Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುಜೇವಾಲ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಮೊದಲ ಕಂತಿನಲ್ಲಿ 25 ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ತಿನ ಸದಸ್ಯರಿಗೆ ಅಧಿಕಾರ ಭಾಗ್ಯ ಸಿಗುವ ಸಾಧ್ಯತೆಗಳಿವೆ. ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಬಹುದಾದ 25 ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ತಿನ ಸದಸ್ಯರ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್ ಗೆ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ ಎನ್ನಲಾಗಿದೆ. ನೇಮಕ ವಿಳಂಬ ಹಿನ್ನೆಲೆಯಲ್ಲಿ ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವುದನ್ನು ಅರಿತ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಜೊತೆ ಅಂತಿಮ ಸುತ್ತಿನ ಮಾತುಕತೆಗೆ ನಿರ್ಧರಿಸಿದ್ದು, ಮುಂದಿನ ವಾರ ದೆಹಲಿಗೆ ತೆರಳಲು ದಿನಾಂಕ ನಿಗದಿಪಡಿಸಿದ್ದಾರೆ ಎನ್ನಲಾಗಿದೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ಪಾರ್ಟಿ ಪ್ರಿಯರ ನೆಚ್ಚಿನ ಸ್ಥಳಗಳಿಗೆ ಮಾದಕ ಪದಾರ್ಥಗಳು ಹೆಚ್ಚಾಗಿ ಸರಬರಾಜು ಆಗುವುದರಿಂದ ಆ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ, ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿರುವ ಮಾದಕ ದಂಧೆಕೋರರ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.
ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರದ ಪೂರ್ಣ ಅವಧಿಯಲ್ಲಿ ಅಭಿವೃದ್ಧಿಗೆ ಖರ್ಚು ಮಾಡಿದ್ದ ಒಟ್ಟು 70,814 ಕೋಟಿ. ನಮ್ಮ ಸರ್ಕಾರ ಮೇ 20 ರಂದು ಅಧಿಕಾರಕ್ಕೆ ಬಂತು. ಜುಲೈನಲ್ಲಿ ಬಜೆಟ್ ಮಂಡನೆಯಾಯಿತು. ಆಗಸ್ಟ್ ನಲ್ಲಿ ಅನುದಾನ ಬಿಡುಗಡೆಯಾಗಿದೆ. ಕೇವಲ 6 ತಿಂಗಳಲ್ಲಿ ನಮ್ಮ ಸರ್ಕಾರ 73,928 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಲಾಗಿದೆ. ಅಲ್ಲಿಗೆ ಯಾರು ಹೆಚ್ಚು ಅನುದಾನ ಕೊಟ್ಟಿದ್ದಾರೆ ಹೇಳಿ? ಎಂದು ಸಿಎಂ ಪ್ರಶ್ನಿಸಿದ್ದಾರೆ. ಸುಮ್ಮನೆ ಆರೋಪ ಮಾಡೋದಲ್ಲ. ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಕ್ಕೆ ಸಾಕಷ್ಟು ಅನುದಾನ ಕೊಡುತ್ತಿದ್ದೇವೆ. ಇಲ್ಲ ಸಲ್ಲದ ಆರೋಪ ಮಾಡೋದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನ ಜಾರಿ ಮಾಡಿ ಉಳಿದ ಒಂದು ಯುವನಿಧಿ ಯೋಜನೆ ಮುಂದಿನ ಜನವರಿಯಲ್ಲಿ ಜಾರಿಯಾಗಲಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು…
ಇಸ್ರೇಲ್ ಸೇನೆಯು ಗಾಜಾದಲ್ಲಿ ಹಮಾಸ್ ನ ಅತಿದೊಡ್ಡ ಸುರಂಗವನ್ನು ಕಂಡು ಹಿಡಿದಿದೆ ಎಂದು ಹೇಳಿಕೊಂಡಿದೆ. ಸೇನೆಯು ಸುರಂಗದ ಚಿತ್ರಗಳನ್ನೂ ಬಿಡುಗಡೆ ಮಾಡಿದೆ. ಈ ಸುರಂಗವು ಲಕ್ಷಾಂತರ ಡಾಲರ್ ಗಳನ್ನು ವೆಚ್ಚ ಮಾಡಿತ್ತು ಮತ್ತು ನಿರ್ಮಿಸಲು ವರ್ಷಗಳನ್ನು ತೆಗೆದುಕೊಂಡಿತ್ತು ಎಂದು ಮಿಲಿಟರಿ ಹೇಳುತ್ತದೆ. ಕದನ ವಿರಾಮಕ್ಕಾಗಿ ಅಂತರಾಷ್ಟ್ರೀಯ ಒತ್ತಡದ ನಡುವೆಯೂ ಹೋರಾಟ ಮುಂದುವರಿದಂತೆ ಇಸ್ರೇಲ್ ಹೊಸ ಸುರಂಗವನ್ನು ಕಂಡು ಹಿಡಿದಿದೆ. ಗಾಜಾದಲ್ಲಿನ ಸುರಂಗವು ಇಲ್ಲಿಯವರೆಗೆ ಹಮಾಸ್ ಗೆ ಸೇರಿದ ಅತಿದೊಡ್ಡ ಸುರಂಗವಾಗಿದೆ. ಇದು ಎರೆಸ್ ಗಡಿಯ ಸಮೀಪದಲ್ಲಿದೆ. ಈ ಸುರಂಗವು ಸಣ್ಣ ವಾಹನಗಳಿಗೆ ಸಾಕಷ್ಟು ದೊಡ್ಡದಾಗಿದೆ. ಸುರಂಗವು ಹಳಿಗಳು, ವಿದ್ಯುತ್ ಮತ್ತು ಒಳಚರಂಡಿಯನ್ನು ಒಳಗೊಂಡಿದೆ. ನಾಲ್ಕು ಕಿಲೋಮೀಟರ್ ಗಿಂತಲೂ ಹೆಚ್ಚು ವಿಸ್ತಾರವಾಗಿರುವ ಸುರಂಗದ ಪ್ರವೇಶದ್ವಾರವು ಎರೆಸ್ ಕ್ರಾಸ್ ನಿಂದ ಕೇವಲ 400 ಮೀಟರ್ ದೂರದಲ್ಲಿದೆ. ಸುರಂಗ ವ್ಯವಸ್ಥೆಯು ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಅವರ ಸಹೋದರ ಮತ್ತು ಹಮಾಸ್ ನ ಖಾನ್ ಯೂನಿಸ್ ಬೆಟಾಲಿಯನ್ ಕಮಾಂಡರ್ ಮೊಹಮ್ಮದ್ ಸಿನ್ವಾರ್ ನೇತೃತ್ವದ ಯೋಜನೆಯಾಗಿದೆ ಎಂದು…
ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗ್ಗೆ ಎಂಟೂವರೆವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಾಲ್ಕು ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ರಾಮನಾಥಪುರಂ, ವಿರುದುನಗರ ಮತ್ತು ಥೇಣಿ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ನಾಗಪಟ್ಟಣಂ, ತಿರುವರೂರು, ತಂಜಾವೂರು, ಪುತ್ತುಕೋಟ, ರಾಮನಾಥಪುರಂ, ವಿರುಧುನಗರ ಮತ್ತು ಶಿವಗಂಗಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುನಲ್ವೇಲಿ ನಗರದ ವಿವಿಧೆಡೆ ನೀರಿನ ಹೊಂಡಗಳು ನಿರ್ಮಾಣವಾಗಿವೆ. ತಾಮರಭರಣಿ, ಪಾಪನಾಶಂ ನದಿಗಳು ಉಕ್ಕಿ ಹರಿಯುತ್ತಿವೆ. ಅಣೆಕಟ್ಟೆಗಳಲ್ಲಿ ಹರಿವು ಹೆಚ್ಚಾದ ಕಾರಣ ನೀರು ಬಿಡಲಾಗುತ್ತಿದೆ. ನದಿ ದಡದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ತೂತುಕುಡಿ, ತೆಂಕಶಿ, ಕನ್ಯಾಕುಮಾರಿ ಜಿಲ್ಲೆಗಳಲ್ಲೂ ಇದೇ ಸ್ಥಿತಿ ಇದೆ. ಶಾಲೆಗಳು ಮತ್ತು ಮದುವೆ ಮಂಟಪಗಳಲ್ಲಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸೇವೆಗಾಗಿ ಎಲ್ಲಾ ನಾಲ್ಕು ಜಿಲ್ಲೆಗಳಿಗೆ ತಲುಪಿದ್ದಾರೆ.
ಛತ್ತೀಸ್ ಗಢದ ಎಡಪಂಥೀಯ ಉಗ್ರಗಾಮಿ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್. ನಕ್ಸಲರೊಂದಿಗಿನ ಎನ್ ಕೌಂಟರ್ ನಲ್ಲಿ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. ಒಬ್ಬ ಕಾನ್ ಸ್ಟೆಬಲ್ ಗಾಯಗೊಂಡಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಾಗರಗುಂದ ಪ್ರದೇಶದಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಸಿಆರ್ ಪಿಎಫ್ ನ 165ನೇ ಬೆಟಾಲಿಯನ್ ನ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಬೇದ್ರೆ ಶಿಬಿರದಿಂದ ಉರ್ಸಂಕಲ್ ಗ್ರಾಮಕ್ಕೆ ತೆರಳಿತ್ತು. ಈ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದ ವೇಳೆ ಸಿಆರ್ ಪಿಎಫ್ ತಂಡ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಸುಧಾಕರ್ ರೆಡ್ಡಿ ಹುತಾತ್ಮರಾಗಿದ್ದು, ಕಾನ್ ಸ್ಟೇಬಲ್ ರಾಮು ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ರಾಮು ಅವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ನಾಲ್ವರು ಆರೋಪಿಗಳನ್ನು ಸಮೀಪದ ಪ್ರದೇಶದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಆರ್ ಪಿಎಫ್ ನ ಕೋಬ್ರಾ ಘಟಕ ಮತ್ತು ಸ್ಥಳೀಯ ಪೊಲೀಸರು ಈ ಪ್ರದೇಶದಲ್ಲಿ ಜಂಟಿ ಶೋಧ…
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂಗೆ(65) ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ದಾವೂದ್ ನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಹರಡಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಆದರೆ, ಕರಾಚಿಯ ಆಸ್ಪತ್ರೆಯೊಂದರಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈತನಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ನಿಕಟ ಕುಟುಂಬ ಸದಸ್ಯರಿಗೆ ಬಿಟ್ಟು ಬೇರೆ ಯಾರಿಗೂ ಅವಕಾಶ ನೀಡದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇತ್ತೀಚೆಗೆ ಜಾಗತಿಕ ಸಿಹಿ ನೀರಿನ ಮೀನು ಪ್ರಭೇದಗಳ ಮೊದಲ ಸಮಗ್ರ ಮೌಲ್ಯಮಾಪನವನ್ನು ಬಹಿರಂಗಪಡಿಸಲಾಗಿದೆ. ಈ ವರದಿಯ ಪ್ರಕಾರ ಅಂದಾಜು ಮಾಡಿದ ಸಿಹಿ ನೀರಿನ ಮೀನುಗಳಲ್ಲಿ 25% ರಷ್ಟು ಅಳಿವಿನ ಅಪಾಯದಲ್ಲಿದೆ. ಹವಾಮಾನ ಬದಲಾವಣೆ, ಮಾಲಿನ್ಯ, ಅತಿಯಾದ ಮೀನುಗಾರಿಕೆ, ಮತ್ತು ಆಕ್ರಮಣಕಾರಿ ಪ್ರಭೇದಗಳಿಂದಾಗಿ ಸಿಹಿ ನೀರಿನ ಮೀನುಗಳು ಅಳಿವಿನ ಅಂಚಿಗೆ ತಲುಪಿರುವುದಕ್ಕೆ ಕಾರಣ ಎನ್ನಲಾಗಿದೆ. ಇದರ ಜೊತೆಗೆ ಮಧ್ಯ ದಕ್ಷಿಣ ಪೆಸಿಫಿಕ್ ಮತ್ತು ಪೂರ್ವ ಪೆಸಿಫಿಕ್ ಹಸಿರು ಆಮೆಗಳು ಕೂಡ ಅಳಿವಿನ ಅಂಚಿನಲ್ಲಿದೆ.
ಸಂಸತ್ ಪ್ರವೇಶದ ಪಾಸ್ ನೀಡಿದ್ದ ಸಂಬಂಧ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ. ಪಾಸ್ ಗಾಗಿ ಮನೋರಂಜನ್ ಕಳೆದ ಮೂರು ತಿಂಗಳಿನಿಂದ ಪ್ರತಾಪ್ ಸಿಂಹ ಅವರ ಕಚೇರಿಗೆ ಭೇಟಿ ನೀಡಿ ಹಲವು ಬಾರಿ ಮನವಿ ಮಾಡಿದ್ದ. ಮೈಸೂರಿನ ನಿವಾಸಿ ಎಂದು ಹೇಳಿ ಪಾಸ್ ಪಡೆದುಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಹೇಳಿಕೆ ಪಡೆಯಲು ವಿಶೇಷ ಸೆಲ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಇನ್ನು ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಅವರನ್ನು ಶನಿವಾರ ಬಂಧಿಸಲಾಗಿದ್ದು, ನಂತರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ಕಾಲಪೊಲೀಸ್ ಕಸ್ಟಡಿಗೆ ನೀಡಿದೆ. ಈ ನಡುವೆ ಪ್ರತಾಪ್ ಸಿಂಹ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನ ಒಳಗೆ ಹಾಗೂ ಹೊರಗೆ ಪ್ರತಿಭಟನನೆಗಳನ್ನು ನಡೆಸುತ್ತಿದ್ದರೂ, ಪ್ರತಾಪ್ ಸಿಂಹ ಅವರು ಇದೂವರೆಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಆದರೆ, ಘಟನೆ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ…
ಸಂಸತ್ ಅಧಿವೇಶನದಲ್ಲಿ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭದ್ರತಾ ಲೋಪ ಆಗಿರುವುದು ನಿಜ. ಭದ್ರತಾ ಲೋಪ ಎಸಗಿರುವ ಅಧಿಕಾರಿಗಳಿಗೆ ಶಿಕ್ಷೆ ಆಗಲಿ. ಸಂಸತ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ ವಿಚಾರಕ್ಕೆ ಪ್ರತಾಪ್ ಸಿಂಹ ರಾಜೀನಾಮೆ ಕೇಳೋದು ಯಾರಿಗೂ ಶೋಭೆ ತರಲ್ಲ ಎಂದಿದ್ದಾರೆ. ಸಂಸದ ಪ್ರತಾಪ್ ಸಿಂಹ ಪರ ಶಾಸಕ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದು, ಶಾಸಕರು, ಸಂಸದರು ತಮ್ಮ ಕ್ಷೇತ್ರದ ಮತದಾರರಿಗೆ ಅಧಿವೇಶನ ನೋಡಲಿಕ್ಕೆ ಪಾಸ್ ಕೇಳುತ್ತಾರೆ. ಕ್ಷೇತ್ರದ ಮತದಾರರು ಪಾಸ್ ಕೇಳಿದಾಗ ನಾವು ಕೊಡಲೇಬೇಕು. ಪಾಸ್ ಕೇಳಿರುವ ವ್ಯಕ್ತಿ ನಮ್ಮ ಕ್ಷೇತ್ರದ ಮತದಾರರೇ ಎಂದು ಪರಿಶೀಲನೆ ಮಾಡುತ್ತೇವೆ. ಬಳಿಕ ಪಾಸ್ ನೀಡುತ್ತೇವೆ. ಸಂಸತ್ ನ ಭದ್ರತಾ ಸಿಬ್ಬಂದಿಗಳು ಪಾಸ್ ಪರಿಶೀಲನೆ ಮಾಡಬೇಕಿತ್ತು ಎಂದಿದ್ದಾರೆ. ಭದ್ರತಾ ಸಿಬ್ಬಂದಿಗಳ ವೈಫಲ್ಯದಿಂದ ಘಟನೆ ನಡೆದಿದೆ. ಇದಕ್ಕೆ ಪ್ರತಾಪ್ ಸಿಂಹ ರಾಜೀನಾಮೆ ಕೇಳೋದು ಸರಿಯಲ್ಲ ಎಂದು ಜಿಟಿ…