Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಮನೆ ಮಾರಾಟ ಮಾಡುವ ವಿಚಾರಕ್ಕೆ ಜಗಳವಾಡಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪುತ್ರನಿಗೆ ಬೆಂಗಳೂರಿನ ಸಿಸಿಹೆಚ್ 65 ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ. 2018 ರ ಜೂನ್ 13 ರಂದು ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮನೆ ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಾಯಿ ಕಾತ್ಯಾಯಿನಿ ಜೊತೆ ಪುತ್ರ ಶರತ್ ಕುಮಾರ್ ಜಗಳವಾಡಿದ್ದ. ಈ ವೇಳೆ ಶರತ್, ತಾಯಿಯ ಮೂಗು ಮತ್ತು ಬಾಯಿಯನ್ನು ಬಲವಾಗಿ ಮುಚ್ಚಿ ಉಸಿರುಗಟ್ಟಿಸಿ ಕೊಂದಿದ್ದ. ಬಳಿಕ ಸಾಕ್ಷ್ಯಾಧಾರಗಳ ನಾಶಕ್ಕೂ ಯತ್ನಿಸಿದ್ದ ಎನ್ನಲಾಗಿದೆ. ಇದೀಗ 5 ವರ್ಷಗಳ ನಂತರ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಎಂ.ಎಸ್. ಕಲ್ಪನಾ ಅವರು ತೀರ್ಪು ನೀಡಿದ್ದಾರೆ. ಆರೋಪಿ ಶರತ್ ಕುಮಾರ್ ಗೆ IPC ಕಲಂ 302 ಕ್ಕೆ ಜೀವಾವಧಿ ಶಿಕ್ಷೆ, ಹಾಗೂ ಕಲಂ 201 ಸಾಕ್ಷಿ ನಾಶಪಡಿಸಿದಕ್ಕೆ 3 ವರ್ಷ ಶಿಕ್ಷೆ ವಿಧಿಸಲಾಗಿದೆ.…
ಚಿಕ್ಕೋಡಿ: ಕರ್ನಾಟಕದಲ್ಲಿಯೇ ಕನ್ನಡಿಗರ ಮೇಲೆ ದೌರ್ಜನ್ಯ ನಡೆದಿದೆ. ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಕನ್ನಡಿಗ ಯುವಕರಿಗೆ ಮರಾಠ ಪುಂಡರು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿ ಅಳವಡಿಸಿದ್ದ ಕನ್ನಡ ಧ್ವಜವನ್ನು ತೆರವು ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿತ್ತು. ಅಳವಡಿಸಿದ್ದ ಧ್ವಜವನ್ನು ತೆರವು ಮಾಡುವಂತೆ ಮರಾಠ ಪುಂಡರು ಕನ್ನಡಿಗರಿಗೆ ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲ ಮರಾಠ ಸಮುದಾಯದವರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದಾರೆ. ಈ ಬಗ್ಗೆ 5 ಮರಾಠ ಪುಂಡರ ವಿರುದ್ಧ ಸಂಕೇಶ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಪರಾರಿಯಾಗಿದ್ದಾರೆ.
ಜಾರಿ ನಿರ್ದೇಶನಾಲಯ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರಿಗೆ ನೋಟಿಸ್ ಕಳುಹಿಸಿದೆ. ಇಡಿ ತನಿಖೆಯು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಕಂಪನಿ ತುಲ್ಸಿಯಾನಿ ಗ್ರೂಪ್‌ಗೆ ಸಂಬಂಧಿಸಿದೆ. ಗೌರಿ ಖಾನ್ ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಂಪನಿಯು ಹೂಡಿಕೆದಾರರು ಮತ್ತು ಬ್ಯಾಂಕ್ ಗಳಿಂದ 30 ಕೋಟಿ ರೂ. ಕಂಪನಿ ವಿರುದ್ಧ ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಆ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಕಳುಹಿಸಿದೆ. ಇಡಿ ನೋಟಿಸ್ ಗೆ ಗೌರಿ ಖಾನ್ ಇನ್ನೂ ಪ್ರತಿಕ್ರಿಯಿಸಿಲ್ಲ. ತುಳಸಿಯಾನಿ ಸಮೂಹವನ್ನು ಒಳಗೊಂಡ ಹಣಕಾಸು ಹಗರಣದಲ್ಲಿ ಅವರ ಹಣಕಾಸು ವ್ಯವಹಾರಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ತನಿಖೆಯನ್ನು ಪ್ರಾರಂಭಿಸಿದೆ.
ಬಿಹಾರ: ಮನೆಯೊಂದರ ಮುಂದೆ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸುಟ್ಟುಕರಕಲಾಗಿದ್ದಾರೆ. ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ವೇಳೆ, ಮಕ್ಕಳಿಬ್ಬರು ಕಾರಿನೊಳಗೆ ಆಟವಾಡಲು ಬಂದಿರುವುದಾಗಿ ತಿಳಿದು ಬಂದಿದೆ. ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮನೆಯವರು ಹೊರಗೆ ಧಾವಿಸಿದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೆಲ ಹೊತ್ತಿನ ಬಳಿಕ ಕಾರಿನ ಗಾಜು ಒಡೆದು ಮಕ್ಕಳನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ನಂದಿಸಿ ಕಾರಿನಲ್ಲಿದ್ದ ಮಕ್ಕಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದರೂ ಸಹ ಅಷ್ಟೊತ್ತಿಗಾಗಲೇ ಮಕ್ಕಳಿಬ್ಬರ ದೇಹ ಅರೆಬರೆ ಸುಟ್ಟು ಹೋಗಿದೆ. ಪರಿಣಾಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿರುವುದು ವರದಿಯಾಗಿದೆ.
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರದ ಬಗ್ಗೆ ಮಾತುಕತೆ ನಡೆಸಿದ್ದು, ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,177.44 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ದೆಹಲಿ: 1990ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾದ ರಥಯಾತ್ರೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಬಿಜೆಪಿ ದಿಗ್ಗಜರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ವಿಶ್ವ ಹಿಂದೂ ಪರಿಷತ್ ಆಹ್ವಾನಿಸಿದೆ. ಈ ಹಿರಿಯ ನಾಯಕರ ವಯಸ್ಸನ್ನು ಪರಿಗಣಿಸಿ “ಬರಬೇಡಿ” ಎಂದು ವಿನಂತಿಸಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ ಒಂದು ದಿನದ ನಂತರ ಆಹ್ವಾನ ಬಂದಿದೆ. ಜನವರಿ 22 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಜೆಪಿಯ ಹಿರಿಯರು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದರು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿರುವುದಾಗಿ ವರದಿ ಮಾಡಿದೆ. ರಾಮ ಮಂದಿರ ಆಂದೋಲನದ ಪ್ರವರ್ತಕರಾದ ಅಡ್ವಾಣಿ ಜಿ ಮತ್ತು ಮುರಳಿ ಮನೋಹರ್ ಜೋಷಿ ಜಿ ಅವರನ್ನು ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಇಬ್ಬರೂ ಬರಲು ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ ಎಂದು ವಿಎಚ್ಪಿ ಅಧ್ಯಕ್ಷ ಅಲೋಕ್ ಕುಮಾರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ, ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಅವರು ರಾತ್ರಿ ಕೆಲಸ ಮುಗಿಸಿ ಕಾರಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ವಿಪರೀತ ವೇಗದಲ್ಲಿ ಇತ್ತು ಎಂದು ಶಂಕಿಸಲಾಗಿದೆ. ಸಂತೋಷ್ ಅವರ ಕುಟುಂಬಿಕರು, ಸ್ನೇಹಿತರು ಆಗಮಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ತುಮಕೂರಿನಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಧುಗಿರಿ ಮೂಲದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ರಿಪೋರ್ಟ್ ಬಂದಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೃದಯರೋಗ ಸಂಬಂಧ ಜಯದೇವ ಆಸ್ಪತ್ರೆಗೆ ವ್ಯಕ್ತಿ ಹೋಗಿದ್ದರು. ಅಲ್ಲಿ ಕೊವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಕೊವಿಡ್ ಪತ್ತೆ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿತರ ಕುಟುಂಬಸ್ಥರಿಗೆ ಜಿಲ್ಲಾ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆ ನಡೆಸಿದೆ. ಸೋಂಕಿತ ಸಂಪರ್ಕಕ್ಕೆ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ ಎಂದು ಡಿಎಚ್ ಒ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಬೆಳಗಾವಿ: ಅಯೋಧ್ಯೆಯಲ್ಲಿ 22 ಜನವರಿ 2024ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲೆಯಿಂದ 5 ಲಕ್ಷ ಮನೆಗಳಿಗೆ ಆಮಂತ್ರಣ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಕದಂ ಹೇಳಿದರು. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಅಭಿಯಾನ ಯಶಸ್ವಿಯಾಗಲು ಡಿಸೆಂಬರ್ 8-2023 ರಂದು ಅಯೋಧ್ಯೆಯಿಂದ ಬಂದ ಪವಿತ್ರ ಅಕ್ಷತಾ ಕಳಶವನ್ನು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಕಪಿಲೇಶ್ವರ ಮಂದಿರದಲ್ಲಿ ಸಾವಿರಾರು ಭಕ್ತರ ಭಕ್ತಿಯಿಂದ ಸ್ವಾಗತಿಸಿ ಪೂಜೆಗೆ ಇಂದು ಪಲ್ಲಕ್ಕಿಯಲ್ಲಿ ಪವಿತ್ರ ಕಳಿಸಿದ್ದು ಮೆರವಣಿಗೆ ಮೂಲಕ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಇರಿಸಲಾಗಿದೆ. ಪ್ರತಿನಿತ್ಯ ಸಂಜೆ 7:30 ರಿಂದ 8:30ರವರೆಗೆ ಭಕ್ತಿಯಿಂದ ಹನುಮಾನ್ ಚಾಲೀಸ ಪಠಣ ಮಾಡಿ ಪೂಜೆ ಮಾಡಲಾಗುತ್ತದೆ. ದಿನಾಂಕ 19 ಡಿಸೆಂಬರ್ 2023 ರಂದು ಸಂಜೆ 4:30ಕ್ಕೆ ಬೆಳಗಾವಿ ಸುತ್ತು ಮುತ್ತಿನ ಪೂಜ್ಯ ಸಂತರ ದಿವ್ಯ ಸಾನಿಧ್ಯದಲ್ಲಿ ಪವಿತ್ರಾಕ್ಷತಕಾಲ ಪೂಜೆ ಮಾಡಿ ಅಮೃತ ಹಸ್ತದಿಂದ…
ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮೀ ಹೆಬ್ಬಾಳಕರ್, ಕೂಡಲೇ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು. ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಲು…