Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ, ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು. ಈ ವೇಳೆ ಮೊದಲು ಮಾತನಾಡಿದ ಚಂದ್ರಶೇಖರ ಶಿವಾಚಾರ್ಯರು, ಜಗದ್ಗುರು ರೇಣುಕಾಚಾರ್ಯರು ಮತ್ತು ಜಗದ್ಗುರು ಶಂಕರಾಚಾರ್ಯರು ಹಿಂದೆ ಒಟ್ಟಾಗಿ ಕೆಲಸ ಮಾಡಿದ್ದರೇನೋ ಎನ್ನುವ ಭಾವನೆ ನಮಗೆ ಬರುತ್ತಿದೆ. ಜಾತಿ ಮೀರಿ ಎರಡೂ ಮಠಗಳು ಕೆಲಸ ಮಾಡುತ್ತಿವೆ. ಮಠಗಳ ಮಧ್ಯೆ ಸಾಮರಸ್ಯ ಮೂಡಬೇಕು ಎನ್ನುವುದು ನಮ್ಮ ಭಾವನೆ. ಸ್ವರ್ಣವಲ್ಲೀ ಮಠ ಪೂರ್ಣ ಸುಖ ನೀಡುವ ಮಠವಾಗಿದೆ ಎಂದರು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಮಠದ ಮಠಾಧೀಶ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ…
ಬೆಳಗಾವಿ: ಹುಕ್ಕೇರಿ ತಾಲೂಕಿನ 17 ವರ್ಷದ ಬಾಲಕಿ ಮತ್ತು ಹಳಿಯಾಳದ 9 ವರ್ಷದ ಬಾಲಕನಿಗೆ ಬೆಳಗಾವಿಯ ಕೆಎಲ್ ಇಎಸ್ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಯಶಸ್ವಿಯಾಗಿ ಪ್ರೀ ಎಮ್ಟಿವ್ (preemptive) ಮೂತ್ರಪಿಂಡ ಕಸಿ ಮಾಡಲಾಯಿತು. 17 ವರ್ಷದ ಹುಡುಗಿ ತನ್ನ ತಾಯಿಯಿಂದ ಮತ್ತು 9 ವರ್ಷದ ಹುಡುಗ ತನ್ನ ಅಜ್ಜಿಯಿಂದ ಕಿಡ್ನಿ ಪಡೆದಿದ್ದಾರೆ. ಇಬ್ಬರೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಉಳಿಸಿಕೊಳ್ಳಲು ಡಯಾಲಿಸಿಸ್ ಅಥವಾ ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ಗೆ ಅನಿವಾರ್ಯವಾಗಿತ್ತು. ಪೀಡಿಯಾಟ್ರಿಕ್ ನೆಪ್ರಾಲಜಿಸ್ಟ್ ಡಾ. ಮಹಾಂತೇಶ ವಿ. ಪಾಟೀಲ್ ಅವರ ಟೀಮ್ ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ನಡೆಸಿತು. ಉತ್ತರ ಕರ್ನಾಟಕದಲ್ಲಿ ಕೆಎಲ್ ಇ ಆಸ್ಪತ್ರೆಯಲ್ಲಿ ಮಾತ್ರ ಈ ಸೌಲಭ್ಯವಿದೆ. ಮಕ್ಕಳು ಡಯಾಲಿಸಿಸ್ ಗೆ ಒಳಗಾಗುವುದು ಬಹಳ ಕಷ್ಟ. ಮತ್ತು ಡಯಾಲಿಸಿಸ್ ಸಮಯದಲ್ಲಿ ಪೋಷಕರು ಮತ್ತು ಮಕ್ಕಳು ಇಬ್ಬರೂ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಮಕ್ಕಳು ವಿದ್ಯಾಭ್ಯಾಸ ವಂಚಿತರಾದರೆ, ಪಾಲಕರು ಉದ್ಯೋಗ ಕಳೆದು ಕೊಳ್ಳಬೇಕಾಗುತ್ತದೆ. ಆದ್ದರಿಂದ ಡಯಾಲಿಸಿಸ್…
ಮುಂಬರುವ ಐಪಿಎಲ್ ಗೆ ಆರ್ ಸಿಬಿ ಟೀಮ್ ಫೈನಲ್ ಆಗಿದಂತಿದೆ. ಘಟಾನುಘಟಿ ಆಟಗಾರರನ್ನು ಒಳಗೊಂಡ ತಂಡ ಇದಾಗಿದೆ. ತಂಡ: ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮೋರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪಿ, ಹಿಮಾಂಶು ಶರ್ಮಾ, ರಾಜನ್, ಕ್ಯಾಮೆರೋನ್ ಗ್ರೀನ್, ಅಲ್ಪಾರಿ, ಯಶ್ ದಯಾಳ್ ಟಾಮ್ ಕಾನ್, ಲಾಕಿ ಫರ್ಗುಸನ್, ಸ್ವಪ್ಟಿಲ್, ಸೌರವ್ ಚೌಹಾಣ್.
ಆನಂದ್ ವಿವಾಹ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಖ್ ಸಮುದಾಯದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕಾಯಿದೆಯು ಸಿಖ್ ವಿವಾಹ ಆಚರಣೆಗಳಿಗೆ ಶಾಸನಬದ್ದ ಮಾನ್ಯತೆಯನ್ನು ಒದಗಿಸುತ್ತದೆ. ಸಿಖ್ ದಂಪತಿಗಳು ಹಿಂದೂ ವಿವಾಹ ಕಾಯಿದೆಯ ಬದಲಿಗೆ ನಿರ್ದಿಷ್ಟ ನಿಯಮಗಳ ಅಡಿಯಲ್ಲಿ ತಮ್ಮ ವಿವಾಹಗಳನ್ನು ನೋಂದಾಯಿಸಲು ಈ ಕಾಯಿದೆ ಅವಕಾಶ ನೀಡುತ್ತದೆ. ಆಯಾ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯಲ್ಲಿರುವ ತಹಸೀಲ್ದಾರ್ ಗಳು ಅಂತಹ ವಿವಾಹಗಳಿಗೆ ರಿಜಿಸ್ಟ್ರಾರ್ ಗಳಾಗಿ ಕಾರ್ಯನಿರ್ವಹಿಸುತ್ತಾರೆ.
ಬೆಂಗಳೂರು: ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ 25 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯದ ಅವಿನಾಶ್, ಹಾಸನದ ಶಶಿ ಕುಮಾರ್, ರಾಹುಲ್ ಬಂಧಿತ ಆರೋಪಿಗಳು. ಪೊಲೀಸರು ಗಸ್ತಿನಲ್ಲಿದ್ದಾಗ ನಂಬರ್ ಪ್ಲೇಟ್ ಇಲ್ಲದ ಬಜಾಜ್ ಪಲ್ಸರ್ ಬೈಕ್ ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬಯಲಾಗಿದೆ.
ಮಧ್ಯಪ್ರದೇಶದಲ್ಲಿ ಅಚ್ಚರಿಯ ಘಟನೆಯೊಂದು ಜರುಗಿದ್ದು, ಕುಲದೇವತೆ ಎಂದು ನೂರಾರು ವರ್ಷಗಳಿಂದ ಡೈನೋಸಾರ್ ಮೊಟ್ಟೆ ಪೂಜಿಸಿದ್ದಾರೆ. ವಾಸ್ತವವಾಗಿ ರೈತ ಕುಟುಂಬವು ಕೆಲವು ಕಲ್ಲಿನ ಚೆಂಡುಗಳನ್ನು ಪೂಜಿಸುತ್ತಿತ್ತು. ಆದರೆ ಅವರಿಗೆ ಈ ಬಗ್ಗೆ ತಿಳಿಸಿದಿರಲೇ ಇಲ್ಲ. ಕೊನೆಗೆ ಇವುಗಳ ಬಗ್ಗೆ ಅನುಮಾನಗೊಂಡ ಕೆಲವರು ವಿಜ್ಞಾನಿಗಳಿಗೆ ಮಾಹಿತಿ ನೀಡಿದ್ದು, ಅವುಗಳನ್ನು ಪರೀಕ್ಷಿಸಿದಾಗ ಲಕ್ಷಾಂತರ ವರ್ಷಗಳಷ್ಟು ಹಳೆಯದಾದ ಡೈನೋಸಾರ್ ಮೊಟ್ಟೆ ಎಂದು ತಿಳಿದು ಬಂದಿದೆ. ಇದನ್ನು ಕೇಳಿ ಮನೆಯವರು ಬೆಚ್ಚಿಬಿದ್ದಿದ್ದು, ಆ ಮೊಟ್ಟೆಗಳನ್ನು ಕುಟುಂಬವು ಹಲವು ವರ್ಷಗಳಿಂದ ಸುರಕ್ಷಿತವಾಗಿಟ್ಟಿದ್ದೇ ವಿಶೇಷ ಎಂದು ಸಂಶೋಧಕರು ತಿಳಿಸಿದ್ದಾರೆ.
ಕೇರಳದಲ್ಲಿ ಕೊರೊನಾ ರೂಪಾಂತರಿ ಜೆಎನ್.1 ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಕೊರೊನಾ ಹೊಸ ರೂಪಾಂತರ JN.1 ಸೋಂಕು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ನಿರಂತರವಾಗಿ ಹೆಚ್ಚುತ್ತಿರುವ ಕೊರೊನಾ ವೈರಸ್ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯು ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆಯಲಿದೆ. ಇದರಲ್ಲಿ ಆರೋಗ್ಯ ಸಚಿವರು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಸೇರಿದಂತೆ ಅನೇಕ ಜನರು ಭಾಗವಹಿಸಲಿದ್ದಾರೆ. ಭಾರತಕ್ಕೂ ಈ ಹೊಸ ರೂಪಾಂತರಿ ವೈರಸ್ ಕಾಲಿಟ್ಟಿರುವುದರಿಂದ ಮತ್ತೊಮ್ಮೆ ಆತಂಕ ಎದುರಾಗಿದೆ. ಇದು ಹಿಂದಿನ ಒಮಿಕ್ರಾನ್ ತಳಿಯದ್ದೇ ರೋಗಲಕ್ಷಣಗಳನ್ನು ಹೊಂದಿದೆ. ಜ್ವರ, ವಿಪರೀತ ಶೀತ, ಗಂಟಲು ನೋವು ಈ ಹೊಸ ರೂಪಾಂತರಿಯ ಪ್ರಮುಖ…
ಬೆಂಗಳೂರು: ಬೊಮ್ಮನಹಳ್ಳಿ ಸಮೀಪದ ಗಾರ್ವೇಬಾವಿ ಪಾಳ್ಯದ ಲಕ್ಷ್ಮೀ ಲೇಔಟ್ ನ ಏಳನೇ ಕ್ರಾಸ್ ನ ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ ಲಿಕೇಜ್ ನಿಂದಾಗಿ ಸ್ಫೋಟಗೊಂಡಿದೆ. ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಸುಬ್ರಮಣಿ ಎಂಬುವವರಿಗೆ ಸೇರಿದ ಬಿಲ್ಡಿಂಗ್ ನಲ್ಲಿ ನೇಪಾಳ ಮೂಲದ ಸಂದೇಶ್ ಕುಟುಂಬ ವಾಸವಿದ್ದರು. ರಾತ್ರಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿದೆ. ಆದರೆ ಇದನ್ನು ಗಮನಿಸದೆ ಬೆಳಗ್ಗೆ ಎಂದಿನಂತೆ ಅಡುಗೆ ಮನೆಯ ಲೈಟ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿದೆ.
ಮೇಕೆದಾಟುಗೆ ಅನುಮತಿ ಕೊಡಿಸುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು. ಮೇಕೆದಾಟು ಕುಡಿಯುವ ನೀರಿನ ಯೋಜನೆಯಾಗಿದ್ದು, ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವಂತಹುದ್ದು. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಕುಡಿಯುವ ನೀರಿನ ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ ತಮಿಳುನಾಡಿಗೇ ಹೋಗುತ್ತದೆ. ಇದರಿಂದ ಅವರಿಗೇ ಹೆಚ್ಚಿನ ಅನುಕೂಲ ಎಂದು ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ ಸರ್ಕಾರ ಪರಿಸರ ಅನುಮತಿ ಕೊಟ್ಟ ಕೂಡಲೇ ಮಹದಾಯಿ ಕೆಲಸ ಶುರು ಮಾಡಲಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಕೂಡ ಆಗಿದೆ. ಯೋಜನೆಯ ಜಾರಿಗೆ ಬೇರೆ ಯಾವ ಅಡೆತಡೆ ಇಲ್ಲ. ಪರಿಸರ ತೀರುವಳಿ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರ ಸರ್ಕಾರವೇ ಕೊಡಬೇಕಿದ್ದು, ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಸರ್ಕಾರ ಪರಿಸರ ಅನುಮತಿ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು ಎಂದು ಸಿಎಂ ಹೇಳಿದರು.
ದಕ್ಷಿಣ ತಮಿಳುನಾಡಿನಲ್ಲಿ ಪ್ರವಾಹದ ಸಂಕಷ್ಟ ಮುಂದುವರಿದಿದೆ. ತಿರುನಲ್ವೇಲಿ ಮತ್ತು ಟುಟಿಕೋರಿನ್ ಜಿಲ್ಲೆಗಳಲ್ಲಿ ಬಿಕ್ಕಟ್ಟು ತೀವ್ರವಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸ್ಟಾಲಿನ್ ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ತಮಿಳುನಾಡಿನ ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಯಿತು ಎಂದು ಸ್ಟಾಲಿನ್ ಮಾಹಿತಿ ನೀಡಿದರು. ಇಂದು ಬೆಳಗ್ಗೆ 10:30ಕ್ಕೆ ದೆಹಲಿಯಿಂದ ಚೆನ್ನೈ ತಲುಪಲಿರುವ ಮುಖ್ಯಮಂತ್ರಿಗಳು ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶ್ರೀವೈಕುಂಡತ್ ರೈಲಿನಲ್ಲಿ ಜಲಾವೃತವಾಗಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ನಿನ್ನೆ ರಕ್ಷಿಸಲಾಗಿದೆ. ಭಾರೀ ಮಳೆಗೆ ನಾಲ್ಕು ಜಿಲ್ಲೆಗಳಲ್ಲಿ ಇದುವರೆಗೆ ಹತ್ತು ಮಂದಿ ಸಾವನ್ನಪ್ಪಿದ್ದಾರೆ.