Author: admin

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2 ಫಲಿತಾಂಶ 2023 ಪ್ರಕಟಿಸಿದೆ. ಆಗಸ್ಟ್ 21 ಮತ್ತು ಸೆಪ್ಟೆಂಬರ್ 2 ರ ನಡುವೆ 2023 ರ ದ್ವಿತೀಯ ಪೂರಕ ಪಿಯು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ ಲೋಡ್ ಮಾಡಬಹುದು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,21,179 ವಿದ್ಯಾರ್ಥಿಗಳ ಪೈಕಿ 1,19,183 ಜನ ಪರೀಕ್ಷೆಗೆ ಹಾಜರಾಗಿದ್ದು, 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Read More

ಬೆಂಗಳೂರು: ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡು ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ ಎಂದು ಅವರು ಹೇಳಿದರು. ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ? ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ,…

Read More

ಚಾಮರಾಜನಗರ: ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಯುವಕ ಹಾಗೂ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಯುವಕ ಸಾವನ್ನಪ್ಪಿದರೆ, ಯುವತಿ ಗಂಭೀರ ಸ್ಥಿತಿಯಲ್ಲಿದ್ದಾಳೆ. ಉಮೇಶ್(24) ಮೃತಪಟ್ಟಿರುವ ಯುವಕನಾಗಿದ್ದು 16 ವರ್ಷದ ರಕ್ಷಿತಾ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯಾಗಿದ್ದಾಳೆ. ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಈ ಜೋಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇವರಿಬ್ಬರು ಬಿದ್ದಿದ್ದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ವಿಷ ಕುಡಿದು ಬಹಳಷ್ಟು ಸಮಯವಾಗಿದ್ದರಿಂದ ಆಸ್ಪತ್ರೆಗೆ ತಲುಪುವ ಮೊದಲೇ ಉಮೇಶ್ ಮೃತಪಟ್ಟಿದ್ದಾನೆ. ರಕ್ಷಿತಾ ಸ್ಥಿತಿ ಚಿಂತಾಜನಕವಾಗಿದೆ.

Read More

ಬೆಂಗಳೂರು: ವಿದೇಶಿ ಪ್ರಜೆ ಸೇರಿದಂತೆ 34 ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. 24 ಪ್ರಕರಣಗಳ ಸಂಬಂಧ 34 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ 15, ರಾಜ್ಯದ 10, ಬಿಹಾರದ ನಾಲ್ವರು ಆರೋಪಿಗಳು, ಒಡಿಶಾದ ಇಬ್ಬರು, ಅಸ್ಸಾಂ ಮತ್ತು ಹರ್ಯಾಣ ಮೂಲದ ತಲಾ ಒಬ್ಬರು, ನೈಜೀರಿಯಾ ಪ್ರಜೆಯನ್ನು ಬಂಧಿಸಿ ಡ್ರಗ್ಸ್ ಜಪ್ತಿ ಮಾಡಲಾಗಿದೆ.

Read More

ಮರ್ಯಾದೆಯಿಂದ ಕೆಲಸ ಮಾಡಲಿ ಅಂತಾ 135 ಸ್ಥಾನ ಗೆಲ್ಲಿಸಿದ್ದಾರೆ. ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ ಕೊಟ್ಟಿದ್ದೀರಿ ಎಂದು ಡಿ.ಸುಧಾಕರ್ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಂಚನೆ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳುತ್ತೀರಾ? ನಿಮಗೇನಾದ್ರೂ ಮಾನಮರ್ಯಾದೆ ಇದೆಯಾ ಸಿದ್ದರಾಮಯ್ಯನವರೇ? ಅಧಿಕಾರಿಗಳಿಗೆ ಎಷ್ಟು ಗಂಟೆಯಲ್ಲಿ ನೀವು ದೂರವಾಣಿ ಕರೆ ಮಾಡಿದ್ದೀರಿ? ಆ ಅಧಿಕಾರಿಯನ್ನು ಮೊದಲು ಅಮಾನತು ಅಂತಾ ಮಾತನಾಡಿದ್ದೀರಿ. ಇದೇನಾ ನೀವು ದಲಿತರ ಪರ ಅಂತಾ ಹೇಳುವುದು? ದಲಿತರ ರಕ್ಷಣೆ ಅಂತಾ ಹೇಳುತ್ತೀರಿ, ಇದೇ ನೀವು ಮಾಡುವ ಕೆಲಸ ಎಂದು ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ. ವ್ಯವಹಾರ ಮಾಡುವಾಗ ಆ ಮಂತ್ರಿ ಯಾವ ಪಕ್ಷದಲ್ಲಿದ್ದರೋ ಗೊತ್ತಿಲ್ಲ. ಆ ಮಂತ್ರಿ ಬಿಜೆಪಿಯಲ್ಲಿದ್ದರೋ, ಕಾಂಗ್ರೆಸ್ನಲ್ಲಿ ಇದ್ದರೋ ಗೊತ್ತಿಲ್ಲ. ಇಬ್ಬರು ದಲಿತ ಮಹಿಳೆಯರ ಮೇಲೆ ಮಚ್ಚು ಹಿಡಿದು ಹೋಗಿದ್ದೀರಿ.…

Read More

ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ, ದೇವೇಗೌಡರು, ಕುಮಾರಸ್ವಾಮಿ, ಇಬ್ರಾಹಿಂ ತೀರ್ಮಾನಕ್ಕೆ ತಾನು ಬದ್ಧನಾಗಿರೋದಾಗಿ ತಿಳಿಸಿದ್ದಾರೆ. ಕೋಮುವಾದಿಗಳನ್ನು ದೂರ ಇಡಬೇಕು ಅಂತಾ ಹೇಳುತ್ತಾರೆ. ತುಮಕೂರಿನಲ್ಲಿ ಅವರ ಜೊತೆ ಸೇರಿ ದೇವೇಗೌಡರನ್ನು ಸೋಲಿಸಿದರು. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಕೇಳಿರಲಿಲ್ಲ. ದೇವೇಗೌಡರು ಮೈಸೂರು, ಮಂಡ್ಯ ಕ್ಷೇತ್ರಗಳನ್ನು ಕೇಳಿದ್ದರು. ದೇವೇಗೌಡರನ್ನು ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು ಎಂದು ರೇವಣ್ಣ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು. ದೇವೇಗೌಡರಿಗೆ ಶಕ್ತಿ ಇಲ್ಲ ಅಂತಾ ಇಂಡಿಯಾ ಮೈತ್ರಿಕೂಟ ಸಭೆಗೆ ಕರೆದಿಲ್ಲ ಎಂದು ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.

Read More

ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಈ ವೇಳೆ ಮಾತನಾಡಿದ ಅವರು, ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಅವರು ತಿಳಿಸಿದರು. ಎಸ್ ಸಿ, ಎಸ್ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರೆಂದು ತಿಳಿಸಿದ್ದಾರೆ. ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ…

Read More

ಬೆಂಗಳೂರು: ಪಕ್ಷದೊಳಗಿನ ಆಂತರಿಕ ಕಲಹದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು 30 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಆಡಳಿತಕ್ಕೆ ಬಂದು 3 ತಿಂಗಳಲ್ಲಿ ಇಷ್ಟು ಜನವಿರೋಧಿ ಸರಕಾರವನ್ನು ಕರ್ನಾಟಕ ಮಾತ್ರವಲ್ಲದೆ ದೇಶದ ಯಾವುದೇ ರಾಜ್ಯದಲ್ಲಿ ನಾನು ಕಂಡಿಲ್ಲ ಎಂದರು. ‘ಅಂತೂ ಇಂತೂ ಕರ್ನಾಟಕದಲ್ಲಿ ಅತಿ ಶೀಘ್ರವಾಗಿ ಅವರ ಆಂತರಿಕ ಗೊಂದಲಗಳಿಂದಲೇ ಆಡಳಿತಕ್ಕೆ ಇತಿಶ್ರೀ ಆಗಲಿದೆ ಎಂಬ ಬಲವಾದ ನಂಬಿಕೆ ನನ್ನದು’ ಎಂದು ನುಡಿದರು.

Read More

ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್ ಗಳ ಮೇಲೆ ಬೆಂಗಳೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ರಾಜ್ಯ ರಾಜಧಾನಿಯ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಯಾಟಲೈಟ್ ಬಸ್ ಟರ್ಮಿನಲ್ ಬಳಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಬಸ್ ಚಾಲಕ ಗುಣಶೇಖರನ್ ದೂರು ದಾಖಲಿಸಿದ್ದರು. ದುಷ್ಕರ್ಮಿಗಳು ಬಸ್ಗಳ ಗಾಜುಗಳಿಗೆ ಹಾನಿ ಮಾಡಿದ್ದಾರೆ. ಘಟನೆ ನಡೆದಾಗ ಭಾರತ್ ಪೆಟ್ರೋಲ್ ಬಂಕ್ ಬಳಿ ಬಸ್ ಗಳು ನಿಂತಿದ್ದವು. ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಬೆಂಗಳೂರು ನಗರದಲ್ಲಿ ನಡೆದ ಖಾಸಗಿ ಸಾರಿಗೆ ಸಂಸ್ಥೆಗಳ ಬಂದ್ ಹಿಂಪಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.

Read More

ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಪ್ರತಾಪ್ ಸಿಂಹ, ಭಾನುವಾರ ಆದಿಚುಂಚನಗಿರಿ ಶಾಖಾ ಮಠಕ್ಕೆ ದೇವೇಗೌಡರು ಭೇಟಿ ನೀಡಿದ ವೇಳೆ ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಆದಿಚುಂಚನಗಿರಿ ಶ್ರೀಗಳು, ಜಿ.ಟಿ. ದೇವೇಗೌಡ ಕೂಡ ಇದ್ದರು. ಮೈಸೂರು, ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗರು ಪ್ರಾಬಲ್ಯ ಹೊಂದಿದ್ದು, ಈಗಿನಿಂದಲೇ ಜೆಡಿಎಸ್ ಮತ ಬ್ಯಾಂಕ್ ಗೆ ಪ್ರತಾಪ್ ಸಿಂಹ ಕೈ ಹಾಕಿದ್ದಾರೆ. ಜೆಡಿಎಸ್ ನಾಯಕರೊಂದಿಗೆ ಪ್ರತಾಪ್ ಸಿಂಹ ಉತ್ತಮ ಬಾಂಧವ್ಯ ಹೊಂದಿದ್ದಾರೆ.

Read More