Author: admin

ಕೇರಳದ ಮಂಚೇರಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕಿಡ್ನಿ ಆರೋಗ್ಯಕ್ಕಾಗಿ ಈ ಕ್ರಮಗಳನ್ನು ಅನುಸರಿಸಿ: ನಾವು ಸೇವಿಸುವ ಆಹಾರದಿಂದ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರತಿದಿನ 13 ರಿಂದ 18 ಗ್ಲಾಸ್ ನೀರು ಕುಡಿಯಿರಿ. ಹೂಕೋಸು ಫೈಬರ್, ವಿಟಮಿನ್ ಸಿ ಮತ್ತು ಫೋಲೇಟ್ನಲ್ಲಿ ಸಮೃದ್ಧವಾಗಿದೆ. ಇದು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ ಮತ್ತು ಮೂತ್ರಪಿಂಡಗಳನ್ನು ರಕ್ಷಿಸುತ್ತದೆ. ಎಲೆಕೋಸು ಫೈಟೊಕೆಮಿಕಲ್ಸ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಅವು ಮೂತ್ರಪಿಂಡ, ಹೃದ್ರೋಗ ಮತ್ತು ಕ್ಯಾನ್ಸ‌ರ್ ಅಪಾಯವನ್ನು ಕಡಿಮೆ ಮಾಡುತ್ತಾರೆ. ಕ್ಯಾನ್ಸೆರಿ ಜ್ಯೂಸ್ ಮೂತ್ರನಾಳದ ಸೋಂಕನ್ನು ಕಡಿಮೆ ಮಾಡುತ್ತದೆ. ನೆಲ್ಲಿಕಾಯಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು: ಚಳಿಗಾಲದಲ್ಲಿ ನೆಲ್ಲಿಕಾಯಿ ಸೇವನೆ ತುಂಬಾನೇ ಒಳ್ಳೆಯದು. 100 ಗ್ರಾಂ ತಾಜಾ ಆಮ್ಲಾ ಹಣ್ಣು 20 ಕಿತ್ತಳೆಗೆ ಸಮನಾಗಿರುತ್ತದೆ. ಆಮ್ಲಾ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್‌ ಗಳು ಮತ್ತು ವಿಟಮಿನ್‌ ಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅದರಲ್ಲೂ ವಿಟಮಿನ್‌-ಸಿ ಹೆಚ್ಚಿರುವುದರಿಂದ ಯಾವುದೇ ಕಾಯಿಲೆಯಿಂದ ಸುಲಭವಾಗಿ ಚೇತರಿಸಿಕೊಳ್ಳಬಹುದು. ಇದರಲ್ಲಿರುವ ಪ್ಲೇವನಾಯ್ಡ್ ರಾಸಾಯನಿಕಗಳು ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ಉಪಯುಕ್ತವಾಗಿದೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ.

Read More

ನೂತನ ಜಿಲ್ಲಾಧಿಕಾರಿಗಳಾಗಿ  ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ ತುಮಕೂರು ಜಿಲ್ಲೆಯಲ್ಲಿ ಹಲವು ವಿವಾದಗಳಿಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಅವರನ್ನು ವರ್ಗಾವಣೆ ಮಾಡಲಾಗಿದ್ದು,  ಇದೀಗ ತುಮಕೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ  ಶುಭ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಸುಮಾರು 6 ತಿಂಗಳ ಹಿಂದೆ ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ, ಶ್ರೀನಿವಾಸ್ ಕೆ. ಇವರು,  ಈ ಹಿಂದೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಇನ್ನಿತರೆ ಭಾಗದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ, ವಿಧಾನ ಸಭಾ ಚುನಾವಣೆಗೂ ಮುನ್ನ, ಮತದಾರರ ಮಾಹಿತಿ ಸಂಗ್ರಹಿಸಿದ ಸಂಸ್ಥೆಗೆ ನೆರವು ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತು ಮಾಡಲಾಗಿತ್ತು. ತದ ನಂತರದಲ್ಲಿ, ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಮಧ್ಯೆ ಕಳೆದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ ಆಚರಿಸುವ ನೆಪದಲ್ಲಿ ನಗರದ ಹೊರವಲಯದ ಗೆದ್ದಲಹಳ್ಳಿ ರಸ್ತೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ …

Read More

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ಅವರ ಶಿಕ್ಷಣ ಸಂಸ್ಥೆಯ ವಿನೂತನ ಚರ್ಚಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಮೊದಲ ಸಂಚಿಕೆಯ ಅತಿಥಿಗಳಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ತಮ್ಮ ಪ್ರೀತಿಯ ಸಾಕುನಾಯಿ ಗೋಪಿ ಮೂರ್ತಿ ಜತೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಗಮನ ಸೆಳೆಯಿತು. ಸುಧಾಮೂರ್ತಿ ತಮ್ಮ ಜೀವನ, ಸಾಧನೆ ಮತ್ತು ತಮ್ಮ ಸಾಕುಪ್ರಾಣಿ ಜತೆಗಿನ ಒಡನಾಟ, ದಿನನಿತ್ಯದ ಕಾರ್ಯ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು. ಈ ಕಾರ್ಯಕ್ರಮದ ಮೂಲಕ ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಸೇರಿದಂತೆ ಅನೇಕ ಶಾಲೆಗಳ ವಿದ್ಯಾರ್ಥಿಗಳ ನಡುವೆ ಸಂಪರ್ಕ ಬೆಸೆದು, ಬಲಿಷ್ಠ ಸಮೂಹ ಕಟ್ಟುವ ಪ್ರಯತ್ನ ಇದಾಗಿದೆ.

Read More

ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ಗ್ರಾಮದಿಂದಲೇ ದಲಿತರನ್ನು ಬಹಿಷ್ಕಾರ ಮಾಡುವ ಅನಿಷ್ಟ ಪದ್ಧತಿಯನ್ನು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಿಕೇರಾ ಜಾತ್ರೆಯಲ್ಲಿ ಅನುಸರಿಸಲಾಗುತ್ತಿದೆ. ಜಾತ್ರೆಯಲ್ಲಿ ಬಲಿ ಕೊಟ್ಟ ಕೋಣದ ಮಾಂಸವನ್ನು ದಲಿತರು ತಿನ್ನಲೇಬೇಕು. ಇಲ್ಲದಿದ್ದರೆ ಗ್ರಾಮದೊಳಗೆ ಪ್ರವೇಶವಿಲ್ಲ. ಈ ಅನಿಷ್ಟ ಪದ್ಧತಿ ತಡೆಯುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಎಸ್‌ ಪಿಗೆ ದೂರು ನೀಡಿದ್ದಾರೆ.

Read More

ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ 17,813 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅದರ ಹಿಂದಿನ ವರ್ಷ 2021ರಲ್ಲಿ 14, 468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಎಂದು ಪ್ರಶ್ನಿಸಿದರು. ಬೆಳಗಾವಿ ಮಹಿಳೆಯೊಬ್ಬರ ಮೇಲೆ ನಡೆದ ದೌರ್ಜನ್ಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಕಣ್ಣು ಮುಚ್ಚಿ ಕೂತಿದ್ದರು. ಆದರೆ ಬೆಳಗಾವಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯ ಮಾತ್ರ ಅವರ ಕಣ್ಣಿಗೆ ಕಂಡಿದ್ದು, ಅದರಲ್ಲೂ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದರು.

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ವಸ್ತುಗಳ ಅಕ್ರಮ ದಂಧೆಯನ್ನು ತಡೆಯಲು ವಿಶೇಷ ಪೊಲೀಸ್‌ ಆಯುಕ್ತಾಲಯವನ್ನು ಸ್ಥಾಪಿಸುವಂತೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮಾದಕ ವಸ್ತುಗಳ ಮಾರಾಟ ಇಡೀ ದೇಶದಲ್ಲಿ ವ್ಯಾಪಕವಾಗಿದ್ದು, ಸಾಮಾಜಿಕ ಪಿಡುಗು ಆಗುವುದರ ಜೊತೆಗೆ ಯುವ ಜನಾಂಗಕ್ಕೆ ಮಾರಕವಾಗಿ ವ್ಯಾಪಿಸಿರುತ್ತದೆ. ಮಾದಕ ವಸ್ತುಗಳ ಅಕ್ರಮ ದಂದೆಯು ದಿನೇ ದಿನೇ ಹೆಚ್ಚಾಗುತ್ತಿದೆ ಎಂದಿದ್ದಾರೆ. ಕಾನೂನು ಬಾಹಿರವಾಗಿ ವಿದೇಶಿ ಸಿಗರೇಟ್ ಮಾರಾಟ, ಅಕ್ರಮ ಸಿಲಿಂಡರ್‌ ರಿಫಿಲ್ಲಿಂಗ್ ಹಾಗೂ ಇಸ್ಪೀಟ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಲಕ್ಷಾಂತರ ರೂ. ನಗದು ಹಾಗೂ ಸಿಗರೇಟ್, ಸಿಲಿಂಡರ್ ಗಳನ್ನು ವಶಕ್ಕೆ ಪಡೆದುಕೊಂಡಿದೆ. ವಿದೇಶಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಭಾರತ ಮೂಲದ ಪರಸ್ಮಲ್(40) ಮತ್ತು ಮೊಂಟುಸಿಂಗ್(45) ಬಂಧಿತರು. ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದೆ.

Read More

ಬೆಂಗಳೂರು: ಒಬ್ಬನೇ ಒಬ್ಬ ಪ್ರಯಾಣಿಕನಿಗಾಗಿ ಬಿಎಂಟಿಸಿ ವಾಯು ವಜ್ರ ಬಸ್ ಸಂಚರಿಸಿದ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹರಿಹರನ್ ಎಸ್.ಎಸ್. ಎಂಬ ಪ್ರಯಾಣಿಕರೊಬ್ಬರು ತನ್ನ ಅನುಭವವನ್ನು ಹಂಚಿಕೊಂಡಿದ್ದಾರೆ. ಪ್ರಯಾಣಿಕನು ಬಸ್ ಚಾಲಕ ಮತ್ತು ನಿರ್ವಾಹಕರ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದಾಗ, ಈ ಇಬ್ಬರು ನನಗಾಗಿ ಸಮಯಕ್ಕೆ ಬಸ್ ಓಡಿಸಿದರು. ಅವರಿಂದ ನನಗೆ ಉತ್ತಮ ಭಾಂಧವ್ಯ ಸಿಕ್ಕಿತು ಎಂದು ಸೆಲ್ಪಿ ಹಂಚಿಕೊಂಡಿದ್ದಾರೆ.

Read More

ಬೆಂಗಳೂರು: ದೇಶದಲ್ಲೇ ಅತೀ ಉದ್ದದ ಮೆಟ್ರೋ ಸುರಂಗ ಮಾರ್ಗ ವಾದ ಬೆಂಗಳೂರಿನ ಗುಲಾಬಿ ಮಾರ್ಗದ ಕಾರ್ಯಗಳು ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಸುರಂಗ ಕಾಮಗಾರಿ ಈಗಾಗಲೇ ಶೇ. 90ರಷ್ಟು ಕೆಲಸ ಪೂರ್ಣಗೊಂಡಿದೆ. ಸುರಂಗ ಮಾರ್ಗದ 21 ಕಿಲೋ ಮೀಟರ್‌ ಗಳಲ್ಲಿ 19 ಕಿಲೋ ಮೀಟರ್ ಸುರಂಗ ಮಾರ್ಗ ಪೂರ್ಣಗೊಂಡಿದೆ. ನಮ್ಮ ಮೆಟ್ರೋ, ಗುಲಾಬಿ ಮಾರ್ಗವು ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾಳೇನ ಅಗ್ರಹಾರದಿಂದ ಉತ್ತರ ಭಾಗದ ನಾಗವಾರಕ್ಕೆ ಸಂಪರ್ಕಿಸುವ ಅತ್ಯಂತ ದೊಡ್ಡ ಹಾಗೂ ಕಾಮಗಾರಿಯಲ್ಲಿ ಅತ್ಯಂತ ಸವಾಲಾಗಿರುವ ಮಾರ್ಗವಾಗಿದೆ.

Read More

ಅಮೆರಿಕದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ ಮಹಿಳೆ ಲಾರೆನ್ ಕೆನಡೆ 24 ನಿಮಿಷಗಳ ನಂತರ ಮತ್ತೆ ಬದುಕಿ ಬಂದಿದ್ದಾರೆ. ಸಾವಿನ ನಂತರ ಅಪಾರವಾದ ಶಾಂತಿಯನ್ನು ಪಡೆದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಮಹಿಳೆಗೆ ಹೃದಯಾಘಾತವಾದ ಬಳಿಕ ಆಕೆಯ ಪತಿ 911 ಗೆ ಕರೆ ಮಾಡಿ ಸಿಪಿಆರ್ ನೀಡಿದರು. ಬಳಿಕ ಅಲ್ಲಿಗೆ ಬಂದ ವೈದ್ಯರು ಮಹಿಳೆ ಸತ್ತಿದ್ದಾರೆ ಎಂದು ಘೋಷಿಸಿದರು. ಆದರೆ ಮಹಿಳೆ 24 ನಿಮಿಷಗಳ ನಂತರ ಮತ್ತೆ ಉಸಿರಾಟ ಆರಂಭಿಸಿರುವುದು ಅಚ್ಚರಿ ಮೂಡಿಸಿದೆ.

Read More