Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ಕೂಡ ಭಾಗಿಯಾಗಿರುವುದು ಬಹಿರಂಗಗೊಂಡಿದ್ದು, ಸದ್ಯ ತಲೆ ಮರೆಸಿಕೊಂಡಿರುವ ಶ್ರೀಗಳು ತನ್ನ ವಿರುದ್ಧ ದೂರು ನೀಡಿದ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಪ್ರತಿ ದೂರು ನೀಡಿದ್ದಾರೆ. ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ತನ್ನ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಭಿನವ ಹಾಲಶ್ರೀ ದೂರು ನೀಡಿದ್ದಾರೆ. 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ಬಣ್ಣ ಪಡೆದುಕೊಳ್ಳುತ್ತಿದ್ದು, ಈ ದಿನದ ಬೆಳವಣಿಗೆಯಲ್ಲಿ ಉದ್ಯಮಿ ಗೋವಿಂದಬಾಬು & ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ಸಲ್ಲಿಸಿದ್ದಾರೆ.
ಬಿಜೆಪಿಯ ಶಂಖನಾದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟ ಪ್ರಕಾಶ್ ರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಸನಾತನ ಧರ್ಮ ಕಾಗೆ ಇದ್ದ ಹಾಗೆ ಎಂದು ಪ್ರಕಾಶ ರಾಜ್ ಹೇಳಿದ್ದ. ಅದಕ್ಕೆ ನಾನು ಪ್ರಕಾಶ ರಾಜ್ ಹಂದಿ ಎಂದು ಉತ್ತರ ಕೊಟ್ಟಿದ್ದೆ. ಸುಖಾಸುಮ್ಮನೆ ಮಾತನಾಡದೇ ಬರೋಬ್ಬರಿಯಾಗಿ ಉತ್ತರಿಸಬೇಕು ಎಂದು ಯತ್ನಾಳ್ ಕಾರ್ಯಕರ್ತರಿಗೆ ಸಲಹೆ ನೀಡಿದರು. ಮರ್ಯಾದೆ ಕೊಟ್ಟರೆ ಮರ್ಯಾದೆ ಕೊಡೋಣಾ, ಯಾಕಲೋ ಎಂದರೆ ಯಾಕೋ ಮಗನೇ ಎನ್ನಬೇಕೆಂದು ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದು, ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ. ಬೇರೆ ಸಮುದಾಯದವರು ಹೋರಾಟ ಮಾಡಿದ್ದರಲ್ಲಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಇದೇ ವೇಳೆ ಸ್ವಾಮೀಜಿ ಪ್ರಶ್ನಿಸಿದರು.
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಮಾದರಿಯ ಇನ್ನೊಂದು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳದ ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ ಹಣ ಕಳೆದುಕೊಂಡವರಾಗಿದ್ದಾರೆ. ಪತ್ನಿ ಗಾಯತ್ರಿ ತಿಮ್ಮಾರೆಡ್ಡಿಗೆ ಬಿಜೆಪಿ ಟಿಕೆಟ್ ಕೊಡಿಸಲು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರು ಆರೋಪಿಗಳಾಗಿದ್ದಾರೆ. ಆರೋಪಿಗಳು ತಮಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೊತ್ತು, ಆರ್ ಎಸ್ ಎಸ್ ನಾಯಕರು ಗೊತ್ತು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದರು. ಬಳಿಕ ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು. ಬಳಿಕ ಆರೋಪಿಗಳ ಮಾತು ನಂಬಿ ತಿಮ್ಮಾರೆಡ್ಡಿ 21ಲಕ್ಷ ಹಣ ನೀಡಿ ಕೈ ಸುಟ್ಟುಕೊಂಡಿದ್ದರು. ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ವಂಚನೆ ಎಸಗಿದ ಪ್ರಕರಣ ಸಂಬಂಧ ಕುಂದಾಪುರ ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು ಸೆಕ್ಷನ್ ದಾಖಲು ಮಾಡಲಾಗಿದೆ. ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201 ಹೊಸದಾಗಿ ಸೇರ್ಪಡೆ ಮಾಡಿದ್ದಾರೆ. ಸಿಸಿಬಿ ತನಿಖೆ ವೇಳೆಆರೋಪಿಗಳ ಇಬ್ಬರ ಮೊಬೈಲ್ ಪೋನ್ ತಡಕಾಡಿದ ಸಿಸಿಬಿಗೆ ಮೊಬೈಲ್ ನಲ್ಲಿರುವ ದತ್ತಾಂಶ ನಾಶವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹಾಗಾಗಿ ಆರೋಪಿಗಳ ವಿರುದ್ಧ ಸಾಕ್ಷಿ ನಾಶ ಆರೋಪದ ಮೇಲೆ ಮತ್ತೊಂದು ಸೆಕ್ಷನ್ ಸೇರಿಸಲಾಗಿದೆ. ವಂಚನೆ ಪ್ರಕರಣ ಸಂಬಂಧ ಎಫ್‌ಐಆರ್ ಆಗುತ್ತಿದ್ದಂತೆ ಶ್ರೀಕಾಂತ್ ಹಾಗೂ ಚೈತ್ರಾ ನಡುವೆ ನಡೆದಿರುವ ಸಂಭಾಷಣೆಗಳನ್ನು ನಾಶ ಮಾಡಲಾಗಿದೆ. ಶ್ರೀಕಾಂತ್ ಮೊಬೈಲ್ ಸಂಪೂರ್ಣ ನಾಶ ಮಾಡಲಾಗಿದೆ.
ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಕಾರಣ ನೀಡಿರುವ ಅವರು, ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ. ಬರ ಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ…
ನಮ್ಮ ಸರ್ಕಾರ ಯಶಸ್ವಿಯಾಗಿ 100 ದಿನ ಪೂರೈಸಿದೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಪೂರೈಸಿದ್ದೇವೆ. ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ ನೀಡ ಗ್ಯಾರಂಟಿ ಮಾತ್ರ ಬಾಕಿಯಿದೆ. ಅದು ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ನಾವು ನುಡಿದ್ದಂತೆ ನಡೆದಿದ್ದೇವೆ, ಜನರು ಕೂಡ ಸಂತೃಪ್ತಿಯಿಂದ ಇದ್ದಾರೆ. ಲೋಕಸಭೆ ಚುನಾವಣೆ ನಮ್ಮ ಮನೆ ಹೊತ್ತಿನಲ್ಲಿ ಬಂದು ನಿಂತಿದೆ. ಎಲ್ಲಾ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ಕಾಂಗ್ರೆಸ್ ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ನಾವು ಗೆಲ್ಲುತ್ತೇವೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು. ಮೂರು ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿದ್ರೆ, ಎಲ್ಲಾ ಸಮುದಾಯಗಳು ನಮ್ಮಗೆ ಬೆಂಬಲ ನೀಡಲು ಅನುಕೂಲ ಆಗುತ್ತೆ. ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರಿಗೆ, ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸೃಷ್ಟಿ ಮಾಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಪತ್ರ ಬರೆಯಲು ಇಚ್ಚಿಸಿದ್ದೇನೆ. ಇವತ್ತು ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದರು. ಮುಂದಿನ ತಿಂಗಳ ಮೊದಲ…
ಗೋವಾ: ಅಕ್ರಮ ಮದ್ಯ ಸಾಗಣೆಗೆ ತಡೆಗೆ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೋವಾದ ವಿಪಕ್ಷ ನಾಯಕ ಯೂರಿ ಅಲೆಮಾವೊ ಧನ್ಯವಾದ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರದಿಂದ ಗೋವಾಗೆ ಉಂಟಾಗುತ್ತಿದ್ದ ಆರ್ಥಿಕ ನಷ್ಟ ತಪ್ಪಲಿದೆ. ನಾನು ಸಿದ್ದರಾಮಯ್ಯ ಅವರಿಗೆ ಸ್ಪಂದಿಸುವಂತೆ ಸಿಎಂ ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡುತ್ತೇನೆ ಎಂದು ಯೂರಿ ಅಲೆಮಾವೊ ಹೇಳಿದ್ದಾರೆ. ಗೋವಾದಿಂದ ಒಳಬರುತ್ತಿರುವ ಅಕ್ರಮ ಮದ್ಯ ಸಾಗಣೆಯನ್ನು ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರ ಬಗ್ಗೆ ಗೋವಾ ವಿಪಕ್ಷ ನಾಯಕ ಪ್ರತಿಕ್ರಿಯೆ ನೀಡಿದ್ದು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಪ್ರಮೋದ್ ಸಾವಂತ್ ಗೋವಾವನ್ನು ಮಾನವ ಕಳ್ಳಸಾಗಣೆ, ಮಾದಕ ವಸ್ತುಗಳ ಸಾಗಣೆ, ಮಾಲಿನ್ಯಕಾರಕ ಮತ್ತು ಅಪಾಯಕಾರಿ ವಸ್ತುಗಳ ಸಾಗಣೆ ಮತ್ತು ಮದ್ಯದ ಕಳ್ಳಸಾಗಣೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ ಎಂದು ಅಲೆಮಾವೊ ಆರೋಪಿಸಿದ್ದಾರೆ.
ಮಧುಗಿರಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಬೀಗ ಮುರಿದು ಒಳ ನುಗ್ಗಿ ಕಳ್ಳತನ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ನಡೆದಿದೆ. ಪಟ್ಟಣದ ಡಿಡಿಪಿಐ ಕಚೇರಿ ಹಿಂಭಾಗದ ಮನೆಯಲ್ಲಿ ವಾಸ ಇರುವ ಆಶಾ (30) ಎಂಬುವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮನೆಗೆ ಬೀಗ ಹಾಕಿರುವುದನ್ನು ಕಂಡ ಕಳ್ಳರು, ಬೀಗ ಒಡೆದು ಒಳ ನುಗ್ಗಿ ಬೀರುವಿನಲ್ಲಿದ್ದ ಸುಮಾರು ನಾಲ್ಕು ಲಕ್ಷ ಹಣ ಹಾಗೂ 60 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ, ಘಟನೆಗೆ ಸಂಬಂಧಿಸಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅಬಿದ್ ಮಧುಗಿರಿ
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಸಮಾನತೆ ಹಾಗೂ ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ ಎಂದು ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ತಿಳಿಸಿದರು. ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ (ಜು.15) ರಾಜ್ಯಾದ್ಯಂತ ಏಕಕಾಲದಲ್ಲಿ ನಡೆದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಹೇಳಿದರು. ವಿವಿಧ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸದ ವಿಷಯ. ಸಂವಿಧಾನ ಸರ್ವರಿಗೂ ಶಿಕ್ಷಣ, ಸಮಾನತೆಯ ಹಕ್ಕು ಕಲ್ಪಿಸಿದೆ. ಯಾವುದೇ ದೇಶದಲ್ಲಿಯೂ ಕೂಡಾ ಭಾರತ ದೇಶದ ನಾಗರಿಕರಿಗೆ ಇರುವಷ್ಟು ಸ್ವಾತಂತ್ರ್ಯವಿಲ್ಲ. ಭಾರತ ದೇಶ ವಿಶ್ವದಲ್ಲೇ ಮಾದರಿ ರಾಷ್ಟ್ರ ಎಂದು…