Author: admin

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಇದೆ, ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಆತಂಕದಲ್ಲಿ ಇದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಈ ಆತಂಕದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಆಡಳಿತದಿಂದ ಜನರ ಜೀವನ ದುಸ್ತರ ಆಗಿದ್ದು ಉದ್ಯೋಗ ಕೊಡ್ತಿನಿ ಎಂದು ಕೋಟ್ಯಂತರ ಜನರ ಉದ್ಯೋಗ ಕಿತ್ತುಕೊಂಡಿದ್ದಾರೆ. ಶ್ರೀಮಂತರ ಬಿಜೆಪಿ ವಿರುದ್ದ ದುಡಿಯುವ ಜನ ದಂಗೆ ಎದ್ದಿದ್ದಾರೆ ಈ ಆತಂಕದಿಂದ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ.  ವಿಪಕ್ಷ ನಾಯಕರ ಆಯ್ಕೆ ಮಾಡಲು ಅವರಿಂದ ಸಾಧ್ಯ ಆಗಿಲ್ಲ. ಇದು ನಾಲಾಯಕತನ, ಅವರ ಆಂತರಿಕ ಕಚ್ಚಾಟದಿಂದ ವಿಪಕ್ಷ ನಾಯಕ ಆಯ್ಕೆ ಮಾಡಿಕೊಂಡಿಲ್ಲ ಎಂದರು. ಇವತ್ತು ತುಮಕೂರು ಜಿಲ್ಲೆಗೆ ಬಂದಿದ್ದೇನೆ. ನಾಡಕಚೇರಿ, ತಾಲ್ಲೂಕು ಕಚೇರಿ ಸಬ್ ರಿಜಿಸ್ಟಾರ್ ಕಚೇರಿ ಪರಿಶೀಲನೆ ನಡೆಸಿದ್ದೇನೆ. ಜನರ ಸಮಸ್ಯೆ ಆಲಿಸಿದ್ದೇನೆ, ಅಧಿಕಾರಿಗಳ‌ ಕೆಲಸ ಪರಿಶೀಲಿಸಿದ್ದೇನೆ.…

Read More

ತುಮಕೂರು: ತುಮಕೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳನ್ನು ತುರ್ತಾಗಿ ಜವಾಬ್ದಾರಿಯಿಂದ ನಿರ್ವಹಿಸದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ತುಮಕೂರು ಮಹಾನಗರ ಪಾಲಿಕೆಯ 30ನೇ ವಾರ್ಡಿನ ಸದಸ್ಯ ವಿಷ್ಣುವರ್ಧನ್  ದಿಢೀರನೆ ಪಾಲಿಕೆ ಆಯುಕ್ತರ ಕಚೇರಿ ಕೊಠಡಿ ಎದುರು ಕುಳಿತು ಧರಣಿ ನಡೆಸಿದರು. ಸಾರ್ವಜನಿಕರ ಖಾತೆಗಳಿಗೆ ಸಂಬಂಧಪಟ್ಟಂತೆ ತಿದ್ದುಪಡಿ ಮಾಡುವುದು ಸೇರಿದಂತೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಇದರಿಂದ ವಾರ್ಡಿನ ಅನೇಕ ಮಂದಿ ತಮ್ಮ ಬಳಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಸದಸ್ಯ ವಿಷ್ಣುವರ್ಧನ್ ಆರೋಪಿಸಿದರು. ಸ್ಥಳಕ್ಕೆ ಬಂದ ಪಾಲಿಕೆ ಆಯುಕ್ತೆ ಹಾಗೂ ನಗರಸಭೆ ಉಪಾಧ್ಯಕ್ಷರು ವಿಷ್ಣುವರ್ಧನ್ ಅವರನ್ನು ಸಮಾಧಾನಪಡಿಸಲು ಯತ್ನಿಸಿದರು ಸಾಧ್ಯವಾಗಲಿಲ್ಲ ಅಲ್ಲದೆ ಸ್ಥಳದಲ್ಲಿಯೇ ಇದ್ದ ನೊಂದ ಅರ್ಜಿದಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು ಅಲ್ಲದೆ ಇದರ ಕುರಿತು ಭರವಸೆ ದೊರೆತ ನಂತರ ಧರಣಿ ಹಿಂಪಡೆದರು.

Read More

ಕೇಂದ್ರದಿಂದ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಒಂದು ದೇಶ ಒಂದು ಚುನಾವಣೆ ವಿಚಾರ ಒಳ್ಳೆಯದೇ. ಆದರೆ ಒಂದೇ ಬಾರಿ ಚುನಾವಣೆ ಮಾಡಲು ಸಾಧ್ಯವಾಗಲ್ಲ. ಒಂದೇ ಬಾರಿ ಚುನಾವಣೆ ನಡೆದರೆ ಕೆಲ ರಾಜ್ಯ ಚುನಾವಣೆ ಮುಂದೂಡಬೇಕು. ಈಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಇದೆ. ಇತ್ತೀಚೆಗಷ್ಟೇ ಕರ್ನಾಟಕ ವಿಧಾನಸಭಾ ಚುನಾವಣೆ ನಡೆದಿದೆ. ಹಾಗಾದರೆ ನಮ್ಮ ಸರ್ಕಾರ ವಿಸರ್ಜನೆ ಮಾಡುತ್ತೀರಾ ಎಂದು ಶೆಟ್ಟರ್ ಪ್ರಶ್ನಿಸಿದರು.

Read More

ಹಿಂದೂ ಧರ್ಮದ ಕುರಿತು ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹಸಚಿವ ಜಿ.ಪರಮೇಶ್ವರ್, ಹಿಂದೂ ಧರ್ಮದ ಬಗ್ಗೆ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿ ಅರ್ಥೈಸುವ ಕೆಲಸ ನಾನು ಮಾಡಿಲ್ಲ. ನಾವೆಲ್ಲಾ ಹಿಂದೂಗಳು, ಬೆಳಗ್ಗೆ ಎದ್ದರೆ ಗಣಪತಿಗೆ ಪ್ರಾರ್ಥಿಸುತ್ತೇನೆ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮೀ ಶ್ಲೋಕ ಹೇಳುತ್ತೇನೆ. ರಾತ್ರಿ ಮಲಗುವ ಮುಂಚೆ ಹನುಮನ ಶ್ಲೋಕ ಹೇಳುತ್ತೇನೆ ಎಂದು ಹೇಳಿ ಎರಡು ಶ್ಲೋಕಗಳನ್ನು ಹೇದರು. ಅಲ್ಲದೆ, ಬಿಜೆಪಿಯವರಿಗೆ ಈ ಶ್ಲೋಕ ಹೇಳಲು ಬರುವುದಿಲ್ಲ. ಶ್ಲೋಕ ಹೇಳುವಂತೆ ಬಿಜೆಪಿಯವರಿಗೆ ಸವಾಲು ಹಾಕಿದರು. ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂದು ನಾನು ಪ್ರಶ್ನೆ ಮಾಡಿಲ್ಲ. ನಾನು ಸರ್ವಪಲ್ಲಿ ರಾಧಾಕೃಷ್ಣನ್ ವಿಚಾರದ ಬಗ್ಗೆ ಮಾತಾಡಿದ್ದು, ಜೈನ, ಬುದ್ಧ, ಮುಸ್ಲಿಂ ಧರ್ಮಕ್ಕೆ ಸ್ಥಾಪಕರು ಇದ್ದಾರೆ. ಆದರೆ ಹಿಂದೂ ಧರ್ಮಕ್ಕೆ ಸ್ಥಾಪಕರು ಇಲ್ಲ ಎಂದು ಹೇಳಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದ್ದಾರೆ. ನಾನು ಹಿಂದೂ ಧರ್ಮದ ಬಗ್ಗೆ ಅವಹೇನಕಾರಿಯಾಗಿ ಮಾತಾಡಿಲ್ಲ. ಹಿಂದೂ…

Read More

ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ ಎಂದರು. ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.

Read More

ಜೈಲರ್ ನಟ ಮಾರಿಮುತ್ತು (58) ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಮಿಳು ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವಾಗ ಅವರಿಗೆ ಹೃದಯಾಘಾತವಾಗಿತ್ತು. ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ಮಾರಿಮುತ್ತು ಕೊನೆಯದಾಗಿ ನೆಲ್ಸನ್ ದಿಲೀಪ್ ಕುಮಾರ್-ರಜನಿಕಾಂತ್ ಅವರ ಜೈಲರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮಾರಿಮುತ್ತು ಅವರ ಬಲಗೈ ಬಂಟನಾಗಿ ವಿನಾಯಕನ್ ನಿರ್ವಹಿಸಿದ ವರ್ಮನ್ ಪಾತ್ರವನ್ನು ನಿರ್ವಹಿಸಿದರು. ಜೈಲರ್ ಚಿತ್ರದಲ್ಲಿನ ನಟನ ಪಾತ್ರವೂ ಆಕರ್ಷಕವಾಗಿತ್ತು. ನಟನ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ವಸಂತ್ ಮತ್ತು ಎಸ್.ಜೆ.ಸೂರ್ಯ ಅವರೊಂದಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಾರಿಮುತ್ತು ಅವರು ಕಣ್ಣುಂ ಕಣ್ಣುಂ ಮತ್ತು ಬುಲಿವಾಲ್ ಎಂಬ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ನಂತರ ಅವರು ಚಿತ್ರದಲ್ಲಿ ನಟರಾದರು. ಮಾರಿ ಮುತ್ತು ಅವರು ಮಿಶ್ಕಿನ್ ನಿರ್ದೇಶನದ ಯುದ್ಧ ಸೇಯ್ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ನಟನೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗ ತಮಿಳು sun ಟಿವಿ ಅಲ್ಲಿ ಬರುವ ಎದಿರ್ನಿಚಲ್ ಧಾರಾವಾಹಿ ಮೂಲಕ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಖ್ಯಾತಿ ಪಡೆದ್ದಿದ್ದರು. ವರದಿ :…

Read More

ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿ- ಮಗನ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು, ಆರೋಪಿ ಶೇಖಪ್ಪ ಅಲಿಯಾಸ್ ಶೇಖರಪ್ಪನನ್ನು (29) ಬಂಧಿಸಿದ್ದಾರೆ. ರವೀಂದ್ರನಗರದಲ್ಲಿ ವಾಸವಿದ್ದ ನವನೀತಾ (33) ಹಾಗೂ ಮಗ ಸೃಜನ್‌ನನ್ನು (11) ಮಂಗಳವಾರ ರಾತ್ರಿ ಕೊಲೆ ಮಾಡಲಾಗಿತ್ತು. ನವನೀತಾ ಅವರ ಪತಿಯೇ ಕೃತ್ಯ ಎಸಗಿರುವ ಶಂಕೆ ಇತ್ತು. ಆದರೆ, ತನಿಖೆ ಕೈಗೊಂಡಾಗ ನವನೀತಾ ಪ್ರಿಯಕರ ಶೇಖಪ್ಪನೇ ಆರೋಪಿ ಎಂಬುದು ತಿಳಿಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಪೊಲೀಸ್ ಪರೇಡ್‌ ನಲ್ಲಿ ಅಥವಾ ಗೌರವ ವಂದನೆ ನಡೆಯುವಾಗ ಹಿಂದಿಯಲ್ಲಿ ಕೇಳಿಬರುತ್ತಿದ್ದ ಸಾವಧಾನ್ ವಿಶ್ರಾಮ್ ಎಂಬ ಕಮಾಂಡ್ ಗಳನ್ನು ಇನ್ಮುಂದೆ ಕನ್ನಡದಲ್ಲೇ ನೀಡಲು ನಗರ ಪೊಲೀಸರು ಮುಂದಾಗಿದ್ದಾರೆ. ಹಿಂದಿ ಬದಲಿಗೆ ಕನ್ನಡದಲ್ಲಿ ಕಮಾಂಡ್ ನೀಡುವ ಪದ್ಧತಿಗೆ ನಾಂದಿ ಹಾಡಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಪೊಲೀಸ್ ಸಿಬ್ಬಂದಿ ಕನ್ನಡದಲ್ಲೇ ಕಮಾಂಡ್ ನೀಡಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ಯವಾಗುತ್ತಿದೆ.

Read More

ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿದೆ. ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ. ಸಮರ್ಪಕ ದಾಖಲೆ ನೀಡಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಸಿಂಧೂರಿ ವಿರುದ್ಧ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಸರ್ಕಾರ ಆದೀಶಿಸಿದೆ.

Read More

ಮನುಷ್ಯರ ಬಗ್ಗೆ ಬೇಧ ಭಾವ ಇರುತ್ತೆ ಅದು ಧರ್ಮ ಅಲ್ಲ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಮ್ ಪುರದಲ್ಲಿ ಎಫ್ ಐಆರ್ ದಾಖಲಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಂವಿಧಾನ ನನ್ನ ಧರ್ಮ ಅಂದಿದ್ದಕ್ಕೆ ಎಫ್‌ಐಆರ್ ಆಗಿದೆ. ಸಂವಿಧಾನದಲ್ಲಿ ಸಮಾನತೆ ಇದೆ, ಸಮಾನವಾದ ಅವಕಾಶವಿದೆ. ಸಮಾನವಾದ ಬದಕು ಕೋಡುವ ನಿಯಮ ಇದೆ, ಕಾನೂನು ಇದೆ. ಇದು ನನ್ನ ಧರ್ಮ ಅಂದಿದ್ದಕ್ಕೆ ಕೇಸ್ ಮಾಡಿದ್ರೆ ಮಾಡಿಕೊಳ್ಳಲಿ, ನನಗೇನು ಎಂದು ಹೇಳಿದರು. ಉದಯನಿಧಿ ಸ್ಟಾಲಿನ್ ಹೇಳಿದ್ದು, ನಾನು ಹೇಳಿದ್ದು ಅಜಗಜಾಂತರ ವ್ಯತ್ಯಾಸ ಇದೆ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದಾದರೂ ಒಂದು ಧರ್ಮದ ಬಗ್ಗೆ ಮಾತನಾಡಿದ್ದೀನಾ ಎಂದರು. ಮನುಷ್ಯರ ಬಗ್ಗೆ ಬೇಧ ಭಾವ ಇರುತ್ತೆ ಅದು ಧರ್ಮ ಅಲ್ಲ. ಇದರಲ್ಲಿ ಏನು ತಪ್ಪಿದೆ. ಇದನ್ನು ಮೊದಲು ಅವರು ತಿಳಿದುಕೊಳ್ಳಲಿ. ಬಸವಣ್ಣ, ಅಂಬೇಡ್ಕರ್ ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಹೇಳಿದ್ದರು. ಪ್ರಬುದ್ಧತೆ ಇವರು…

Read More