Author: admin

ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳವು ಹಾಗೂ ಸಾರ್ವಜನಿಕರ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ವಿಲ್ಸನ್‌ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿ ನಿವಾಸಿ ವಾಹೀದ್ ಖಾನ್(25) ಬಂಧಿತ ಆರೋಪಿ. ಆರೋಪಿಯಿಂದ 14.64 ಲಕ್ಷ ಮೌಲ್ಯದ ವಿವಿಧ ಕಂಪನಿಗಳ ಆರು ದ್ವಿಚಕ್ರ ವಾಹನಗಳು ಹಾಗೂ 10 ಮೊಬೈಲ್ ಜಪ್ತಿ ಮಾಡಲಾಗಿದೆ. ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ.

Read More

ಬೆಂಗಳೂರು ನಗರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಪರಿಚಯಸ್ಥ ಗ್ರಾಹಕರಿಗೆ ಡ್ರಗ್ಸ್ ಪೂರೈಸುತ್ತಿದ್ದ ಒಬ್ಬ ವಿದೇಶಿಪ್ರಜೆ ಸೇರಿದಂತೆ, 34 ಅಂತರರಾಜ್ಯ ಡ್ರಗ್ಸ್‌ ಪೆಡ್ಲರ್ ‌ಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ 15, ಕರ್ನಾಟಕದ 10, ಬಿಹಾರದ ನಾಲ್ವರು, ಒಡಿಶಾದ ಇಬ್ಬರು, ಅಸ್ಸಾಂ ಹಾಗೂ ಹರಿಯಾಣದ ತಲಾ ಒಬ್ಬ, ನೈಜೀರಿಯಾದ ಒಬ್ಬ ಪೆಡ್ಲರ್ ಅನ್ನು ಬಂಧಿಸಲಾಗಿದೆ. ಬಂಧಿತರಿಂದ 72.42 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Read More

ಯಾವುದೇ ಇಲಾಖೆಯ ಅಧಿಕಾರಿಗಳು ಮತ್ತು ನೌಕರರನ್ನು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ, ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಒಬ್ಬ ನೌಕರನನ್ನು ಯಾವುದೇ ಹುದ್ದೆಗೆ ಗರಿಷ್ಠ ಐದು ವರ್ಷಗಳವರೆಗೆ ನಿಯೋಜನೆ ಮಾಡಬಹುದು. ಬಳಿಕ ಆ ನೌಕರ ಎರಡು ವರ್ಷಗಳವರೆಗೆ ಮಾತೃ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯ. ಅನ್ಯ ಇಲಾಖೆಗಳಿಂದ ನಿಯೋಜನೆಗೆ ಅವಕಾಶ ಕಲ್ಪಿಸದ ಹುದ್ದೆಗಳಿಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ.

Read More

ಯೋಜನೆ & ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಂಚನೆ ಆರೋಪಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಸಚಿವ ಡಿ.ಸುಧಾಕರ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಯಾವ ಪುಡಿ ರೌಡಿಗಿಂತ ಕಡಿಮೆ‌ ಇಲ್ಲ ಡಿ.ಸುಧಾಕರ್ ಗೂಂಡಾವರ್ತನೆ. ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿ ನಿಂದಕರು, ಗೂಂಡಾಗಳೇ ಇದ್ದಾರೆ. ಸಿದ್ದರಾಮಯ್ಯಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾದರೆ, ಡಿ.ಸುಧಾಕರ್ ಗೆ ದಲಿತರನ್ನು ಅವಮಾನಿಸಿ ಗೂಂಡಾಗಿರಿ ಮಾಡುವ ಅಹಂ. ಸರ್ಕಾರ ಕೂಡಲೇ ಗೂಂಡಾ ಸಚಿವರ ಬಂಧಿಸಿ, ರಾಜೀನಾಮೆ ಪಡೆಯಲಿ ಎಂದು ಟ್ವಿಟರ್ ಮೂಲಕ ರಾಜ್ಯ ಸರ್ಕಾರಕ್ಕೆ, ರಾಜ್ಯ ಬಿಜೆಪಿ ಆಗ್ರಹಿಸಿದೆ.

Read More

ಇಷ್ಟು ಬೇಗ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಳ್ಳುತ್ತದೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇವತ್ತು ಮುಂದಿನ ಹೋರಾಟದ ಕುರಿತು ನಾವು ಚರ್ಚೆ ಮಾಡುತ್ತೇವೆ ಎಂದು, ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಸಿದ್ದರಾಮಯ್ಯ BJP ಸೇರಲು ಅಡ್ವಾಣಿ ಭೇಟಿಯಾಗಿದ್ದರೆಂಬ ಆರೋಪ ಸಂಬಂಧ ಮಾತನಾಡಿದ ಬಿ ಎಸ್ ವೈ ಅದೆಲ್ಲ ಏನೂ ಇಲ್ಲ ಎಂದರು.

Read More

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶ್ರೀಗಂಧದ ತುಂಡು ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು, ಅಕ್ರಮವಾಗಿ ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು.

Read More

ಆಂಧ್ರಪ್ರದೇಶದ ಚಿತ್ತೂರು ಮೂಲದ ಬಿ ಟೆಕ್ ಪದವೀಧರ ಸೈಬರ್ ಹ್ಯಾಕರ್ ನನ್ನು ಬಂಧಿಸಿ, ಸುಮಾರು ಐದು ಕೋಟಿ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಂಧ್ರಪ್ರದೇಶ ಮೂಲದ ಲಕ್ಷ್ಮೀಪತಿ ಎಂಬಾತನನ್ನು ಬೆಂಗಳೂರು ಆಗ್ನೇಯ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನಿಂದ 4.16 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ, 11 ಲಕ್ಷ ನಗದು, 7 ಬೈಕ್ ಜಪ್ತಿ ಮಾಡಲಾಗಿದೆ.

Read More

ಬೆಂಗಳೂರು: ಬಾಣಸವಾಡಿಯಲ್ಲಿ ಇತ್ತೀಚೆಗೆ ತಮಿಳುನಾಡಿನ ನಟೋರಿಯಸ್ ರೌಡಿ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿಸಂತೆ ಪ್ರಕರಣ ಭೇದಿಸಿರುವ ಬಾಣಸವಾಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಟೋರಿಯಸ್ ರೌಡಿಯಾಗಿರುವ ಗುರುಸ್ವಾಮಿ ಮೇಲೆ ವಿರೋಧಿ ಬಣ ಹತ್ಯೆಗೆ ಸ್ಕೆಚ್ ಹಾಕಿ ದಾಳಿ ಮಾಡಿತ್ತು. ಸದ್ಯ ಈ ಪ್ರಕರಣದಲ್ಲಿ ಒಟ್ಟು ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ವಿನೋದ ಕುಮಾರ್, ಪ್ರಸನ್ನ, ಕಾರ್ತಿಕ್ ಬಂಧಿತ ಆರೋಪಿಗಳಾಗಿದ್ದು, ನವೀನ್ ಹಾಗೂ ತುಪಾಕಿ ವಿಜಯ್ ಬಂಧನಕ್ಕೆ ಬಲೆ ಬೀಸಲಾಗಿದೆ.

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬೆಂಗಳೂರು ಪ್ಲೇಟ್‌ ಲೆಟ್ ಕೊರತೆಯನ್ನು ಎದುರಿಸುತ್ತಿದೆ. ಕಳೆದ ಹಲವು ದಿನಗಳಿಂದ ನಿತ್ಯ ಡೆಂಗ್ಯೂ ಪ್ರಕರಣಗಳು ಅನಿರೀಕ್ಷಿತವಾಗಿ ಹೆಚ್ಚಾಗುತ್ತಿದ್ದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಡೆಂಗ್ಯೂ ಹೆಚ್ಚಾದಂತೆ ನಗರದಲ್ಲಿ ಪ್ಲೇಟ್‌ ಲೆಟ್‌ ಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವು ರಕ್ತನಿಧಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿವೆ.

Read More

ಆಟೋರಿಕ್ಷಾದಿಂದ ಜಿಗಿದು ಕೇರಳದ ಮಹಿಳೆಯೊಬ್ಬರು ಕೈ ಮುರಿದುಕೊಂಡಿರುವ ಘಟನೆ ಮಹದೇವಪುರ ಪೊಲೀಸ್ ವ್ಯಾಪ್ತಿಯ ಪೈ ಲೇಔಟ್ ನಲ್ಲಿ ನಡೆದಿದೆ. ಸಂತ್ರಸ್ತೆ ರೋಶಿನಿ ಜೋಸೆಫ್, ಬಿ ನಾರಾಯಣಪುರದ ಜಿಮ್ ಬಳಿಯಿಂದ ವಿಜಿನಾಪುರದ ಬೃಂದಾವನ ಲೇಔಟ್ ಗೆ ಆಟೋದಲ್ಲಿ ಹೋಗುತ್ತಿದ್ದರು. ಆಟೋ ಚಾಲಕ ಜನರಲ್ ಮಾರ್ಗ ಬಿಟ್ಟು ಬೇರೆ ಮಾರ್ಗ ಹಿಡಿಯುವುದನ್ನು ಗಮನಿಸಿದ ಮಹಿಳೆ,  ಆಟೋರಿಕ್ಷಾ ನಿಲ್ಲಿಸಲು ಕೇಳಿದಳು. ಆದರೆ ಚಾಲಕ ವೇಗವಾಗಿ ಓಡಿಸುತ್ತಿದ್ದ. ತೊಂದರೆ ಗ್ರಹಿಸಿದ ಆಕೆ ಆಟೋದಿಂದ ಜಿಗಿದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.

Read More