Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸೇನೆಯ ಕರ್ನಲ್ ಮತ್ತು ಮೇಜರ್ ಮತ್ತು ಜಮ್ಮು ಮತ್ತು ಕಾಶ್ಮೀರ ಉಪ ಪೊಲೀಸ್ ವರಿಷ್ಠಾಧಿಕಾರಿ ವೀರ ಮರಣವನ್ನಪ್ಪಿದರು. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ನಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಎನ್ ಕೌಂಟರ್ ನಡೆದಿದೆ. ನಿನ್ನೆ ಸಂಜೆ ಗಡೋಲ್ ಪ್ರದೇಶದಲ್ಲಿ ಭಯೋತ್ಪಾದಕರಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಆದರೆ ರಾತ್ರಿಯ ಹೊತ್ತಿಗೆ ಶೋಧವನ್ನು ನಿಲ್ಲಿಸಲಾಯಿತು. ನಂತರ ಇಂದು ಬೆಳಗ್ಗೆ ದೊರೆತ ರಹಸ್ಯ ಮಾಹಿತಿ ಮೇರೆಗೆ ಮತ್ತೆ ಶೋಧ ಕಾರ್ಯ ಆರಂಭಿಸಲಾಗಿದೆ. ಭಯೋತ್ಪಾದಕರ ಎನ್ ಕೌಂಟರ್ ನಲ್ಲಿ ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಛಾಯಾ ಗುಂಪು ಲಷ್ಕರ್-ಎ-ತೈಬಾ ಎಂಬ ನಿಷೇಧಿತ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಏತನ್ಮಧ್ಯೆ, ಇಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ನಾರ್ಲಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ.
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾವೇರಿ ಆಸ್ಪತ್ರೆಯು ನಗರದಲ್ಲಿ 15 ಆಂಬುಲೆನ್ಸ್ ಗಳಿಗೆ ಚಾಲನೆ ನೀಡಿದ್ದು, ತುರ್ತು ಕರೆ ಸ್ವೀಕರಿಸಿದ ಕೆಲನಿಮಿಷಗಳಲ್ಲಿ ಆಂಬುಲೆನ್ಸ್ ಸ್ಥಳದಲ್ಲಿ ಇರುವುದಾಗಿ ತಿಳಿಸಿದೆ. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ಡಾ.ಕೃಷ್ಣ ಚೈತನ್ಯ, ತುರ್ತು ಕರೆ ಸ್ವೀಕರಿಸಿದ 120 ಸೆಕೆಂಡ್ ಗಳಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಕಳಿಸಲು ಕ್ರಮವಹಿಸಲಾಗುತ್ತದೆ. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಆಂಬುಲೆನ್ಸ್ ಗಳು ಕಾರ್ಯಾಚರಣೆ ಮಾಡಲಿವೆ.
ಭಾರತದ ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್ ನ ಮಾಸ್ಟರ್ ಮೈಂಡ್ ಬೆಂಗಳೂರಿನಲ್ಲಿ ಬಂಧನವಾಗಿದ್ದಾಳೆ. 2019 ರಲ್ಲಿ ನಡೆದಿದ್ದ ಹನಿಟ್ರಾಪ್ ಪ್ರಕರಣ ಆರೋಪಿ ಆಗಿದ್ದಳು. ಮೂರ್ನಾಲ್ಕು ವರ್ಷಗಳಾದರೂ ಈ ಆರೋಪಿಯನ್ನು ಬಂಧಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ, ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ಕಾರ್ಯಾಚರಣೆ ಮಾಡಿದ ಪೊಲೀಸರು ಆರೋಪಿ ಆರತಿ ದಯಾಳ್ ನನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲಾ ಸಂಸದರು ನರಸತ್ತವರು. ಸಂಸದರ ಮನೆಗೆ ಕರವೇ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿಚಾರದಲ್ಲಿ ನಾವು ಭುಗಿಲೇಳಬೇಕಿದೆ. ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶವನ್ನು ನಾವು ಧಿಕ್ಕರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮಲ್ಲಿ ನೀರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಧಿಮಾಕು ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಧಿಮಾಕು ಮಾಡಿಕೊಂಡು ನೀರು ಕೊಡಿ ಅಂತಾರೆ. ಹೀಗೆ ಹೇಳುತ್ತಿದ್ದರೆ ತಮಿಳುನಾಡಿಗೆ ನೀರು ಕೊಡಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು. ಬೆಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಇಂದು ಸಭೆ ಕರೆದಿದ್ದೇವೆ. ಶುಕ್ರವಾರ ಎಲ್ಲಾ ಡಿಸಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಶಂಕಿತ ಪ್ರಕರಣದ ಕುರಿತು ಕಣ್ಣಾವಲು ಕಚೇರಿಗೆ ಮಾಹಿತಿ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್‌ಗಳನ್ನು ತೆರೆಯಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಉದ್ಯಮಿಯನ್ನು ವಂಚಿಸಿದ ಕೇಸ್ ಗೆ ಸಂಬಂಧಿಸಿದಂತೆ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿಂದೂ ಸಂಘಟನೆಗಳಲ್ಲಿ ಪ್ರಚೋದನಾಕಾರಿ ಭಾಷಣ ಮಾಡುತ್ತಾ, ಸದಾ ವಿವಾದಕ್ಕೆ ಸಿಲುಕಿದ್ದ, ಚೈತ್ರಾ ಕುಂದಾಪುರ ಇದೀಗ ಸಿಕ್ಕಿಕೊಂಡಿರುವ ಪ್ರಕರಣ ಏನು? ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ… ಉದ್ಯಮಿ ಗೋವಿಂದ ಬಾಬು ಪೂಜಾರಿ 7 ವರ್ಷಗಳಿಂದ ‘ವರಲಕ್ಷ್ಮಿ, ಚಾರಿಟಬಲ್ ಟ್ರಸ್ಟ್’ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡಿದ್ದರು. ಬಿಜೆಪಿ ಕಾರ್ಯಕರ್ತ ಪ್ರಸಾದ್ ಬೈಂದೂರು ಅವರು ಹಿಂದೂ ಕಾರ್ಯಕರ್ತೆ ಎಂದು ಹೇಳಿಕೊಳ್ಳುತ್ತಿರುವ ಚೈತ್ರಾ ಕುಂದಾಪುರ ರವರನ್ನು ಪರಿಚಯಿಸಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಬೇಕು, ಸ್ಪರ್ಧಿಸಿದರೆ ಗೆಲ್ಲಿಸಿಕೊಡುವುದಾಗಿ ಗೋವಿಂದ ಬಾಬು ಪೂಜಾರಿ ಅವರನ್ನು ಮನವೊಲಿಸಿ “ನಾನು ಹಿಂದೂ ಸಂಘಟನೆಯಲ್ಲಿರುವುದರಿಂದ BJP RSS ವರಿಷ್ಠರಿಗೂ ಹತ್ತಿರವಿದ್ದೇನೆ. ಪ್ರಧಾನಿ ಕಚೇರಿಯಲೂ ಪ್ರಭಾವಿಯಾಗಿದ್ದು, ಸುಪ್ರೀಂ ಕೋರ್ಟ್ ಜಡ್ಜ್ ಗಳಿಗೂ ಆಪ್ತಳಾಗಿದ್ದು, ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸುತ್ತೇನೆ” ಎಂದು ಚೈತ್ರಾ…
ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಪ್ರೋ ಯುರಾಲಜಿ ಸಂಸ್ಥೆಯಲ್ಲಿ 5 ರೋಗಿಗಳು ಕೋಮಾಗೆ ಹೋಗಿದ್ದರು. ಈ ಮಾಹಿತಿಯನ್ನು ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಭಾರಿ ನಿರ್ದೇಶಕ ಡಾ. ಕೇಶವ ಮೂರ್ತಿ ಮುಚ್ಚಿಟ್ಟಿದ್ದರು. ಈ ಬಗ್ಗೆ ಡಾ. ಶಂಕರ್ ಗುಹಾ ಹಾಗೂ ಮಾಜಿ ಎಂಎಲ್‌ಸಿ ಪಿ. ಆರ್ ರಮೇಶ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ಡಾ. ಕೇಶವ ಮೂರ್ತಿ ವಿರುದ್ಧ ತನಿಖೆ ನಡೆಸುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಈ ಸೈಬರ್ ವಂಚಕರ ಹಾವಳಿಯಿಂದ ಜನರು ಪಾರಾಗುವುದು ಹೇಗೆಂದು ಜಾಗೃತಿ ಮೂಡಿಸಲು ನಗರ ಪೊಲೀಸ್ ಇಲಾಖೆ ವಿನೂತನ ಪ್ರಯತ್ನ ಆರಂಭಿಸಿದೆ. ‘ಸೈಬರ್ ವಂಚಕರಿಂದ ದೂರವಿರಲು, ದಿನಕ್ಕೊಂದು ಸೈಬರ್ ಸಲಹೆ’ ಅಭಿಯಾನ ಆರಂಭಿಸಲಾಗಿದೆ. ಪ್ರತಿನಿತ್ಯ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರೇ ಸಲಹೆ ನೀಡಲಿದ್ದಾರೆ. ಧ್ವನಿ ರೂಪದಲ್ಲಿ ಅದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಲಿದೆ.
ರಸ್ತೆ ಅಪಘಾತ ಸಂಭವಿಸಿದಾಗ ತುರ್ತಾಗಿ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ ಕ್ಯೂಆರ್ ಕೋಡ್’ ಅನ್ನು ಹೈವೇ ಡಿಲೈಟ್ ಸಂಸ್ಥೆ ಮಂಗಳವಾರ ಬಿಡುಗಡೆಗೊಳಿಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ರಾಜೇಶ್ ಘಟನಟ್ಟಿ, ‘ದೇಶದಲ್ಲಿ ಪ್ರತಿನಿತ್ಯ ನೂರಾರು ಅಪಘಾತಗಳು ಸಂಭವಿಸುತ್ತವೆ. ಅಪಘಾತಕ್ಕೆ ಒಳಗಾದವರ ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಶಿಕ್ಷಕ ವೃತ್ತಿ ಬಹಳ ಶ್ರೇಷ್ಠ. ಜಾತಿ, ಭಾಷೆ ಹಾಗೂ ಧರ್ಮದ ತಾರತಮ್ಯಗಳನ್ನು ಮೀರಿ ಮಕ್ಕಳಿಗೆ ಸಂಸ್ಕಾರಯುತ ಮತ್ತು ಜ್ಞಾನಾಧಾರಿತ ಶಿಕ್ಷಣವನ್ನು ಧಾರೆಯೆರೆಯುವವರೇ ನಿಜವಾದ ಶಿಕ್ಷಕರು ಎಂದು ತುಮಕೂರು ವಿಶ್ವವಿದ್ಯಾಲಯದ ಮಾಜಿ ಕುಲ ಸಚಿವ ಪ್ರೊ. ಕೆ. ಶಿವಚಿತ್ತಪ್ಪ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ರೇವಾ ಕಾಲೇಜಿನಲ್ಲಿ ಆಯೋಜಿಸಿದ್ದ ಗುರುನಮನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.