Author: admin

ಮಣಿಪುರ ಸಂಘರ್ಷದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಶೇರ್ ಮಾಡಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ ನಂತರ ಸೈರೋ-ಮಲಬಾರ್ ಚರ್ಚ್ ಪಾದ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಗರ್ಹಕೋಟಾದ ಸೇಂಟ್ ಅಲ್ಫೋನ್ಸಾ ಅಕಾಡೆಮಿಯ ವ್ಯವಸ್ಥಾಪಕ ಫಾ. ಅನಿಲ್ ಫ್ರಾನ್ಸಿಸ್ ನಿಧನರಾದರು. ಒಂದು ತಿಂಗಳ ಹಿಂದೆ, ಫಾ. ಅನಿಲ್ ಫ್ರಾನ್ಸಿಸ್ ಅವರು ವಾಟ್ಸಾಪ್ ಗುಂಪಿನಲ್ಲಿ ಮಣಿಪುರ ಹಿಂಸಾಚಾರದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಬಳಿಕ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಎಫ್‌ ಐಆರ್ ದಾಖಲಾಗಿದೆ. ಇದಾದ ನಂತರ ಪಾದ್ರಿ ಒತ್ತಡ ಮತ್ತು ಉದ್ವೇಗಕ್ಕೆ ಒಳಗಾಗಿದ್ದರು ಎಂದು ಧರ್ಮಪ್ರಾಂತ್ಯದ ಪ್ರತಿನಿಧಿಗಳು ಆರೋಪಿಸಿದ್ದಾರೆ. ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಳ್ಳಲು ಸಾಗರ್ ನ ಬಿಷಪ್ ಹೌಸ್ ನಲ್ಲಿ ಸೆ.13ರಂದು ಫಾ.ಅನಿಲ್ ನಾಪತ್ತೆಯಾಗಿದ್ದರು. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪೊಲೀಸರಿಗೆ ಆತ್ಮಹತ್ಯೆ ಪತ್ರವೂ ಸಿಕ್ಕಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ಯಾವುದೇ ಕೆಲಸ ಮಾಡಿಲ್ಲ ಎಂದು ಟಿಪ್ಪಣಿಯಲ್ಲಿ ತಿಳಿಸಲಾಗಿದೆ.

Read More

ಬಿಬಿಎಂಪಿ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 4,323 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದೆ. ಜುಲೈ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,629 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ ಪಾಲಿಕೆಯಿಂದ ಸೆ. 1ರಿಂದ ಸೆ. 8ರವರೆಗೆ 416 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ 44,863 ಡೆಂಗ್ಯೂ ಪ್ರಕರಣಗಳಿದ್ದರೆ, 2020ರಲ್ಲಿ 6,679 ಕ್ಕೆ ಇಳಿದಿದೆ ಎಂದು ಬಿಬಿಎಂಪಿ ಹೇಳಿದೆ.

Read More

ಬೆಂಗಳೂರು : ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 19 ವರ್ಷದ ಯುವತಿ ಆತ್ಮಹತ್ಯೆ ಪ್ರಕರಣ ಸಂಬಂಧ ‘ಇನ್‌ಸ್ಟಾಗ್ರಾಂ’ ಸ್ನೇಹಿತ ಸೇರಿ ಮೂವರು ಆರೋಪಿಗಳ ವಿರುದ್ಧ ಎಫ್‌ ಐಆರ್ ದಾಖಲಾಗಿದೆ. ‘ಜೆ. ಪಿ. ನಗರ ಬಳಿಯ ಅಯೋಧ್ಯೆ ನಗರ ನಿವಾಸಿಯಾದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಹೋದರಿ ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಡಿ ಸ್ನೇಹಿತರಾದ ಅಬ್ರಾರ್ ಶೇಕ್, ಇರ್ಫಾನ್ ಶಾಹೀದ್, ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಬೆಂಗಳೂರಿನಲ್ಲಿ ಮತ್ತೆ ಬೈಕ್, ಟ್ಯಾಕ್ಸಿ ಸೇವೆ ಪುನರಾರಂಭವಾಗಿದೆ. ಟಿಟ್ಟರ್ ಖಾತೆಯಲ್ಲಿ ಬೈಕ್ ಸೇವೆ ಆರಂಭದ ಬಗ್ಗೆ ಓಲಾ ಸಿಇಒ ಭವಿಶ್ ಅಗರ್ವಾಲ್ ಮಾಹಿತಿ ಹಂಚಿಕೊಂಡಿದ್ದಾರೆ. 5 ಕಿಲೋಮೀಟರ್ ಗೆ 25 ರೂ, 10 ಕಿಲೋಮೀಟರ್ ಗೆ 50 ರೂ ನಿಗದಿ ಮಾಡಲಾಗಿದೆ. ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿಗಳ ನಿಷೇಧ ಜಾರಿಗೊಳಿಸುವಂತೆ ಕ್ಯಾಬ್ ಮತ್ತು ಆಟೋ ಸಂಘಟನೆಗಳು ಒತ್ತಾಯಿಸಿರುವ ಮಧ್ಯೆ ಓಲಾ ಬೈಕ್ ಟ್ಯಾಕ್ಸಿ ಸೇವೆ ಘೋಷಿಸಿದೆ.

Read More

ಬೆಂಗಳೂರು : ಬೆಂಗಳೂರಿನ ಮುನೇನಕೊಳಲು ಲೇಔಟ್ ನ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟವಾದ ಘಟನೆ ನಡೆದಿದೆ. ಮಾರತಹಳ್ಳಿಯ ಮುನೇನಕೊಳಲು ಲೇಔಟ್ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ನಾಲ್ಕು ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಲಿಂಡರ್ ಲೀಕ್ ನಿಂದ ಸ್ಫೋಟಗೊಂಡಿದೆ. ಕಳೆದ ರಾತ್ರಿ ಗ್ಯಾಸ್ ಲೀಕ್ ಆಗಿದ್ದು ಬೆಳಗ್ಗೆ ಅಡುಗೆ ಮನೆಯ ಲೈಟ್ ಸ್ವಿಚ್ ಆನ್ ಮಾಡಿದಾಗ ಸ್ಫೋಟವಾಗಿದೆ.

Read More

ಇಂದು ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಹುಟ್ಟುಹಬ್ಬ. ಬಿಜೆಪಿ ದೇಶಾದ್ಯಂತ ಎರಡು ವಾರಗಳ ಕಾಲ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಬಾರಿ ನರೇಂದ್ರ ಮೋದಿ ಅವರ ಜನ್ಮದಿನದ ಸಂಭ್ರಮದ ಜೊತೆಗೆ ಮೂರನೇ ಅವಧಿಯ ಪ್ರಧಾನಿಯಾಗುವ ಗುರಿಯನ್ನು ಬಿಜೆಪಿ ಹೊಂದಿದೆ. ನರೇಂದ್ರ ಮೋದಿಯವರು ಭಾರತಕ್ಕೆ ಸ್ವಾತಂತ್ರ್ಯ ಬಂದ ಮೂರು ವರ್ಷಗಳ ನಂತರ ಸೆಪ್ಟೆಂಬರ್ 17, 1950 ರಂದು ಜನಿಸಿದರು, ಅವರು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ವಡ್ನಗರದಲ್ಲಿ ದಾಮೋದರದಾಸ್ ಮೋದಿ ಮತ್ತು ಹೀರಾ ಬೆನ್ ಮೋದಿ ಅವರ ಆರು ಮಕ್ಕಳಲ್ಲಿ ಮೂರನೆಯವರಾಗಿದ್ದರು. ಅವರು ತಮ್ಮ ಯೌವನದಿಂದಲೂ ಆರೆಸ್ಸೆಸ್ ಸದಸ್ಯರಾಗಿದ್ದರು. 1987ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದರು. 2001 ರಿಂದ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ. ಅವರು 2014 ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. 2019ರಲ್ಲಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾದರು. ಬಿಜೆಪಿ ನೇತೃತ್ವದಲ್ಲಿ ರಕ್ತದಾನ ಆರೋಗ್ಯ ತಪಾಸಣಾ ಶಿಬಿರ, ಸ್ವಚ್ಛತಾ ಅಭಿಯಾನದಂತಹ ವ್ಯಾಪಕ ಕಾರ್ಯಕ್ರಮಗಳು ನಡೆಯಲಿವೆ. ಇಂದಿನಿಂದ ಗಾಂಧಿ ಜಯಂತಿಯ ದಿನವಾದ ಅಕ್ಟೋಬರ್ 2 ರವರೆಗೆ…

Read More

ಗೌರಿ, ಗಣೇಶ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲು ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾದ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಶನಿವಾರ ಜೋರಾಗಿತ್ತು. ವರಮಹಾಲಕ್ಷ್ಮಿ ಹಬ್ಬದಲ್ಲಿ ಗಗನಕ್ಕೇರಿದ್ದ ಹೂವು ಹಣ್ಣು-ಹಂಪಲು ಸೇರಿ ಅಗತ್ಯ ವಸ್ತುಗಳ ಬೆಲೆ ಈಗ ಇಳಿದಿದೆ. ಆದರೆ, ಆ ಪ್ರಮಾಣದ ಗ್ರಾಹಕರು ಮಾರುಕಟ್ಟೆಗಳಲ್ಲಿ ಈ ಬಾರಿ ಕಂಡುಬರಲಿಲ್ಲ. ಗೌರಿ-ಗಣೇಶ ಹಬ್ಬಕ್ಕೆ ತರಕಾರಿ, ಹಣ್ಣು, ಹೂವಿನ ದರಗಳ ಸಾಕಷ್ಟು ಕಡಿಮೆಯಾಗಿದೆ.

Read More

ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ರಫೀಕ್ ಅಹ್ಮದ್ ನನ್ನು ಚಾಕುವಿನಿಂದ ಇರಿದು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗೆ ಗೊತ್ತಿದ್ದ ಆರೋಪಿಗಳಿಗೆ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ವೈಟ್‌ ಫೀಲ್ಡ್, ಡಿಸಿಪಿ ಡಾ ಸಂಜೀವ್ ಎಂ ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

Read More

ಬೆಳ್ಳಂ ಬೆಳಗ್ಗೆಯೇ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು…

Read More

ಬೆಂಗಳೂರು: ಆರ್ ಎಸ್ ಎಸ್ ತತ್ವವನ್ನು ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. RSS ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಆರ್ ಎಸ್ ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ನಾನೇನು ಆರ್ ಎಸ್ ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್ ಎಸ್ ಎಸ್ ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದರು.

Read More