Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಜಾತಿ ಗಣತಿ ಕುರಿತು ಅಮಿತ್ ಶಾ ಹೇಳಿಕೆಯನ್ನು RSS ತಿರಸ್ಕರಿಸಿದೆ. ಜಾತಿ ಗಣತಿ ದೇಶದ ಸಮಗ್ರತೆಗೆ ಧಕ್ಕೆ ತರಲಿದೆ ಎಂದು ಆರ್ ಎಸ್ ಎಸ್ ಹೇಳಿದೆ. ಜಾತಿ ಗಣತಿಯನ್ನು ವಿರೋಧಿಸುವುದಾಗಿ ಆರ್ ಎಸ್‌ಎಸ್ ಹೇಳಿದೆ. ಜಾತಿ ಆಧಾರಿತ ಜನಗಣತಿ ದೇಶದಲ್ಲಿ ಸಾಮಾಜಿಕ ಅಸಮಾನತೆಗಳನ್ನು ಸೃಷ್ಟಿಸುತ್ತದೆ ಎಂದು ಆರ್ ಎಸ್ ಎಸ್ ಮುಖಂಡರು ಹೇಳಿದ್ದಾರೆ. ಜಾತಿ ಗಣತಿಯಲ್ಲಿ ನಾವು ಯಾವುದೇ ಲಾಭವನ್ನು ಕಾಣುತ್ತಿಲ್ಲ ಆದರೆ ಹಲವಾರು ಸಮಸ್ಯೆಗಳಿವೆ ಎಂದು ಹಿರಿಯ ಆರ್ ಎಸ್ ಎಸ್ ಪ್ರಚಾರಕ ಶ್ರೀಧರ ಗಾಡ್ಗೆ ಹೇಳಿದರು. ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಮತ್ತು ಪರಿಷತ್ತಿನ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಶಾಸಕರು ನಾಗ್ಪುರದಲ್ಲಿರುವ ಆರ್ ಎಸ್ ಎಸ್ ಪ್ರಧಾನ ಕಚೇರಿಯನ್ನು ತಲುಪಿದಾಗ ಸಂಘಟನೆಯು ತನ್ನ ನಿಲುವನ್ನು ಸ್ಪಷ್ಟಪಡಿಸಿತು. ಬಿಜೆಪಿ ಮತ್ತು ಶಿವಸೇನೆ ನಾಯಕರು ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದಾಗ ಆರ್ ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು…
ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದು ಈ ಮಧ್ಯೆ ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆದಿದ್ದು, ಮೈತ್ರಿಕೂಟ ಸ್ಥಾಪನೆಯಾದ ಬಳಿಕ 4ನೇ ಬಾರಿಗೆ ನಡೆದ ಸಭೆ ಇದಾಗಿದೆ. ಇನ್ನು ಮಮತಾ ಬ್ಯಾನರ್ಜಿ ಅವರ ಅಭಿಪ್ರಾಯಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ಮೊದಲು ನಾವು ಗೆಲ್ಲೋಣ ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ತೀರ್ಮಾನಿಸೋಣ ಎಂದು ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಿದ್ದರು.
ಮಧುಗಿರಿ: ಮೂರು ಜನ ಹುಡುಗರ ತಂಡ ನಕಲಿ ನೋಟು ಚಲಾಯಿಸಿ ಮೊಬೈಲ್ ಖರೀದಿಸಲು ಪ್ರಯತ್ನಿಸಿ ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದಿರುವ ಘಟನೆ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧುಗಿರಿ ಪಟ್ಟಣದ ವಿ ಆರ್ ಎಸ್ ಟಿ ರಸ್ತೆಯಲ್ಲಿರುವ ಬಯಲುಬಸವೇಶ್ವರ ಮೊಬೈಲ್ ಅಂಗಡಿಯಲ್ಲಿ ಸೋಮವಾರ ಸಂಜೆ 6:30 ರಲ್ಲಿ ಮೂರು ಜನ ಹುಡುಗರ ತಂಡ ಮೊಬೈಲ್ ಅಂಗಡಿಗೆ ತೆರಳಿ ಕಡಿಮೆ ಬೆಲೆಯ ಫೋನ್ ತೋರಿಸಲು ತಿಳಿಸಿದ್ದು, ಅಂಗಡಿಯವರು ಫೋನ್ ತೋರಿಸಿದಾಗ ಹುಡುಗರು ಹತ್ತುವರೆ ಸಾವಿರದ ಫೋನ್ ಇರಲಿ ಎಂದು ತಿಳಿಸಿ 500 ರೂಪಾಯಿ ಮುಖಬೆಲೆಯ 21 ನೋಟುಗಳನ್ನು ಅಂಗಡಿ ಮಾಲೀಕರಿಗೆ ನೀಡಿದ್ದಾರೆ. ನೋಟುಗಳನ್ನು ಸ್ವೀಕರಿಸಿದ ಅಂಗಡಿ ಮಾಲೀಕನಿಗೆ ನೋಟುಗಳ ಸ್ಪರ್ಶತೆಯಿಂದ ನೋಟುಗಳ ಮೇಲೆ ಅನುಮಾನ ಬಂದು ಹುಡುಗರಿಗೆ ಇದು ಕೋಟ ನೋಟು ನಿಮ್ಮ ಹತ್ತಿರ ಹೇಗೆ ಬಂತು ಎಂದು ಪ್ರಶ್ನಿಸಿದಾಗ, ಹುಡುಗರು ಗಾಬರಿಯಾಗಿ ಅಂಗಡಿಯಿಂದ ಓಡಿ ಹೋಗಿದ್ದು , ಮುಂಜಾಗ್ರತೆ ಕ್ರಮವಾಗಿ ಮೊಬೈಲ್ ಅಂಗಡಿ ಮಾಲೀಕರಾದ ನವೀನ್ ನಕಲಿ ನೋಟುಗಳನ್ನು ಮಧುಗಿರಿ…
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಸಮೀಪ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಅಸ್ಸಾಂ ಮೂಲದ ಮಜಿಬುರ್(30) ಎನ್ನುವಾತ ಮೃತಪಟ್ಟ ದುರ್ದೈವಿ. ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ರಸ್ತೆ ಅಗಲೀಕರಣ ವೇಳೆ ಜಿಸಿಬಿಯಿಂದ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಣ್ಣಿನಲ್ಲಿ ಒಟ್ಟು ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದು, ಈ ಪೈಕಿ ಓರ್ವ ಕಾರ್ಮಿಕ ಮೃತಪಟ್ಟರೆ ಇನ್ನುಳಿದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ಮತ್ತು 16 ವರ್ಷದ ಇಬ್ಬರು ಬಾಲಕರು 10 ವರ್ಷದ ಬಾಲಕಿಗೆ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರ ಮಾಡಿ ಪರಸ್ಪರ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಬಾಲಕಿಯ ಹೆತ್ತವರು ಹೊಟ್ಟೆಪಾಡಿಗಾಗಿ ಮುಂಬೈನಲ್ಲಿ ಕೆಲಸಕ್ಕೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ಶಿಕ್ಷಣ ಕಲಿಯುತ್ತಿದ್ದಾಳೆ. ಸದ್ಯ ಈ ಬಗ್ಗೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಅಗ್ನಿವೀರ್ ಯೋಜನೆ ಹೆಸರಲ್ಲಿ ಸೇನೆಗೆ ಸೇರುವ ಆಸೆಯಲ್ಲಿ ದೇಶದ ವಿವಿಧ ಪ್ರದೇಶದಲ್ಲಿ ನೇಮಕಾತಿಗಳು ನಡೆದಿದೆ. ಸೇನೆ ನೇಮಕಾತಿಗಾಗಿ ಒಂದಷ್ಟು ರ್ಯಾಲಿ ಹಾಗೂ ನೇಮಕಾತಿ ಪ್ರಕ್ರಿಯೆಗಳು ನಡೆದಿವೆ. ಇದರ ನಡುವೆ ದೇಶದ ವಿವಿಧ ಪ್ರದೇಶದಲ್ಲಿ ಸೇನಾ ರ್ಯಾಲಿ ನಡೆದ ಸ್ಥಳದಲ್ಲೇ ಸೇನೆಗೆ ಸೇರಲು ಆಸೆ ಪಡುವವರನ್ನು ವಂಚಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಒಂದಷ್ಟು ಜನರು ಬೆಂಗಳೂರಿನ ಅಶೋಕ ನಗರದಲ್ಲಿರುವ ಭಾರತೀಯ ಸೇನೆಯ ಕಚೇರಿಗೆ ಆಗಮಿಸಿ ತಮಗೆ ಅಪಾಯಿಂಟ್ಮೆಂಟ್ ಆಗಿದೆ ಎಂದು ಲೆಟರ್ ಸಹಿತ ಬಂದ ಘಟನೆ ನಡೆದಿದೆ.
ದೆಹಲಿ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸಿಎಂಗೆ ಸಚಿವ ಕೃಷ್ಣಭೈರೇಗೌಡ ಅವರು ಸಾಥ್ ನೀಡಿದ್ದಾರೆ. ಇದರಲ್ಲಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದಾರೆ. 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಸಿಎಂ…
ನವದೆಹಲಿ: ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ನೀಡಿದೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಆವರಿಸಿದೆ. ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಗಳಿವೆ. ಆದರೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ: ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕ, ಯುವತಿ ಅಕ್ಕ-ಪಕ್ಕದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋದ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದ್ರೆ, ಇಬ್ಬರೂ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕಡೆಯವರು ಯುವಕನ ತಂದೆ ತಾಯಿ ಇದ್ದ ಮನೆಯ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಬಂಗಾರ ಎಂದಾಕ್ಷಣ ಅನೇಕರಿಗೆ ಶ್ರೀಮಂತಿಕೆ, ಅಂತಸ್ತು ನೆನಪಾಗಬಹುದು. ಆದರೆ ಇದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ. ಚಿನ್ನದ ಉಂಗುರವನ್ನು ಧರಿಸುವುದರಿಂದ ಸೂರ್ಯನ ಶಕ್ತಿಯು ದೇಹಕ್ಕೆ ಹರಿಯಲು ಸಹಾಯ ಮಾಡುತ್ತದೆ. ಏಕಾಗ್ರತೆ ಹೆಚ್ಚುತ್ತದೆ. ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ಚಿನ್ನದ ಉಂಗುರವನ್ನು ಧರಿಸಿದರೆ ಮಾನಸಿಕ ಧೈರ್ಯ ಮತ್ತು ಆಂತರಿಕ ಶಾಂತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಇದಲ್ಲದೇ, ನಿಮ್ಮ ಜಾತಕದಲ್ಲಿ ಗುರು ದುರ್ಬಲನಾಗಿದ್ದರೆ ಯಶಸ್ಸು ಪಡೆಯಲು ನಿಮ್ಮ ಉಂಗುರದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸಬಹುದು.