Author: admin

ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಡೆತ್‌ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಪತ್ನಿಯೊಂದಿಗೆ ವೈಮನಸ್ಸು ಮೂಡಿತ್ತು. ತನ್ನ ಪತ್ನಿ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ರಮೇಶ್ ಅನುಮಾನ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಕಂಟ್ರೋನೆಂಟ್ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ. ಫೇಸ್‌ ಬುಕ್ ಮೂಲಕ ಹಾಸನ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರಿಗೆ ಟ್ಯಾಗ್ ಮಾಡಿ ಯುವತಿ ದೂರು ನೀಡಿದ್ದಾಳೆ. ಬಾಲಕೃಷ್ಣ ಸುನೀಲ್ ಎಂಬಾತ ತನ್ನನ್ನು ಪ್ರೀತಿಸಿ, ನನ್ನನ್ನು ತಾಯಿಯನ್ನಾಗಿ ಮಾಡಿ ಭ್ರೂಣ ಹತ್ಯೆಯನ್ನೂ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

Read More

ಬೆಳಗಾವಿ: ಗೀತೆಯ ಸಂದೇಶವನ್ನು ಸಮಸ್ತ ಜನತೆಗೆ ತಲುಪಿಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಾರ್ಯ ಶ್ಲಾಘನೀಯ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಭಗವದ್ಗೀತೆ ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದ್ದಾರೆ. ಸೋಮವಾರ ಇಲ್ಲಿಯ ಗುರುದೇವ ರಾನಡೆ ಮಂದಿರದಲ್ಲಿ, ಭಗವದ್ಗೀತೆ ಅಭಿಯಾನ ಸಮಿತಿ, ಜನಕಲ್ಯಾಣ ಟ್ರಸ್ಟ್ ಹಾಗೂ ಎಸಿಪಿಆರ್ ಸಹಯೋಗದಲ್ಲಿ ನಡೆದ ಗೀತಾ ಸಮನ್ವಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಿಸ್ವಾರ್ಥದಿಂದ ಮೂಲ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಅತ್ಯಂತ ಸ್ತುತ್ಯಾರ್ಹ. ಬೆಳಗಾವಿಯಲ್ಲಿ ಭಗವದ್ಗೀತೆ ಅಭಿಯಾನ ನಡೆಸುತ್ತಿರುವುದು ಬಹಳ ದೊಡ್ಡ ಕೆಲಸ ಎಂದ ಕೋರೆ, ಡಿ.23ರಂದು ನಡೆಯಲಿರುವ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಜನತೆ ಭಾಗವಹಿಸಲಿದ್ದಾರೆ ಎಂದರು. ಸಾನ್ನಿಧ್ಯ ವಹಿಸಿದ್ದ ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಭಗವದ್ಗೀತೆಯ ತತ್ವದ ಅಡಿಯಲ್ಲಿ ಎಲ್ಲ ಸಿದ್ಧಾಂತಗಳನ್ನು ಒಂದೇ ಕಡೆ ತರುವ ಪ್ರಯತ್ನದ ಭಾಗವಾಗಿ ಗೀತಾ ಸಮನ್ವಯ ನಡೆಸಲಾಗುತ್ತಿದೆ ಎಂದರು. ಎಲ್ಲದಕ್ಕೂ ಅದರದ್ದೇ ಆದ…

Read More

ಬೆಳಗಾವಿ: ತಾಲೂಕಿನ ಹೊಸವಂಟಮುರಿ ಗ್ರಾಮದಲ್ಲಿ ನಡೆದ ಘಟನೆ ಮತ್ತೆ ರಾಜ್ಯದಲ್ಲಿ ಇಂಥ ಪ್ರಕರಣಗಳು ಮರುಕಳಿಸಬಾರದು ಎಂದು ಜಾಗೃತ ಮಹಿಳಾ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸಂಘಟನೆಯ ಸದಸ್ಯರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರನ್ನು ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಹೊಡೆಯುವ ದೌರ್ಜನ್ಯ ಎಸಗಿರುವ ಪ್ರಕರಣ ತುಂಬಾ ಖಂಡನೀಯವಾಗಿದೆ. ಇಂಥದೊಂದು ಪ್ರಕರಣ ಮಾನವ ಕುಲವೇ ತಲೆತಗ್ಗಿಸುವಂತೆ ಆಗಿದೆ. ಮಣಿಪುರದಲ್ಲಿ ನಡೆದಿರುವ ಘಟನೆ ಈ ದೇಶದಲ್ಲಿ ಚರ್ಚೆ ಗೀಡಾಗಿತ್ತು. ಅಂತಹದೇ ಘಟನೆ ಚರ್ಚೆ ಈಗ ಕರ್ನಾಟಕದಲ್ಲಿ ನಡೆದಿರುವುದು ದುರ್ದೈವದ ಸಂಗತಿ ಹೆಣ್ಣು ಅಂದರೆ ಭೋಗದ ವಸ್ತು ಅಲ್ಲ. ಆಟಿಕೆಯು ಅಲ್ಲ ಮನಬಂದಂತೆ ನಡೆಸಿಕೊಳ್ಳುವ, ಶಿಕ್ಷಿಸುವ ಪ್ರಾಣಿಯೂ ಅಲ್ಲ ಎಂಬ ಮನಸ್ಥಿತಿಯುಳ್ಳ  ಸ್ವಸ್ಥ ಸಮಾಜವನ್ನು ಕಟ್ಟುವ ಜವಾಬ್ದಾರಿ ಈ ಬಗ್ಗೆ ಚಿಂತಿಸುವವರೆಲ್ಲರೂ ಮೇಲೆ ಇದೆ. ಮಹಿಳೆ ಮೇಲೆ ನಡೆಯುವ ಬಹುತೇಕ…

Read More

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕ ಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ…

Read More

ಹುಬ್ಬಳ್ಳಿ: ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಮುಂದೆಯೂ ಬಂದವರಿಗೆ ಸುಮ್ಮನೆ ಬಿಡಲ್ಲ ಅಂತ ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾರ್ನಿಂಗ್ ಮಾಡಿದ್ದಾರೆ. ನಗರದ ಸವಾಯಿಗಂಧರ್ವ ಹಾಲ್ ‌ನಲ್ಲಿ ನಡೆದ ತಮ್ಮ 68ನೇ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಶೆಟ್ಟರ್, ಕಳೆದ ವರ್ಷವೂ ಇದೇ ವೇದಿಕೆಯಲ್ಲಿ ಇದೇ ಮಾತು ಹೇಳಿದ್ದರು. ಈಗ ಅದೇ ಮಾತು ಪುನರುಚ್ಚರಣೆ ಮಾಡಿದ್ದಾರೆ. ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ನೀಡಿದ್ದೇನೆ. ನಾನು ವಿಧಾನಸಭೆ ಚುನಾವಣೆಯಲ್ಲಿ ಸೋತಿರಬಹುದು. ಆದರೆ 6 ಬಾರಿ ನನ್ನನ್ನು ಜನ ಗೆಲ್ಲಿಸಿದ್ದನ್ನು ಮರೆಯಲ್ಲ ಎಂದಿದ್ದಾರೆ. ನಾನು ಸೋತರೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸೀಟು ಗೆಲ್ಲಿಸಿದ್ದೇನೆ. ನನ್ನ ಉಸಾಬರಿಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಮುಂದೆಯೂ ನನ್ನ ಉಸಾಬರಿಗೆ ಬಂದವರಿಗೆ ಸುಮ್ಮನೆ ಬಿಡಲ್ಲ ಎಂದು ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

Read More

ಚಿಕ್ಕಬಳ್ಳಾಪುರ: ಹೆಂಡತಿ ಸಮಾಧಿಗೆ ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ. ನಗರದ 16ನೇ ವಾರ್ಡ್ ನಿವಾಸಿ, ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಗುರುಮೂರ್ತಿ ಅಲಿಯಾಸ್ ಲೆಗ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಳೆದ ವರ್ಷ ಡಿಸೆಂಬರ್ 20 ರಂದು ಪತ್ನಿ ಮೌನಿಕಾ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋಗಿರುವ ಗುರುಮೂರ್ತಿ, ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ತದನಂತರ ಅಲ್ಲೇ ಇದ್ದ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ  ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ವಿಮಾನದಲ್ಲಿ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್ ‍ಗಳು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ. ಈ ಇಬ್ಬರು ನಾಯಕರ ಜೊತೆಗೆ ಸಂಸದ ಸಂಗಣ್ಣ ಕರಡಿ ಕೂಡ ಅದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಸದ್ಯ ಯತ್ನಾಳ್ ಹಾಗೂ ಅನಂತ್ ಕುಮಾರ್ ನಾಯಕರ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿ.ಎಸ್. ಯಡಿಯೂರಪ್ಪ‌ ಅವರ ಮಗ ಬಿ.ವೈ. ವಿಜಯೇಂದ್ರ  ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಯತ್ನಾಳ್‍ಗೆ ಸ್ವಪಕ್ಷ ವಿರುದ್ಧ ಇದ್ದ ಕೋಪ ಮತ್ತಷ್ಟು ಹೆಚ್ಚಾಗಿದೆ. ಈ ಸಂಬಂಧ ಕೆಲ ದಿನಗಳ ಹಿಂದೆ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ದೆಹಲಿಗೆ ಹೋಗ್ತೀನಿ. ದೆಹಲಿಯಿಂದ ಕರೆ ಬರಬೇಕಿದೆ, ಬರುತ್ತೆ.…

Read More

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 2 ಲಕ್ಷ ರೂ. ನಗದು ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಹೊಲಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟದಿಂದಾಗಿ ಮನೆ ಹೊತ್ತಿಉರಿದಿದ್ದು, ಮನೆಯಲ್ಲಿದ್ದ ವಸ್ತುಗಳು ಸೇರಿದಂತೆ 2 ಲಕ್ಷ ರೂ. ಹಣ ಸೇರಿದಂತೆ ಚಿನ್ನದ ಆಭರಣಗಳು ಸುಟ್ಟು ಕರಕಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬಾಗಲಕೋಟೆ: ಕ್ರೀಡಾ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದರ ಜೊತೆಗೆ ದೈಹಿಕ ಶಿಕ್ಷಕರಿಗೆ ಪುನಶ್ಚೇತನ ನೀಡಲು ಸಹಕಾರಿಯಾಗುತ್ತವೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಗುರುದತ್ತ ಜಿ.ಕೋರಿ ಹೇಳಿದರು. ನಗರದ ಬಿವಿವಿ ಸಂಘದ, ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಖೋ-ಖೋ ಕ್ರೀಡೆಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕ್ರೀಡೆಯು ವ್ಯಕ್ತಿತ್ವ ವಿಕಸನಕ್ಕೆ ಒಂದು ರಹದಾರಿಯಾಗಿದ್ದು ಯುವಜನತೆ ಇತ್ತ ವಾಲುವಂತೆ ಮಾಡುವುದು ದೈಹಿಕ ಶಿಕ್ಷಕರ ಕೈಯಲ್ಲಿದೆ. ಅವರು ನಾಲ್ಕು ಗೋಡೆಗಳ ಮಧ್ಯೆ ಉಪಾನ್ಯಾಸದಲ್ಲಿ ಕಾಲ ಕಳೆಯದೆ ಆಟದ ಮೈದಾನದತ್ತ ಹೆಜ್ಜೆ ಹಾಕಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹ ನೀಡಬೇಕು ಎಂದರು. ಬದಲಾಗುತ್ತಿರುವ ಜಗತ್ತಿನಲ್ಲಿ ಕ್ರೀಡಾ ಹವ್ಯಾಸವು ಬದಲಾಗುತ್ತಿದ್ದು ಹೊಸ ಅಭಿರುಚಿಗಳೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಂಡರೆ ಮಾತ್ರ ಸಾಧನೆ ಸಾಧ್ಯ. ಇಂತಹ ಕ್ರೀಡಾ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ಕ್ರೀಡೆಗಳ ಪರಿಚಯದ ಜೊತೆಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಸಾಧ್ಯವಾಗುತ್ತದೆ. ಸರಕಾರವು ಕೂಡ ಇಂತಹ ಕಾರ್ಯಾಗಾರಗಳನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ನಡೆಸಬೇಕು ಎಂದರು.  ರಾಜ್ಯ ಖೋ-ಖೋ ಅಮೇಚೂರ…

Read More