಚಿತ್ರಕಲಾ ಶಿಕ್ಷಕರು ರಚಿಸಿದ ವರ್ಲಿ ಚಿತ್ರಕಲಾಕೃತಿಯನ್ನು ಅನಾವರಣಗೊಳಿಸಲಾಯಿತು. ಈ ಕಲಾಕೃತಿಯಲ್ಲಿ ಹಳ್ಳಿಯ ಜೀವನ ಶೈಲಿ ಮತ್ತು ಸಂಕ್ರಾಂತಿಯ ಸಂಭ್ರಮವನ್ನು ಅದ್ಭುತವಾಗಿ ಚಿತ್ರಿಸಲಾಗಿದ್ದು, ಮುಖ್ಯಶಿಕ್ಷಕರು ಇದನ್ನು ಲೋಕಾರ್ಪಣೆ ಮಾಡಿದರು. ಹಬ್ಬದ ಪ್ರಯುಕ್ತ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಬಣ್ಣ ಬಣ್ಣದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಂಭ್ರಮಿಸಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ (SDMC)…
ತುರುವೇಕೆರೆ. ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಪಂಚಾಯಿತಿ ವತಿಯಿಂದ ಪಂಚಾಯಿತಿ ಅಧ್ಯಕ್ಷರಾದ ಎನ್.ವಿ.ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯನ್ನು ನಡೆಸಲಾಯಿತು. ಇದೇ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರಿಗೆ ಸಿಗುವಂತಹ 5% ಅನುದಾನ ಕುರಿತು ಮಾಹಿತಿ ನೀಡಿ ವಿಕಲಚೇತನರಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಬೇಕಿದ್ದರೆ, ನೇರವಾಗಿ ಗ್ರಾಮ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಎಂದರು. ಬಳಿಕ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಹೇಮಂತ ಕುಮಾರಿ ಮಾತನಾಡಿ, ವಿಕಲಚೇತನರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸುಮಾರು ಹದಿಮೂರು ಯೋಜನೆಗಳು ಲಭ್ಯವಿದ್ದು, ಅದರ ಅನುಸಾರವಾಗಿ ನಿರಾಮಯ ಆರೈಕೆದಾರದ ಮಾಹಿತಿ ಜೊತೆಗೆ ಅಂದ ಮಹಿಳೆಯರ ಮಕ್ಕಳ ಪೋಷಣ ವಿದ್ಯಾರ್ಥಿ ವೇತನ ಶುಲ್ಕ ಮರುಪಾವತಿ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್ಟಾಪ್, ತ್ರಿಚಕ್ರ ವಾಹನ, ಹಾಗೂ ವಿಕಲಚೇತನರಿಗೆ ಸಂಬಂಧಪಟ್ಟಂತೆ ಇನ್ನೂ ಹಲವು ಮಾಹಿತಿ ನೀಡಿ ಹಾಗೂ ಸೌಲಭ್ಯಗಳ ಬಗ್ಗೆ ತಿಳಿಸಿಕೊಟ್ಟರು. ಇದೇ…
ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಲೋಚನೆಗಳು ಹಾಗೂ ಮಹಾತ್ಮ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರ ಸಂಕಿರಣ ನಡೆಯಿತು. ವಿಚಾರ ಸಂಕಿರಣದ ಮುಖ್ಯ ವಿಷಯವಾಗಿ “ಒಳ ಮೀಸಲಾತಿಯ ಒಳಸುಳಿ ಹಾಗೂ ಮೀಸಲಾತಿಯ ಮುನ್ನೋಟ” ಕುರಿತು ವಿಸ್ತೃತ ಮತ್ತು ಗಂಭೀರ ಚರ್ಚೆಗಳು ನಡೆಯುವ ಮೂಲಕ ಸಾಮಾಜಿಕ ನ್ಯಾಯದ ವಿವಿಧ ಆಯಾಮಗಳನ್ನು ಅನಾವರಣಗೊಳಿಸಲಾಯಿತು. ಪ್ರೊ. ಶ್ರೀನಿವಾಸ್ ಜಿ. ಪ್ರಾಸ್ತಾವಿಕವಾಗಿ ಮಾತಾಡಿ, ಒಳಮೀಸಲಾತಿ ಸಾಮಾಜಿಕ ನ್ಯಾಯದ ಅನಿವಾರ್ಯ ಹಂತ ಎಂದು ಅಭಿಪ್ರಾಯಪಟ್ಟರು. ಅಲೆಮಾರಿ ಸಮುದಾಯಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಕನಿಷ್ಠ ಒಂದು ಶೇಕಡಾ ಮೀಸಲಾತಿ ನೀಡಬೇಕು ಎಂಬ ಸ್ಪಷ್ಟ ಬೇಡಿಕೆಯನ್ನು ಮುಂದಿಟ್ಟ ಅವರು, ನೂರು ಬಿಂದುಗಳ ರೋಸ್ಟರ್ ವ್ಯವಸ್ಥೆಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿಗಳಿಗೆ ಕ್ರಮಬದ್ಧವಾಗಿ ಅವಕಾಶ ಕಲ್ಪಿಸುವಂತೆ ರೋಸ್ಟರ್‌ನಲ್ಲಿ ಸ್ಪಷ್ಟ ಹೆಸರೀಕರಣ ಮಾಡಬೇಕೆಂದು ಒತ್ತಾಯಿಸಿದರು. ರೋಸ್ಟರ್ ವ್ಯವಸ್ಥೆ ಪಾರದರ್ಶಕವಾಗಿರದೆ ಹೋದರೆ ಮೀಸಲಾತಿಯ…
ಸರಗೂರು: ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ , ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡಾಪಟುಗಳು ಮನೋರಂಜನೆಗಾಗಿ ಆಡಬೇಕು. ಕ್ರೀಡೆಗಳ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢ ರಾಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ದಂದು ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಅರ್ಜುನ ವಾಲಿಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭ ಪಂದ್ಯಾವಳಿಯಲ್ಲಿ ಮಾತನಾಡಿದರು. ಪಂದ್ಯಾಟದಲ್ಲಿ ಯಾವುದಾದರೂ ಒಂದು ತಂಡ ಗೆಲ್ಲಲೇ ಬೇಕು.ಇನ್ನೊಂದು ತಂಡ ಸೋಲಬೇಕು. ಇಂದಿನ ಪಂದ್ಯಾವಳಿ ಅತ್ಯಂತ ಶಿಸ್ತಿನಿಂದ ನಡೆದಿದೆ ಎಂದು ಅಭಿನಂದಿಸಿದರು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ತಲೆಮಾರಿನಿಂದ ವಾಲಿಬಾಲ್ ಆಟಗಾರರು ಇದ್ದಾರೆ. ಸರಗೂರಿನಲ್ಲಿ ವಾಲಿಬಾಲ್ ಪ್ರಸಿದ್ಧವಾದ ಆಟ. ಜಾತ್ರಾ ಹಾಗೂ ಜಯಂತಿ ಆಚರಣೆ ಮಾಡುವ ಸಮಯದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಪಂದ್ಯಾವಳಿಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ದಿನಗಳಲ್ಲಿ ಯುವಕರು ಕ್ಲಬ್ ಮಾಡಿ ಉತ್ತಮ ಸಾಮಾಜಿಕ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲೂಕಿನಲ್ಲಿ…
ಸರಗೂರು: ಶಿಥಿಲಗೊಂಡಿರುವ ಪಟ್ಟಣ ಪಂಚಾಯಿತಿ ಹಳೆಯ ಕಟ್ಟಡವನ್ನು ಶೀಘ್ರ‍್ರದಲ್ಲೇ ಕೆಡವಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನೂತನ ಅಧ್ಯಕ್ಷೆ ಚೈತ್ರಾಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಹೃದಯ ಭಾಗದಲ್ಲಿರುವ ಪಟ್ಟಣ ಪಂಚಾಯಿತಿ ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡವನ್ನು ನಿರ್ಮಿಸಬೇಕು. ಇದಕ್ಕಾಗಿ ೫೦ ಲಕ್ಷ ರೂ. ಅನುದಾನ ಇದ್ದು, ಹೆಚ್ಚುವರಿ ಅನುದಾನಕ್ಕಾಗಿ ಸರಕಾರದೊಂದಿಗೆ ಚರ್ಚಿಸಿ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಸಿದ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್‌ಕುಮಾರ್, ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರಕ್ಕೆ ಕಟ್ಟಡ ಸಮಸ್ಯೆಯಿದ್ದು, ಕಟ್ಟಡ ಗುರುತಿಸಿದ ಕೂಡಲೇ ಸ್ಥಳಾಂತರಗೊಂಡು ಪಂಚಾಯಿತಿ ಕಚೇರಿ ಕೆಡವಿ ನೂತನ ಕಟ್ಟಡ ನಿರ್ಮಾಣ ಮುಂದಾಗಲಾಗುವುದು. ಹೆಚ್ಚುವರಿಯಾಗಿ ಸರಕಾರಕ್ಕೆ ೫ ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಜಂಗಲ್ ತೆರವು ೭ ದಿನ ಗಡುವು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ…
ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಯುವ ನಾಯಕ ಹಾಗೂ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಸಿ.ಡಿ.ದಿವಾಕರ್ ಗೌಡ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಅತ್ಯಂತ ವಿಜ್ರಂಭಣೆಯಿಂದ ಆಚರಿಸಿದರು. ಹಳ್ಳಿ ಮೈಸೂರಿನಲ್ಲಿ ಅದ್ಧೂರಿ ಸಂಭ್ರಮ: ದಿವಾಕರ್ ಗೌಡ ಅವರ ಹುಟ್ಟುಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಹಳ್ಳಿ ಮೈಸೂರು ಹೋಬಳಿಯ ಅಭಿಮಾನಿ ಬಳಗದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಳ್ಳಿ ಮೈಸೂರು ಸರ್ಕಲ್‌ನಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳು, ಬೃಹತ್ ಕೇಕ್ ಕತ್ತರಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಜಯಘೋಷ ಹಾಕುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಈ ಸಂಭ್ರಮಾಚರಣೆಯಲ್ಲಿ ದಿವಾಕರ್ ಗೌಡ ಅವರ ಸಾವಿರಾರು ರೈತ ಅಭಿಮಾನಿಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು. ಕ್ಷೇತ್ರದ ಯುವ ಜನತೆ ಮತ್ತು ರೈತರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ…
ಕೊರಟಗೆರೆ : ವಾಹನ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನ ಪಾಲಿಸಬೇಕು ಎಂದು ಕೊರಟಗೆರೆ ಪಿಎಸೈ ತೀರ್ಥೇಶ್ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಕೊರಟಗೆರೆ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನ ಉದ್ದೇಶಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಅನೇಕ ಅಪಘಾತಗಳು ಮನುಷ್ಯನ ತಪ್ಪುಗಳಿಂದ ಆಗುತ್ತವೆ. ಅಪಘಾತದಲ್ಲಿ ಅಮಾಯಕ ಜನರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನ ಬೀದಿಪಾಲು ಮಾಡುತ್ತಾರೆ. ವಾನಹ ಚಾಲಕರು ವಾಹನದಲ್ಲಿ ಕುಳಿತುಕೊಂಡಾಗ ತಮ್ಮ ಕುಡುಂಬದವರನ್ನ ಒಂದು ಬಾರಿ ನೆನೆಸಿಕೊಳ್ಳಿ. ನಿಮಗೆ ಏನಾದರೂ ತೊಂದರೆ ಆದಲ್ಲಿ ಅವರ ಪರಿಸ್ಥಿತಿ ಏನು. ಅನೇಕರು ಕುಡಿದು ವಾಹನ ಚಾಲನೆ ಮಾಡುತ್ತಾರೆ. ಅದರಿಂದ ಅನೇಕ ಅಪಘಾತಗಳ ಸಂಭಿವಿಸಿ ಮೃತಪಟ್ಟುತ್ತಾರೆ ಎಂದು ತಿಳಿಸಿದರು. ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು ರಸ್ತೆ ನಿಯಮಗಳನ್ನ ಹಾಗೂ ಸಂಚಾರ ಚಿಹ್ನೆಗಳನ್ನ ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯ ತೋರದೆ ಸರ್ಕಾರದ ನಿಯಮಗಳನ್ನ ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ…
ಕೊರಟಗೆರೆ: ಪಟ್ಟಣದ ಗಿರಿನಗರ ಬಡಾವಣೆಯ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಗುರುಗಳ ಸಾಮೂಹಿಕ ಪ್ರಾರ್ಥನೆಯಲ್ಲಿ ಡಾ.ಜಿ ಪರಮೇಶ್ವರ್ ಭಾವಚಿತ್ರ ಹಿಡಿದು ಅವರು ಸಿಎಂ ಆಗಲಿ ಎಂದು ಸರ್ವಧರ್ಮದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 2000ಕ್ಕೂ ಹೆಚ್ಚು ಸ್ವಯಂಸೇವಕರು ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ನಯಾಜ್ ಮಾತನಾಡಿ: ಸರ್ವಧರ್ಮ ಗುರುಗಳ ಸಾಮೂಹಿಕ ಪ್ರಾರ್ಥನೆಯ ಮುಖೇನ 2,000 ಕಾರ್ಯಕರ್ತರ ಸಮ್ಮುಖದಲ್ಲಿ ಡಾ.ಜಿ.ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ, ಒಂದು ವೇಳೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದೇ ಇದ್ದಲ್ಲಿ ಕೊರಟಗೆರೆಯಿಂದ ದೆಹಲಿ ಚಲೋ ಬೃಹತ್ ಹೋರಾಟದ ಆಂದೋಲನ ನಡೆಸುತ್ತೇವೆ ಎಂದು ತಿಳಿಸಿದರು. ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಮಾತನಾಡಿ: ಇಂದು ಸರ್ವಧರ್ಮ ಗುರು ಹಿರಿಯರೆಲ್ಲರೂ ಸೇರಿ ಪ್ರಾರ್ಥನೆಯನ್ನು ಮಾಡಿರುವ ಉದ್ದೇಶ ಕರ್ನಾಟಕದ ದಲಿತ ಮುಖ್ಯಮಂತ್ರಿ ಕೂಗು ನೆರವೇರಲಿ ಎನ್ನುವ ಉದ್ದೇಶವಿದೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಾದರೆ ಪರಮೇಶ್ವರ್ ಅವರ ಬಹುದೊಡ್ಡ ಕೊಡುಗೆ ಇದೆ. ಸಿದ್ದರಾಮಯ್ಯನವರ ನಂತರ ನಮ್ಮ ಕ್ಷೇತ್ರದ ಶಾಸಕರು ಕರ್ನಾಟಕ…
ರಾಘವೇಂದ್ರ ಅಡಿಗ ಎಚ್ಚೆನ್ ಸಿನಿ ತಂಡಗಳು ಪ್ರೇಕ್ಷಕರನ್ನ ಸೆಳೆಯಲು ಎಲ್ಲಿಲ್ಲದ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥ ಆಫರ್ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹದ್ದೇ ಆಫರ್ ನೀಡಿದೆ. ‘ಕೊರಗಜ್ಜ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ ನೀಡಿದೆ. ಚೆನ್ನಾಗಿ ರೀಲ್ಸ್ ಮಾಡಿ ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆಯಂತೆ. ಆದರೆ ಇದಕ್ಕೆ ಕೊಡಗಿನ ದೈವ ನರ್ತಕರಿಂದ ಆಕ್ರೋಶ ವುಕ್ತವಾಗಿದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…
ರಾಘವೇಂದ್ರ ಅಡಿಗ ಎಚ್ಚೆನ್ ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ನಿನ್ನೆ (ಜ.8ರಂದು) ಸಂಜೆ ಧಾರವಾಡದಲ್ಲಿ ‘ರೋಮಾಂಚಕ‘ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಪುತ್ರಿ ರಿತನ್ಯಾ ವಿಜಯ್‌ಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ದುನಿಯಾ ವಿಜಯ್ ಮಗಳ ಪಾತ್ರದಲ್ಲಿ ನಟಿಸಿದ್ದು, ‘ಭಾಗ್ಯ’ ಎಂಬ ಪಾತ್ರಕ್ಕೆ ಜೀವತುಂಬಿದ್ದಾರೆ. ರಿತನ್ಯಾ ಅವರು ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತನ್ಯಾ ವಿಜಯ್ ಕುಮಾರ್ ಹಾಗೂ ಶಿಶಿರ್ ಬೈಕಾಡಿ ಕಾಣಿಸಿಕೊಂಡಿರುವ ‘ರೋಮಾಂಚಕ’ ಹಾಡು ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಲ್ಯಾಂಡ್ ಲಾರ್ಡ್ ಸಿನಿಮಾದ ಮೂಲಕ ರಿತನ್ಯಾ ವಿಜಯ್ ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಶಿಶಿರ್ ಬೈಕಾಡಿ ಅವರು ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾನಲ್ಲಿ ಮುಸ್ತಫಾನ ಪಾತ್ರದಲ್ಲಿ ನಟಿಸಿದ್ದರು. ಈಗ ಲ್ಯಾಂಡ್‌ಲಾರ್ಡ್ ಸಿನಿಮಾದಲ್ಲಿ ದುನಿಯಾ ವಿಜಯ್ ಮಗಳ ಜೊತೆಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಇದೇ…