Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. “ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ” ಎಂದು ತಿಳಿಸಿದರು. ಬಿಜೆಪಿ ನಿಮ್ಮ ಮೇಲೆ ಪದೇ, ಪದೇ ಆರೋಪ ಮಾಡಲು ಕಾರಣವೇನು ಎನ್ನುವ ಪ್ರಶ್ನೆಗೆ “ಅಧಿಕಾರ ಕೈ ಬಿಟ್ಟು ಹೋಗಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಉತ್ತರಿಸಿದರು.
ನಾಡಿನ ಅರಣ್ಯ ಮತ್ತು ವನ್ಯಜೀವಿಗಳ ಸಂಪತ್ತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹುತಾತ್ಮತರಿಗೆ ಇಂದು ಅರಣ್ಯ ಇಲಾಖೆ ಗೌರವ ನಮನಗಳನ್ನು ಸಲ್ಲಿಸಿತು. ಹಾಗೂ ಉಪಸ್ಥಿತ ಅತಿಥಿಗಳು ಹಾಗೂ ಮುಖ್ಯ ಅತಿಥಿಗಳು ಇಲಾಖೆಯ ಅಧಿಕಾರಿ ವರ್ಗ, ಅರಣ್ಯ ಹುತಾತ್ಮರವರಿಗೆ ಹೂ ಗುಚ್ಚ ಅರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಖಾನಾಪುರ್ ಉಪ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿಗಳು ಹಾಗೂ ಎಸಿಎಫ್ ಬೈಲ್ಹೊಂಗಲ್ ಸಾಮಾಜಿಕ , ವಲಯ ಅಧಿಕಾರಿಗಳು ಖಾನಾಪುರ್ ನಾಗರಾಜ್ ಬಾಳೆಹೊಸೂರ್ ವಲಯ ಅರಣ್ಯ ಅಧಿಕಾರಿ ಲೋಂಡಾ, ನಾಗರಾಜ್ ಭೀಮಗೋಳ ಹಾಗೂ ಅರಣ್ಯ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಇ-ಕಾಮರ್ಸ್ ಸಂಸ್ಥೆಗಳಾದಂತ ಅಮೆಜಾನ್, ಫ್ಲಿಪ್ ಕಾರ್ಟ್, ಬಿಗ್ ಬ್ಯಾಸ್ಕೆಟ್ ಹಾಗೂ ಅರೆಕಾಲಿಕ ಡಿಲಿವರಿ ನೌಕರರರಾಗಿ ಸ್ವಿಗ್ಗಿ, ಜೊಮ್ಯಾಟೋ ಸೇರಿದಂತೆ ವಿವಿಧ ವಲಯಗಳಲ್ಲಿ ಗಿರ್ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ನೌಕರರಿಗೆ ರಾಜ್ಯ ಸರ್ಕಾರ ಈಗ ಜೀವ ವಿಮಾ ಸೌಲಭ್ಯ ಹಾಗೂ ಅಪಘಾತ ಪರಿಹಾರ ವಿಮಾ ಸೌಲಭ್ಯವನ್ನು ಜಾರಿಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಭರ್ಜರಿ ಸಿಹಿಸುದ್ದಿ ನೀಡಿದೆ.
ಹೈದರಾಬಾದ್ ನಲ್ಲಿ ಬಿರಿಯಾನಿ ಹಬ್ಬದ ವೇಳೆ ಯುವಕನೊಬ್ಬನನ್ನು ಹೊಡೆದು ಕೊಂದ ಘಟನೆ ನಡೆದಿದೆ. ಇಂಡಿಯಾ ಟುಡೇ ವರದಿ ಪ್ರಕಾರ ಬಿರಿಯಾನಿ ಜೊತೆ ಸಲಾಡ್ ಕೊಡುವ ವಿವಾದ ಕೊಲೆಗೆ ಕಾರಣವಾಯಿತು. ಪಂಚಗುಟ್ಟದಲ್ಲಿರುವ ‘ಮೆರಿಡಿಯನ್ ರೆಸ್ಟೋರೆಂಟ್’ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಲಿಯಾಕತ್ ನಿಧನರಾದರು. ಬಿರಿಯಾನಿ ಫೆಸ್ಟ್ ನಲ್ಲಿ ಪಾಲ್ಗೊಳ್ಳಲು ಸ್ನೇಹಿತರೊಂದಿಗೆ ರೆಸ್ಟೋರೆಂಟ್ ಗೆ ಬಂದಿದ್ದರು. ಬಿರಿಯಾನಿ ಜತೆಗೆ ಸಲಾಡ್ ನೀಡುವಂತೆ ಹೋಟೆಲ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ವಿವಾದ ತಾರಕಕ್ಕೇರುತ್ತಿದ್ದಂತೆ ಕೈಕೈ ಮಿಲಾಯಿಸಿತು. ಎರಡೂ ಬಣಗಳು ಪರಸ್ಪರ ಹಲ್ಲೆ ನಡೆಸುತ್ತಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಮಸ್ಯೆ ಬಗೆಹರಿಸಲು ಎರಡೂ ಗುಂಪುಗಳು ರಾತ್ರಿ 11 ಗಂಟೆಗೆ ಪಂಚಗುಟ್ಟಾ ಪೊಲೀಸ್ ಠಾಣೆಗೆ ಬಂದರು. ಆದರೆ, ಉಸಿರಾಟದ ತೊಂದರೆ ಹಾಗೂ ಎದೆನೋವಿನ ಕಾರಣ ಲಿಯಾಖತ್ ನಿಲ್ದಾಣಕ್ಕೆ ಬಂದ ಕೆಲವೇ ನಿಮಿಷಗಳಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತನ ಪ್ರಾಣ ಉಳಿಸಲಾಗಲಿಲ್ಲ. ಹೋಟೆಲ್ ಮ್ಯಾನೇಜರ್ ಸೇರಿದಂತೆ…
ತಮಿಳುನಾಡಿನ ಡಿಎಂಕೆ ಪಕ್ಷದ ಮಧುರೈ ಮಂಡಲ ಅಧ್ಯಕ್ಷ ವಿ. ಕೆ. ಗುರುಸ್ವಾಮಿ ಕೊಲೆ ಯತ್ನ ಪ್ರಕರಣದ ಆರೋಪಿ ಪ್ರಸನ್ನನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ತಮಿಳುನಾಡಿನ ಠಾಣೆಯೊಂದರ ರೌಡಿ ಪಟ್ಟಿಯಲ್ಲಿ ಗುರುಸ್ವಾಮಿ ಹೆಸರಿತ್ತು. ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಗುರುಸ್ವಾಮಿ, ಏಜೆಂಟರನ್ನು ಭೇಟಿಯಾಗಲು ಸೆ.11ರಂದು ಬೆಂಗಳೂರಿನ ಕಮ್ಮನಹಳ್ಳಿಯ ಸುಖಸಾಗರ್ ಹೋಟೆಲ್ ಗೆ ಬಂದಿದ್ದಾಗ ಕೊಲೆಗೆ ಯತ್ನ ನಡೆದಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ 21 ವರ್ಷದ ಯುವಕನೊಬ್ಬ ತನ್ನ ತಂದೆ ಮತ್ತು ಅಜ್ಜನನ್ನು ಕೊಂದಿದ್ದಾನೆ. ಕೌಟುಂಬಿಕ ಸಮಸ್ಯೆಯೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ. ಸೆಪ್ಟೆಂಬರ್ 7ರ ರಾತ್ರಿ ಜೋಡಿ ಕೊಲೆ ನಡೆದಿತ್ತು. ವಿಕ್ರಮಜಿತ್ ರಾವ್ ಮತ್ತು ರಾಮ್ ಕುಮಾರ್ ಹತ್ಯೆಯಾದವರು. ಕೌಟುಂಬಿಕ ಕಲಹದಿಂದ ವಿಕ್ರಮಜಿತ್ ರಾವ್ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಘಟನೆಯ ರಾತ್ರಿ ಆರೋಪಿಗಳು ಡಂಕೌರ್ ನ ಬಲ್ಲು ಖೇರಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಫಿಲ್ಮ್ ಸ್ಟುಡಿಯೋಗೆ ಬಂದು ಜಾಸ್ಮಿನ್ ತಂದೆಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಾಸ್ಮಿನ್ ಸ್ಟುಡಿಯೋದಲ್ಲಿಟ್ಟಿದ್ದ ಕೊಡಲಿಯಿಂದ ರವಿಯ ಮುಖ, ಕತ್ತು ಮತ್ತು ತಲೆಗೆ ತುಂಡರಿಸಿದ್ದಾಳೆ. ಕಿರುಚಾಟ ಕೇಳಿ ಎಚ್ಚರಗೊಂಡ ರೋಡ್ ವೇಸ್ ನ ನಿವೃತ್ತ ಉದ್ಯೋಗಿ ಅಜ್ಜ ರಾಮ್‌ಕುಮಾರ್ ಅವರ ಮೇಲೂ ಜಾಸ್ಮಿನ್ ಹಲ್ಲೆ ನಡೆಸಿದ್ದಾರೆ. ರಾಮ್ ಕುಮಾರ್ ಗುರುತು ಹಿಡಿಯುತ್ತಾರೆ ಭೀತಿಯಿಂದ ಹಲ್ಲೆ ನಡೆಸಲಾಗಿದೆ. ಕತ್ತರಿಸಿದರೂ ರಾಮಕುಮಾರ್ ಚಲಿಸುತ್ತಿರುವುದನ್ನು ಕಂಡ ಜಾಸ್ಮಿನ್ ಅವರು ತಪ್ಪಿಸಿಕೊಳ್ಳುವ ಭಯದಲ್ಲಿ ಸುತ್ತಿಗೆಯಿಂದ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅಡ್ಡ ಪರಿಣಾಮದಿಂದ ಜನರಿಗೆ ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡ ಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಬಂದ್ ನಿಂದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿ ಸರ್ಕಾರದ ಪ್ರತಿಷ್ಠೆಯಿಂದ ಸಾಮಾನ್ಯ ಜನರು ಸಂಕಷ್ಟ ಪಡುವಂತಾಗಿದೆ ಎಂದಿದ್ದಾರೆ. ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳೇನೂ ಅಲ್ಲ. ಅವರಿಗೂ ಕುಟುಂಬಗಳಿವೆ, ತಂದೆ ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು ಎಂದಿದ್ದಾರೆ.
ಬಾಗಲಕೋಟೆ: ಧಕ್ಷಿಣ ಕರ್ನಾಟಕದ ಪ್ರಮುಖ ಜಾನಪದ ಕಲೆಗಳಲ್ಲಿ ಒಂದಾದ ಕಂಸಾಳೆ ಭಕ್ತಿ ನೃತ್ಯವನ್ನು ಬೆಂಗಳೂರು ಬಿಡದಿಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ವಿಧ್ಯಾರ್ಥಿನಿಯರಿಂದ ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಪ್ರದರ್ಶನ ಮಾಡಲಾಯಿತು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯಗಳ ಸಹಯೋಗದಲ್ಲಿ ನೃತ್ಯ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹಾಡುತ್ತ ಭಾವಾವೇಶದಿಂದ ನೃತ್ಯಮಾಡುವ ಮಲೆ ಮಾದೇಶ್ವರನನ್ನು ಆರಾಧಿಸುವ ಮತ್ತು ಪೂಜಿಸವ ಜಾನಪದ ಕಲೆ ಇದಾಗಿದ್ದು ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶನ ಮಾಡಿದರು. ಈ ವೇಳೆ ಬಿಡದಿ ಬಸವೇಶ್ವರ ಪದವಿ ಕಾಲೇಜಿನ ನಿರ್ದೇಶಕರಾದ ಡಾ. ವ್ಹಿ ಎಸ್ ಕಟಗಿಹಳ್ಳಿಮಠ ಅವರು ಮಾತನಾಡಿ ಚಾಮರಾಜ ನಗರ ಜಿಲ್ಲೆಯ ಧಾರ್ಮಿಕ ಕುಣಿತ ಇದಾಗಿದೆ. 15 ನೇ ಶತಮಾನದಲ್ಲಿ ಮಹಾದೇಶ್ವರ ಎನ್ನುವವರು ಕಂಸಾಳೆ ನೃತ್ಯದ ಮೂಲಕ ಭಗವಂತನನ್ನು ಒಲಿಸಿಕೊಳ್ಳುತ್ತಾನೆ. ಅಂದಿನಿಂದ ಕಂಸಾಳೆ ಧ್ವನಿಯಲ್ಲಿ ಶಿವನು ನೆಲಸಿದ್ದಾನೆ ಎಂಬ ಭಾವನೆಯಲ್ಲಿ ನೃತ್ಯ ಮಾಡಲಾಗುತ್ತದೆ. ಇದು ಓಂಕಾರದ ನಿನಾದದ ಒಂದು ಭಾಗವಾಗಿದ್ದು ಆ…
ಬೆಂಗಳೂರು: ಆರ್ ಆರ್ ನಗರ ವಲಯದ ಕೆಂಗೇರಿ ವಿಭಾಗದ ವಾರ್ಡ್ ಹೆಮ್ಮಿಗೆಪುರ ವ್ಯಾಪ್ತಿಯ ತಲಘಟ್ಟಪುರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ, Casa Grand ವಸತಿ ಸಮುಚ್ಚಯ ನಿರ್ಮಾಣ ಮಾಡುವ ಸಂಸ್ಥೆಯು ಪ್ಲೆಕ್ಸ್ ಗಳನ್ನು ಹಾಕಿದ್ದು, ಪ್ಲೆಕ್ಸ್ ಗಳನ್ನು ತೆರವುಗೊಳಿಸಿ 50, 000 ರೂ.ಗಳ ದಂಡವನ್ನು ವಸೂಲಿ ಮಾಡಲಾಗಿರುತ್ತದೆ. ಸಹಾಯಕ ಕಾರ್ಯಪಾಲಕ ಅಭಿಯಂತರರು ಪೂರ್ಣಿಮಾ, ಮೋತಿಲಾಲ್ ಚೌಹಾಣ್ ವಾರ್ಡ್ ಮಾರ್ಷಲ್ ಸೇರಿದಂತೆ ಇನ್ನಿತರರು ವಲಯದ ಅಧೀಕ್ಷಕ ಅಭಿಯಂತರ ನಂದೀಶ. ಜೆ. ಆರ್ ರವರ ನಿರ್ದೇಶನದಂತೆ ದಂಡ ವಿಧಿಸಲಾಗಿದೆ.
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗಳಿಗೆ ತೆರಳಿ ಚಿನ್ನದ ಸರಗಳನ್ನು ಕೊರಳಿಗೆ ಹಾಕಿಕೊಂಡು ಪರಾರಿ ಆಗುತ್ತಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಯಶವಂತಪುರ ಎನ್ಎಚ್ ಕಾಲೊನಿ ಅಯ್ಯಪ್ಪ ದೇವಸ್ಥಾನ ಬಳಿಯ ನಿವಾಸಿ ಜೆ. ರೋಹಿತ್ ಬಂಧಿತ ಆರೋಪಿ. ಆರೋಪಿಯಿಂದ 12.50 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ, ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.