Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಭ್ರಷ್ಟಾಚಾರ, ದುರಾಡಳಿತ ಮತ್ತು ಮಧ್ಯವರ್ತಿಗಳ ಹಾವಳಿ ಕುರಿತ ದೂರುಗಳನ್ನು ಆಧರಿಸಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ 12 ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ ಟಿಒ) ಕಚೇರಿಗಳ ಮೇಲೆ ಬುಧವಾರ ಏಕಕಾಲಕ್ಕೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಶೋಧ ನಡೆಸಿದ್ದಾರೆ. ಬೆಂಗಳೂರು ನಗರದ ಒಂಬತ್ತು ಆರ್ ಟಿಒ ಕಚೇರಿಗಳಲ್ಲೂ ಶೋಧ ನಡೆದಿದೆ. ನೆಲಮಂಗಲ, ದೇವನಹಳ್ಳಿ ಮತ್ತು ಅನೇಕಲ್ ಆರ್ ಟಿಒ ಕಚೇರಿಗಳ ಮೇಲೂ ದಾಳಿಮಾಡಿ, ಶೋಧ ನಡೆಸಲಾಗಿದೆ.
ತುಮಕೂರು: ಹೆಂಡತಿ ಕಾಟದಿಂದ ಬೇಸತ್ತು ಎಂಜಿನಿಯರ್ ಒಬ್ಬರು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರು ಮೆಟ್ರೊದಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದರು. ಕಳೆದ 9 ವರ್ಷಗಳ ಹಿಂದೆ ಮಂಜುನಾಥ್ ತುರುವೆಕೆರೆ ಮೂಲದ ಪ್ರಿಯಾಂಕಾ ಯಾನೆ ಪವಿತ್ರಾಳನ್ನ ಮದುವೆಯಾಗಿದ್ದರು. ಮದುವೆ ನಂತರ ಮಂಜುನಾಥ್ ಗೆ ಪತ್ನಿ ಪವಿತ್ರಾ ಮಾನಸಿಕ ಕಿರುಕುಳ ನೀಡುತ್ತಿದ್ದಳು. ಇದರಿಂದ ಮನನೊಂದು ಮಂಜುನಾಥ್ ಕೆಬಿ ಕ್ರಾಸ್ ನ ಕುದ್ರುಪಾಳ್ಯದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯೋ ಮುನ್ನ ಮುಂಜುನಾಥ್ ತನ್ನ ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿದ್ದಾರೆ. ಆ ಆಡಿಯೊದಲ್ಲಿ, ನನಗೆ ಅವಳ ಜೊತೆ ಜೀವನ ಮಾಡೋಕೆ ಆಗ್ತಾ ಇಲ್ಲ. ಆ ಮನೆಹಾಳಿಯಿಂದ ನಾನು ಸಾಯ್ತಾ ಇದ್ದೀನಿ. ನನ್ನ ಮಗಳನ್ನ ಚೆನ್ನಾಗಿ ನೋಡಿಕೊಳ್ಳೋಕೆ ಹೇಳು. ಯಾರು ಬೇಜಾರ್ ಮಾಡ್ಕೊಬೇಡಿ ಕಣ್ರೋ ಪ್ಲೀಸ್. ನಾವು ಕೂಲಿ ಮಾಡ್ಕೊಂಡ್ ಜೀವನ ಮಾಡುವವರಂತೆ. ಹಳ್ಳಿಗೆ ಬರಲ್ಲ ಅಂದೊಳನ್ನ ಯಾಕಪ್ಪ ನನಗೆ…
ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ಶಾಲಾ ಮಕ್ಕಳಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 18 ಮಂದಿ ನಾಪತ್ತೆಯಾಗಿದ್ದಾರೆ. 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅನಧಿಕೃತ ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆನ್ನೆ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಮಧುಪುರ್ ಪಟ್ಟಿ ಘಾಟ್ ಬಳಿ ಬಾಗಮತಿ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ದೋಣಿಯಲ್ಲಿ 34 ವಿದ್ಯಾರ್ಥಿಗಳು ಇದ್ದರು ಎಂದು ಸ್ಥಳೀಯರು ಹೇಳುತ್ತಾರೆ. ಎನ್ ಡಿಆರ್ ಎಫ್, ಎಸ್‌ಡಿಆರ್ ಎಫ್ ಹಾಗೂ ಸ್ಥಳೀಯರ ನೇತೃತ್ವದಲ್ಲಿ ಮಕ್ಕಳ ಪತ್ತೆ ಕಾರ್ಯ ಮುಂದುವರೆದಿದೆ.
5 ಕೋಟಿ ವಂಚನೆ ಆರೋಪದಡಿಯಲ್ಲಿ ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ದಿಢೀರ್ ಎಂದು ಕುಸಿದು ಬಿದ್ದಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಎಂದು ಕರೆದುಕೊಂಡು ಬರುವ ಸಂದರ್ಭದಲ್ಲಿ, ಕಚೇರಿಯ ಮುಖ್ಯದ್ವಾರದ ಬಳಿ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ. ಚೈತ್ರಾ ಕುಂದಾಪುರಳನ್ನ ತಕ್ಷಣವೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಿದೆ. ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರ ಮೇಲೆ ಪೊಲೀಸರು ನಿಗಾ ಇರಿಸಿದ್ದು, ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಗಡಿ ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಪ್ರತಿ ವಾಹನದ ವಿವರ ಪಡೆದುಕೊಂಡು ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುತ್ತಿದೆ. ಅಲ್ಲದೆ, ನಿಫಾ ಬಗ್ಗೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ.
ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾಗ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಕುಸಿದು ಬಿದ್ದಿದ್ದು, ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಚೈತ್ರಾ ಕುಂದಾಪುರ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾಳೆ.ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಿಂದ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಮಾತನಾಡಿದ ಚೈತ್ರಾ ಕುಂದಾಪುರ, ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿ ಬಂಧನದ ನಂತರ ಎಲ್ಲ ದೊಡ್ಡ ದೊಡ್ಡವರ ಹೆಸರುಗಳು ಹೊರಗೆ ಬರಲಿವೆ. ಸ್ವಾಮೀಜಿ ಸಿಕ್ಕಾಕೊಂಡ ಬಳಿಕ ಎಲ್ಲದೂ ಗೊತ್ತಾಗಲಿದೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಯಿದೆ. ಅದಕ್ಕಾಗಿ ಈ ಷಡ್ಯಂತ್ರ ರೂಪಿಸಿ ನನ್ನನ್ನು ಸಿಲುಕಿಸಿದ್ದಾರೆ…
ತಮಿಳುನಾಡು ಸರ್ಕಾರ ಯುವತಿಯರನ್ನು ದೇವಸ್ಥಾನದ ಅರ್ಚಕರ ಸ್ಥಾನಕ್ಕೆ ಬಡ್ತಿ ನೀಡಿದ್ದು, ಈಗಲೂ ಕೆಲ ದೇವಸ್ಥಾನಕ್ಕೆ ಮಹಿಳೆಯರಿಗೆ ನಿಷೇಧವಿದೆ. ತಮಿಳುನಾಡು ಶ್ರೀ ವೈಷ್ಣವ ದೇವಾಲಯಗಳಲ್ಲಿ ಮೂವರು ಯುವತಿಯರನ್ನು ಸಹ ಅರ್ಚಕರನ್ನಾಗಿ ನೇಮಿಸುವ ಮೂಲಕ ಸಮಾನತೆಯ ಹೊಸ ಇತಿಹಾಸ ಬರೆಯುತ್ತಿದೆ. ಎಸ್.ಕೃಷ್ಣವೇಣಿ, ಎಸ್.ರಮ್ಯಾ ಮತ್ತು ರಂಜಿತಾ ಅವರು ಅರ್ಚಕರ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಮೂವರೂ ತಮ್ಮ ತರಬೇತಿಯನ್ನು ಶ್ರೀರಂಗಂನ ಶ್ರೀ ರಂಗನಾಥರ ದೇವಸ್ಥಾನದಿಂದ ನಡೆಸಲ್ಪಡುವ ಅರ್ಚಕರ್ (ಪುರೋಹಿತರು) ತರಬೇತಿ ಶಾಲೆಯಿಂದ ಪೂರ್ಣಗೊಳಿಸಿದರು. ಒಂದು ವರ್ಷದೊಳಗೆ ಶ್ರೀ ವೈಷ್ಣವ ದೇವಾಲಯಗಳಲ್ಲಿ ಸಹ ಅರ್ಚಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಯುವತಿಯರ ಸಾಧನೆಯನ್ನು ಕೊಂಡಾಡಿದರು. ಒಳಗೊಳ್ಳುವಿಕೆ ಮತ್ತು ಸಮಾನತೆಯ ಹೊಸ ಯುಗವು ಉದಯಿಸುತ್ತಿದೆ ಎಂದು ಸ್ಟಾಲಿನ್ ಎಕ್ಸ್-ಹ್ಯಾಂಡಲ್‌ನಲ್ಲಿ ಹೇಳಿದರು. ಸೆ.12ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ ಸಚಿವ ಪಿ.ಕೆ.ಶೇಖರ್ ಬಾಬು ಅವರಿಂದ ತರಬೇತಿ ಪೂರ್ಣಗೊಳಿಸಿದ ಪ್ರಮಾಣಪತ್ರವನ್ನು ಅರ್ಚಕರ್ ಸ್ವೀಕರಿಸಿದರು. ಅವರೊಂದಿಗೆ 91 ಪುರುಷರು 2022-2023 ರಲ್ಲಿ ತಮ್ಮ ತರಬೇತಿಯನ್ನು ಪೂರ್ಣಗೊಳಿಸಿದರು.
ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂತೋಷ್ ಸಿಂಗ್ ನ ಕರ್ತವ್ಯ ಲೋಪವನ್ನು ಕಂಡ ತುಮಕೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ ರವರು ಅಮಾನತು ಮಾಡಿ ಅನುಮತಿ ಇಲ್ಳದೆ ಕೇಂದ್ರ ಸ್ಥಾನ ಬಿಡದಂತೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದಿಂದ ಅನುಷ್ಠಾನಗೊಳಿಸಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ 2023-24ನೇ ಸಾಲಿನ ವಾರ್ಷಿಕ ಮಾನವ ದಿನಗಳ ಗುರಿ 10802 ಇದ್ದು ಸೆಪ್ಟೆಂಬರ್ 2023ರ ಮಾಹೆಯಲ್ಲಿ ಅತ್ಯಂತ 5450 ದಿನಗಳ ಗುರಿ ನಿಗದಿಪಡಿಸಿದ್ದು ಪ್ರಸ್ತುತ ದಿನಾಂಕದ ವರದಿಯನ್ನು ಪರಿಶೀಲಿಸಿ ಇದುವರೆಗೂ ಕೇವಲ 3187 ಮಾನವ ದಿನಗಳನ್ನು ಮಾತ್ರ ಸೃಜನ ಮಾಡಿ ಯೋಜನೆಯ ಅನುಷ್ಠಾನದಲ್ಲಿ ನಿರ್ಲಕ್ಷತೆಯನ್ನು ತೋರಿ ಕರ್ತವ್ಯ ಲೋಪವೆಸಗಿದ್ದ ಪಿಡಿಓ ಸಂತೋಷ್ ಸಿಂಗ್. ನರೇಗಾ ಯೋಜನೆಯಡಿ 80 ಕಾಮಗಾರಿಗಳನ್ನು ಜಿಯೋ ಟ್ಯಾಗ್ ಮಾಡದೆ ಬಾಕಿ ಉಳಿಕೆ ಮತ್ತು ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪೈಕಿ 2021…
ತುಮಕೂರು: ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆ ಐ ಎ ಡಿ ಬಿ ವಿಶೇಷ ಭೂಸ್ವಾದಿನಾಧಿಕಾರಿ ತಬಸು ಜಾಹಿರಾ ಹಾಗೂ ಬೆಳ್ಳಾವಿ ಉಪತಸೀಲ್ದಾರ್ ಶಬ್ಬೀರ್ ಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ 20000 ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಮಲಿಂಗೇಗೌಡ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ ತಮ್ಮ ತಂದೆ ಹೆಸರಿಗೆ ಪೌತಿ ಖಾತೆ ಮಾಡಿಸುವ ಸಲುವಾಗಿ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ತಬಸುಮ್ ಜಹೇರಾ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಜಹರ ಅವರು ತಮ್ಮ ಕಚೇರಿಯ ಕೇಸ್ ವರ್ಕರ್ ಶಬ್ಬೀರ್ ಮೂಲಕ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 35,000 ಹಣವನ್ನು ಕೂಡ ಪಡೆದಿದ್ದರು ಅದಾದ ನಾಲ್ಕು ತಿಂಗಳ ಬಳಿಕ ಮತ್ತೊಮ್ಮೆ 25,000 ಲಂಚವನ್ನು ಕೇಳಿದ್ದರು ಈ ಹಿನ್ನೆಲೆ ಬೇಸತ್ತ ಜೈರಾಮ್ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ…
ತುಮಕೂರು: ರಾಜ್ಯದ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಣೆಯಾಗಿದ್ದು, ಕಲ್ಪತರು ನಾಡಿನ ಹತ್ತು ತಾಲೂಕುಗಳೂ ಪಟ್ಟಿಗೆ ಸೇರ್ಪಡೆಯಾಗಿದೆ. 9 ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಯಲ್ಲಿದ್ರೆ, ತುಮಕೂರು ತಾಲೂಕು ಸಾಧಾರಣ ಬರ ಪೀಡಿತ ಪಟ್ಟಿಗೆ ಸೇರ್ಪಡೆಯಾಗಿದೆ. ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕುಣಿಗಲ್, ಶಿರಾ, ಪಾವಗಡ, ಮಧುಗಿರಿ, ಕೊರಟಗರೆ ತಿಪಟೂರು ತೀವ್ರ ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ.