Author: admin

ಪಟ್ನಾ:  ವಿಚಾರಣೆಗೆಂದು ಕೈದಿಗಳನ್ನು ಕರೆದುಕೊಂಡು ಬರುತ್ತಿರುವಾಗ, ಪೊಲೀಸರ ಮುಂದೆಯೇ ಬಿಹಾರದ ದಾನಪುರ  ಕೋರ್ಟ್‌ ನ ಬಳಿ ಅಪರಿಚಿತ ವ್ಯಕ್ತಿಗಳು, ಇಬ್ಬರು ಕೈದಿಗಳ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದರೆ ಮತ್ತೊಬ್ಬ ಕೈದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಕೈದಿಯನ್ನು ಆಸ್ಪತ್ರೆ ಕರೆದುಕೊಂಡು ಹೋಗಲಾಗಿದೆ. ಬಲಿಯಾದ ಕೈದಿಯನ್ನು ಅಭಿಷೇಕ್ ಕುಮಾರ್ ಅಕಾ ಚೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಿಷೇಕ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಗುಂಡಿನ ದಾಳಿ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಅಭಿಷೇಕ್ ಕುಮಾರ್ ಅಕಾ ಚೋಟೆ ಸರ್ಕಾರ್ ಮೇಲೆ ಇಬ್ಬರು ವ್ಯಕ್ತಿಗಳು ದಾನಪುರ ನ್ಯಾಯಾಲಯದಲ್ಲಿ ಗುಂಡು ಹಾರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ದಾಳಿಯಲ್ಲಿ ಅಭಿಷೇಕ್ ಕುಮಾರ್ ಮೃತಪಟ್ಟಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಾಟ್ನಾ ಸಿಟಿ ಎಸ್ಪಿ ರಾಜೇಶ್…

Read More

ಬೆಂಗಳೂರು: ಡಿಸೆಂಬರ್ 14ರ ರಾತ್ರಿ ಅಲಿಪಿರಿ ಕಾಲುದಾರಿಯಲ್ಲಿ ಎರಡೂವರೆ ಗಂಟೆಗಳ ಕಾಲ ನಡೆದು ದೇವಾಲಯದ ಆವರಣವನ್ನು ತಲುಪಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಿರುಪತಿಗೆ ಆಗಮಿಸಿ ವೆಂಕಟೇಶ್ವರನ ಆಶೀರ್ವಾದ ಪಡೆದಿದ್ದಾರೆ. ಸಹೋದರಿ ಮತ್ತು ಗಾಲ್ಫ್ ಆಟಗಾರ್ತಿ ಅನಿಶಾ ಪಡುಕೋಣೆಯೊಂದಿಗೆ ದೇವಾಲಯದ ಮೆಟ್ಟಿಲುಗಳನ್ನು ಹತ್ತುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತಿರುಮಲದಲ್ಲಿರುವ ರಾಧೇಯಂ ಅತಿಥಿಗೃಹದಲ್ಲಿ ತಂಗಿದ್ದ ಅವರು ಇಂದು ಬೆಳಗ್ಗೆ ದೇವರ ದರ್ಶನ ಪಡೆದರು. ದೀಪಿಕಾ ಪಡುಕೋಣೆ ಗುರುವಾರ ರಾತ್ರಿ ಅಲಿಪಿರಿಯಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ಬೆಟ್ಟ ಹತ್ತಿ ದೇವಸ್ಥಾನಕ್ಕೆ ತಲುಪಿದ್ದಾರೆ. ಅಲ್ಲಿನ ರಾಧೆ ಶ್ಯಾಮ ಗೆಸ್ಟ್ ಹೌಸ್ ನಲ್ಲಿ ತಂಗಿದ್ದು, ವಿಐಪಿ ಪಾಸ್ ಪಡೆದು, ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ದೀಪಿಕಾ ದೈವ ಭಕ್ತರು ಕೂಡ ಆಗಿರುವುದಿಂದ ಆಗಾಗ ದೇವಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದಿದ್ದಾರೆ.

Read More

ಬೆಂಗಳೂರು: ನೆಲಮಂಗಲ ತಾಲೂಕಿನ ಬಾಣವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಶಶಿಕುಮಾರ್(27) ಮೃತ ದುರ್ದೈವಿಯಾಗಿದ್ದಾನೆ. ಶಶಿಕುಮಾರ್ ಬಾಣವಾಡಿ ಗ್ರಾಮ ಪಂಚಾಯತಿ ಕಾರ್ಯಾಲಯದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಕ್ಯಾಂಟರ್ ಅನ್ನು ಜಪ್ತಿ ಮಾಡಿ, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊರಟಗೆರೆ: ಗ್ರಾಮ ಪಂಚಾಯಿತಿಯೊಂದರ ಕರವಸೂಲಿ ಮಾಡುವ ಬಿಲ್ ಕಲೆಕ್ಟರ್ 1.5ಲಕ್ಷ ಹಣ ದುರುಪಯೋಗ ಹಾಗೂ ನರೇಗಾ (ಎನ್ ಆರ್ ಇ ಜಿ ಎ) ಕಂಪ್ಯೂಟರ್ ಆಪರೇಟರ್ ಕರ್ತವ್ಯ ಲೋಪವೆಸಿಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿರುವ ಘಟನೆಯೊಂದು ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಯಲ್ಲಿ ಡಿಸೆಂಬರ್ 11ರ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಂಜುನಮ್ಮ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪಂಚಾಯತಿಯ ಕಂದಾಯ ವಸೂಲಿಗಾರ ಅಂಜನಪ್ಪ ಹಾಗೂ ನರೇಗಾ ಕಂಪ್ಯೂಟರ್ ಆಪರೇಟರ್ ಮಂಜುನಾಥ್ ಹೆಚ್.ಎಂ ಎಂಬುವರನ್ನು ಕರ್ತವ್ಯ ಲೋಪ ಹಾಗೂ ಹಣ ದುರುಪಯೋಗ ಕಾರಣಗೊಂಡಿ, ಇಬ್ಬರು ನೌಕರರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಷಯ ಸೂಚನೆ ಸಂಖ್ಯೆ ಏಳರ ಅಡಿಯಲ್ಲಿ ಗ್ರಾಮ ಪಂಚಾಯಿತಿ ಕಂದಾಯ ವಸೂಲಿದಾರ ಅಂಜಿನಪ್ಪ ಎಂಬುವರನ್ನು ಸಾಮಾನ್ಯ ಸಭೆಯಲ್ಲಿ ಲೆಕ್ಕಪತ್ರ ವಿಚಾರಿಸಿದ ಸಂದರ್ಭದಲ್ಲಿ ಸಮರ್ಪಕವಾಗಿ ಉತ್ತರ ಕೊಡದೆ ನುಸುಳಿಕೊಂಡು…

Read More

ಬೀದರ್:  ಕಳೆದ ಒಂದು ವಾರಗಳಲ್ಲಿ ಬೀದರ್ ಪೊಲೀಸರು ನಡೆಸಿದ ಇಸ್ಟಿಟ್, ಮಟ್ಕಾ, ಜೂಜಾಟ ವಿರುದ್ಧದ ಕಾರ್ಯಾಚರಣೆಯಲ್ಲಿ 1 ಲಕ್ಷಕ್ಕೂ ಅಧಿಕ ಮೌಲ್ಯದ ನಗದು ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಜಿಲ್ಲೆಯ ಚಿಟಗುಪ್ಪಾ, ಬ.ಕಲ್ಯಾಣ ಗ್ರಾಮೀಣ, ಹುಮನಾಬಾದ, ಮನ್ನಾಏಖೇಳಿ, ಸಂತಪೂರ, ಭಾಲ್ಕಿ ಗ್ರಾಮೀಣ, ಭಾಲ್ಕಿ ನಗರ ಪೊಲೀಸ್ ಠಾಣೆಗಳ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ನಗದು, ಮೊಬೈಲ್ ಸೇರಿ ಒಟ್ಟು 1,74,475 ರೂ.  ಜಪ್ತಿ ಮಾಡಿಕೊಂಡಿದ್ದು, ಸಂಬಂಧಪಟ್ಟ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ,  ಬೀದರ್

Read More

ತಿಪಟೂರು: ಗುರುವಾರ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕ — ಬಾಲಕಿಯರ ಹೊನಲು ಬೆಳಕಿನ ಖೊ-ಖೊ ಚಾಂಪಿಯನ್ ಶಿಪ್- 2023 ರ ಕಾರ್ಯಕ್ರಮದ ಅಂಗವಾಗಿ ಠಾಗೂರ್ ವಿದ್ಯಾಸಂಸ್ಥೆಯ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಕಳೆದ ಬುಧವಾರದಿಂದ ಆರಂಭವಾದ ಚಾಂಪಿಯನ್ ಶಿಪ್- 2023ರ ಕಾರ್ಯಕ್ರಮಕ್ಕೆ ನಿನ್ನೆ ಸಂಜೆ ಟಾಗೋರ್ ಶಾಲೆಯ ಮಕ್ಕಳು ಕಲ್ಪತರು ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಜನಪದ ಕಲೆಗಳ ವೈಭವವನ್ನು ಸಾರುವ ಪ್ರದರ್ಶನ ನಡೆದಿದ್ದು, ಯಕ್ಷಗಾನ, ಕೋಲಾಟ, ಕಂಸಾಳೆ, ಭರತನಾಟ್ಯ ಹಾಗೂ ಕೊಡಗು ನೃತ್ಯ ಕಲೆಗಳನ್ನು ಪ್ರದರ್ಶಿಸಿದ್ದಾರೆ. ಈ ನೃತ್ಯ ಕಾರ್ಯಕ್ರಮಕ್ಕೆ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು

Read More

ಕಲಬುರಗಿ: ರಾಯಚೂರಿನಿಂದ ಕಲಬುರಗಿಗೆ ಆಗಮಿಸುತ್ತಿದ್ದಾಗ, ನಗರದ ಜಿಲ್ಲಾ ಕಾರಾಗೃಹದ ಬಳಿ ಕೆಕೆಆರ್ ಟಿಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ತಿಪ್ಪಣ್ಣ ಇಜೇರಿ(30), ರಾಜೇದ್ರ ಇಜೇರಿ(20) ಅವರು ಮೃತ ದುರ್ದೈವಿಗಳಾಗಿದ್ದಾರೆ. ಈ ವೇಳೆ ರಾಣಪ್ಪ ಕಟ್ಟಿಮನಿ ಖಣದಾಳ ಎಂಬುವವರಿಗೆ ಗಂಭೀರ ಗಾಯವಾದರೆ, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮೂವರಿಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ನವದೆಹಲಿ: ಸಂಸತ್ತಿಗೆ ನುಗ್ಗಿ ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬಂಧಿತ ಐವರು ಆರೋಪಿಗಳ ಪೈಕಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ ದೆಹಲಿ ಪೊಲೀಸರು, ಆರೋಪಿಗಳನ್ನು 15 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಅವರ ವಿಚಾರಣೆ ನಡೆಸಿದ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು, ಏಳು ದಿನ ಪೊಲೀಸ್ ವಶಕ್ಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಜೊತೆಗೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

Read More

ಬೆಂಗಳೂರು: ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳು. ಅವರ ದೂರದೃಷ್ಟಿಯ ನಾಯಕತ್ವ, ರಾಷ್ಟ್ರದ ಏಕತೆಗಾಗಿ ಅವರ ಬದ್ಧತೆಯು ಆಧುನಿಕ ಭಾರತ ನಿರ್ಮಾಣಕ್ಕೆ ನಾಂದಿ ಹಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಅನುಕರಣೀಯ ಕೆಲಸವು ನಮಗೆ ಶಕ್ತಿ. ನಾವು ಅವರ ಜೀವನದಿಂದ ಸ್ಫೂರ್ತಿಯನ್ನು ಪಡೆಯುವುದನ್ನು ಮುಂದುವರಿಸುತ್ತೇವೆ ಮತ್ತು ಅವರ ಸಮೃದ್ಧ ಭಾರತದ ಕನಸನ್ನು ನನಸಾಗಿಸಲು ಕೆಲಸ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

Read More

ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ. ಈ ಬಗ್ಗೆ ಸ್ವತಃ ಇರಾನ್ ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಅವರು ಭಾರತದಿಂದ ಭೇಟಿ ನೀಡುವವರಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜರ್ಘಮಿ, ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವದಾದ್ಯಂತದ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಇದೇ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಮಲೇಷ್ಯಾ, ಶ್ರೀಲಂಕಾ ಮತ್ತು ವಿಯೆಟ್ನಾಂ ಭಾರತದಿಂದ ಬರುವ ಸಂದರ್ಶಕರಿಗೆ ವೀಸಾ ಅವಶ್ಯಕತೆಗಳನ್ನು…

Read More