Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಆಂಧ್ರಪ್ರದೇಶ: ವಿಶಾಖಪಟ್ಟಣಂನ ಇಂಡಸ್ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ವಿಶಾಖಪಟ್ಟಣಂನ ಇಂಡಸ್ ಆಸ್ಪತ್ರೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿ ಸುಮಾರು 50-70 ರೋಗಿಗಳಿದ್ದರು. ಅವರೆಲ್ಲರನ್ನೂ ಸ್ಥಳಾಂತರಿಸಿದ್ದೇವೆ. ಅಲ್ಲಿ ಯಾರೂ ಇಲ್ಲ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿಗೆ ಕಾರಣ ಆಪರೇಷನ್ ಥಿಯೇಟರ್ ನಿಂದ ಬಂದಂತೆ ತೋರುತ್ತಿದೆ. ನಾವು ತನಿಖೆ ನಡೆಸಿ ಸತ್ಯವನ್ನು ಕಂಡುಕೊಳ್ಳುತ್ತೇವೆ” ಎಂದು ಪೊಲೀಸ್ ಕಮಿಷನರ್ ರವಿ ಶಂಕರ್ ಅಯ್ಯನಾರ್ ಹೇಳಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ಗದಗ: ವಿದ್ಯೆ ಕಲಿಸುವ ಶಿಕ್ಷಕನ ಕ್ರೂರತನಕ್ಕೆ ವಿದ್ಯಾರ್ಥಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಸಹಪಾಠಿಯೊಂದಿಗೆ ಮಾತನಾಡುವಾಗ ಏಕಾಏಕಿ ಬಂದ ಶಿಕ್ಷಕ, ಮೃಗೀಯವಾಗಿ ವಿದ್ಯಾರ್ಥಿಗೆ ಬಡಿಗೆಯಿಂದ ಹಲ್ಲೆ ಮಾಡಿ, ತಳ್ಳಿದ್ದಾನಂತೆ. ಆ ರಭಸಕ್ಕೆ ಬಿದ್ದ ವಿದ್ಯಾರ್ಥಿ ಕೈ ಎಲುಬು ಕಟ್ ಆಗಿದೆ. ಮಗನ ಸ್ಥಿತಿ ಕಂಡು ಹೆತ್ತಮ್ಮ ಕಣ್ಣೀರು ಹಾಕ್ತಾ ಇದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಅಂಗಲಾಚುತ್ತಿದ್ದಾರೆ. 6 ನೇ ತರಗತಿ ವಿದ್ಯಾರ್ಥಿಯ ಕೈ ಮುರಿದ ಶಿಕ್ಷಕನ ಕುಕೃತ್ಯದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕ ನಟರಾಜ್ ಎನ್ನುವಾತನಿಂದ ಈ ಕೃತ್ಯ ನಡೆದಿದೆ. ಏನೂ ತಪ್ಪು ಮಾಡದೇ ಶಿಕ್ಷಕನ ಅಟ್ಟಹಾಸಕ್ಕೆ ಕೈ ಮುರಿದುಕೊಂಡು ವಿದ್ಯಾರ್ಥಿ ನೋವನ್ನು ಅನುಭವಿಸುತ್ತಿದ್ದಾನೆ. ಮಲ್ಲಯ್ಯ ಬಲಗೈ ಮುರಿದು ಹೋಗಿದೆ ಅಂತ ಹೆತ್ತವರರು ಆರೋಪಿಸಿದ್ದಾರೆ. ಘಟನೆ ಬಳಿಕ ಕೂಡಲೇ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಲುಬು ಕಟ್ ಆಗಿರೋದರಿಂದ ವೈದ್ಯರ ಸಲಹೆಯಂತೆ ಆಪರೇಷನ್ ಕೂಡಾ ಮಾಡಿದ್ದಾರೆ. ಆಪರೇಷನ್ ಖರ್ಚು ವೆಚ್ಚ ನೀಡಿ ಶಿಕ್ಷಣ ಸಂಸ್ಥೆ ಕೈತೊಳೆದುಕೊಂಡಿದೆ ಎಂದು…
ಬೆಳಗಾವಿ: ‘ನ್ಯುಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ’ ಶೀರ್ಷಿಕೆಯಡಿ ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲುಣಿಸುವಿಕೆಯನ್ನು ಉತ್ತೇಜಿಸುವಲ್ಲಿ ಹಾಲಿನ ಬ್ಯಾಂಕುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಇದು ಮಕ್ಕಳ ಅಕಾಲಿಕ ಮರಣ, ಅನಾರೋಗ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಲ್ಲದೆ, ರಾಜ್ಯದ ಪ್ರತಿ ಕಂದಾಯ ವಿಭಾಗಕ್ಕೆ ಒಂದು ಎಂಬಂತೆ ನವಜಾತ ಶಿಶುಗಳ ಆ್ಯಂಬುಲೆನ್ಸ್ ಗಳನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಡಾ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಲೋಕಸಭೆಯಲ್ಲಿ ಭದ್ರತಾ ಲೋಪದ ಮೇಲೆ ಕ್ರಮ ಏಳು ಭದ್ರತಾ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಲೋಕಸಭೆ ಸೆಕ್ರೆಟರಿಯೇಟ್ ನಿಂದ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಭೇಟಿ ನೀಡಿ ಭದ್ರತಾ ವಿಷಯಗಳನ್ನು ಪರಿಶೀಲಿಸಿದರು. ಕೇಂದ್ರ ಸಚಿವರ ಜತೆಯೂ ಚರ್ಚೆ ನಡೆಸಿದರು. ಬಂಧಿತ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಅತಿಕ್ರಮ ಪ್ರವೇಶ, ಯುಎಪಿಎ ಸೆಕ್ಷನ್ 16 ಮತ್ತು 18 ರ ಆರೋಪ ಹೊರಿಸಿದ್ದಾರೆ. ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ, ನೀಲಂ, ಮನೋರಂಜನ್ ಡಿ ಮತ್ತು ಲಲಿತ್ ಝಾ ಬಂಧಿತರು. ಮೈಸೂರಿನ ಇಂಜಿನಿಯರಿಂಗ್ ಪದವೀಧರ ಡಿ. ಲೋಕಸಭೆಯಲ್ಲಿ ಮನೋರಂಜನ್ ಮತ್ತು ಸಾಗರ್ ಶರ್ಮಾ ಬಣ್ಣ ಎರಚಿದರು. ದಾಳಿಯ ಹಿಂದೆ ಆರು ಜನರ ಕೈವಾಡವಿದ್ದು, ಒಬ್ಬರು ತಲೆಮರೆಸಿಕೊಂಡಿದ್ದಾರೆ. ಹೊಗೆ ಸ್ಪ್ರೇ ದಾಳಿಯ ಹಿಂದೆ ಲಲಿತ್ ಝಾ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರು ಮೈಸೂರು ಬಿಜೆಪಿ ಸಂಸದ ಪ್ರತಾಪ್…
ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಅಧಿವೇಶನದಲ್ಲೂ ಸದ್ದು ಮಾಡಿದೆ. ಮತ್ತೊಂದೆಡೆ ಮಾತನಾಡಿಸಲು ಯುವತಿ ಮನೆಗೆ ಹೋಗಿದ್ದ ಗ್ರಾ.ಪಂ. ಸದಸ್ಯೆ, ಯುವತಿಯ ತಾಯಿಯ ಸಹೋದರಿ ಎಂಬ ಕಾರಣಕ್ಕೆ ಪ್ರಕರಣದಲ್ಲಿ ಭಾಗಿಯಾಗದಿದ್ದರೂ ಬಂಧಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಕತಿ ಪೊಲೀಸರ ವಿರುದ್ಧ ಗ್ರಾ.ಪಂ. ಸದಸ್ಯೆ ಸಂಗೀತಾ ಪತಿ ಆಕ್ರೋಶ ಹೊರ ಹಾಕಿದ್ದಾರೆ. ಯುವತಿಯ ತಾಯಿ ಪಾರ್ವತಿ ಹಾಗೂ ಗ್ರಾ.ಪಂ ಸದಸ್ಯೆ ಸಂಗೀತಾ ಇಬ್ಬರು ಸಹೋದರಿಯರು. ಅಕ್ಕನ ಮಗಳು ಓಡಿ ಹೋದ ಸುದ್ದಿ ಕೇಳಿ ಘಟನೆ ನಡೆದ ದಿನ ಬೆಳಗ್ಗೆ 7ಕ್ಕೆ ಯುವತಿ ಮನೆಗೆ ಸಂಗೀತಾ ಹೋಗಿದ್ದರು. ಇದೇ ವೇಳೆ ಮನೆಗೆ ಬಂದ ಪೊಲೀಸರು ನೀವು ದೂರು ಕೊಡಿ ಬನ್ನಿ, ಅಂತಾ ಕರೆದುಕೊಂಡು ಹೋಗಿ ಕಾಕತಿ ಠಾಣೆಗೆ ಹೋದ ಬಳಿಕ ಸಂಗೀತಾರನ್ನು ಬಂಧಿಸಿದ್ದಾರೆ ಎಂದು ಪೊಲೀಸರ ವಿರುದ್ಧ ಪತಿ ಸದಾಶಿವ ಮತ್ತು ಸಹೋದರ ಕಾಡಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ…
ನವದೆಹಲಿ: ಯತ್ನಾಳ್ ಎಲ್ಲೆಲ್ಲಿ ಭಾಷಣ ಮಾಡಿದ್ದಾರೆ ಅಲ್ಲಿ ಯಾರು ಗೆದ್ದಿಲ್ಲ. ದೀಪ ಆರುವಾಗ ಜೋರಾಗಿ ಉರಿಯುತ್ತೆ, ಈಗ ಜೋರಾಗಿ ಉರಿಯುತ್ತಿದೆ ಅಷ್ಟೇ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಬಿಜಾಪುರದಲ್ಲಿ ಎಷ್ಟು ಜನರನ್ನು ಯತ್ನಾಳ್ ಗೆಲ್ಲಿಸಿದ್ದಾರೆ? ಶಕ್ತಿ ಇದ್ದರೇ ಬಿಜಾಪುರದಲ್ಲಿ 2-3 ಸ್ಥಾನ ಗೆಲ್ಲಿಸಬೇಕಿತ್ತು. ಇವರ ನಾಯಕತ್ವ ಎಂತದ್ದು ಎನ್ನುವುದು ಗೊತ್ತಿದೆ. ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದರು. ರಾವಣ ಶಿವಭಕ್ತ. ಸೀತೆಯನ್ನು ಅಪಹರಣ ಮಾಡಿದ ಮೇಲೆ ಅವನತಿ ಆಯ್ತು. ಪಾಪದ ಕೊಡ ತುಂಬಿದ ಮೇಲೆ ಎಲ್ಲವೂ ಮುಗಿಯಿತು. ಇವರದ್ದು ಪಾಪದ ಕೊಡ ತುಂಬಲು ಬಂದಿದೆ. ಇನ್ನು ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿದರು. ರಾವಣ ನನ್ನನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದಿದ್ದ. ಆದರೆ ಆತನ ಕಥೆ ಏನಾಯಿತು? ನಾನೇ ಎಲ್ಲ ಅಂದವರಿಗೆ ಏನಾಗಿದೆ? ಇವರ ಕಥೆಯೂ ಹಾಗೇ ಆಗುತ್ತದೆ. ನಾಲ್ಕು ಜನರು ಚಪ್ಪಾಳೆ ಹೊಡೆದರೆ ನಾಯಕ ಅಲ್ಲ. ಲಕ್ಷಾಂತರ ಜನರನ್ನು ಸೇರಿಸಿ ಎಂದಾದರೂ ಕಾರ್ಯಕ್ರಮ ಮಾಡಿದ್ದಾರಾ?. ಸಮಾಜಕ್ಕೆ…
ಔರಾದ: ಸರ್ಕಾರಿ ಪ್ರಥಮ ದರ್ಜೆ ಕಾಲೇಜ ಔರಾದನಲ್ಲಿ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದಾಗಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿಲ್ಲ, ತಕ್ಷಣವೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ವಿದ್ಯಾರ್ಥಿ ಬಂಧುತ್ವ ವೇದಿಕೆ ಪ್ರತಿಭಟನೆ ನಡೆಸಿತು. ನವೆಂಬರ್ 23ರಿಂದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸಿ, ಇಲ್ಲವಾದರೆ ಪರೀಕ್ಷೆಗಳನ್ನು ನಡೆಸದೇಯೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದನಲ್ಲಿ ಒಟ್ಟು ಸುಮಾರು 900 ಕ್ಕಿಂತ ಅಧಿಕ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇಲ್ಲಿ ಓದುವ ಮಕ್ಕಳು ಕೂಲಿ ಕಾರ್ಮಿಕರ, ಬಡವರ, ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಖಾಯಂ ಪ್ರಾಧ್ಯಾಪಕರು ಕೇವಲ 8 ಜನರಿದ್ದಾರೆ ಅತಿಥಿ ಉಪನ್ಯಾಸಕರು ಸುಮಾರು 34 ಕ್ಕಿಂತಲು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ. ಪರೀಕ್ಷೆಗಳು ಸಮೀಪಿಸುತ್ತಿವೆ ಹೀಗಾಗಿ ಪಾಠ ಪ್ರವಚನಗಳಿಲ್ಲದೆ…
ಬೀದರ್: “ಅನ್ನ ಭಾಗ್ಯ” ಯೋಜನೆಯಡಿ ಸರ್ಕಾರದಿಂದ ವಿತರಿಸಲಾದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸಂಗ್ರಹಿಸಿಟ್ಟ ಅಕ್ಕಿಯನ್ನು ಬೀದರ್ ಜಿಲ್ಲೆಯ“ ಧನ್ನೂರ ಪೊಲೀಸರು ಜಪ್ತಿ” ಮಾಡಿದ್ದಾರೆ. ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, ಹುಣಜಿ–ಕೆ ಗ್ರಾಮದಲ್ಲಿ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ನೀಡುವ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಖಚಿತ ಮಾಹಿತಿಯ ಮೇರೆಗೆ ನಡೆಸಿದ ಧನ್ನೂರ ಪೊಲೀಸ್ ಠಾಣೆಯ ಪಿ.ಎಸ್.ಐ, ವಿಶ್ವರಾದ್ಯ, ಠಾಣೆಯ ಸಿಬ್ಬಂದಿ ಸಂಜೀವ, ಬಕ್ಕಯ್ಯಾ ಸ್ವಾಮಿ, ಪ್ರಶಾಂತರೆಡ್ಡಿ, ವೆಂಕಟರಾವ್ ತಂದೆ ಗಣಪತರಾವ ಬಿರಾದಾರ, ಆಹಾರ ಸಿರಸ್ತೆದಾರ ಭಾಲ್ಕಿ ಅಧಿಕಾರಿಗಳ ತಂಡ ದಾಳಿ ನಡೆಸಿತು. ದಾಳಿಯ ವೇಳೆ 1,0,8000 ರೂಪಾಯಿ ಮೌಲ್ಯದ 36 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಯಿತು. ಸಂಬಂಧಪಟ್ಟ ಆರೋಪಿಗಳ ವಿರುದ್ಧ ಪ್ರಕರಣ ಕೂಡ ದಾಖಲಿಸಿಕೊಳ್ಳಲಾಗಿದೆ. ದಾಳಿಯಲ್ಲಿ ಪಾಲ್ಗೊಂಡ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯ ವನ್ನು ಸಾರ್ವಜನಿಕರು ಶ್ಲಾಘಿಸಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ ಬೀದರ್
ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀರಾಮ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಇದೆ. ಬಳ್ಳಾರಿ ಏರ್‌ಪೋರ್ಟ್ ಆದರೆ ಅದಕ್ಕೆ ಶ್ರೀ ಹನುಮಾನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಅಂತ ನಾಮಕರಣ ಮಾಡಲಿ ಅಂತಾ ನನ್ನ ಆಸೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿ ಏರ್ ಬಸ್ ಗಳು ಇವತ್ತು ಬರುತ್ತಿವೆ ಅಂದರೆ ನಾನು ಮಾಡಿದ ಕೆಲಸ ಕಾರಣ. ದುರಾದೃಷ್ಟ ಅಂದರೆ ನಾನು ಹುಟ್ಟಿ ಬೆಳೆದ ಬಳ್ಳಾರಿಯಲ್ಲಿ ಇದುವರೆಗೆ ಏರ್ ಪೋರ್ಟ್ ಆಗಿಲ್ಲ ಎಂದರು. ವಿಜಯನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿ ನಾನು ಜೂವಾಲಾಜಿಕಲ್ ಪಾರ್ಕ್ ಕಟ್ಟಿದ್ದೆ. ಅಲ್ಲಿ ನೈಟ್ ಸಫಾರಿ, ಥೀಮ್ ಪಾರ್ಕ್, ಶ್ರೀಕೃಷ್ಣದೇವರಾಯನ ಪ್ರತಿಮೆಯನ್ನು ಇಂಗ್ಲೆಂಡಿನ ಲೇಡಿ ಲಿಬರ್ಟಿ ಪ್ರತಿಮೆ ತರಹ ಮಾಡಬೇಕೆಂಬ ಆಸೆ ಇತ್ತು. ತುಂಗಭದ್ರ ನದಿಯಲ್ಲಿ ಸೌಂಡ್ ಅಂಡ್ ಲೈಟ್ ಮಾಡಬೇಕೆಂಬ ಆಸೆ ಇತ್ತು. ಇವೆಲ್ಲಾ ಕನಸುಗಳನ್ನು 13-14 ವರ್ಷಗಳ ಹಿಂದೆಯೇ ನಾನು ಕಂಡಿದ್ದೆ. ಈಗಿನ ಸರ್ಕಾರ…
ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಾಗಲಿ, ಟೀಕೆ ಮಾಡುವುದಾಗಲಿ ಮಾಡುವುದಿಲ್ಲ. ಈ ವಿಚಾರದಲ್ಲಿ ಎಲ್ಲವೂ ಸರಿಯಾಗುತ್ತದೆ ಎನ್ನುವ ಭರವಸೆ ಇದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದ ಕೆಎಲ್ ಇ ಗೆಸ್ಟ್ ಹೌಸ್ ನಲ್ಲಿ ಮಾತನಾಡಿದ್ದಾರೆ. ಈ ವೇಳೆ, ಬಿಜೆಪಿ ಹೈಕಮಾಂಡ್ ಗೆ ಬ್ಲಾಕ್‍ಮೇಲ್ ಮಾಡಿ ವಿಜಯೇಂದ್ರ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದ್ದಾರೆ ಎಂಬ ಯತ್ನಾಳ್ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ಆರೋಪಗಳ ಬಗ್ಗೆ ನಾನು ಹೆಚ್ಚಿನ ಟೀಕೆ ಮಾಡುವುದಿಲ್ಲ. ಮುಂದೆ ಎಲ್ಲಾ ಸರಿಯಾಗಲಿದೆ ಎಂದಿದ್ದಾರೆ. ಮುಂದುವರಿದು ಮಾತನಾಡಿದ ಅವರು, 25 ಸಾವಿರ ಜನ ಸೇರಿ ಸರ್ಕಾರದ ವೈಫಲ್ಯ ಹಾಗೂ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆ ಎಂದು ಒಂದು ಕಿಲೋಮೀಟರ್ ರಸ್ತೆ ಸಹ ಆಗುತ್ತಿಲ್ಲ. ರಾಜ್ಯದಲ್ಲಿ ಸಂಪೂರ್ಣ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಹೀಗಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆ ಮಾಡುತ್ತಿದ್ದೇವೆ. ಬಹಳಷ್ಟು ಜನ ನಮಗೆ…